ತಂದೆಯವರಿಗೆ ಸೇರಿದ ಉದ್ಯಮ ನಿಮ್ಮ ಪಾಲಿಗೆ ಸೇರಲಿದೆ, ಹೊಸ ವಾಹನ ಖರೀದಿಸುವಿರಿ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ
ಜುಲೈ 7ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (ಬರಹ: ಎಚ್. ಸತೀಶ್, ಜ್ಯೋತಿಷಿ).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (7th July 2024 Daily Horoscope).
ನಾಳೆಯ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಆಷಾಢ ಮಾಸ-ಶುಕ್ಲಪಕ್ಷ-ಭಾನುವಾರ
ತಿಥಿ : ಬಿದಿಗೆ ರಾತ್ರಿ 04.08 ರವರೆಗೂ ಇದ್ದು ನಂತರ ತದಿಗೆ ಆರಂಭವಾಗುತ್ತದೆ.
ನಕ್ಷತ್ರ : ಪುಷ್ಯ ನಕ್ಷತ್ರವು ಬೆಳಗ್ಗೆ 06.03 ರವರೆಗೆ ಇದ್ದು ನಂತರ ಆಶ್ಲೇಷ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 05.58
ಸೂರ್ಯಾಸ್ತ: ಸಂಜೆ 06.49
ರಾಹುಕಾಲ: ಸಂಜೆ 05.16 ರಿಂದ 06.52
ರಾಶಿಫಲ
ಸಿಂಹ
ಸೋಲು ಗೆಲುವಿನ ಬಗ್ಗೆ ಯೋಚಿಸದೆ ಜೀವನದಲ್ಲಿ ಮುಂದುವರೆಯಿರಿ. ಕುಟುಂಬದ ವಿಚಾರಗಳಲ್ಲಿ ಅಂತಿಮ ನಿರ್ಣಯ ನಿಮ್ಮದಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಜವಾಬ್ದಾರಿಯನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಸಮಾಜದಲ್ಲಿ ಗೌರವಯುತ ಸ್ಥಾನಮಾನ ದೊರೆಯುತ್ತದೆ. ವಿಶ್ರಾಂತಿ ಇಲ್ಲದೆ ದುಡಿಯುವಿರಿ. ಮಕ್ಕಳಿಗಾಗಿ ಬೇರೆಯವರಿಂದ ಹಣದ ಸಹಾಯ ಪಡುವಿರಿ. ಕುಟುಂಬದಲ್ಲಿ ಪರಸ್ಪರ ವಾದಿಸುವ ಪರಿಸ್ಥಿತಿ ಎದುರಾಗುತ್ತದೆ. ತಂದೆಯವರಿಗೆ ಸೇರಿದ ಉದ್ಯಮ ನಿಮ್ಮ ಪಾಲಿಗೆ ಬರಲಿದೆ. ವ್ಯಾಪಾರ ವ್ಯವಹಾರದ ಸಂಪೂರ್ಣ ಜವಾಬ್ದಾರಿಯನ್ನು ಸಂಗಾತಿಗೆ ವಹಿಸುವಿರಿ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ತಮ್ಮ ಗುರಿ ತಲುಪುತ್ತಾರೆ. ಕುಟುಂಬದ ಹಿರಿಯರೊಬ್ಬರಿಗೆ ನರದ ದೌರ್ಬಲ್ಯ ಉಂಟಾಗಬಹುದು.
ಪರಿಹಾರ : ಇರುವೆಗಳಿಗೆ ಆಹಾರ ಧಾನ್ಯ ಹಾಕಿ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 12
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ : ಗುಲಾಬಿ
ಕನ್ಯಾ
ಕುಟುಂಬದಲ್ಲಿ ಹಣಕಾಸಿನ ವಿಚಾರದಲ್ಲಿ ಒಮ್ಮತವಿರುತ್ತದೆ. ಬೇಡದ ಪ್ರಯಾಣಗಳಿಂದಲೇ ದಿನ ಕಳೆದು ಹೋಗುತ್ತದೆ. ಕಷ್ಟಪಟ್ಟು ಕೂಡಿಟ್ಟ ಹಣವನ್ನು ಖರ್ಚು ಮಾಡುವಿರಿ. ಮಾತುಕತೆಯಿಂದ ಆತ್ಮೀಯರೊಬ್ಬರ ಸಮಸ್ಯೆಯನ್ನು ಬಗೆಹರಿಸುವಿರಿ. ಸಂಗಾತಿಯಿಂದ ಹಣದ ಸಹಾಯ ದೊರೆಯುತ್ತದೆ. ವಿದ್ಯಾರ್ಥಿಗಳು ಒತ್ತಡ ತೊರೆದು ಕಲಿಕೆಯಲ್ಲಿ ಯಶಸ್ಸು ಕಾಣುತ್ತಾರೆ. ವ್ಯಾಪಾರ ವ್ಯವಹಾರಗಳಲ್ಲಿ ಹಾಕಿದ ಬಂಡವಾಳಕ್ಕೆ ಮೋಸವಾಗದು. ಸ್ವಂತ ಬಳಕೆಗಾಗಿ ಹೊಸ ವಾಹನವನ್ನು ಕೊಳ್ಳುವಿರಿ. ನಿಮ್ಮ ತಾಯಿ, ಜಾರಿ ಬಿದ್ದು ಪೆಟ್ಟಾಗುವ ಸಂಭವವಿದೆ ಎಚ್ಚರಿಕೆ ಇರಲಿ. ಸಂತಾನ ಲಾಭವಿದೆ. ಕುಟುಂಬದ ಹಿರಿಯರ ಹೆಸರಿನಲ್ಲಿ ದಾನ ಧರ್ಮ ಮಾಡುವಿರಿ.
ಪರಿಹಾರ : ತಾಯಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 3
ಅದೃಷ್ಟದ ದಿಕ್ಕು: ಈಶಾನ್ಯ
ಅದೃಷ್ಟದ ಬಣ್ಣ : ಬಿಳಿ ಬಣ್ಣ
ತುಲಾ
ಕುಟುಂಬದ ಹಿರಿಯರ ಜೊತೆ ಭಾವನಾತ್ಮಕವಾಗಿ ವರ್ತಿಸುವಿರಿ. ಕುಟುಂಬದ ಕೆಲಸ ಕಾರ್ಯಗಳಿಗೆ ಬೇರೆಯವರನ್ನು ಅವಲಂಬಿಸುವಿರಿ. ಭೂವಿವಾದದಲ್ಲಿ ಕಾನೂನಾತ್ಮಕ ಜಯ ಲಭಿಸುತ್ತದೆ. ಉದ್ಯೋಗದಲ್ಲಿ ಯಾವುದೇ ತೊಂದರೆ ಕಂಡು ಬರದು. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಲಾಭವಿರುತ್ತದೆ. ಸೋದರಿಯ ಜೊತೆ ಮಾಡುವ ಪಾಲುದಾರಿಕೆ ವ್ಯಾಪಾರದಲ್ಲಿ ಉತ್ತಮ ಲಾಭ ದೊರೆಯುತ್ತದೆ. ಹೋಟೆಲ್ ಉದ್ಯಮದಲ್ಲಿ ಆಸಕ್ತಿ ಉಂಟಾಗುತ್ತದೆ. ವಿದ್ಯಾರ್ಥಿಗಳು ಆಸಕ್ತಿಯಿಂದ ವಿದ್ಯೆ ಕಲಿಯುತ್ತಾರೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಬೆಳ್ಳಿ ಬಂಗಾರದ ವಸ್ತುಗಳಿಗೆ ಹಣ ಖರ್ಚುಮಾಡುವಿರಿ. ಉತ್ತಮ ಆದಾಯ ದೊರೆಯುತ್ತದೆ.
ಪರಿಹಾರ : ಪಕ್ಷಿಗಳಿಗೆ ಆಹಾರ ನೀಡಿ ದಿನದ ಕೆಲಸ ಆರಂಭಿಸಿ
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಬೂದು ಬಣ್ಣ
ವೃಶ್ಚಿಕ
ಸಂದಿಗ್ದದ ಪರಿಸ್ಥಿತಿ ಎದುರಾದಾಗ ಗಲಿಬಿಲಿಗೊಳ್ಳದೆ ಪರಿಹಾರ ಕಂಡುಹಿಡಿಯುವಿರಿ. ಕುಟುಂಬದಲ್ಲಿ ಎಲ್ಲರ ಸಹಾಯ ಸಹಕಾರ ದೊರೆಯುತ್ತದೆ. ಉದ್ಯೋಗದಲ್ಲಿನ ಬದಲಾವಣೆಗಳನ್ನು ಒಪ್ಪಬೇಕಾಗುತ್ತದೆ. ವಿದ್ಯಾರ್ಥಿಗಳು ವ್ಯಾಸಂಗದ ವಿಚಾರದಲ್ಲಿ ಎಚ್ಚರಿಕೆ ವಹಿಸಬೇಕಾಗುತ್ತದೆ. ಹಣಕಾಸಿನ ವ್ಯವಹಾರದಲ್ಲಿ ಜವಾಬ್ದಾರಿಯ ನಡಿಗೆಯನ್ನು ಅನುಸರಿಸುವಿರಿ. ಸ್ವತಂತ್ರ್ಯ ವ್ಯಾಪಾರ ವ್ಯವಹಾರದಲ್ಲಿ ಲಾಭವಿದೆ. ಲೇವಾದೇವಿ ವ್ಯವಹಾರದಿಂದ ತೊಂದರೆ ಉಂಟಾಗುತ್ತದೆ. ದಂಪತಿ ನಡುವೆ ಉತ್ತಮ ಒಡನಾಟ ಇರುತ್ತದೆ. ಮಕ್ಕಳ ಜೊತೆ ಅನಾವಶ್ಯಕವಾದ ವಾದ ವಿವಾದ ಇರುತ್ತದೆ. ಭೂ ವ್ಯವಹಾರದಲ್ಲಿ ಲಾಭವಿರುತ್ತದೆ. ವೃತ್ತಿಕ್ಷೇತ್ರದಲ್ಲಿ ಬೇಸರದ ಸಂಗತಿಯೊಂದು ನಡೆಯುತ್ತದೆ.
ಪರಿಹಾರ : ಸಿಹಿ ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಕಂದು
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).