ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ತಾಯಿಯೊಂದಿಗೆ ಇದ್ದ ಮನಸ್ತಾಪಕ್ಕೆ ತೆರೆ, ಕಲಿಕೆಯ ಅವಧಿಯಲ್ಲೇ ವಿದ್ಯಾರ್ಥಿಗಳಿಗೆ ಉದ್ಯೋಗ ದೊರೆಯುತ್ತದೆ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ತಾಯಿಯೊಂದಿಗೆ ಇದ್ದ ಮನಸ್ತಾಪಕ್ಕೆ ತೆರೆ, ಕಲಿಕೆಯ ಅವಧಿಯಲ್ಲೇ ವಿದ್ಯಾರ್ಥಿಗಳಿಗೆ ಉದ್ಯೋಗ ದೊರೆಯುತ್ತದೆ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

8 ಜೂನ್‌ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (8th June 2024 Daily Horoscope).

ಧನಸ್ಸು, ಮಕರ, ಕುಂಭ, ಮೀನ ರಾಶಿಫಲ
ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(8th June 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಶನಿವಾರ

ತಿಥಿ: ಬಿದಿಗೆ 04.09 ರವರೆಗೂ ಇರುತ್ತದೆ ನಂತರ ತದಿಗೆ ಆರಂಭವಾಗುತ್ತದೆ.

ನಕ್ಷತ್ರ:ಆರ್ದ್ರೆ ನಕ್ಷತ್ರವು ರಾತ್ರಿ 08.26 ರವರೆಗೂ ಇದ್ದು ನಂತರ ಪುನರ್ವಸು ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.44

ರಾಹುಕಾಲ: ಬೆಳಗ್ಗೆ 09.11 ರಿಂದ 10.47

ರಾಶಿಫಲ

ಧನಸ್ಸು

ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಕುಟುಂಬದಲ್ಲಿ ಹೆಚ್ಚಿನ ಜವಾಬ್ದಾರಿ ನಿರ್ವಹಿಸುವಿರಿ. ನಿಮಗೆ ಇಷ್ಟವೆನಿಸುವ ಕೆಲಸ ಕಾರ್ಯಗಳನ್ನು ಆಯ್ಕೆ ಮಾಡುವಿರಿ. ತಂದೆಯವರ ಜೀವನದಲ್ಲಿದ್ದ ಕಷ್ಟಗಳು ದೂರವಾಗಲಿವೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯವಿರುತ್ತದೆ. ಅಲಂಕಾರ ಸಾಮಗ್ರಿಗಳ ವ್ಯಾಪಾರ ವ್ಯವಹಾರದಲ್ಲಿ ಲಾಭವಿದೆ. ಗುರು ಹಿರಿಯರಿಗೆ ವಿಶೇಷ ಮನ್ನಣೆ ನೀಡುವಿರಿ. ತಾಯಿಯೊಂದಿಗೆ ಇದ್ದ ಮನಸ್ತಾಪ ದೂರವಾಗಲಿದೆ. ಧ್ಯಾನ ಮಾರ್ಗದಲ್ಲಿ ನಂಬಿಕೆ ಇರುತ್ತದೆ. ಸಮಾಜದಲ್ಲಿ ನಿಮ್ಮ ಕಾರ್ಯ ದಕ್ಷತೆಗೆ ಮೆಚ್ಚುಗೆ ದೊರೆಯುತ್ತದೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಉನ್ನತ ಮಟ್ಟ ತಲುಪುತ್ತಾರೆ. ಕಲಿಕೆಯ ಅವಧಿಯಲ್ಲೇ ಉದ್ಯೋಗ ಲಭಿಸುತ್ತದೆ.

ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕಪ್ಪು

ಮಕರ

ಸುಲಭದ ಹಾದಿಯಲ್ಲಿ ಯಶಸ್ಸು ಲಭಿಸುತ್ತದೆ. ಕುಟುಂಬದ ಹಿರಿಯರ ಪ್ರೀತಿ ವಿಶ್ವಾಸ ನಿಮಗೆ ದೊರೆಯುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಹಿರಿಯ ಅಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗುವಿರಿ. ವಿದ್ಯಾರ್ಥಿಗಳು ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳುತ್ತಾರೆ. ಹಳೆಯ ಕಾಲದ ಧಾರ್ಮಿಕ ಮಂದಿರಗಳ ಜೀರ್ಣೋದ್ಧಾರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಿರಿ. ಆರಂಭದಲ್ಲಿ ಹಣಕಾಸಿನ ತೊಂದರೆ ಇದ್ದರೂ ಕ್ರಮೇಣವಾಗಿ ವರಮಾನ ಹೆಚ್ಚುತ್ತದೆ. ನಿಮಗೆ ಅರಿವಿಲ್ಲದೆ ತಪ್ಪು ನಿರ್ಧಾರಗಳನ್ನು ಕೈಗೊಳ್ಳುವಿರಿ. ಮುಂಗೋಪವಿರುತ್ತದೆ. ಕುಟುಂಬದವರ ಜೊತೆ ಪ್ರವಾಸ ಮಾಡಲು ಇಷ್ಟಪಡುವಿರಿ. ನಿಮಗೆ ಇಷ್ಟವೆನಿಸುವ ವಾಹನ ಕೊಳ್ಳುವಿರಿ. ಜ್ವರದ ತೊಂದರೆ ನಿಮ್ಮನ್ನು ಕಾಡುತ್ತದೆ. ಹಣಕಾಸಿನ ವ್ಯವಹಾರದಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳುವಿರಿ. ಒತ್ತಡಕ್ಕೆ ಮಣಿಯದೆ ಬುದ್ದಿವಂತಿಕೆಯಿಂದ ಸಮಯಕ್ಕೆ ತಕ್ಕಂತೆ ವರ್ತಿಸುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ತಿಳಿ ಹಸಿರು

ಕುಂಭ

ವಿದ್ಯಾರ್ಥಿಗಳು ತಮ್ಮ ಗುರಿಯನ್ನು ಸುಲಭವಾಗಿ ತಲುಪಲಿದ್ದಾರೆ. ಹಣಕಾಸಿನ ತೊಂದರೆ ಕಂಡುಬರುವುದಿಲ್ಲ. ಕುಟುಂಬದ ಹಿರಿಯರಿಗೆ ಸಮಾಧಾನವಾಗುವಂತೆ ನಡೆದುಕೊಳ್ಳುವಿರಿ. ಸ್ವಂತ ಬಳಕೆಗಾಗಿ ಹೊಸ ವಾಹನ ಕೊಳ್ಳುವಿರಿ. ಅನಾರೋಗ್ಯವಿರುತ್ತದೆ. ಬೇಡದ ವಿಚಾರಗಳಿಗೆ ಹಣ ಖರ್ಚು ಮಾಡಬೇಕಾಗುತ್ತದೆ. ಮನೆಯಲ್ಲಿ ಸಾಕಿರುವ ಪ್ರಾಣಿಗಳ ಕಾಳಜಿ ಮಾಡುವಿರಿ. ಯಾವುದೇ ತೊಂದರೆ ಬಂದರೂ ಮಾತಿನಿಂದಲೇ ಸಮಸ್ಯೆ ಬಗೆಹರಿಸಿಕೊಳ್ಳುವಿರಿ. ದಂಪತಿ ನಡುವೆ ಇದ್ದ ಮನಸ್ತಾಪ ದೂರವಾಗುವುದು. ವಿಶ್ರಾಂತಿ ಬಯಸಿ ಕುಟುಂಬದ ಹಿರಿಯರು ಉದ್ಯೋಗ ತೊರೆಯುತ್ತಾರೆ. ಧಾರ್ಮಿಕ ಕ್ರಿಯಾ ವಿಧಿಗಳಲ್ಲಿ ಹೆಚ್ಚಿನ ನಂಬಿಕೆ ಇರುತ್ತದೆ. ಸಮಾಜದಲ್ಲಿ ಉನ್ನತ ಪದವಿ ಗಳಿಸುವಿರಿ.

ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ನಸು ಗೆಂಪು

ಮೀನ

ಮನಸ್ಸಿಗೆ ಸಂತೋಷವೆನಿಸುವಂಥ ವರ್ತಮಾನ ದೊರೆಯುತ್ತದೆ. ನೀರಿನಿಂದ ಹರಡುವ ರೋಗದ ಬಗ್ಗೆ ಎಚ್ಚರಿಕೆ ಇರಲಿ. ಉದ್ಯೋಗದ ಸಲುವಾಗಿ ದೀರ್ಘ ಪ್ರಯಾಣ ಮಾಡಬೇಕಾಗುತ್ತದೆ. ಬುದ್ಧಿವಂತಿಕೆಯಿಂದ ಕಷ್ಟಗಳಿಂದ ಪಾರಾಗುವಿರಿ. ಅತಿಯಾದ ಮಾತುಕತೆ ಕೇಳುಗರಲ್ಲಿ ಬೇಸರ ಮೂಡಿಸಬಹುದು. ಹಟದಿಂದ ನಿಮ್ಮ ಕಾರ್ಯ ಸಾಧಿಸಿ ಕೊಳ್ಳುವಿರಿ. ನಿಮ್ಮ ತಾಯಿಯ ಪರೋಪಕಾರದ ಬುದ್ಧಿ ನಿಮಗೆ ಬರುತ್ತದೆ. ಹಣಕಾಸಿನ ತೊಂದರೆ ಇರುವುದಿಲ್ಲ. ಆದರೂ ಹಣದ ಬಗ್ಗೆ ಸಂತೃಪ್ತಿ ಇರುವುದಿಲ್ಲ. ಹೆಚ್ಚಿನ ವಿದ್ಯಾಭ್ಯಾಸದ ಸಲುವಾಗಿ ಪರಸ್ಥಳಕ್ಕೆ ತೆರಳುವ ಸೂಚನೆಗಳಿವೆ. ಆರ್ಥಿಕ ಪ್ರಗತಿ ಸಾಧಿಸಲು ಪ್ರಯತ್ನ ಪಡುವಿರಿ. ಎಲ್ಲರೂ ಒಂದೇ ಎಂಬ ವಿಶಾಲವಾದ ಮನೋಭಾವನೆ ಇರುತ್ತದೆ.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಕಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ 6

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ನೀಲಿ ಮಿಶ್ರಿತ ಬಿಳಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).