ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today; ದುಡುಕಿ ಮಾತನಾಡಬೇಡಿ, ಉದ್ಯೋಗ ಬದಲಿಸುವ ತೀರ್ಮಾನ ಮಾಡುವಿರಿ; ಧನು ರಾಶಿಯಿಂದ ಮೀನದವರೆಗೆ ದಿನಭವಿಷ್ಯ

Horoscope Today; ದುಡುಕಿ ಮಾತನಾಡಬೇಡಿ, ಉದ್ಯೋಗ ಬದಲಿಸುವ ತೀರ್ಮಾನ ಮಾಡುವಿರಿ; ಧನು ರಾಶಿಯಿಂದ ಮೀನದವರೆಗೆ ದಿನಭವಿಷ್ಯ

8 ಏಪ್ರಿಲ್ 2024: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿ ರಾಶಿಗೂ ಅದರದ್ದೇ ಆದ ಅಧಿಪತಿ ಇದ್ದಾನೆ. ಆಯಾ ರಾಶಿಗಳ ಜನರು ಮಾಡುವ ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳ ಫಲಗಳು ಸಿಗುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನ ಭವಿಷ್ಯ ಇಲ್ಲಿದೆ. (8th April 2024 Daily Horoscope)

ಏಪ್ರಿಲ್ 8ರ ಧನು ರಾಶಿಯಿಂದ ಮೀನದವರೆಗೆ ದಿನಭವಿಷ್ಯ
ಏಪ್ರಿಲ್ 8ರ ಧನು ರಾಶಿಯಿಂದ ಮೀನದವರೆಗೆ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಸಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವುದು ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀಲವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್‌. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (8th April 2024 Horoscope)

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ,ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣಪಕ್ಷ, ಸೋಮವಾರ

ತಿಥಿ: ಯುಗಾದಿ ಅಮಾವಾಸ್ಯೆ ರಾ . 12.13 ರವರೆಗು ಇರುತ್ತದೆ. ಆನಂತರ ಪಾಡ್ಯ ಇರುತ್ತದೆ.

ನಕ್ಷತ್ರ: ಉತ್ತರಾ ಭಾದ್ರ ನಕ್ಷತ್ರವು ಬೆ.09.58 ರವರೆಗು ಇರುತ್ತದೆ. ಆನಂತರ ರೇವತಿ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 06.11

ಸೂರ್ಯಾಸ್ತ: ಸಂಜೆ 06.31

ರಾಹುಕಾಲ: ಬೆಳಗ್ಗೆ 07.30 ರಿಂದ 09.00

ಸೋಮವಾರ (ಏಪ್ರಿಲ್ 8) ಸಂಭವಿಸುವ ಸೂರ್ಯ ಗ್ರಹಣವು ಭಾರತದಲ್ಲಿ ಕಾಣುವುದಿಲ್ಲ. ಆದ್ದರಿಂದ ಇದನ್ನು ಆಚರಿಸುವ ಅಗತ್ಯತೆ ಇರುವುದಿಲ್ಲ. ಈ ಗ್ರಹಣದಿಂದ ಯಾವುದೇ ಪ್ರಭಾವ ಇರುವುದಿಲ್ಲ.

ಧನಸ್ಸು ರಾಶಿ

ತಪ್ಪನ್ನು ಒಪ್ಪುವ ಅಥವಾ ಕ್ಷಮಿಸುವ ಗುಣ ಇರುವುದಿಲ್ಲ. ಮಾತಿನಲ್ಲಿ ಮೋಡಿ ಮಾಡುವ ಕಲೆ ಸಿದ್ಧಿಸಿರುತ್ತದೆ. ಉದ್ಯೋಗದಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಲಾಭಗಳಿಸುವಿರಿ ವಿದ್ಯಾರ್ಥಿಗಳು ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕು. ಕುಟುಂಬದ ಹಿರಿಯರ ಆರೋಗ್ಯದಲ್ಲಿ ತೊಂದರೆ ಉಂಟಾಗಬಹುದು. ಭೂಮಿ ಅಥವಾ ಮನೆಯನ್ನು ಕೊಳ್ಳಲು ಪ್ರಯತ್ನಿಸುವಿರಿ.

ಪರಿಹಾರ: ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 9

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಗುಲಾಬಿ

ಮಕರ ರಾಶಿ

ಉತ್ತಮ ಕಾರ್ಯಯೋಜನೆಯಿಂದ ಚಿಂತೆ ದೂರವಾಗುತ್ತದೆ. ಸಹನೆಯಿಂದ ಕೆಲಸ ನಿರ್ವಹಿಸಿದರೆ ಉನ್ನತ ಮಟ್ಟದ ಯಶಸ್ಸು ದೊರೆಯುತ್ತದೆ. ಎಲ್ಲರ ವಿಶ್ವಾಸವನ್ನು ಗಳಿಸುವಿರಿ. ಉದ್ಯೋಗದಲ್ಲಿನ ತಿರುವುಗಳಿಂದ ಅಸ್ಥಿರತೆ ಉಂಟಾದರೂ ಸರಿದಾರಿಗೆ ತರುವಿರಿ. ದೈನಂದಿನ ಜೀವನದಲ್ಲಿ ಯಾವುದೇ ತೊಂದರೆ ಎದುರಾಗದು. ವ್ಯಾಪಾರ ವ್ಯವಹಾರಗಳಲ್ಲಿ ನಷ್ಟವಿರದು. ವಿದ್ಯಾರ್ಥಿಗಳು ಕ್ರಿಡಾ ಮನೋಭಾವನೆಯನ್ನು ರೂಢಿಸಿಕೊಳ್ಳಬೇಕು. ಸಂಬಂಧಿಕರು ಅಥವಾ ಆಪ್ತರ ಜೊತೆಯಲ್ಲಿ ಅನಾವಶ್ಯಕವಾಗಿ ವಿವಾದ ಉಂಟಾಗಲಿದೆ.

ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 4

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಬೂದು

ಕುಂಭ ರಾಶಿ

ವಿಶ್ರಾಂತಿ ಬಯಸಿ ಬಂಧು ವರ್ಗದ ಮನೆಗೆ ತೆರಳುವಿರಿ. ಕುಟುಂಬದಲ್ಲಿನ ಆಗು ಹೋಗುಗಳು ನಿಮ್ಮನ್ನು ಅವಲಂಭಿಸುತ್ತವೆ. ಸತತ ಪ್ರಯತ್ನದಿಂದ ಉದ್ಯೋಗದಲ್ಲಿ ಯಶಸ್ಸನ್ನು ಗಳಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷೆಯಂತೆ ಹೆಚ್ಚಿನ ಲಾಭ ಕಾಣದು. ವಿದ್ಯಾರ್ಥಿಗಳು ಬಯಸಿದಂತೆ ಫಲಿತಾಂಶವನ್ನು ಪಡೆಯುತ್ತಾರೆ. ಕಲಾವಿದರಿಗೆ ಪ್ರತಿಭೆಗೆ ತಕ್ಕ ಅವಕಾಶ ಗೌರವ ದೊರೆಯುತ್ತದೆ. ಆರೋಗ್ಯದ ಬಗ್ಗೆ ಕಾಳಜಿ ತೋರುವಿರಿ. ದುಡುಕಿ ಮಾತನಾಡುವ ಕಾರಣ ವಿವಾದವೊಂದನ್ನು ಎದುರಿಸುವಿರಿ.

ಪರಿಹಾರ: ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ

ಮೀನ ರಾಶಿ

ಅನಿರೀಕ್ಷಿತ ಧನಲಾಭದಿಂದ ಮನದ ಆತಂಕವು ಕಡಿಮೆಯಾಗಲಿದೆ. ಕುಟುಂಬದಲ್ಲಿ ವಿಶೇಷವಾದ ಧಾರ್ಮಿಕ ಕಾರ್ಯವೊಂದು ನಡೆಯಲಿದೆ. ಶೀತದ ತೊಂದರೆ ನಿಮನ್ನು ಕಾಡುತ್ತದೆ. ಉದ್ಯೋಗದಲ್ಲಿ ನಿಮ್ಮ ರೀತಿ ನೀತಿಗೆ ಉನ್ನತ ಗೌರವ ಲಭಿಸುತ್ತದೆ. ವ್ಯಾಪಾರ ವ್ಯವಹಾರಗಳು ಸರಳ ಗತಿಯಲ್ಲಿ ಸಾಗಲಿವೆ. ಬೇರೆಯವರ ಪ್ರಭಾವಕ್ಕೆ ಸುಲಭವಾಗಿ ಒಳಗಾಗುವಿರಿ. ವಿವಾಹ ಯೋಗವಿದೆ. ಉದ್ಯೋಗವನ್ನು ಬದಲಿಸುವ ತೀರ್ಮಾನ ಮಾಡುವಿರಿ. ಸ್ತ್ರೀಯರು ಇಷ್ಟಪಟ್ಟ ಒಡವೆ ವಸ್ತ್ರಗಳಿಗೆ ಹೆಚ್ಚಿನ ಹಣ ಖರ್ಚಾಗುತ್ತದೆ. ಮನಸ್ಸನ್ನು ತಿಳಿಗೊಳಿಸಲು ಮಕ್ಕಳೊಂದಿಗೆ ಕಿರು ಪ್ರವಾಸ ಕೈಗೊಳ್ಳುವಿರಿ.

ಪರಿಹಾರ: ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಹಾಲಿನ ಬಣ್ಣ

ಜ್ಯೋತಿಷಿ - ಎಚ್. ಸತೀಶ್, ಬೆಂಗಳೂರು

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಗೌರಿವಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.