Horoscope Today: ವಿದೇಶಿ ಕಂಪನಿಯೊಂದರಲ್ಲಿ ಉದ್ಯೋಗ ದೊರೆಯುತ್ತದೆ, ಹವ್ಯಾಸಿ ಕಲಾವಿದರಿಗೆ ಉತ್ತಮ ಅವಕಾಶ: ಮೇ 7ರ ದಿನ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ವಿದೇಶಿ ಕಂಪನಿಯೊಂದರಲ್ಲಿ ಉದ್ಯೋಗ ದೊರೆಯುತ್ತದೆ, ಹವ್ಯಾಸಿ ಕಲಾವಿದರಿಗೆ ಉತ್ತಮ ಅವಕಾಶ: ಮೇ 7ರ ದಿನ ಭವಿಷ್ಯ

Horoscope Today: ವಿದೇಶಿ ಕಂಪನಿಯೊಂದರಲ್ಲಿ ಉದ್ಯೋಗ ದೊರೆಯುತ್ತದೆ, ಹವ್ಯಾಸಿ ಕಲಾವಿದರಿಗೆ ಉತ್ತಮ ಅವಕಾಶ: ಮೇ 7ರ ದಿನ ಭವಿಷ್ಯ

7 ಮೇ 2024 ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (7th May 2024 Daily Horoscope).

ಮೇ 7ರ ದಿನ ಭವಿಷ್ಯ
ಮೇ 7ರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (7th May 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಮಂಗಳವಾರ

ತಿಥಿ : ಚತುರ್ದಶಿ 10.45 ರವರೆಗೂ ಇದ್ದು ನಂತರ ಅಮಾವಾಸ್ಯೆ ಆರಂಭವಾಗುತ್ತದೆ.

ನಕ್ಷತ್ರ : ಅಶ್ವಿನಿ ನಕ್ಷತ್ರವು 03.02 ರವರೆಗೂ ಇದ್ದು ನಂತರ ಭರಣಿ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.56

ಸೂರ್ಯಾಸ್ತ: ಸಂಜೆ 06.37

ರಾಹುಕಾಲ: 03.29 ರಿಂದ 05.04

ರಾಶಿಫಲ

ಸಿಂಹ

ಸೋದರನ ಹಣಕಾಸಿನ ತೊಂದರೆ ನಿಮ್ಮಿಂದ ದೂರವಾಗಲಿದೆ. ದೈಹಿಕ ಶ್ರಮದ ಕಾರಣ ಮನದಲ್ಲಿ ವೈರಾಗ್ಯದ ಭಾವನೆ ಉಂಟಾಗುತ್ತದೆ. ಬೇಸಾಯಕ್ಕೆ ಪೂರಕವಾದ ಉದ್ಯೋಗದಲ್ಲಿ ಯಶಸ್ಸು ದೊರೆಯುತ್ತದೆ. ಆಮದು ರಫ್ತು ಮಾಡುವ ವ್ಯಾಪಾರದಲ್ಲಿ ಲಾಭವಿರುತ್ತದೆ. ರಾಜಕೀಯ ಧುರೀಣರಿಗೆ ಉನ್ನತ ಅಧಿಕಾರ ದೊರೆಯುತ್ತದೆ. ಕುಟುಂಬದ ಆಸ್ತಿಯಲ್ಲಿ ನ್ಯಾಯಯುತ ಪಾಲು ದೊರೆಯುತ್ತದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಿನ ಆಸಕ್ತಿ ಹೊಂದುವರು. ತಂದೆಯವರ ವ್ಯಾಪಾರವನ್ನು ಮುಂದುವರೆಸುವಿರಿ. ಕಲುಷಿತ ಆಹಾರ ಸೇವನೆಯಿಂದ ತೊಂದರೆ ಅನುಭವಿಸುವಿರಿ. ಯಾರನ್ನೂ ವಿಚಾರ ತಿಳಿಯದೆ ಅನಾವಶ್ಯಕವಾಗಿ ಅನುಮಾನಿಸಬೇಡಿ. ಸಮಾಜದಲ್ಲಿ ಗೌರವಯುತ ಸ್ಥಾನ ಲಭಿಸುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ 11

ಅದೃಷ್ಟದ ದಿಕ್ಕು ನೈರುತ್ಯ

ಅದೃಷ್ಟದ ಬಣ್ಣ : ಬಿಳಿ

ಕನ್ಯಾ

ಕೃಷಿ ಭೂಮಿಯನ್ನು ಕೊಳ್ಳುವಿರಿ. ಸೋದರರ ಸಹಕಾರದಿಂದ ಹಣದ ಕೊರತೆಯಿಂದ ಪಾರಾಗುವಿರಿ. ಭಯದ ಗುಣ ನಿಮ್ಮ ಕೆಲಸ ಕಾರ್ಯಗಳಲ್ಲಿ ಬದಲಾವಣೆಗಳನ್ನು ಉಂಟುಮಾಡಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರುತ್ತದೆ. ಉದ್ಯೋಗದಲ್ಲಿ ಯಾವುದೇ ಬದಲಾವಣೆ ಇರದು. ವಿದ್ಯಾರ್ಥಿಗಳು ಶುದ್ದ ಮನಸ್ಸಿನಿಂದ ಓದಿನಲ್ಲಿ ಮಗ್ನರಾಗುವರು. ಪಾಲುದಾರಿಕೆಯ ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭಾಂಶ ದೊರೆಯುತ್ತದೆ. ಆಮದು ಮತ್ತು ರಪ್ತು ವ್ಯಾಪಾರವು ಉತ್ತಮ ಆದಾಯವನ್ನು ಒದಗಿಸುವುದು. ಸಾಲದ ವ್ಯವಹಾರದಲ್ಲಿ ವಿರೋಧವನ್ನು ಎದುರಿಸುವಿರಿ. ಬಡವರ ವಿವಾಹಕಾರ್ಯಕ್ಕೆ ಸಹಾಯ ಮಾಡುವಿರಿ. ಆರೋಗ್ಯದ ಬಗ್ಗೆ ಗಮನ ಇರಲಿ.

ಪರಿಹಾರ : ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಬೂದು

ತುಲಾ

ಚುರುಕುತನದಿಂದ ಬುದ್ಧಿವಂತಿಯಿಂದ ಕೆಲಸ ಸಾಧಿಸುವಿರಿ. ಕಾನೂನಿನ ಸಹಾಯದಿಂದ ಉದ್ಯೋಗಕ್ಕೆ ಸಂಬಂಧಿಸಿದ ತೊಂದರೆಯಿಂದ ಪಾರಾಗುವಿರಿ. ಪ್ರಖ್ಯಾತ ಸಂಸ್ಥೆಯೊಂದರ ನಿರ್ವಹಣೆಯ ಜವಾಬ್ದಾರಿ ಲಭಿಸುತ್ತದೆ. ವಿದ್ಯಾರ್ಥಿಗಳ ಸಾಧನೆ ಅಚ್ಚರಿಗೆ ಕಾರಣವಾಗುತ್ತದೆ. ಸ್ಟಾಕ್ ಮತ್ತು ಷೇರಿನ ವ್ಯವಹಾರದ ಮಧ್ಯವರ್ತಿಯಾದಲ್ಲಿ ಉತ್ತಮ ಲಾಭಾಂಶ ದೊರೆಯುತ್ತದೆ. ಯಾವುದೇ ಬದಲಾವಣೆ ಕಾಣದ ಕಾರಣ ನೌಕರಿಯನ್ನು ಬದಲಾಯಿಸುವಿರಿ. ಹವ್ಯಾಸಿ ಕಲಾವಿದರಿಗೆ ಉತ್ತಮ ಅವಕಾಶ ದೊರೆಯುತ್ತದೆ. ಸಂದರ್ಭದ ಕೈಗೊಂಬೆಯಾಗಿ ತಪ್ಪು ನಿರ್ಧಾರ ತೆಗೆದುಕೊಳ್ಳುವಿರಿ. ಕುಟುಂಬದ ಹಿರಿಯರ ಮನಸ್ಸನ್ನು ಅರಿತು ವರ್ತಿಸುವಿರಿ. ಹಿರಿಯರ ಅನುಗ್ರಹದಿಂದ ಹಣದ ಕೊರತೆ ಕಡಿಮೆ ಆಗಲಿದೆ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು ಉತ್ತರ

ಅದೃಷ್ಟದ ಬಣ್ಣ: ಕಂದು

ವೃಶ್ಚಿಕ

ಗೆಲ್ಲಲೇಬೇಕೆಂಬ ಛಲದಿಂದ ದಿನವನ್ನು ಆರಂಭಿಸುವಿರಿ. ಹಟದ ಬುದ್ಧಿಯಿಂದ ಕುಟುಂಬದಲ್ಲಿ ಬೇಸರ ಉಂಟುಮಾಡುವಿರಿ. ಸಿಡುಕುತನದ ಕಾರಣ ಜನರು ನಿಮ್ಮಿಂದ ದೂರ ಉಳಿಯುತ್ತಾರೆ. ಆಧುನಿಕ ತಂತ್ರಜ್ಞಾನದಲ್ಲಿ ಜ್ಞಾನ ಇರುವ ಕಾರಣ ವಿದೇಶಿ ಕಂಪನಿಯೊಂದರಲ್ಲಿ ಉದ್ಯೋಗ ದೊರೆಯುತ್ತದೆ. ಉದ್ಯೋಗದಲ್ಲಿ ಯಾವುದೇ ತೊಂದರೆ ಇರದು. ಕುಟುಂಬದಲ್ಲಿ ನಿಮ್ಮ ಮಾತೇ ಅಂತಿಮವಾಗುತ್ತದೆ. ಬೇಸರದಿಂದ ಆರಂಭಿಸಿದ ತೋಟಗಾರಿಕೆಯಲ್ಲಿ ಉತ್ತಮ ಲಾಭ ಗಳಿಸುವಿರಿ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಉನ್ನತ ಸ್ಥಾನಮಾನ ಗಳಿಸುತ್ತಾರೆ. ಹಣಕಾಸಿನ ವಹಿವಾಟಿನಲ್ಲಿ ಅನಿರೀಕ್ಷಿತ ಧನಲಾಭ ದೊರೆಯುತ್ತದೆ. ಪುಟ್ಟ ಮಕ್ಕಳನ್ನು ಮಮತೆಯಿಂದ ಸಲಹುವಿರಿ.

ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕಪ್ಪು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.