ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today; ಸುಗಮ ವ್ಯಾಪಾರ, ಆಸ್ತಿಯ ವಿಚಾರದಲ್ಲಿ ಆತುರದ ನಿರ್ಣಯ ಬೇಡಿ; ಮೇಷದಿಂದ ಕಟಕ ರಾಶಿವರೆಗಿನ ದಿನ ಭವಿಷ್ಯ

Horoscope Today; ಸುಗಮ ವ್ಯಾಪಾರ, ಆಸ್ತಿಯ ವಿಚಾರದಲ್ಲಿ ಆತುರದ ನಿರ್ಣಯ ಬೇಡಿ; ಮೇಷದಿಂದ ಕಟಕ ರಾಶಿವರೆಗಿನ ದಿನ ಭವಿಷ್ಯ

8 ಏಪ್ರಿಲ್ 2024: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿ ರಾಶಿಗೂ ಅದರದ್ದೇ ಆದ ಅಧಿಪತಿ ಇದ್ದಾನೆ. ಆಯಾ ರಾಶಿಗಳ ಜನರು ಮಾಡುವ ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳ ಫಲಗಳು ಸಿಗುತ್ತವೆ. ಮೇಷ, ವೃಷಭ, ಮಿಥುನ, ಕಟಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನ ಭವಿಷ್ಯ ಇಲ್ಲಿದೆ. (8th April 2024 Daily Horoscope)

ಏಪ್ರಿಲ್ 8ರ ಸೋಮವಾರ ಮೇಷದಿಂದ ಕಟಕ ರಾಶಿವರೆಗಿನ ದಿನ ಭವಿಷ್ಯ
ಏಪ್ರಿಲ್ 8ರ ಸೋಮವಾರ ಮೇಷದಿಂದ ಕಟಕ ರಾಶಿವರೆಗಿನ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಸಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವುದು ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀಲವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್‌. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (8th April 2024 Horoscope)

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ,ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣಪಕ್ಷ, ಸೋಮವಾರ

ತಿಥಿ: ಯುಗಾದಿ ಅಮಾವಾಸ್ಯೆ ರಾ . 12.13 ರವರೆಗು ಇರುತ್ತದೆ. ಆನಂತರ ಪಾಡ್ಯ ಇರುತ್ತದೆ.

ನಕ್ಷತ್ರ: ಉತ್ತರಾ ಭಾದ್ರ ನಕ್ಷತ್ರವು ಬೆ.09.58 ರವರೆಗು ಇರುತ್ತದೆ. ಆನಂತರ ರೇವತಿ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 06.11

ಸೂರ್ಯಾಸ್ತ: ಸಂಜೆ 06.31

ರಾಹುಕಾಲ: ಬೆಳಗ್ಗೆ 07.30 ರಿಂದ 09.00

ಸೋಮವಾರ (ಏಪ್ರಿಲ್ 8) ಸಂಭವಿಸುವ ಸೂರ್ಯ ಗ್ರಹಣವು ಭಾರತದಲ್ಲಿ ಕಾಣುವುದಿಲ್ಲ. ಆದ್ದರಿಂದ ಇದನ್ನು ಆಚರಿಸುವ ಅಗತ್ಯತೆ ಇರುವುದಿಲ್ಲ. ಈ ಗ್ರಹಣದಿಂದ ಯಾವುದೇ ಪ್ರಭಾವ ಇರುವುದಿಲ್ಲ.

ಮೇಷ ರಾಶಿ

ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ಯೋಗ ವ್ಯಾಯಾಮದಿಂದ ದೈಹಿಕವಾಗಿ ಸದೃಢವಾಗುವಿರಿ. ಕುಟುಂಬದಲ್ಲಿ ಸ್ನೇಹಪೂರ್ವ ವಾತಾವರಣವಿರುತ್ತದೆ. ಉದ್ಯೋಗದಲ್ಲಿ ನಿಯೋಜಿತ ರೀತಿಯಲ್ಲಿ ಕಾರ್ಯವನ್ನು ಪೂರ್ಣ ಗೊಳಿಸುವಿರಿ. ವ್ಯಾಪಾರ ವ್ಯವಹಾರಗಳು ಸಹಜ ಸ್ಥಿತಿಯಲ್ಲಿ ಸಾಗುತವೆ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಮುಂದುವರೆಯುತ್ತಾರೆ. ಸಂಬಂಧವಿಲ್ಲದ ಹಣಕಾಸಿನ ವಿಚಾರದಲ್ಲಿ ವಿವಾದ ಉಂಟಾಗುತ್ತದೆ. ಆಸ್ತಿಯ ವಿಚಾರದಲ್ಲಿ ಆತುರದ ನಿರ್ಣಯ ತೆಗೆದುಕೊಳ್ಳಬೇಡಿ. ಸಭೆ ಸಮಾರಂಭಗಳಲ್ಲಿ ಅತಿಥಿಗಳಾಗಿ ಭಾಗವಹಿಸುವಿರಿ. ಮಕ್ಕಳಿಗೆ ದುಭಾರಿ ಉಡುಗೊರೆಯನ್ನು ನೀಡುವಿರಿ.

ಪರಿಹಾರ: ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ: 1

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕೇಸರಿ

ವೃಷಭ ರಾಶಿ

ಅತಿಯಾದ ನಿರೀಕ್ಷೆ ಯಿಂದ ಮಾನಸಿಕ ಚಿಂತೆಗೆ ಒಳಗಾಗುವಿರಿ. ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳುವ ಪ್ರಯತ್ನ ಮಾಡುವಿರಿ. ಶಾಂತಿ ಸಹನೆಯಿಂದ ಇರುವುದು ಒಳ್ಳೆಯದು. ಉದ್ಯೋಗದಲ್ಲಿ ನಿಧಾನಗತಿಯ ಪ್ರಗತಿ ಕಂಡು ಬರುತ್ತದೆ. ವ್ಯಾಪಾರ ವ್ಯವಹಾರಗಳು ಸುಗಮವಾಗಿ ನಡೆಯಲಿವೆ. ವಿದ್ಯಾರ್ಥಿಗಳು ಆತಂಕವನ್ನು ಬಿಟ್ಟು ಆತ್ಮ ವಿಶ್ವಾಸವನ್ನು ರೂಢಿಸಿಕೊಳ್ಳಬೇಕು. ಭೂಸಂಬಂಧಿತ ವ್ಯವಹಾರ ಒಂದರಲ್ಲಿ ಉತ್ತಮ ಲಾಭಾಂಶಗಳಿಸುವಿರಿ. ಕುಟುಂಬದವರ ಪ್ರೋತ್ಸಾಹ ಮತ್ತು ಸಹಕಾರ ಹೊಸ ಜೀವನವನ್ನು ರೂಪಿಸುತ್ತದೆ. ಉದ್ಯೋಗ ಬದಲಿಸುವ ಸಾಧ್ಯತೆಗಳಿವೆ. ಉಸಿರಿಗೆ ಸಂಬಂಧಿಸಿದ ಅನಾರೋಗ್ಯ ಉಂಟಾಗುತ್ತದೆ. ವಯೋವೃದ್ಧರಿಗೆ ಸೇವೆಯಲ್ಲಿ ಸಂತಸ ಕಾಣುವಿರಿ.

ಪರಿಹಾರ: ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 4

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ಮಿಥುನ ರಾಶಿ

ಕುಟುಂಬದಲ್ಲಿ ಹಿರಿಯರ ಒಪ್ಪಿಗೆ ಇಲ್ಲದೆ ಯಾವುದೇ ಕೆಲಸವನ್ನು ಮಾಡುವುದಿಲ್ಲ. ಉದ್ಯೋಗದಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು ದೊರೆಯಲಿದೆ. ವ್ಯಾಪಾರದಲ್ಲಿ ಉತ್ತಮ ಆದಾಯವಿದ್ದರೂ ಸದುಪಯೋಗಪಡಿಸಿಕೊಳ್ಳುವುದಿಲ್ಲ. ಹಣಕಾಸಿನ ವಿವಾದವನ್ನು ಲಘುವಾಗಿ ಪರಿಗಣಿಸುತ್ತೀರಿ. ವಿದ್ಯಾರ್ಥಿಗಳು ಶ್ರದ್ಧೆಯಿಂದ ತಮ್ಮ ಕರ್ತವ್ಯ ಪಾಲಿಸುತ್ತಾರೆ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಸಂಪಾದನೆ ಇರುತ್ತದೆ. ಮನಸ್ಸು ಬದಲಾಯಿಸುವ ಕಾರಣ ತೊಂದರೆಯನ್ನು ಅನುಭವಿಸುವಿರಿ. ಸಂಗಾತಿಯ ಜೊತೆಯಲ್ಲಿ ಪ್ರವಾಸಕ್ಕೆ ತೆರಳಬಹುದು.

ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 7

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಕೆಂಪು

ಕಟಕ ರಾಶಿ

ಸದಾಕಾ ಯಾವುದಾದರೂ ಒಂದು ಕೆಲಸ ಕಾರ್ಯಗಳಲ್ಲಿ ನಿರತರಾಗುವಿರಿ. ಸಾರಿಗೆಗೆ ಸಂಬಂಧಪಟ್ಟ ಉದ್ಯೋಗದಲ್ಲಿ ನಿರತರಾಗುವಿರಿ. ಉದ್ಯೋಗದಲ್ಲಿ ಬೇಸರವಿರುತ್ತದೆ. ವ್ಯಾಪಾರ ವ್ಯವಹಾರಗಳು ನಿರ್ದಿಷ್ಟಗತಿಯಲ್ಲಿ ನಡೆಯಲಿವೆ. ವಿದ್ಯಾರ್ಥಿಗಳು ಆಟ ಪಾಠಗಳಲ್ಲಿ ಮುಂದಿರುತ್ತಾರೆ. ಮನಸ್ಸಿಗೆ ಹತ್ತಿರವಾದವರ ಜೊತೆ ವೇಳೆ ಕಳೆಯುವಿರಿ. ಪಾಲುಗಾರಿಕೆಯ ವ್ಯಾಪಾರದಲ್ಲಿ ಅದೃಷ್ಟ ವಿದೆ. ಜನಸಾಮಾನ್ಯರಿಗೆ ಅನುಕೂಲವಾಗುವಂತಹ ಸೇವಾ ವೃತ್ತಿಯನ್ನು ಆರಂಭಿಸುವಿರಿ. ಆತುರದಲ್ಲಿ ತೆಗೆದುಕೊಳ್ಳುವ ತೀರ್ಮಾನದಿಂದ ವಿವಾದ ಉಂಟಾಗುತ್ತದೆ. ಹಣದ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ. ಸಾಲದ ವ್ಯವಹಾರದಲ್ಲಿ ತೊಂದರೆ ಎದುರಾಗುತ್ತದೆ. ವಿಶ್ರಾಂತಿಯ ಕೊರತೆ ಇರಲಿದೆ.

ಪರಿಹಾರ: ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 2

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಕಿತ್ತಳೆ

ಜ್ಯೋತಿಷಿ - ಎಚ್. ಸತೀಶ್, ಬೆಂಗಳೂರು

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಗೌರಿವಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.