Horoscope Today: ಕುಟುಂಬದಲ್ಲಿ ಸಂತಸದ ಘಟನೆಯೊಂದು ನಡೆಯಲಿದೆ, ಅತಿಯಾದ ಆತ್ಮವಿಶ್ವಾಸ ಒಳಿತಲ್ಲ; ಮೇಷದಿಂದ ಕಟಕರಾಶಿವರೆಗಿನ ದಿನಭವಿಷ್ಯ
9 ಏಪ್ರಿಲ್ 2024 ಮಂಗಳವಾರ: ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಪ್ರತಿ ರಾಶಿಗೂ ಅದರದ್ದೇ ಆದ ಅಧಿಪತಿ ಇದ್ದಾನೆ. ಆಯಾ ರಾಶಿಗಳ ಜನರು ಮಾಡುವ ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳ ಫಲಗಳು ಸಿಗುತ್ತವೆ. ಮೇಷ, ವೃಷಭ, ಮಿಥುನ, ಕಟಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನ ಭವಿಷ್ಯ ಇಲ್ಲಿದೆ. (9th April 2024 Daily Horoscope)

ಇಂದಿನ ರಾಶಿ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಸಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವುದು ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀಲವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (9th April 2024 Horoscope)
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲಪಕ್ಷ, ಮಂಗಳವಾರ
ತಿಥಿ: ಪಾಡ್ಯ ರಾತ್ರಿ 10.01ರವರೆಗೂ ಇರುತ್ತದೆ. ಅನಂತರ ಬಿದಿಗೆ ಆರಂಭವಾಗುತ್ತದೆ.
ನಕ್ಷತ್ರ: ರೇವತಿ ನಕ್ಷತ್ರವು ಬೆಳಿಗ್ಗೆ 8.22ರವರೆಗೂ ಇರುತ್ತದೆ. ಅನಂತರ ಅಶ್ವಿನಿ ನಕ್ಷತ್ರವು ಆರಂಭವಾಗಲಿದೆ.
ಸೂರ್ಯೋದಯ: ಬೆಳಿಗ್ಗೆ 6.10
ಸೂರ್ಯಾಸ್ತ: ಸಂಜೆ 6.31
ರಾಹುಕಾಲ: ಬೆಳಿಗ್ಗೆ 3.00 ರಿಂದ ಮಧ್ಯಾಹ್ನ 4.30
ಮೇಷ
ನಿಮ್ಮ ಬಗ್ಗೆ ಸುತ್ತಮುತ್ತಲಿನ ಜನರಿಗೆ ವಿಶೇಷ ಪ್ರೀತಿ, ಗೌರವ ಮೂಡುತ್ತದೆ. ಅವಶ್ಯಕವಾದ ಕೆಲಸ-ಕಾರ್ಯಗಳನ್ನು ಮಾತ್ರ ಮಾಡಲಿಚ್ಚಿಸುವಿರಿ. ಸಾಮರ್ಥ್ಯಕ್ಕೆ ಸವಾಲೆನಿಸುವ ಕೆಲಸಗಳು ಎದುರಾಗಲಿವೆ. ಖರ್ಚು ವೆಚ್ಚಗಳು ಹೆಚ್ಚಾದರೂ ಸಮದೂಗಿಸಬಲ್ಲಿರಿ. ಉಳಿಸಿದ ಹಣದಲ್ಲಿ ಅಲ್ಪ ಭಾಗ ಖರ್ಚಾಗಲಿದೆ. ಉದ್ಯೋಗದಲ್ಲಿ ಯಾವುದೇ ಆತಂಕ ಇರದು. ವ್ಯಾಪಾರ ವ್ಯವಹಾರಗಳು ಲಾಭದಾಯಕವಾಗಿ ಸಾಗಲಿವೆ. ವಿದ್ಯಾರ್ಥಿಗಳು ತಮ್ಮ ಹೊಣೆಯನ್ನು ಪೂರ್ಣಗೊಳಿಸಬಲ್ಲರು. ಹೊಸ ವಾಹನವನ್ನು ಕೊಳ್ಳುವಿರಿ. ಆತ್ಮೀಯರ ಮನೆಗೆ ತೆರಳುವಿರಿ. ಸಂಗೀತ ಮತ್ತು ನಾಟ್ಯ ಬಲ್ಲವರಿಗೆ ವಿಶೇಷ ಗೌರವ ಲಭಿಸಲಿದೆ. ಮನೆಯಲ್ಲಿರುವ ಮಕ್ಕಳಿಗೆ ಅವರಿಗೆ ಇಷ್ಟವೆನಿಸುವ ಉಡುಗೊರೆಯನ್ನು ನೀಡುವಿರಿ.
ಪರಿಹಾರ: ಧಾರ್ಮಿಕ ಕೇಂದ್ರಗಳಿಗೆ ಹಾಲು, ಮೊಸರು ನೀಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ: 6
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಹೊಗೆಯ ಬಣ್ಣ
ವೃಷಭ
ಮನದಲ್ಲಿನ ಆಸೆ ಆಕಾಂಕ್ಷೆಗಳು ಸುಲಭವಾಗಿ ಕಾರ್ಯರೂಪಕ್ಕೆ ಬರಲಿವೆ. ಕುಟುಂಬದಲ್ಲಿ ಸಂತೋಷದ ಘಟನೆಯೊಂದು ನಡೆಯಲಿದೆ. ಹಣಕಾಸಿನ ವಿಚಾರದಲ್ಲಿ ಲಾಭ ನಷ್ಟವನ್ನು ಲೆಕ್ಕಾಚಾರದಂತೆ ಯೋಜನೆಯನ್ನು ರೂಪಿಸುವಿರಿ. ಉದ್ಯೋಗದಲ್ಲಿ ಕಾರ್ಯದ ಒತ್ತಡವಿರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಬದಲಾವಣೆಗಳು ಕಾಣದಿದ್ದರೂ ಲಾಭವಿರುತ್ತದೆ. ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ಪಡೆಯಲಿದ್ದಾರೆ. ಉನ್ನತ ವಿದ್ಯಾಭ್ಯಾಸದ ಅವಕಾಶ ದೊರೆಯುತ್ತದೆ. ವಿದೇಶ ಪ್ರವಾಸದ ಅವಕಾಶ ದೊರೆಯತ್ತದೆ. ಹುರುಳಿಲ್ಲದ ಮಾತನ್ನು ನಂಬಿ ದುಡುಕಿನ ನಿರ್ಧಾರಗಳನ್ನು ಕೈಗೊಳ್ಳುವಿರಿ. ಕಣ್ಣಿನ ತೊಂದರೆ ಇರಲಿದೆ, ಎಚ್ಚರಿಕೆ ವಹಿಸಿ.
ಪರಿಹಾರ: ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ: 9
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ : ಆಕಾಶನೀಲಿ ಬಣ್ಣ
ಮಿಥುನ
ಎಲ್ಲರೊಡನೆ ಆತ್ಮೀಯವಾಗಿ ವರ್ತಿಸುವ ಕಾರಣ ಕುಟುಂಬದಲ್ಲಿ ಶಾಂತಿ ನೆಲೆಸಿರುತ್ತದೆ. ಅನ್ಯರ ವಿಚಾರದಲ್ಲಿ ಆಸಕ್ತಿ ತೋರಿಸದೆ ಸ್ವಂತ ಕೆಲಸ ಕಾರ್ಯಗಳಿಗೆ ಮೊದಲ ಆದ್ಯತೆಯನ್ನು ನೀಡುವಿರಿ. ಉದ್ಯೋಗದಲ್ಲಿ ಎಲ್ಲರ ಪ್ರೀತಿ ವಿಶ್ವಾಸವನ್ನು ಗಳಿಸುವಿರಿ. ವಿದ್ಯಾರ್ಥಿಗಳು ಹೆಚ್ಚಿನ ಕಷ್ಟಪಡದೆ ಅಗ್ನಿಸ್ಥಾನವನ್ನು ಗಳಿಸುತ್ತಾರೆ. ಹಣಕಾಸಿನ ವಿಚಾರದಲ್ಲಿ ದೃಢವಾದ ನಿಲುವನ್ನು ತೆಗೆದುಕೊಳ್ಳಬೇಕು. ಆತುರದಲ್ಲಿ ಅಸಾಧ್ಯವಾದ ಕೆಲಸ ಕಾರ್ಯಗಳನ್ನು ಒಪ್ಪಿಕೊಳ್ಳದಿರಿ. ಸಣ್ಣ ಪ್ರಮಾಣದ ವ್ಯಾಪಾರ ವ್ಯವಹಾರಗಳು ಲಾಭದಾಯಕವಾಗಿರುತ್ತದೆ. ತಾಯಿಯ ಆಶೀರ್ವಾದವನ್ನು ಪಡೆದು ದಿನದ ಕೆಲಸಗಳನ್ನು ಆರಂಭಿಸಿರಿ. ದೃಢವಾದ ನಿರ್ಧಾರಗಳು ಹೊಸ ಜೀವನ ರೂಪಿಸುತ್ತವೆ.
ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ: 12
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ರಕ್ತದ ಬಣ್ಣ
ಕಟಕ
ಸೋಲನ್ನು ಗೆಲುವನ್ನಾಗಿಸುವ ಬುದ್ಧಿವಂತಿಕೆ ನಿಮ್ಮಲಿರುತ್ತದೆ. ಕುಟುಂಬದಲ್ಲಿ ಪರಸ್ಪರ ಸಹಾಯ ಸಹಕಾರದ ಮನವಿರುತ್ತದೆ. ಹೆಚ್ಚಿನ ಜವಾಬ್ದಾರಿ ಮಾನಸಿಕ ಒತ್ತಡವನ್ನು ಹೆಚ್ಚಿಸುತ್ತದೆ. ಕೆಲಸ ಕಾರ್ಯದ ನಡುವೆ ವಿಶ್ರಾಂತಿಯನ್ನು ತೆಗೆದುಕೊಳ್ಳಿ. ಅತಿಯಾದ ಆತ್ಮವಿಶ್ವಾಸ ಜೀವನದಲ್ಲಿ ವಿವಾದವನ್ನು ಸೃಷ್ಟಿಸುತ್ತದೆ. ಶಾಂತಿ ಸಂಯಮದ ಹಾದಿ ಸುಖ ಜೀವನವನ್ನು ರೂಪಿಸುತ್ತದೆ. ತಂದೆಯವರಿಂದ ಹಣದ ಸಹಾಯ ದೊರೆಯುತ್ತದೆ. ಕುಟುಂಬದ ಸದಸ್ಯರ ಜೊತೆ ಯಾತ್ರಾಸ್ಥಳಕ್ಕೆ ತೆರಳುವಿರಿ. ಆರೋಗ್ಯದ ಬಗ್ಗೆ ಗಮನವಿರಲಿ. ಉದ್ಯೋಗದಲ್ಲಿ ಅಭಿವೃದ್ದಿ ಇರುತ್ತದೆ. ವಿದ್ಯಾರ್ಥಿಗಳು ವಿದ್ಯಾರ್ಜನೆಯಲ್ಲಿ ಮುಂದಿರುತ್ತಾರೆ. ಸ್ವತಂತ್ರವಾಗಿ ನಿರ್ವಹಿಸುವ ಹಣಕಾಸಿನ ಸಂಸ್ಥೆಯಿಂದ ಲಾಭ ಗಳಿಸುವಿರಿ.
ಪರಿಹಾರ: ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಎಲೆ ಹಸಿರು ಬಣ್ಣ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 85468 65832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಗೌರಿವಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
