ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಉದ್ಯೋಗದಲ್ಲಿ ಉನ್ನತ ಪದವಿ ದೊರೆಯುವ ಸಾಧ್ಯತೆ, ಆರೋಗ್ಯ ಸುಧಾರಿಸಲಿದೆ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಉದ್ಯೋಗದಲ್ಲಿ ಉನ್ನತ ಪದವಿ ದೊರೆಯುವ ಸಾಧ್ಯತೆ, ಆರೋಗ್ಯ ಸುಧಾರಿಸಲಿದೆ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಜುಲೈ 7ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (ಬರಹ: ಎಚ್‌. ಸತೀಶ್, ಜ್ಯೋತಿಷಿ).

ಉದ್ಯೋಗದಲ್ಲಿ ಉನ್ನತ ಪದವಿ ದೊರೆಯುವ ಸಾಧ್ಯತೆ, ಆರೋಗ್ಯ ಸುಧಾರಿಸಲಿದೆ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
ಉದ್ಯೋಗದಲ್ಲಿ ಉನ್ನತ ಪದವಿ ದೊರೆಯುವ ಸಾಧ್ಯತೆ, ಆರೋಗ್ಯ ಸುಧಾರಿಸಲಿದೆ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (7th July 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಆಷಾಢ ಮಾಸ-ಶುಕ್ಲಪಕ್ಷ-ಭಾನುವಾರ

ತಿಥಿ : ಬಿದಿಗೆ ರಾತ್ರಿ 04.08 ರವರೆಗೂ ಇದ್ದು ನಂತರ ತದಿಗೆ ಆರಂಭವಾಗುತ್ತದೆ.

ನಕ್ಷತ್ರ : ಪುಷ್ಯ ನಕ್ಷತ್ರವು ಬೆಳಗ್ಗೆ 06.03 ರವರೆಗೆ ಇದ್ದು ನಂತರ ಆಶ್ಲೇಷ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.58

ಸೂರ್ಯಾಸ್ತ: ಸಂಜೆ 06.49

ರಾಹುಕಾಲ: ಸಂಜೆ 05.16 ರಿಂದ 06.52

ರಾಶಿಫಲ

ಮೇಷ

ಕುಟುಂಬದ ಸದಸ್ಯರೊಂದಿಗೆ ಸಂತಸದಿಂದ ಬೆರೆಯುವಿರಿ. ಇದರಿಂದ ಮಾನಸಿಕ ಒತ್ತಡ ಕಡಿಮೆಯಾಗುತ್ತದೆ. ಕೌಟುಂಬಿಕ ಜವಾಬ್ದಾರಿಯಿಂದ ದೂರ ಉಳಿಯುವಿರಿ. ಹಣಕಾಸಿನ ಒತ್ತಡ ಕೊಂಚ ಕಡಿಮೆಯಾಗುತ್ತದೆ. ಸಮಯವನ್ನು ಗೌರವಿಸುವ ನೀವು ಸದಾ ಕಾಲ ಕೆಲಸ ಕಾರ್ಯದಲ್ಲಿ ನಿರತರಾಗಿರುವಿರಿ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಾಗಿರುತ್ತದೆ. ಖರ್ಚು ವೆಚ್ಚಗಳನ್ನು ಕಡಿಮೆ ಮಾಡಿ ಹಣ ಉಳಿಸುವಿರಿ. ವಿದ್ಯಾರ್ಥಿಗಳು ಒತ್ತಡಕ್ಕೆ ಸಿಲುಕಿ ತಪ್ಪು ನಿರ್ಧಾರ ತೆಗೆದುಕೊಳ್ಳುತ್ತಾರೆ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷಿತ ವರಮಾನ ದೊರೆಯುತ್ತದೆ. ವಾದ ವಿವಾದವನ್ನು ಮರೆತು ಆತ್ಮೀಯರ ಜೊತೆ ಸ್ನೇಹ ಬೆಳೆಸುವಿರಿ. ಮಾನಸಿಕ ಒತ್ತಡಕ್ಕೆ ಒಳಗಾಗುವುದಿಲ್ಲ.

ಪರಿಹಾರ : ಬೆಲ್ಲದಿಂದ ಮಾಡಿದ ಆಹಾರ ಸೇವಿಸಿ ದಿನದ ಕೆಲಸ ಆರಂಭಿಸಿ

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಹಳದಿ

ವೃಷಭ

ಜನೋಪಕಾರಿ ಕೆಲಸ ಕಾರ್ಯಗಳಲ್ಲಿ ತೊಡಗುವಿರಿ. ಸಮಾಜ ಸೇವೆ ಮಾಡಲು ಉತ್ತಮ ಅವಕಾಶ ದೊರೆಯುತ್ತದೆ. ಕುಟುಂಬದ ಸದಸ್ಯರೊಂದಿಗೆ ಸಂತೋಷದಿಂದ ಬಾಳುವಿರಿ. ಉದ್ಯೋಗದಲ್ಲಿನ ಬದಲಾವಣೆಗಳು ನಿಮಗೆ ಅನುಕೂಲ ಎಂಬಂತೆ ಕಂಡುಬರುವುದಿಲ್ಲ. ಹೆಚ್ಚಿನ ವರಮಾನದ ನಿರೀಕ್ಷೆಯಿಂದ ಉದ್ಯೋಗ ಬದಲಿಸುವಿರಿ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ವಿದ್ಯಾಭ್ಯಾಸದಲ್ಲಿ ಉನ್ನತ ಮಟ್ಟ ತಲುಪುತ್ತಾರೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ. ಅನಾವಶ್ಯಕವಾಗಿ ಖರ್ಚು ಮಾಡದೆ ಹಣ ಉಳಿಸುವಿರಿ. ಸೋದರಿಗೆ ವಿವಾಹ ಸಂಬಂಧ ಕೂಡಿಬರುತ್ತದೆ. ಮನೆಯಲ್ಲಿನ ಪೂಜಾ ಸ್ಥಳವನ್ನು ಬದಲಿಸುವಿರಿ.

ಪರಿಹಾರ : ಮನೆಯ ದೇವರ ಗುಡಿಯಲ್ಲಿ ತುಪ್ಪದ ದೀಪ ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಹಸಿರು

ಮಿಥುನ

ಸೋದರಿಯ ಜೀವನದಲ್ಲಿ ಅಭಿವೃದ್ಧಿ ಕಂಡು ಬರುತ್ತದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರುತ್ತದೆ. ಅನಿರೀಕ್ಷಿತ ಧನ ಲಾಭವಿದ್ದರೂ ಖರ್ಚು ವೆಚ್ಚಗಳು ಸರಿಸಮನಾಗಿ ಇರುತ್ತದೆ. ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳ ಸಹಾಯದಿಂದ ಉನ್ನತ ಪದವಿ ದೊರೆಯುತ್ತದೆ. ವಿದ್ಯಾರ್ಥಿಗಳು ವ್ಯಾಸಂಗದ ಜೊತೆ ಉದ್ಯೋಗವನ್ನೂ ಮಾಡುವ ಮನಸ್ಸು ಮಾಡುತ್ತಾರೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ಇರುತ್ತದೆ. ಸ್ವಂತ ಮನೆ ಕೊಳ್ಳುವ ಯೋಜನೆ ಕಾರ್ಯರೂಪಕ್ಕೆ ಬರಲಿದೆ. ಮನೆಯವರ ಒತ್ತಡದಿಂದ ಬಂಧುವೊಬ್ಬರಿಗೆ ಹಣ ನೀಡುವಿರಿ. ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತದೆ. ಒಮ್ಮೆ ತೆಗೆದುಕೊಂಡ ನಿರ್ಧಾರವನ್ನು ಬದಲಿಸದಿರಿ.

ಪರಿಹಾರ : ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ನೀಲಿ

ಕಟಕ

ಯಾವುದೇ ಕಾರ್ಯವಾದರೂ ಯಶಸ್ಸು ಗಳಿಸುವಿರಿ. ಚಿಕ್ಕ ಪುಟ್ಟ ವಿಚಾರಗಳಿಗೂ ಮಾನಸಿಕ ಒತ್ತಡಕ್ಕೆ ಒಳಗಾಗುವಿರಿ. ಸ್ವಂತ ಕೆಲಸಗಳಿಗಾಗಿ ಯಾರ ಮೇಲೂ ಅವಲಂಬಿತವಾಗುವುದಿಲ್ಲ. ಮಕ್ಕಳಿಂದಾಗಿ ಕುಟುಂಬದಲ್ಲಿ ಸಂತಸ ಸಂಭ್ರಮ ಮನೆ ಮಾಡಿರುತ್ತದೆ. ಸಮಾಜದಲ್ಲಿ ಪ್ರತಿಷ್ಠಿತ ಸ್ಥಾನವನ್ನು ಅಲಂಕರಿಸುವಿರಿ. ಉದ್ಯೋಗದಲ್ಲಿನ ನಿಮ್ಮ ಕಾರ್ಯವೈಖರಿಗೆ ಎಲ್ಲರ ಮೆಚ್ಚುಗೆ ಗಳಿಸುವಿರಿ. ವಿದ್ಯಾರ್ಥಿಗಳು ಸಿಡುಕಿನ ಬುದ್ಧಿ ಬಿಡಬೇಕು. ವಿದ್ಯಾರ್ಥಿಗಳು ಎಲ್ಲರ ವಿಶ್ವಾಸ ಗಳಿಸಿದಲ್ಲಿ ವಿದ್ಯಾಭ್ಯಾಸ ಸುಗಮವಾಗಿ ಸಾಗುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ವಿರುತ್ತದೆ. ತಂದೆ ತಾಯಿಗಳ ಜೊತೆಯಲ್ಲಿ ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡುವಿರಿ.

ಪರಿಹಾರ : ಮಕ್ಕಳಿಗೆ ಗೋಧಿಯಿಂದ ತಯಾರಿಸಿದ ಸಿಹಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ನೇರಳೆ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.