ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಮಾಡದ ತಪ್ಪನ್ನು ಮೈ ಮೇಲೆ ಎಳೆದುಕೊಳ್ಳುವಿರಿ, ಅನಿರೀಕ್ಷಿತ ಧನ ಲಾಭ: ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಮಾಡದ ತಪ್ಪನ್ನು ಮೈ ಮೇಲೆ ಎಳೆದುಕೊಳ್ಳುವಿರಿ, ಅನಿರೀಕ್ಷಿತ ಧನ ಲಾಭ: ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

9 ಜೂನ್‌ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (9th June 2024 Daily Horoscope).

ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (9th June 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಭಾನುವಾರ

ತಿಥಿ: ತದಿಗೆ 04.05 ರವರೆಗೂ ಇರುತ್ತದೆ ನಂತರ ಚೌತಿ ಆರಂಭವಾಗುತ್ತದೆ.

ನಕ್ಷತ್ರ : ಪುನರ್ವಸು ನಕ್ಷತ್ರ ರಾತ್ರಿ 09.11 ರವರೆಗೂ ಇದ್ದು ನಂತರ ಪುಷ್ಯ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.44

ರಾಹುಕಾಲ: ಸಂಜೆ 05.11 ರಿಂದ ಸ. 06.47

ರಾಶಿಫಲ

ಮೇಷ

ದೈನಂದಿನ ಜೀವನದಲ್ಲಿ ಯಾವುದೇ ಅಡ್ಡಿ ಆತಂಕಗಳು ಇರುವುದಿಲ್ಲ. ನೇರ ನಿಷ್ಠುರದ ಮಾತುಕತೆ ಇರುತ್ತದೆ. ಉತ್ತಮ ವರಮಾನ ಇರುವ ಕಾರಣ ಮನಸ್ಸಿಗೆ ನೆಮ್ಮದಿ ಇರುತ್ತದೆ. ಉದ್ಯೋಗ ಅರಸುತ್ತಿರುವವರಿಗೆ ಇಷ್ಟ ಪಟ್ಟ ಉದ್ಯೋಗ ದೊರೆಯುತ್ತದೆ. ವಿದ್ಯಾರ್ಥಿಗಳು ತಮ್ಮ ಹಾದಿಯಲ್ಲಿ ಅಡೆತಡೆಗಳನ್ನು ಎದುರಿಸಿದರೂ ಯಾವುದೇ ತೊಂದರೆ ಆಗುವುದಿಲ್ಲ. ವಿದ್ಯಾರ್ಥಿಗಳು ಪಠ್ಯೇತರ ವಿಚಾರಗಳನ್ನು ಮನಸ್ಸಿಟ್ಟು ಅಭ್ಯಾಸ ಮಾಡುವರು. ಎಲ್ಲರನ್ನು ಸಮಾನ ಭಾವನೆಯಿಂದ ಕಾಣುವಿರಿ. ಇದರಿಂದ ಕುಟುಂಬದ ಒಳಗೂ ಹೊರಗೂ ವಿಶೇಷ ಗೌರವವಿರುತ್ತದೆ. ಸೋದರಿಯ ಆರೋಗ್ಯದಲ್ಲಿ ಏರುಪೇರು ಉಂಟಾಗುತ್ತದೆ. ಕೈ ತುಂಬಾ ಹಣವಿದ್ದರೂ ಸಮಯಕ್ಕೆ ಸರಿಯಾಗಿ ಆಹಾರ ಸೇವಿಸಲು ಸಾಧ್ಯವಾಗುವುದಿಲ್ಲ.

ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಬಿಳಿ

ವೃಷಭ

ಹೆಚ್ಚಿನ ಪ್ರಯತ್ನದಿಂದ ಮಾತ್ರ ನಿರೀಕ್ಷಿತ ಗುರಿ ತಲುಪಲು ಸಾಧ್ಯ. ಮಾಡದ ತಪ್ಪಿಗೆ ಹಿರಿಯ ಅಧಿಕಾರಿಗಳ ಕ್ಷಮೆ ಕೇಳುವಿರಿ. ಸಾಕುಪ್ರಾಣಿಗಳಿಂದ ತೊಂದರೆ ಇರುತ್ತದೆ. ಅವಶ್ಯಕತೆ ಇದ್ದಲ್ಲಿ ಸೋದರನಿಂದ ಸಹಾಯ ದೊರೆಯುತ್ತದೆ. ಆತಂಕದ ಪರಿಸ್ಥಿತಿಯಲ್ಲಿಯೂ ಸ್ವಂತ ನಿರ್ಧಾರಕ್ಕೆ ಬದ್ಧರಾಗುವಿರಿ. ಎಲ್ಲರ ಪ್ರೀತಿ ವಿಶ್ವಾಸ ಗಳಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ಗಳಿಸುವಿರಿ. ತಾಯಿಯ ಸಹಾಯದಿಂದ ಹಣಕಾಸಿನ ವಿಚಾರದಲ್ಲಿ ಪ್ರಗತಿ ಉಂಟಾಗುತ್ತದೆ. ದಿನ ಕಳೆದಂತೆ ಸಮಾಜದಲ್ಲಿ ಗೌರವದ ಸ್ಥಾನಮಾನ ಗಳಿಸುವಿರಿ. ಹೊಸ ವಾಹನ ಕೊಳ್ಳುವ ಸಾಧ್ಯತೆಗಳಿವೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಬೂದು

ಮಿಥುನ

ಕಲುಷಿತ ಆಹಾರ ಸೇವನೆಯಿಂದ ತೊಂದರೆ ಇರುತ್ತದೆ. ತಾಯಿಗೆ ಅನಾರೋಗ್ಯವಿರುತ್ತದೆ. ಸ್ವಂತ ಕೆಲಸ ಕಾರ್ಯಗಳಿಗಾಗಿ ಪರಸ್ಥಳಕ್ಕೆ ತೆರಳುವಿರಿ. ಸುಖ ಸಂತೋಷದಿಂದ ದಿನವನ್ನು ಕಳೆಯುವಿರಿ. ಅನಾವಶ್ಯಕವಾಗಿ ಮಾನಸಿಕ ಒತ್ತಡಕ್ಕೆ ಒಳಗಾಗುವಿರಿ. ಹಟದಿಂದ ಗುರಿ ಸಾಧಿಸುವಿರಿ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ. ಒಮ್ಮೆ ತೆಗೆದುಕೊಂಡ ತೀರ್ಮಾನಗಳನ್ನು ಪದೇಪದೇ ಬದಲಾಯಿಸುವಿರಿ. ಕಷ್ಟದಲ್ಲಿ ಇದ್ದವರಿಗೆ ಸಹಾಯ ಮಾಡುವಿರಿ. ಕುಟುಂಬದಲ್ಲಿ ನಿಮ್ಮ ತಾಯಿಗೆ ವಿಶೇಷ ಗೌರವವಿರುತ್ತದೆ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗುತ್ತದೆ. ಅತಿಯಾದ ಕೋಪ ತೊಂದರೆಗೆ ಕಾರಣವಾಗುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ 

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಆಕಾಶ ನೀಲಿ

ಕಟಕ

ಮಹಿಳೆಯರಿಗೆ ವಿಶೇಷ ಗೌರವ ನೀಡುವಿರಿ. ಹಣಕಾಸಿನ ವಿಚಾರದಲ್ಲಿ ಸಂಗಾತಿಗೆ ವಿಶೇಷ ಚತುರತೆ ಇರುತ್ತದೆ. ನೀವು ಸುಲಭವಾಗಿ ಹಣವನ್ನು ಖರ್ಚು ಮಾಡುವುದಿಲ್ಲ. ಸಂಗಾತಿಯ ಕೋಪಕ್ಕೆ ಬೆದರಿ ಮಾಡದ ತಪ್ಪನ್ನು ನಿಮ್ಮ ಮೇಲೆ ಹಾಕಿಕೊಳ್ಳುವಿರಿ. ಆರಂಭದಲ್ಲಿ ತೊಂದರೆಯಾದರೂ ಕೆಲಸ ಕಾರ್ಯಗಳು ಸುಗಮವಾಗಿ ನಡೆಯಲಿವೆ. ಮನದಲ್ಲಿ ಯಾವುದಾದರೊಂದು ಚಿಂತೆ ಇದ್ದೇ ಇರುತ್ತದೆ. ಮಕ್ಕಳ ಬಗ್ಗೆ ವಿಶೇಷ ಅಕ್ಕರೆ ಇರುತ್ತದೆ. ಅನಿರೀಕ್ಷಿತ ಧನ ಲಾಭವಿರುತ್ತದೆ. ಸದಾಕಾಲ ಒಳ್ಳೆಯ ವಿಚಾರಗಳ ಬಗ್ಗೆ ಯೋಜನೆ ರೂಪಿಸುವಿರಿ. ಒಮ್ಮೆ ತೆಗೆದುಕೊಂಡ ತೀರ್ಮಾನವನ್ನು ಬದಲಿಸುವುದಿಲ್ಲ. ನಿಮ್ಮ ಗೌರವಕ್ಕೆ ಕುಂದು ಬರುವ ಯಾವುದೇ ಕೆಲಸ ಮಾಡುವುದಿಲ್ಲ. ನಿಮಗೆ ಸಂಗಾತಿಯ ಸಹಾಯ ಸಹಕಾರ ಸದಾ ದೊರೆಯುತ್ತದೆ.

ಪರಿಹಾರ : ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ :3

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕೆಂಪು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).