ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸುವಿರಿ, ಭೂಮಿಗೆ ಸಂಬಂಧಿಸಿದ ವಿವಾದ ಸುಖಾಂತ್ಯ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸುವಿರಿ, ಭೂಮಿಗೆ ಸಂಬಂಧಿಸಿದ ವಿವಾದ ಸುಖಾಂತ್ಯ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ಜುಲೈ 8ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (ಬರಹ: ಎಚ್‌. ಸತೀಶ್, ಜ್ಯೋತಿಷಿ).

ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸುವಿರಿ, ಭೂಮಿಗೆ ಸಂಬಂಧಿಸಿದ ವಿವಾದ ಸುಖಾಂತ್ಯ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ
ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸುವಿರಿ, ಭೂಮಿಗೆ ಸಂಬಂಧಿಸಿದ ವಿವಾದ ಸುಖಾಂತ್ಯ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(8th July 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಆಷಾಡ ಮಾಸ-ಶುಕ್ಲಪಕ್ಷ-ಸೋಮವಾರ

ತಿಥಿ : ತದಿಗೆ ಬೆಳಗ್ಗೆ05.01 ರವರೆಗೂ ಇದ್ದು ನಂತರ ಚೌತಿ ಆರಂಭವಾಗುತ್ತದೆ.

ನಕ್ಷತ್ರ : ಆಶ್ಲೇಷ ನಕ್ಷತ್ರವು ದಿನಪೂರ್ತಿ ಇರುತ್ತದೆ.

ಸೂರ್ಯೋದಯ: ಬೆಳಗ್ಗೆ 05.58

ಸೂರ್ಯಾಸ್ತ: ಸಂಜೆ 06.49

ರಾಹುಕಾಲ: ಬೆಳಗ್ಗೆ 07.40 ರಿಂದ 09.16 ವರೆಗೆ

ರಾಶಿಫಲ

ಧನಸ್ಸು

ಸೋಲಿನ ಬಗ್ಗೆ ಭಯ ಇರುವುದಿಲ್ಲ. ಈ ಕಾರಣದಿಂದ ಒತ್ತಡದ ಸನ್ನಿವೇಶದಲ್ಲೂ ಯಶಸ್ಸು ಗಳಿಸುವಿರಿ. ಕುಟುಂಬದಲ್ಲಿ ಒತ್ತಡವಿದ್ದರೂ ಸಂತಸಕ್ಕೆ ಕೊರತೆ ಇರುವುದಿಲ್ಲ. ಉದ್ಯೋಗದಲ್ಲಿ ನಿರೀಕ್ಷಿತ ಯಶಸ್ಸನ್ನು ಗಳಿಸುವಿರಿ. ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ದೊರೆಯುತ್ತದೆ. ಹೆಚ್ಚಿನ ಹಣದ ಅವಶ್ಯಕತೆ ಇರುತ್ತದೆ. ವಸತಿ ಗೃಹಗಳನ್ನು ಕಟ್ಟಿಸುವ ಕೆಲಸದಲ್ಲಿ ಉತ್ತಮ ಆದಾಯವಿರುತ್ತದೆ. ಉತ್ತಮ ಆರೋಗ್ಯಕ್ಕಾಗಿ ವಿಶ್ರಾಂತಿಯನ್ನು ಆಶ್ರಯಿಸುವಿರಿ. ಸ್ವಂತ ಜಮೀನು ಅಥವಾ ಮನೆಯನ್ನು ಕೊಳ್ಳಲು ಸೋದರರ ಸಹಾಯ ದೊರೆಯುತ್ತದೆ. ಸಾಧು ಸಂತರ ಸೇವೆಯಲ್ಲಿ ನೆಮ್ಮದಿಯನ್ನು ಕಾಣುವಿರಿ. ಷೇರು ಮಾರುಕಟ್ಟೆಯಲ್ಲಿ ಹಣವನ್ನು ತೊಡಗಿಸುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ಮಕರ

ಅಪರೂಪಕ್ಕೊಮ್ಮೆ ಸಂಬಂಧಿಕರು ಅಥವಾ ಸ್ನೇಹಿತರ ಜೊತೆ ಪ್ರವಾಸಕ್ಕೆ ತೆರಳುವಿರಿ. ಮಕ್ಕಳ ವಿದ್ಯಾಭ್ಯಾಸ ನಿಮಗೆ ಸಂತೋಷ ನೀಡುತ್ತದೆ. ಕ್ರಮೇಣವಾಗಿ ಹಣದ ಪರಿಸ್ಥಿತಿಯು ಸುಧಾರಿಸುತ್ತದೆ. ಕುತೂಹಲದಿಂದ ಅಸಾಧ್ಯವಾದ ಕೆಲಸಗಳನ್ನು ಮಾಡಬಯಸುವಿರಿ. ಉದ್ಯೋಗದಲ್ಲಿ ನೆಮ್ಮದಿಯ ವಾತಾವರಣ ಕಂಡುಬರುತ್ತದೆ. ಉನ್ನತ ಅಧಿಕಾರಿಗಳ ಸಹಾಯ ದೊರೆಯಲಿದೆ. ಅನಾವಶ್ಯಕ ಖರ್ಚು ವೆಚ್ಚಗಳು ಎದುರಾಗಲಿವೆ. ವಿದ್ಯಾರ್ಥಿಗಳು ಉನ್ನತ ಅಧ್ಯಯನಕ್ಕಾಗಿ ವಿದೇಶಕ್ಕೆ ತೆರಳುವ ಅವಕಾಶ ಪಡೆಯುತ್ತಾರೆ. ಭೂಮಿಗೆ ಸಂಬಂಧಪಟ್ಟ ವಿವಾದ ಒಂದು ಸುಖಾಂತ್ಯಗೊಳ್ಳಲಿದೆ. ಸಂಗಾತಿಯ ನೆರವು ಮತ್ತು ಸಹಕಾರ ಸದಾಕಾಲ ದೊರೆಯುತ್ತದೆ.

ಪರಿಹಾರ : ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಬಿಸಿ.

ಅದೃಷ್ಟದ ಸಂಖ್ಯೆ :6

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಬೂದು ಬಣ್ಣ

ಕುಂಭ

ನಿಮ್ಮಲ್ಲಿ ಹುದುಗಿರುವ ಪ್ರತಿಭೆಗೆ ತಕ್ಕ ಗೌರವ ಗಳಿಸುವಿರಿ. ನಿಮ್ಮಲ್ಲಿನ ಹಣವನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿರಿ. ಆತುರದಲ್ಲಿ ಕೆಲಸ ಕಾರ್ಯಗಳನ್ನು ಮುಂದುವರೆಸಿದರೆ ತೊಂದರೆ ಆಗಲಿದೆ. ಆದಾಯಕ್ಕೆ ತಕ್ಕಂತಹ ಖರ್ಚು ವೆಚ್ಚಗಳು ಎದುರಾಗುತ್ತವೆ. ಕುಟುಂಬದಲ್ಲಿ ಸುಖ ಸಂತೋಷ ಮನೆ ಮಾಡಿರುತ್ತದೆ. ಉದ್ಯೋಗದಲ್ಲಿ ನಿಮ್ಮ ಪ್ರಯತ್ನಕ್ಕೆ ತಕ್ಕಫಲ ದೊರೆಯದು. ವ್ಯಾಪಾರ ವ್ಯವಹಾರಗಳಲ್ಲಿ ಉನ್ನತಿ ಕಾಣುವಿರಿ. ವಿದ್ಯಾರ್ಥಿಗಳು ಹಟದಿಂದ ತಮ್ಮ ಕೆಲಸ ಸಾಧಿಸಿಕೊಳ್ಳಲಿದ್ದಾರೆ. ಉದ್ಯೋಗದ ಸಲುವಾಗಿ ವಿದೇಶಕ್ಕೆ ತೆರಳುವ ಯೋಗವಿದೆ. ವ್ಯವಸಾಯಕ್ಕೆ ಬೇಕಾದ ಪದಾರ್ಥಗಳ ವ್ಯಾಪಾರದಲ್ಲಿ ಆಸಕ್ತಿ ಉಂಟಾಗಲಿದೆ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕಂದು ಬಣ್ಣ

ಮೀನ

ಸಮಯ ವ್ಯರ್ಥ ಮಾಡುವುದಿಲ್ಲ. ಸದಾಕಾಲ ಹೊಸ ವಿಚಾರವನ್ನು ತಿಳಿಯಲು ಪ್ರಯತ್ನಿಸುವಿರಿ. ನಿಮ್ಮ ಸ್ವಂತ ಕೆಲಸ ಕಾರ್ಯಗಳಿಗೆ ಎಲ್ಲರ ಸಹಾಯ ದೊರೆಯುತ್ತದೆ. ದೃಢವಾದ ಮನಸ್ಸಿನ ಕೊರತೆ ಇರುತ್ತದೆ. ಕುಟುಂಬದ ಸದಸ್ಯರ ಸಹಾಯದಿಂದ ಹೊಸ ವ್ಯಾಪಾರ ವ್ಯವಹಾರವನ್ನು ಆರಂಭಿಸುವಿರಿ. ಉತ್ತಮ ಉದ್ಯೋಗವಿದ್ದರೂ ಅಲ್ಪ ಬಂಡವಾಳದ ಸ್ವಂತ ವ್ಯಾಪಾರವನ್ನು ಆರಂಭಿಸುವಿರಿ. ಉಷ್ಣದ ತೊಂದರೆಯಿಂದ ಬಳಲುವಿರಿ. ಸಂಗೀತ ನಾಟ್ಯ ಬಲ್ಲವರಿಗೆ ವಿಶೇಷ ಅವಕಾಶ ದೊರೆಯುತ್ತದೆ. ತಂದೆಯ ಆರೋಗ್ಯದಲ್ಲಿ ಸಮಸ್ಯೆ ಎದುರಾಗುತ್ತದೆ. ಮಕ್ಕಳ ಜೊತೆ ಸಂತೋಷದಿಂದ ದಿನ ಕಳೆಯುವಿರಿ. ದಂಪತಿ ನಡುವೆ ಹಣಕಾಸಿನ ವಿಚಾರವಾಗಿ ಭಿನಾಭಿಪ್ರಾಯ ಇರುತ್ತದೆ.

ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ 12

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ಕಪ್ಪು ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).