ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಏಕಾಂಗಿಯಾಗಿರಲು ಇಷ್ಟ, ವಿವಿಧ ಯೋಜನೆಗಳಲ್ಲಿ ಹಣ ಹೂಡಿಕೆ; ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ದಿನ ಭವಿಷ್ಯ

ಏಕಾಂಗಿಯಾಗಿರಲು ಇಷ್ಟ, ವಿವಿಧ ಯೋಜನೆಗಳಲ್ಲಿ ಹಣ ಹೂಡಿಕೆ; ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ದಿನ ಭವಿಷ್ಯ

7 ಜೂನ್‌ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (7th June 2024 Daily Horoscope).

ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ದಿನ ಭವಿಷ್ಯ
ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (7th June 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ--ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಶುಕ್ರವಾರ

ತಿಥಿ: ಪಾಡ್ಯ 04.43 ವರೆಗೂ ಇರುತ್ತದೆ ನಂತರ ಬಿದಿಗೆ ಆರಂಭವಾಗುತ್ತದೆ.

ನಕ್ಷತ್ರ: ಮೃಗಶಿರ ನಕ್ಷತ್ರವು ರಾತ್ರಿ 08.10 ವರೆಗೂ ಇರುತ್ತದೆ ನಂತರ ಆರ್ದ್ರೆ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.44

ರಾಹುಕಾಲ: 10.47 ರಿಂದ 12.23

ರಾಶಿಫಲ

ಮೇಷ

ಅನುಭವಸ್ಥರ ಒಡನಾಟದಿಂದ ನೆಮ್ಮದಿಯ ಜೀವನವನ್ನು ನಡೆಸುವಿರಿ. ಆತ್ಮಸ್ಥೈರ್ಯ ಇರುವ ಕಾರಣ ಕೆಲಸ ಕಾರ್ಯ ಸುಗಮವಾಗಿ ಸಾಗುತ್ತದೆ. ಯಾವುದೇ ವಿಚಾರದಲ್ಲಿ ಸಮಸ್ಯೆ ಇದ್ದರೂ ಬಹುಕಾಲ ನಿಲ್ಲದು. ವಂಶಾಧಾರಿತ ಆಸ್ತಿಯ ಬಗ್ಗೆ ಆಸಕ್ತಿ ಮೂಡುತ್ತದೆ. ಕುಟುಂಬದ ಸಂಪೂರ್ಣ ಜವಾಬ್ದಾರಿ ಇರುವ ಕಾರಣ ವಿಶ್ರಾಂತಿ ಇರುವುದಿಲ್ಲ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಶ್ರದ್ಧೆ ತೋರಿಸುವುದಿಲ್ಲ. ಕುಟುಂಬವನ್ನು ಸಂತೋಷದಿಂದ ಇರಿಸಲು ಪ್ರಯತ್ನ ಪಡುವಿರಿ. ಪಾಲುದಾರಿಕೆ ವ್ಯಾಪಾರವನ್ನು ನಂಬುವುದಿಲ್ಲ. ಸ್ವಂತ ಪ್ರಯತ್ನದಿಂದ ತಮ್ಮ ಕೆಲಸ ಕಾರ್ಯಗಳಲ್ಲಿ ಯಶಸ್ಸು ಗಳಿಸುವಿರಿ. ಸಂಗಾತಿಯ ಜೊತೆ ಇದ್ದ ಬೇಸರ ಮರೆಯಾಗುತ್ತದೆ. ಮನಸ್ಸು ಒಪ್ಪದೇ ಹೋದರೂ ದೈನಂದಿನ ಜೀವನದಲ್ಲಿ ಬದಲಾವಣೆ ಮಾಡಬೇಕಾಗುತ್ತದೆ.

ಪರಿಹಾರ : ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ತಿಳಿ ಹಸಿರು

ವೃಷಭ

ದಾನ ಧರ್ಮಗಳಲ್ಲಿ ಆಸಕ್ತಿ ತೋರುವಿರಿ. ಧಾರ್ಮಿಕ ಗ್ರಂಥಗಳನ್ನು ಓದುವ ತವಕ ಇರುತ್ತದೆ. ಯಾತ್ರಾಸ್ಥಳಗಳಿಗೆ ಪ್ರವಾಸ ಕೈಗೊಳ್ಳುವಿರಿ. ಆತುರದಿಂದ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ಗಡಿಬಿಡಿಯ ವಾತಾವರಣದಿಂದ ಒತ್ತಡಕ್ಕೆ ಒಳಗಾಗುವಿರಿ. ಆರ್ಥಿಕ ಪರಿಸ್ಥಿತಿಯಲ್ಲಿ ತೊಂದರೆ ಇರುವುದಿಲ್ಲ. ನಿಮ್ಮ ಕೆಲಸದ ಬಗ್ಗೆ ಎಲ್ಲರ ಗಮನ ಇರುತ್ತದೆ. ಮನಸ್ಸಿನಲ್ಲಿ ಇರುವ ವಿಚಾರಗಳನ್ನು ಗೋಪ್ಯವಾಗಿ ಇಡುವಿರಿ. ನಿಮ್ಮ ಪ್ರೀತಿಪಾತ್ರರು ನಿಮ್ಮ ಭಾವನೆಗಳನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಉದ್ಯೋಗದಲ್ಲಿ ಪ್ರಮೋಷನ್‌ ದೊರೆಯುವ ಸಾಧ್ಯತೆ ಇದೆ. ದೂರದ ಸಂಬಂಧಿಗಳಿಂದ ಮನಸ್ಸಿಗೆ ಬೇಸರವಾಗುವ ವರ್ತಮಾನವೊಂದು ಬರಲಿದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ನಸು ಗೆಂಪು

ಮಿಥುನ

ಕೆಲಸ ಕಾರ್ಯಗಳ ಬಗ್ಗೆ ಆಸಕ್ತಿ ಇದ್ದರೂ ದೈಹಿಕ ನಿಶ್ಯಕ್ತಿ ಇರುತ್ತದೆ. ವಿಶ್ರಾಂತಿ ತೆಗೆದುಕೊಳ್ಳುವ ಕಾರಣ ಕೆಲಸ ಕಾರ್ಯಗಳು ನಿಧಾನ ಗತಿಯಲ್ಲಿ ಸಾಗುತ್ತವೆ. ಬೇಡದ ವಿಚಾರಗಳಿಗೆ ಹಣ ಖರ್ಚು ಮಾಡುವಿರಿ. ನಿರೀಕ್ಷಿತ ಮೂಲದಿಂದ ಹಣದ ಸಹಾಯ ದೊರೆಯುವುದಿಲ್ಲ. ಸಾಲವಾಗಿ ನೀಡಿದ್ದ ಹಣವು ನಿಮ್ಮ ಕೈಸೇರುವುದು. ಸ್ನೇಹಿತರ ಬೆಂಬಲ ನಿಮಗೆ ದೊರೆಯುತ್ತದೆ. ಸದ್ಯಕ್ಕೆ ವಿವಾಹ ಕಾರ್ಯ ನಡೆಯುವ ಸಾಧ್ಯತೆ ಇಲ್ಲ. ಸ್ತ್ರೀಯರು ಉತ್ತಮ ಫಲಗಳನ್ನು ಪಡೆಯುತ್ತಾರೆ. ಬೇಸರ ಹೆಚ್ಚಾಗಿ ಏಕಾಂಗಿಯಾಗಿ ಬಾಳಲು ಇಚ್ಚಿಸುವಿರಿ.

ಪರಿಹಾರ: ತಾಯಿ ಆಶೀರ್ವಾದ ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ

ಕಟಕ

ಕುಟುಂಬದ ಸದಸ್ಯರ ಸಹಾಯದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಗಳಿಸುವರಿ. ಹಿರಿಯರ ಸಲಹೆಯನ್ನು ಗೌರವದಿಂದ ಒಪ್ಪಿಕೊಳ್ಳುವಿರಿ. ಒತ್ತಡಕ್ಕೆ ಮಣಿಯದೆ ಮನದ ವಿಚಾರವನ್ನುಹಂಚಿಕೊಳ್ಳಲ ಪ್ರಯತ್ನಿಸಿ. ಎದುರಾಗುವ ಸಮಸ್ಯೆಗಳನ್ನು ಸುಲಭವಾಗಿ ನಿವಾರಿಸಬಲ್ಲಿರಿ. ಉತ್ತಮ ಆದಾಯ ಗಳಿಸಲು ವಿವಿಧ ಯೋಜನೆಯಲ್ಲಿ ಹಣ ಹೂಡುವಿರಿ. ಆಪತ್ತಿನಲ್ಲಿ ಇದ್ದವರಿಗೆ ಸಹಾಯ ಮಾಡುವಿರಿ. ನೀವು ಮಾಡುವ ಕೆಲಸ ಕಾರ್ಯಗಳು ಎಲ್ಲರಗೂ ಸ್ಪೂರ್ತಿಯಾಗುತ್ತದೆ. ಆತ್ಮೀಯರೊಡನೆ ಹೊರಗೆ ಹೋಗಿ ಸಮಯ ಕಳೆಯಲಿದ್ದೀರಿ. ಉದ್ಯೋಗಿಗಳಿಗೆ ವೇತನ ಹೆಚ್ಚುತ್ತದೆ. ಸಂಗಾತಿಯ ಜೊತೆಯಲ್ಲಿ ಪ್ರೀತಿ ವಿಶ್ವಾಸ ಹೆಚ್ಚುತ್ತದೆ. ಕಲಾವಿದರಿಗೆ ಉನ್ನತ ಗೌರವ ಪ್ರತಿಷ್ಠೆ ದೊರೆಯತ್ತದೆ.

ಪರಿಹಾರ : ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಬಿಳಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).