ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಸ್ನೇಹಿತರ ಜೊತೆ ಪಾಲುದಾರಿಕೆ ವ್ಯಾಪಾರ ಆರಂಭಿಸುವಿರಿ, ಬೇಡದ ಖರ್ಚುಗಳಿಂದ ಮನಸ್ಸಿಗೆ ಬೇಸರ: ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಸ್ನೇಹಿತರ ಜೊತೆ ಪಾಲುದಾರಿಕೆ ವ್ಯಾಪಾರ ಆರಂಭಿಸುವಿರಿ, ಬೇಡದ ಖರ್ಚುಗಳಿಂದ ಮನಸ್ಸಿಗೆ ಬೇಸರ: ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಜುಲೈ 8ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (ಬರಹ: ಎಚ್‌. ಸತೀಶ್, ಜ್ಯೋತಿಷಿ).

ಸ್ನೇಹಿತರ ಜೊತೆ ಪಾಲುದಾರಿಕೆ ವ್ಯಾಪಾರ ಆರಂಭಿಸುವಿರಿ, ಬೇಡದ ಖರ್ಚುಗಳಿಂದ ಮನಸ್ಸಿಗೆ ಬೇಸರ: ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
ಸ್ನೇಹಿತರ ಜೊತೆ ಪಾಲುದಾರಿಕೆ ವ್ಯಾಪಾರ ಆರಂಭಿಸುವಿರಿ, ಬೇಡದ ಖರ್ಚುಗಳಿಂದ ಮನಸ್ಸಿಗೆ ಬೇಸರ: ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (8th July 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಆಷಾಡ ಮಾಸ-ಶುಕ್ಲಪಕ್ಷ-ಸೋಮವಾರ

ತಿಥಿ : ತದಿಗೆ ಬೆಳಗ್ಗೆ05.01 ರವರೆಗೂ ಇದ್ದು ನಂತರ ಚೌತಿ ಆರಂಭವಾಗುತ್ತದೆ.

ನಕ್ಷತ್ರ : ಆಶ್ಲೇಷ ನಕ್ಷತ್ರವು ದಿನಪೂರ್ತಿ ಇರುತ್ತದೆ.

ಸೂರ್ಯೋದಯ: ಬೆಳಗ್ಗೆ 05.58

ಸೂರ್ಯಾಸ್ತ: ಸಂಜೆ 06.49

ರಾಹುಕಾಲ: ಬೆಳಗ್ಗೆ 07.40 ರಿಂದ 09.16 ವರೆಗೆ

ರಾಶಿಫಲ

ಮೇಷ

ಮನಸ್ಸಿಗೆ ಖುಷಿ ನೀಡುವ ಕೆಲಸ ಕಾರ್ಯಗಳಲ್ಲಿ ಆಸಕ್ತಿ ತೋರುವಿರಿ. ಕುಟುಂಬದ ವಿವಾದವೊಂದು ದೂರವಾಗಲು ಮುಖ್ಯ ಪಾತ್ರ ವಹಿಸುವಿರಿ. ಹಟದ ಸ್ವಭಾವದಿಂದ ಆತ್ಮೀಯರಿಂದ ದೂರವಾಗುವಿರಿ. ಹಿರಿಯರ ಸಲಹೆ ಸೂಚನೆಯನ್ನು ಪಾಲಿಸಿದರೆ ಹಣದ ಕೊರತೆ ಕಾಣದು. ಕುಟುಂಬದ ಪ್ರತಿಯೊಬ್ಬರೊಂದಿಗೂ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವಿರಿ. ಉದ್ಯೋಗದಲ್ಲಿ ಬುದ್ಧಿವಂತಿಕೆಯಿಂದ ಸೋಲನ್ನು ಜಯವನ್ನಾಗಿ ಪರಿವರ್ತಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಲಾಭ ಗಳಿಸುವಿರಿ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಆಟ ಪಾಠಗಳಲ್ಲಿ ಪಾಲ್ಗೊಳ್ಳುತ್ತಾರೆ. ಸ್ನೇಹಿತರ ಜೊತೆ ಪಾಲುದಾರಿಕೆಯ ವ್ಯಾಪಾರವನ್ನು ಆರಂಭಿಸುವಿರಿ. ಒತ್ತಡಕ್ಕೆ ಮಣಿದು ಮುಖ್ಯವಾದ ಕೆಲಸವೊಂದನ್ನು ಮುಂದೂಡುವಿರಿ.

ಪರಿಹಾರ : ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ವೃಷಭ

ಆಪತ್ತಿನಲ್ಲಿ ಇರುವವರಿಗೆ ಸಹಾಯ ಮಾಡುವಿರಿ. ಬೇರೆಯವರು ಮಾಡುವ ತಪ್ಪನ್ನು ಖಂಡಿಸಲು ಹಿಂಜರಿಯುವುದಿಲ್ಲ. ಅನಿರೀಕ್ಷಿತ ಖರ್ಚು ವೆಚ್ಚಗಳಿಂದ ಬೇಸರಕ್ಕೆ ಒಳಗಾಗುವಿರಿ. ತಪ್ಪು ಕಲ್ಪನೆಯಿಂದ ದೊರೆತ ಉದ್ಯೋಗಾವಕಾಶವನ್ನು ಕಳೆದುಕೊಳ್ಳುವಿರಿ. ಆರೋಗ್ಯದಲ್ಲಿನ ತೊಂದರೆ ದೂರವಾಗಲಿದೆ. ವ್ಯಾಪಾರ ವ್ಯವಹಾರಗಳ ಬಗ್ಗೆ ಇದ್ದ ನಿರೀಕ್ಷೆ ಹುಸಿಯಾಗುತ್ತದೆ. ಸ್ಟಾಕ್ ಮತ್ತು ಷೇರಿನಲ್ಲಿ ಹೆಚ್ಚಿನ ಹಣವನ್ನು ಬಂಡವಾಳವನ್ನಾಗಿ ವಿನಿಯೋಗಿಸುವಿರಿ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ದೊರೆಯುತ್ತದೆ. ಅವಶ್ಯಕತೆ ಇದ್ದಲ್ಲಿ ಬೇರೆಯವರ ಸಲಹೆಯನ್ನು ಒಪ್ಪಿಕೊಳ್ಳಿರಿ. ನಿಮಗೆ ಇಷ್ಟವಾದ ವಸ್ತುವನ್ನು ಪರಭಾರೆ ಮಾಡುವಿರಿ. ಸಾಲದ ವ್ಯವಹಾರದಲ್ಲಿ ವಿವಾದವಿರುತ್ತದೆ.

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕೆಂಪು ಬಣ್ಣ

ಮಿಥುನ

ಹಣಕಾಸಿನ ವಿಚಾರದಲ್ಲಿ ಸಮಯಕ್ಕೆ ತಕ್ಕಂತೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವಿರಿ. ಕುಟುಂಬದ ದಿನನಿತ್ಯದ ಕೆಲಸದಲ್ಲಿ ಯಾವುದೇ ತೊಂದರೆ ಇರುವುದಿಲ್ಲ. ದೂರದ ಸಂಬಂಧಿ ಒಬ್ಬರಿಂದ ಹಣದ ಸಹಾಯ ದೊರೆಯುತ್ತದೆ. ಕುಟುಂಬದಲ್ಲಿ ಹೊಂದಾಣಿಕೆಯ ವಾತಾವರಣ ಇರುತ್ತದೆ. ಉದ್ಯೋಗದಲ್ಲಿ ಉನ್ನತ ಮಟ್ಟ ತಲುಪುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಧನ ಲಾಭವಿದೆ. ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿಯಿಂದ ಗುರಿ ತಲುಪಲಿದ್ದಾರೆ. ಸೋದರರು ಜೀವನದಲ್ಲಿ ಅಭಿವೃದ್ಧಿ ಕಾಣಲಿದ್ದಾರೆ. ಸಂಬಂಧ ಅಥವಾ ಪರಿಚಿತರ ಜೊತೆ ದೀರ್ಘಕಾಲದ ಪ್ರವಾಸಕ್ಕೆ ತೆರಳುವಿರಿ. ಉತ್ತಮ ಆಹಾರ ಸೇವನೆಯಿಂದ ಉತ್ತಮ ಆರೋಗ್ಯ ಗಳಿಸಬಹುದು. ಮನೆ ಮುಂದೆ ಇರುವ ಗಿಡ ಮರಗಳನ್ನು ಪೋಷಿಸುವಲ್ಲಿ ಸಂತಸಕಾಣುವಿರಿ.

ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ಕಟಕ

ಕುಟುಂಬದಲ್ಲಿ ಬೇಸರ ಉಂಟಾಗುವ ಘಟನೆಯೊಂದು ನಡೆಯುತ್ತದೆ. ಭಾವನಾತ್ಮಕ ವಾತಾವರಣ ಇರುತ್ತದೆ. ಉದ್ಯೋಗದಲ್ಲಿ ಯಾವುದೇ ರೀತಿಯ ಬದಲಾವಣೆ ಉಂಟಾಗುವುದಿಲ್ಲ. ವೇತನದ ವಿಚಾರವಾಗಿ ಹಿರಿಯ ಅಧಿಕಾರಗಳೊಂದಿಗೆ ವಾದ ನಡೆಸುವಿರಿ. ಗೃಹಿಣಿಯರು ಆರಂಭಿಸುವ ವ್ಯಾಪಾರಕ್ಕೆ ಹಣದ ಸಹಾಯ ಮಾಡುವಿರಿ. ವಿದ್ಯಾರ್ಥಿಗಳು ಮನಸ್ಸು ಬದಲಿಸದೆ ಕಲಿಕೆಯಲ್ಲಿ ಮುಂದಿರುತ್ತಾರೆ. ಹಣಕಾಸಿನ ವ್ಯವಹಾರದ ವೇಳೆ ತಾಳ್ಮೆಯಿಂದ ವರ್ತಿಸುವಿರಿ. ವಂಶದ ಆಸ್ತಿಯ ವಿವಾದ ಎದುರಾಗುವ ಪರಿಸ್ಥಿತಿಯನ್ನು ಅವಲೋಕಿಸಿ ಒಂದೊಳ್ಳೆ ತೀರ್ಮಾನ ಕೈಗೊಳ್ಳುವಿರಿ. ಕ್ರೀಡಾಪಟುಗಳಿಗೆ ವಿಶೇಷ ಅವಕಾಶವೊಂದು ಲಭಿಸಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯಲಿದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ. ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಹಳದಿ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.