Horoscope Today; ಅಗತ್ಯಕ್ಕೆ ತಕ್ಕಷ್ಟು ಧನಕನಕ, ಚಾಡಿಮಾತು ಬೇಡ, ವಿವಾಹ ಮಾತುಕತೆ, ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today; ಅಗತ್ಯಕ್ಕೆ ತಕ್ಕಷ್ಟು ಧನಕನಕ, ಚಾಡಿಮಾತು ಬೇಡ, ವಿವಾಹ ಮಾತುಕತೆ, ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

Horoscope Today; ಅಗತ್ಯಕ್ಕೆ ತಕ್ಕಷ್ಟು ಧನಕನಕ, ಚಾಡಿಮಾತು ಬೇಡ, ವಿವಾಹ ಮಾತುಕತೆ, ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

7 ಏಪ್ರಿಲ್‌ 2024: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿ ಇದ್ದಾನೆ. ಆಯಾ ರಾಶಿಚಕ್ರಗಳ ಜನರು ಮಾಡುವ ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳ ಫಲಗಳು ಸಿಗುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (7th April 2024 Daily Horoscope).

Horoscope Today; ಏಪ್ರಿಲ್ 7- ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ
Horoscope Today; ಏಪ್ರಿಲ್ 7- ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (7th April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣಪಕ್ಷ, ಭಾನುವಾರ

ತಿಥಿ: ಚತುರ್ದಶಿ ರಾ. 02.34 ರ ವರೆಗೂ ಇರುತ್ತದೆ. ಆನಂತರ ಅಮಾವಾಸ್ಯೆ.

ನಕ್ಷತ್ರ ಪೂರ್ವಾಭಾದ್ರ ನಕ್ಷತ್ರವು ಹ.11.53 ರವರೆಗೂ ಇರುತ್ತದೆ. ಆನಂತರ ಉತ್ತರಾಭಾದ್ರ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ ಬೆಳಗ್ಗೆ 06.11ಕ್ಕೆ

ಸೂರ್ಯಾಸ್ತ ಸಂಜೆ 06.31ಕ್ಕೆ

ರಾಹುಕಾಲ: ಹ. 04.30 ರಿಂದ ಸ. 06.00

ಸಿಂಹ - ಅವಶ್ಯಕತೆಗೆ ತಕ್ಕಷ್ಟು ಹಣ ಕೈ ಸೇರಲಿದೆ

ಸ್ಥಿರ ಮನಸ್ಸಿನ ಕಾರಣ ಕೆಲಸ ಕಾರ್ಯಗಳಲ್ಲಿ ಯಶಸ್ಸು. ನಿರ್ದಿಷ್ಟ ಗುರಿ ಇರುವ ಕಾರಣ ಜೀವನದಲ್ಲಿ ಹೊಸ ಚೈತನ್ಯ. ಕುಟುಂಬದ ಮಹತ್ವದ ಹೊಣೆಗಾರಿಕೆ ನಿಮ್ಮದಾಗುತ್ತದೆ. ರುತ್ತದೆ. ಕುಟುಂಬದಲ್ಲಿ ಸಂತಸದ ಕ್ಷಣಗಳು ಎದುರಾಗುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳಿಗೆ ಸರಿಸಮನಾದ ವರ್ಚಸ್ಸು ನಿಮ್ಮದಾಗುತ್ತದೆ. ವಿದ್ಯಾರ್ಥಿಗಳು ಗೆಲ್ಲುವ ಹಠದಿಂದ ಮುನ್ನಡೆಯುತ್ತಾರೆ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗಲಿದೆ. ಸರಕಾರದ ಅನುದಾನದಿಂದ ಮಾಡುವ ಹಣಕಾಸಿನ ವ್ಯವಹಾರ ಲಾಭ ನೀಡುತ್ತದೆ. ಆರೋಗ್ಯದ ಬಗ್ಗೆ ಗಮನವಿರಲಿ. ಹೊಸ ಗೃಹೋಪಯೋಗಿ ವಸ್ತುಗಳನ್ನು ಕೊಳ್ಳುವಿರಿ. ಖರ್ಚು ವೆಚ್ಚಗಳನ್ನು ಕಡಿಮೆ ಮಾಡಿ.

ಪರಿಹಾರ : ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹೊಸ ಉಡುಗೆ ತೊಡುಗೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು ನೈಋತ್ಯ

ಅದೃಷ್ಟದ ಬಣ್ಣ : ಕಿತ್ತಳೆ ಬಣ್ಣ

ಕನ್ಯಾ - ಕಿರಿಕಿರಿ ಉಂಟುಮಾಡದಿದ್ದರೆ ನೆಮ್ಮದಿ

ಸುಲಭದ ಕೆಲಸಗಳನ್ನು ಮಾತ್ರ ಮಾಡಲು ಇಚ್ಚಿಸುವಿರಿ. ಒತ್ತಡದ ಬದುಕನ್ನು ದ್ವೇಷಿಸುವಿರಿ. ನಿಮ್ಮ ತಪ್ಪನ್ನು ಮರೆಮಾಚಲು ಬೇರೆಯವರನ್ನು ಟೀಕಿಸುವಿರಿ. ಕಿರಿಕಿರಿ ಉಂಟು ಮಾಡುವ ಗುಣವನ್ನು ಬಿಟ್ಟಲ್ಲಿ ಕುಟುಂಬದಲ್ಲಿ ನೆಮ್ಮದಿ ಇರುತ್ತದೆ. ಸಂಗಾತಿಯ ಮಾತಿನಂತೆ ನಡೆವ ಕಾರಣ ವಿವಾದ ಒಂದು ದೂರವಾಗುತ್ತದೆ. ಉದ್ಯೋಗದಲ್ಲಿ ಯಾವುದೇ ರೀತಿಯ ತೊಂದರೆ ಉಂಟಾಗುವುದಿಲ್ಲ. ಚಾಡಿ ಮಾತನ್ನು ಕೇಳಿದಿರಿ. ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿತ ಮಟ್ಟದ ಲಾಭ ದೊರೆಯಲಿದೆ. ವಿದ್ಯಾರ್ಥಿಗಳು ಸ್ಥಿರವಾದ ಮನಸ್ಸಿನಿಂದ ಕಲಿಕೆಯಲ್ಲಿ ಮುಂದುವರೆಸುತ್ತಾರೆ. ಧಾರ್ಮಿಕ ಕೇಂದ್ರಕ್ಕೆ ದಿನ ನಿತ್ಯಕ್ಕೆ ಬೇಕಾದ ಪದಾರ್ಥಗಳನ್ನು ನೀಡುವಿರಿ.

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು ಪಶ್ಚಿಮ

ಅದೃಷ್ಟದ ಬಣ್ಣ: ಹಳದಿ ಬಣ್ಣ

ತುಲಾ - ವಿವಾಹ ಮಾತುಕತೆ

ಯಾವುದೇ ರೀತಿಯ ತೊಂದರೆಗಳು ಇರುವುದಿಲ್ಲ. ಕುಟುಂಬದಲ್ಲಿ ನಲಿವಿನ ವಾತಾವರಣವಿರುತ್ತದೆ. ಪ್ರತಿ ವಿಚಾರವನ್ನೂ ಪರಸ್ಪರ ಚರ್ಚಿಸಿ ಒಮ್ಮತದ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಮನೆತನಕ್ಕೆ ಸೇರಿದ ಆಸ್ತಿಯಲ್ಲಿ ನ್ಯಾಯಯುತ ಪಾಲು ದೊರೆಯುತ್ತದೆ. ಉದ್ಯೋಗದಲ್ಲಿ ನಿಮ್ಮ ಮಟ್ಟಕ್ಕೆ ಬರಲು ಹಲವರು ಪ್ರಯತ್ನಿಸಿದರೂ ಸಾಧ್ಯವಾಗುವುದಿಲ್ಲ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಆದಾಯಕ್ಕೆ ಕೊರತೆ ಇರದು. ತೃಪ್ತಿಕರ ಜೀವನವಿರುತ್ತದೆ. ವಿದ್ಯಾರ್ಥಿಗಳು ಸದಾ ಯಾವುದಾದರೂ ಒಂದು ಚಟುವಟಿಕೆಗಳಲ್ಲಿ ತೊಡಗಿರುತ್ತಾರೆ. ಅವಿವಾಹಿತರಿಗೆ ಸಂಬಂಧದಲ್ಲಿ ವಿವಾಹದ ಮಾತುಕತೆ ನಡೆಯುತ್ತದೆ. ಬಡವರ ವಿವಾಹ ಕಾರ್ಯಕ್ಕೆ ಸಹಾಯ ಮಾಡುವಿರಿ. ದಿನದ ಕೆಲಸ ಬೇಗನೆ ಮುಗಿವ ಸೂಚನೆ ಇಲ್ಲ.

ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು ಈಶಾನ್ಯ

ಅದೃಷ್ಟದ ಬಣ್ಣ: ಹಸಿರುಬಣ್ಣ

ವೃಶ್ಚಿಕ - ಹೆಚ್ಚಿನ ಪರಿಶ್ರಮದಿಂದ ಲಾಭ

ಕುಟುಂಬದ ಜನರ ಜೊತೆಯಲ್ಲಿ ವೇಳೆ ಕಳೆಯಲು ನಿರ್ಧರಿಸುವಿರಿ. ಕುಟುಂಬದ ಒಳಗೂ ಹೊರಗೂ ಗೌರವಯುತ ಸ್ಥಾನಮಾನ ನಿಮಗಿರುತ್ತದೆ. ತಾಯಿಯವರ ಸೂಚನೆಯನ್ನು ಮೀರದೆ ಜೀವನದಲ್ಲಿ ಮುಂದುವರೆಯುವಿರಿ. ಕೆಲಸ ಕಾರ್ಯವನ್ನು ಬೇಗನೆ ಪೂರ್ಣಗೊಳಿಸುವ ತವಕವಿರುತ್ತದೆ. ತಾಯಿಯವರಿಂದ ಹಣದ ಸಹಾಯವು ದೊರೆಯುತ್ತದೆ. ಉದ್ಯೋಗದಲ್ಲಿ ನಿಯಮಿತ ಫಲಿತಾಂಶ ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಅರಿಶ್ರಮದಿಂದ ಲಾಭವನ್ನು ಗಳಿಸುವಿರಿ. ವಿದ್ಯಾರ್ಥಿಗಳು ಹೆಚ್ಚಿನ ಪ್ರಯತ್ನದಿಂದ ಗುರಿ ತಲುಪಲಿದ್ದಾರ. ಸ್ವಂತ ಬಳಕೆಗಾಗಿ ಹೊಸ ವಾಹನವನ್ನು ಕೊಳ್ಳುವಿರಿ. ಯಾತ್ರಾರ್ತಿಗಳಿಗೆ ಹಣದ ಸಹಾಯವನ್ನು ಮಾಡುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ನೀಲಿ ಬಣ್ಣ

---------------------------------------

ಜ್ಯೋತಿಷಿ- ಎಚ್‌. ಸತೀಶ್, ಬೆಂಗಳೂರು

ಮೊಬೈಲ್: 85468 65832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಗೌರಿವಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.