Horoscope Today; ಸಣ್ಣ ಪ್ರವಾಸ ಕೈಗೊಳ್ಳುವಿರಿ, ಸ್ಥಿರ ಆರೋಗ್ಯಕ್ಕೆ ಪ್ರಯತ್ನಿಸಿ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today; ಸಣ್ಣ ಪ್ರವಾಸ ಕೈಗೊಳ್ಳುವಿರಿ, ಸ್ಥಿರ ಆರೋಗ್ಯಕ್ಕೆ ಪ್ರಯತ್ನಿಸಿ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

Horoscope Today; ಸಣ್ಣ ಪ್ರವಾಸ ಕೈಗೊಳ್ಳುವಿರಿ, ಸ್ಥಿರ ಆರೋಗ್ಯಕ್ಕೆ ಪ್ರಯತ್ನಿಸಿ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

8 ಏಪ್ರಿಲ್ 2024: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿ ರಾಶಿಗೂ ಅದರದ್ದೇ ಆದ ಅಧಿಪತಿ ಇದ್ದಾನೆ. ಆಯಾ ರಾಶಿಗಳ ಜನರು ಮಾಡುವ ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳ ಫಲಗಳು ಸಿಗುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನ ಭವಿಷ್ಯ ಇಲ್ಲಿದೆ. (8th April 2024 Daily Horoscope)

ಏಪ್ರಿಲ್ 8ರ ಸೋಮವಾರದ ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ
ಏಪ್ರಿಲ್ 8ರ ಸೋಮವಾರದ ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಸಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವುದು ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀಲವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್‌. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (8th April 2024 Horoscope)

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ,ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣಪಕ್ಷ, ಸೋಮವಾರ

ತಿಥಿ: ಯುಗಾದಿ ಅಮಾವಾಸ್ಯೆ ರಾ . 12.13 ರವರೆಗು ಇರುತ್ತದೆ. ಆನಂತರ ಪಾಡ್ಯ ಇರುತ್ತದೆ.

ನಕ್ಷತ್ರ: ಉತ್ತರಾ ಭಾದ್ರ ನಕ್ಷತ್ರವು ಬೆ.09.58 ರವರೆಗು ಇರುತ್ತದೆ. ಆನಂತರ ರೇವತಿ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 06.11

ಸೂರ್ಯಾಸ್ತ: ಸಂಜೆ 06.31

ರಾಹುಕಾಲ: ಬೆಳಗ್ಗೆ 07.30 ರಿಂದ 09.00

ಸೋಮವಾರ (ಏಪ್ರಿಲ್ 8) ಸಂಭವಿಸುವ ಸೂರ್ಯ ಗ್ರಹಣವು ಭಾರತದಲ್ಲಿ ಕಾಣುವುದಿಲ್ಲ. ಆದ್ದರಿಂದ ಇದನ್ನು ಆಚರಿಸುವ ಅಗತ್ಯತೆ ಇರುವುದಿಲ್ಲ. ಈ ಗ್ರಹಣದಿಂದ ಯಾವುದೇ ಪ್ರಭಾವ ಇರುವುದಿಲ್ಲ.

ಸಿಂಹ ರಾಶಿ

ಅನಾವಶ್ಯಕವಾದ ವಿವಾದ ಬೇಸರವನ್ನು ಉಂಟುಮಾಡಲಿದೆ. ನೇರ ಮತ್ತು ನಿಷ್ಠುರದ ಮಾತು ಕತೆಯಿಂದ ವಿರೋಧಿಗಳು ಹೆಚ್ಚುತ್ತಾರೆ. ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳನ್ನು ಪೂರೈಸುವಿರಿ. ಜವಾಬ್ದಾರಿಯುತ ಕೆಲಸ ಕಾರ್ಯಗಳನ್ನು ಪೂರೈಸಲು ಇಚ್ಚಿಸುವಿರಿ. ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ಸಮಾನವಾದಂತಹ ಸ್ಥಾನಮಾನ ಲಭಿಸುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಯಶಸ್ಸನ್ನುಗಳಿಸುವಿರಿ. ವಿದ್ಯಾರ್ಥಿಗಳು ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳುತ್ತಾರೆ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ.

ಪರಿಹಾರ: ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ : ಹಳದಿ

ಕನ್ಯಾ ರಾಶಿ

ಅನಿರೀಕ್ಷಿತವಾದ ವಿವಾದದಿಂದ ಬೇಸರಗೊಳ್ಳುವಿರಿ. ವಾತಾವರಣಕ್ಕೆ ಹೊಂದಿಕೊಂಡು ನಡೆವ ಕಾರಣ ನೆಮ್ಮದಿ ಇರುತ್ತದೆ. ಉದ್ಯೋಗದಲ್ಲಿ ಸಣ್ಣಮಟ್ಟದಟ್ಟ ಕೆಲಸಗಳಿಗೂ ಹೆಚ್ಚಿನ ಪ್ರಾಶಸ್ತ್ಯವನ್ನು ನೀಡುವಿರಿ. ಹಿರಿಯ ಅಧಿಕಾರಿಗಳ ಪ್ರಶಂಸೆ ದೊರೆಯಲಿದೆ. ವಿದ್ಯಾರ್ಥಿಗಳು ದೃಢವಾದ ಮನಸ್ಸಿನಿಂದ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಆರೋಗ್ಯವನ್ನು ಸ್ಥಿರವಾಗಿ ಇರಿಸಿಕೊಳ್ಳಲು ಪ್ರಯತ್ನಿಸಿ. ಅನಿರೀಕ್ಷಿತವಾಗಿ ಖರ್ಚುವೆಚ್ಚುಗಳು ಎದುರಾಗುವ ಸಾಧ್ಯತೆಗಳಿವೆ. ಕುಟುಂಬದಲ್ಲಿ ಹೊಂದಾಣಿಕೆ ಇರಲಿದೆ.

ಪರಿಹಾರ: ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 8

ಅಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಹಸಿರು

ತುಲಾ ರಾಶಿ

ಸಂತೋಷದ ವಿಚಾರವೊಂದು ಬರಲಿದೆ. ಉದ್ಯೋಗದಲ್ಲಿ ಗುರುತರ ಬದಲಾವಣೆಗಳು ಕಂಡು ಬರಲಿವೆ. ನಿಮ್ಮ ಕಾರ್ಯದಕ್ಷತೆಗೆ ಮೆಚ್ಚಿಗೆ ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಲಾಭಕ್ಕೆ ಕೊರತೆ ಕಂಡುಬರದು . ಉತ್ತಮ ಆದಾಯ ಇದ್ದರೂ ಹಣ ಉಳಿಸಲಾಗದು. ಹೊಸ ವ್ಯಾಪಾರವನ್ನು ಆರಂಭಿಸುವ ಸೂಚನೆ ಇದೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಉನ್ನತ ಸ್ಥಾನ ಗಳಿಸುತ್ತಾರೆ. ಕುಟುಂಬಕ್ಕೆ ಸೇರಿದ ಭೂವಿವಾದಕ್ಕೆ ಪರಿಹಾರ ಕಂಡು ಹಿಡಿಯುವಿರಿ.

ಪರಿಹಾರ: ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 3

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ : ನೀಲಿ

ವೃಶ್ಚಿಕ ರಾಶಿ

ಕಷ್ಟದಲ್ಲಿ ಇರುವವರ ಬಗ್ಗೆ ಕನಿಕರ ಇದ್ದರೂ ಸಹಾಯ ಮಾಡಲಾಗದು. ಮನದಲ್ಲಿ ಒಳ್ಳೆಯ ಯೋಚನೆಗಳು ಇರುತ್ತವೆ. ಕುಟುಂಬದ ಶಾಂತಿ ನೆಮ್ಮದಿಯನ್ನು ಕಾಪಾಡುವಿರಿ. ಅನುಕೂಲಕರ ಬದಲಾವಣೆಗಳು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಕುಟುಂಬದಲ್ಲಿ ಪರಸ್ಪರ ಸಹಕಾರ ಮನೋಭಾವನೆ ಇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿನ ಬಂಡವಾಳದಲ್ಲಿ ಹಿಡಿತ ಇರಲಿ. ವಿದ್ಯಾರ್ಥಿಗಳು ಹೆಚ್ಚಿನ ಪ್ರಯತ್ನದಿಂದ ಗುರಿ ತಲುಪಲು ಸಾಧ್ಯವಾಗುತ್ತದೆ. ಸಂಗಾತಿಯ ಉದ್ಯೋಗದಲ್ಲಿ ಹೊಸ ತಿರುವು ದೊರೆಯಲಿದೆ. ಹಣಕಾಸಿನ ವ್ಯವಹಾರದಲ್ಲಿ ನಿರೀಕ್ಷಿತ ಲಾಭ ಪಡೆಯುವಿರಿ.

ಪರಿಹಾರ: ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟ ದ ಸಂಖ್ಯೆ : 6

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ನೇರಳೆ

ಜ್ಯೋತಿಷಿ - ಎಚ್. ಸತೀಶ್, ಬೆಂಗಳೂರು

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಗೌರಿವಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.