ಕೆಲಸಕ್ಕಾಗಿ ವಿದೇಶಕ್ಕೆ ತೆರಳುವ ಅವಕಾಶ, ಸಮಾಜದಲ್ಲಿ ಉನ್ನತ ಸ್ಥಾನಮಾನ ದೊರೆಯಲಿದೆ: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಕೆಲಸಕ್ಕಾಗಿ ವಿದೇಶಕ್ಕೆ ತೆರಳುವ ಅವಕಾಶ, ಸಮಾಜದಲ್ಲಿ ಉನ್ನತ ಸ್ಥಾನಮಾನ ದೊರೆಯಲಿದೆ: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನ ಭವಿಷ್ಯ

ಕೆಲಸಕ್ಕಾಗಿ ವಿದೇಶಕ್ಕೆ ತೆರಳುವ ಅವಕಾಶ, ಸಮಾಜದಲ್ಲಿ ಉನ್ನತ ಸ್ಥಾನಮಾನ ದೊರೆಯಲಿದೆ: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನ ಭವಿಷ್ಯ

8 ಜೂನ್‌ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (8th June 2024 Daily Horoscope).

ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನ ಭವಿಷ್ಯ
ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (8th June 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಶನಿವಾರ

ತಿಥಿ: ಬಿದಿಗೆ 04.09 ರವರೆಗೂ ಇರುತ್ತದೆ ನಂತರ ತದಿಗೆ ಆರಂಭವಾಗುತ್ತದೆ.

ನಕ್ಷತ್ರ:ಆರ್ದ್ರೆ ನಕ್ಷತ್ರವು ರಾತ್ರಿ 08.26 ರವರೆಗೂ ಇದ್ದು ನಂತರ ಪುನರ್ವಸು ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.44

ರಾಹುಕಾಲ: ಬೆಳಗ್ಗೆ 09.11 ರಿಂದ 10.47

ರಾಶಿಫಲ

ಸಿಂಹ

ಉಷ್ಣದ ತೊಂದರೆ ಇರುತ್ತದೆ. ಆರಂಭಿಸಿದ ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಗಳಿಸುವಿರಿ. ಸಮಾಜದಲ್ಲಿ ಪ್ರತಿಷ್ಠಿತ ಸ್ಥಾನಮಾನ ದೊರೆಯುತ್ತದೆ. ಸಮಯಕ್ಕೆ ತಕ್ಕಂತೆ ಆಹಾರ ಸೇವಿಸದ ಕಾರಣ ಅನಾರೋಗ್ಯ ಕಾಡುತ್ತದೆ. ಯಾವುದಕ್ಕೂ ಭಯಪಡದೆ ಎಲ್ಲವನ್ನೂ ಎದುರಿಸಬಲ್ಲಿರಿ. ಹೊಸ ವಾಹನವನ್ನು ಕೊಳ್ಳುವಿರಿ. ಮಕ್ಕಳಿಗೆ ದೂರದ ಊರಿನಲ್ಲಿ ಉತ್ತಮ ಪ್ರಗತಿ ಕಂಡುಬರುತ್ತದೆ. ನಿಮ್ಮ ತಂದೆ ಉದ್ಯೋಗಸ್ಥರಾದಲ್ಲಿ ಬಡ್ತಿ ದೊರೆತು ದೂರದ ಊರಿಗೆ ಪ್ರಯಾಣ ಬೆಳೆಸುತ್ತಾರೆ. ಅತಿಯಾದ ಖರ್ಚು ವೆಚ್ಚದ ಕಾರಣ ಹಣದ ಕೊರತೆ ಕಂಡುಬರುತ್ತದೆ. ತಂದೆಯವರ ಆರೋಗ್ಯದಲ್ಲಿ ಏರಿಳಿತ ಕಂಡರೂ ಯಾವುದೇ ತೊಂದರೆಯಾಗದು.

ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಗುಲಾಬಿ

ಕನ್ಯಾ

ದೇಹದ ತೂಕ ಹೆಚ್ಚಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಇದ್ದ ಅಡಚಣೆ ನಿವಾರಣೆಯಾಗುತ್ತವೆ. ತೆಗೆದುಕೊಂಡ ನಿರ್ಧಾರಗಳನ್ನು ಅನಾವಶ್ಯಕವಾಗಿ ಬದಲಿಸುವಿರಿ. ನಿಮ್ಮಲ್ಲಿರುವ ಬುದ್ಧಿವಂತಿಕೆಯನ್ನು ಸಮಯಕ್ಕೆ ತಕ್ಕಂತೆ ಉಪಯೋಗಿಸುವುದಿಲ್ಲ. ಸಂತಾನ ಲಾಭವಿದೆ. ಹಿಂದೊಮ್ಮೆ ಸ್ನೇಹಿತರಿಗೆ ನೀಡಿದ್ದ ಹಣ ಮರಳಿ ಕೈ ಸೇರುತ್ತದೆ. ನಿಮ್ಮ ಮಕ್ಕಳಿಗೆ ಉನ್ನತ ಮಟ್ಟದ ಉದ್ಯೋಗ ದೊರೆಯುತ್ತದೆ. ತಂದೆಯವರಿಗೆ ಸಮಾಜದಲ್ಲಿ ಗೌರವಯುತ ಸ್ಥಾನಮಾನ ದೊರೆಯುತ್ತದೆ. ನಿಮ್ಮ ನೇರವಾದ ನಡೆನುಡಿಯಿಂದ ವಿರೋಧಿಗಳು ಹೆಚ್ಚಬಹುದು. ಹಣದ ತೊಂದರೆ ಕಂಡು ಬರುವುದಿಲ್ಲ. ಯುವಕರಿಗೆ ಮತ್ತು ಯುವತಿಯರಿಗೆ ಕಣ್ಣಿನ ದೋಷವು ಉಂಟಾಗುತ್ತದೆ.

ಪರಿಹಾರ : ಬೆಳ್ಳಿ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ : ಬಿಳಿ

ತುಲಾ

ಮನದಲ್ಲಿ ಅನಾವಶ್ಯಕ ಚಿಂತೆ ಇರುತ್ತದೆ. ಸಮಾಜದಲ್ಲಿ ಒಳ್ಳೆ ಹೆಸರು ಸಂಪಾದಿಸುವಿರಿ. ಉಷ್ಣದ ತೊಂದರೆಯಿಂದ ಬಳಲುವಿರಿ. ನಿಮ್ಮ ವಿರೋಧಿಗಳು ಸೋಲನ್ನು ಒಪ್ಪಬೇಕಾಗುತ್ತದೆ. ತಂದೆಗೆ ದೈಹಿಕ ದೌರ್ಬಲ್ಯ ಇರುತ್ತದೆ. ನಿಮ್ಮಿಂದ ಸಹಾಯ ಪಡೆದವರೇ ನಿಮಗೆ ತೊಂದರೆ ನೀಡಬಹುದು. ನಿಮ್ಮ ಮಕ್ಕಳಿಗೆ ವಿಶೇಷ ಬುದ್ಧಿಯಿದ್ದು ಸ್ವತಂತ್ರವಾಗಿ ತಮ್ಮ ಕೆಲಸ ಸಾಧಿಸುತ್ತಾರೆ. ಕುಟುಂಬದಲ್ಲಿ ನಡೆಯಬೇಕಿದ್ದ ವಿವಾಹ ಮುಂದೆ ಹೋಗಲಿದೆ. ಸ್ತ್ರೀಯರು ಅನಾವಶ್ಯಕ ವಾದ ವಿವಾದಗಳನ್ನು ಎದುರಿಸಬೇಕಾಗುತ್ತದೆ. ಮನೆಯ ಜವಾಬ್ದಾರಿ ಮರೆತು ಬೇರೆಯವರಿಗೆ ಸಹಾಯ ಮಾಡಬೇಕಾಗುತ್ತದೆ. ಉದ್ಯೋಗದ ಸಲುವಾಗಿ ವಿದೇಶಕ್ಕೆ ತೆರಳುವ ಅವಕಾಶ ದೊರೆಯುತ್ತದೆ.

ಪರಿಹಾರ : ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸ ಆರಂಭಿಸಿರಿ

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು ಈಶಾನ್ಯ

ಅದೃಷ್ಟದ ಬಣ್ಣ: ಬೂದು

ವೃಶ್ಚಿಕ

ಕಲುಷಿತ ಆಹಾರ ಸೇವನೆಯಿಂದ ಅನಾರೋಗ್ಯ ಉಂಟಾಗುತ್ತದೆ. ನಿಮ್ಮಲ್ಲಿರುವ ಹಾಸ್ಯ ಪ್ರಜ್ಞೆ ಕುಟುಂಬದಲ್ಲಿ ನೆಮ್ಮದಿ ತರುತ್ತದೆ. ಸಣ್ಣಪುಟ್ಟವಿಚಾರಗಳಿಗೂ ಕೋಪದಿಂದ ವರ್ತಿಸುವಿರಿ. ಸ್ತ್ರೀಯರು ತಮ್ಮ ಸ್ನೇಹಿತ ವರ್ಗದವರಿಗೆ ಸಹಾಯ ಮಾಡುತ್ತಾರೆ. ಆಶ್ಚರ್ಯಕರ ರೀತಿಯಲ್ಲಿ ನಿಮ್ಮ ಉದ್ಯೋಗದಲ್ಲಿ ಪ್ರಗತಿ ಉಂಟಾಗುತ್ತದೆ. ಹಣಕಾಸಿನ ವ್ಯವಹಾರದಲ್ಲಿ ನಿರೀಕ್ಷಿತ ವರಮಾನವಿರುತ್ತದೆ. ವಂಶಾನುಗತವಾಗಿ ಬಂದ ವಿದ್ಯೆಯೊಂದು ನಿಮಗೆ ಆಸರೆಯಾಗಲಿದೆ. ತಲೆಗೆ ಪೆಟ್ಟಾಗುವ ಸಾಧ್ಯತೆ ಇದೆ ಎಚ್ಚರದಿಂದಿರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಉತ್ತಮ ತಿರುವು ಕಂಡು ಬರುತ್ತದೆ. ಕಷ್ಟಕ್ಕೆ ತಕ್ಕ ಫಲಿತಾಂಶ ಪಡೆಯುವಿರಿ. ಪ್ರಾಣಿಗಳ ಬಗ್ಗೆ ವಿಶೇಷ ಅನುಕಂಪ ಇರುತ್ತದೆ.

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕಂದು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.