ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ದಂಪತಿ ನಡುವೆ ಇದ್ದ ಮನಸ್ತಾಪ ದೂರ, ಅನಿವಾರ್ಯವಾಗಿ ಉದ್ಯೋಗ ಬದಲಿಸುವಿರಿ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ದಂಪತಿ ನಡುವೆ ಇದ್ದ ಮನಸ್ತಾಪ ದೂರ, ಅನಿವಾರ್ಯವಾಗಿ ಉದ್ಯೋಗ ಬದಲಿಸುವಿರಿ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ಜುಲೈ 9ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (ಬರಹ: ಎಚ್‌. ಸತೀಶ್, ಜ್ಯೋತಿಷಿ).

ದಂಪತಿ ನಡುವೆ ಇದ್ದ ಮನಸ್ತಾಪ ದೂರ, ಅನಿವಾರ್ಯವಾಗಿ ಉದ್ಯೋಗ ಬದಲಿಸುವಿರಿ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ
ದಂಪತಿ ನಡುವೆ ಇದ್ದ ಮನಸ್ತಾಪ ದೂರ, ಅನಿವಾರ್ಯವಾಗಿ ಉದ್ಯೋಗ ಬದಲಿಸುವಿರಿ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(9th July 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಆಷಾಢ ಮಾಸ-ಶುಕ್ಲಪಕ್ಷ-ಮಂಗಳವಾರ

ತಿಥಿ: ದಿನಪೂರ್ತಿ ಚೌತಿ ಇರುತ್ತದೆ.

ನಕ್ಷತ್ರ: ಆಶ್ಲೇಷ ನಕ್ಷತ್ರವು ಬೆಳಗ್ಗೆ 07.34 ರವರೆಗೂ ಇದ್ದು ನಂತರ ಮಖ ನಕ್ಷತ್ರ ಇರುತ್ತದೆ.

ಸೂರ್ಯೋದಯ: ಬೆಳಗ್ಗೆ 05.59

ಸೂರ್ಯಾಸ್ತ: ಸಂಜೆ 06.49

ರಾಹುಕಾಲ: 03.40 ರಿಂದ 05.16

ರಾಶಿಫಲ

ಧನಸ್ಸು

ಹೆಚ್ಚಿನ ಶ್ರಮವಹಿಸಿದರೂ ಆದಾಯದಲ್ಲಿ ಪ್ರಗತಿ ಕಂಡು ಬರುವುದಿಲ್ಲ. ಎದುರಾಗುವ ಖರ್ಚು ವೆಚ್ಚಗಳಿಗೆ ಸರಿ ಸಮನಾದ ಆದಾಯವಿರುತ್ತದೆ. ಭೂಮಿಗೆ ಸಂಬಂಧಿಸಿದ ವ್ಯವಹಾರದಲ್ಲಿ ಉತ್ತಮ ಲಾಭವಿರುತ್ತದೆ. ಗಣ್ಯ ಸಂಸ್ಥೆಯಲ್ಲಿ ಉದ್ಯೋಗ ಲಭಿಸುತ್ತದೆ. ವಿದ್ಯಾರ್ಥಿಗಳು ಓದಿನ ಕಡೆ ಗಮನ ಹರಿಸುತ್ತಾರೆ. ದಂಪತಿ ನಡುವೆ ಇದ್ದ ಅನಾವಶ್ಯಕವಾದ ವಾದ ವಿವಾದಗಳು ದೂರವಾಗುತ್ತವೆ. ಕೃಷಿಯಲ್ಲಿ ಆಸಕ್ತಿ ಮೂಡುತ್ತದೆ. ವಂಶಕ್ಕೆ ಸಂಬಂಧಿಸಿದ ವಿವಾದ ಒಂದರಲ್ಲಿ ಕಾನೂನಿನ ಮೂಲಕ ಜಯಗಳಿಸುವಿರಿ. ತಂದೆಯವರಿಗೆ ಇದ್ದ ಕಷ್ಟ ದೂರವಾಗಲಿವೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಯಶಸ್ಸನ್ನು ನಿರೀಕ್ಷಿಸಬಹುದು. ಕುಟುಂಬದ ಹಿರಿಯರ ಬಗ್ಗೆ ವಿಶೇಷ ಗೌರವ ಇರುತ್ತದೆ.

ಪರಿಹಾರ : ಸಾಧು ಸಂತರ ಆಶೀರ್ವಾದ ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕಂದು ಬಣ್ಣ

ಮಕರ

ಗೃಹಿಣಿಯರ ಆರೋಗ್ಯದಲ್ಲಿ ತೊಂದರೆ ಕಂಡು ಬರುತ್ತದೆ. ಮನಸ್ಸಿಗೆ ಒಪ್ಪದ ಕೆಲಸ ಕಾರ್ಯಗಳನ್ನು ಅನಿವಾರ್ಯವಾಗಿ ಮಾಡಬೇಕಾಗುತ್ತದೆ. ಮಾನಸಿಕ ಒತ್ತಡದಿಂದ ಬಳಲುವಿರಿ. ಮಕ್ಕಳ ಆರೋಗ್ಯದಲ್ಲಿ ತೊಂದರೆ ಇರುತ್ತದೆ. ನಿಮ್ಮಲ್ಲಿನ ಬುದ್ಧಿಶಕ್ತಿಯಿಂದ ನಿಮ್ಮ ಅವಶ್ಯಕತೆಗಳನ್ನು ಪೂರೈಸಿಕೊಳ್ಳುವಿರಿ. ಸೋದರದ ಜೊತೆಯಲ್ಲಿ ಅನಾವಶ್ಯಕ ವಾದ ವಿವಾದಗಳಿರುತ್ತದೆ. ದಾಂಪತ್ಯ ಜೀವನದಲ್ಲಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭವಿರುತ್ತದೆ. ಕುಟುಂಬದ ಹಿರಿಯರು ತೆಗೆದುಕೊಳ್ಳುವ ತಪ್ಪು ನಿರ್ಧಾರದಿಂದ ಹಣದ ತೊಂದರೆ ಕಂಡುಬರುತ್ತದೆ. ವಂಶದ ಹಣಕಾಸಿನಲ್ಲಿ ಸಮಪಾಲು ದೊರೆಯುತ್ತದೆ. ಸಂಗಾತಿಗೆ ಆತ್ಮೀಯರಿಂದ ಅಪರೂಪದ ಉಡುಗೊರೆ ದೊರೆಯುತ್ತದೆ.

ಪರಿಹಾರ : ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸುವುದು.

ಅದೃಷ್ಟದ ಸಂಖ್ಯೆ :10

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕಪ್ಪು

ಕುಂಭ

ಸಂಗಾತಿಗೆ ಅನಾರೋಗ್ಯ ಇರುತ್ತದೆ. ಜೀವನದಲ್ಲಿ ಮಹತ್ತರ ಅಭಿವೃದ್ಧಿ ಉಂಟಾಗುತ್ತದೆ. ದಾಂಪತ್ಯ ಜೀವನದಲ್ಲಿ ಆಶಾಂತಿಯ ವಾತಾವರಣವಿರುತ್ತದೆ. ನಿಮ್ಮ ಮಾತನ್ನು ಅರ್ಥಮಾಡಿಕೊಳ್ಳದೆ ಬಂಧುಗಳು ದೂರ ಉಳಿಯುತ್ತಾರೆ. ಕುಟುಂಬದ ಸ್ತ್ರೀಯರ ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ. ಯಾರಿಗೂ ತಿಳಿಯದಂತೆ ಹಣವನ್ನು ಉಳಿಸುವಿರಿ. ತಂದೆಯವರು ವಿರೋಧಿಗಳ ಕುತಂತ್ರದಿಂದ ಪಾರಾಗುತ್ತಾರೆ. ಅನಿವಾರ್ಯವಾಗಿ ಉದ್ಯೋಗವನ್ನು ಬದಲಿಸಬೇಕಾಗುತ್ತದೆ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ಮನೆಯಲ್ಲಿರುವ ಎಳೆಯ ಮಕ್ಕಳ ಬಗ್ಗೆ ಗಮನವಿರಲಿ. ಪ್ರಯೋಜನವಿಲ್ಲದ ಓಡಾಟ ಬೇಸರ ಮೂಡಿಸುತ್ತದೆ. ಅನಾಥಾಶ್ರಮ ಅಥವಾ ವೃದ್ಯಾಶ್ರಮಗಳಲ್ಲಿ ಅನ್ನದಾನ ಮಾಡುವಿರಿ. ಹಣಕಾಸಿನ ವಿಚಾರದಲ್ಲಿ ಸೋದರೊಂದಿಗೆ ಮನಸ್ತಾಪ ಉಂಟಾಗುತ್ತದೆ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ತಿಳಿ ಹಸಿರು

ಮೀನ

ಉದ್ಯೋಗದ ಸಲುವಾಗಿ ತಂದೆಯವರು ಕುಟುಂಬದಿಂದ ದೂರವಿರುತ್ತಾರೆ. ಕುಟುಂಬದ ಜವಾಬ್ದಾರಿ ನಿಮ್ಮ ಪಾಲಾಗುತ್ತದೆ. ಕುಟುಂಬದಲ್ಲಿ ಒಮ್ಮತದ ಕೊರತೆ ಕಂಡುಬರುತ್ತದೆ. ವಿದ್ಯಾರ್ಥಿಗಳು ಆರಂಭದಲ್ಲಿ ಆತಂಕದ ಕ್ಷಣಗಳನ್ನು ಅನುಭವಿಸುತ್ತಾರೆ. ನಿಮಗೆ ಉಸಿರಿಗೆ ಸಂಬಂಧಿಸಿದ ತೊಂದರೆ ಇರಲಿದೆ. ಕಾನೂನು ಪಾಲನೆಯಿಂದ ಜನಮನ್ನಣೆ ಗಳಿಸುವಿರಿ. ನಿಮ್ಮ ಸೋದರನಿಗೆ ಬರಹದಿಂದ ಉನ್ನತ ಸ್ಥಾನ ದೊರೆಯುತ್ತದೆ. ಮನೆಯಲ್ಲಿ ನಡೆಯಬೇಕಾಗಿದ್ದ ವಿವಾಹ ಕಾರ್ಯದಲ್ಲಿ ಅಡ್ಡಿ ಆತಂಕಗಳು ಉಂಟಾಗಲಿವೆ. ನಿಮ್ಮ ಮನದಲ್ಲಿ ಇರುವ ಆಸೆ ಆಕಾಂಕ್ಷೆಗಳು ಮರೆಯಾಗುತ್ತವೆ. ಹೆಚ್ಚಿನ ಆಸೆ ಇಲ್ಲದೆ ಇರುವ ಅನುಕೂಲದಲ್ಲಿ ಸಂತೋಷ ಕಾಣುವಿರಿ. ರಾಜಕೀಯ ಪಟುಗಳಿಗೆ ವಿಶೇಷ ಗೌರವ ಯಶಸ್ಸು ದೊರೆಯುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೇಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ 4

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ನಸು ಗೆಂಪು ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.