ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಅನಾವಶ್ಯಕ ಖರ್ಚಿನಿಂದ ಭವಿಷ್ಯಕ್ಕೆ ತೊಂದರೆ, ಸ್ತ್ರೀಯರಿಗೆ ಆಸ್ತಿ ವಿವಾದದಲ್ಲಿ ಯಶಸ್ಸು; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿ ಭವಿಷ್ಯ

ಅನಾವಶ್ಯಕ ಖರ್ಚಿನಿಂದ ಭವಿಷ್ಯಕ್ಕೆ ತೊಂದರೆ, ಸ್ತ್ರೀಯರಿಗೆ ಆಸ್ತಿ ವಿವಾದದಲ್ಲಿ ಯಶಸ್ಸು; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿ ಭವಿಷ್ಯ

9 ಜೂನ್‌ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (9th June 2024 Daily Horoscope).

ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿ ಭವಿಷ್ಯ
ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (9th June 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಭಾನುವಾರ

ತಿಥಿ: ತದಿಗೆ 04.05 ರವರೆಗೂ ಇರುತ್ತದೆ ನಂತರ ಚೌತಿ ಆರಂಭವಾಗುತ್ತದೆ.

ನಕ್ಷತ್ರ : ಪುನರ್ವಸು ನಕ್ಷತ್ರ ರಾತ್ರಿ 09.11 ರವರೆಗೂ ಇದ್ದು ನಂತರ ಪುಷ್ಯ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.44

ರಾಹುಕಾಲ: ಸಂಜೆ 05.11 ರಿಂದ ಸ. 06.47

ರಾಶಿಫಲ

ಸಿಂಹ

ಖರ್ಚು ವೆಚ್ಚಗಳನ್ನು ನಿಯಂತ್ರಿಸದೇ ಹೋದಲ್ಲಿ ತೊಂದರೆಗೆ ಸಿಲುಕುವಿರಿ. ನಿಮಗೆ ಅರಿವಿಲ್ಲದಂತೆ ತಪ್ಪು ನಿರ್ಧಾರ ತೆಗೆದುಕೊಳ್ಳುವಿರಿ. ಇಷ್ಟವಿಲ್ಲದ ವ್ಯಕ್ತಿಯೊಬ್ಬರನ್ನು ಭೇಟಿ ಮಾಡುವಿರಿ. ನೀವು ಆಡುವ ಅರ್ಥ ಇಲ್ಲದ ಮಾತುಗಳು ಕೇಳುಗರಿಗೆ ಬೇಸರ ಮೂಡುತ್ತದೆ. ನೆರೆಹೊರೆಯವರೊಂದಿಗೆ ಉತ್ತಮ ಬಾಂಧವ್ಯ ಇರುವುದಿಲ್ಲ. ಹಣಕಾಸಿನ ವಿಚಾರದಲ್ಲಿ ಸೋದರ ಅಥವಾ ಸೋದರಿಯೊಂದಿಗೆ ಭಿನ್ನಾಭಿಪ್ರಾಯ ಉಂಟಾಗುತ್ತದೆ. ಉದರಕ್ಕೆ ಸಂಬಂಧಿಸಿದ ದೋಷ ಉಂಟಾಗುತ್ತದೆ. ನೀರಿರುವ ಸ್ಥಳದಲ್ಲಿ ಎಚ್ಚರಿಕೆಯಿಂದ ಇರಿ. ಜನೋಪಕಾರಿ ಕೆಲಸ ಕಾರ್ಯಗಳಲ್ಲಿ ಭಾಗವಹಿಸುವಿರಿ. ಆತಂಕದ ಸನ್ನಿವೇಶದಲ್ಲಿಯೂ ಕೆಲಸ ಕಾರ್ಯಗಳಲ್ಲಿ ಹಿಂದುಳಿಯುವುದಿಲ್ಲ. ನಿಮ್ಮ ಮನದಲ್ಲಿರುವ ವಿಚಾರವನ್ನು ಎಲ್ಲರಿಗೂ ತಿಳಿಸುವಿರಿ.

ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ಎಲೆ ಹಸಿರು

ಕನ್ಯಾ

ಯಾರ ಮನಸಿಗೂ ನೋವಾಗದಂತೆ ಮಾತನಾಡಬೇಡಿ. ಕಣ್ಣಿನ ತೊಂದರೆ ಇರುತ್ತದೆ. ಮರು ಮದುವೆಯ ನಿರೀಕ್ಷೆಯಲ್ಲಿ ಇದ್ದವರಿಗೆ ಶುಭ ವರ್ತಮಾನ ಬರಲಿದೆ. ಹೆಣ್ಣು ಮಕ್ಕಳಿಗೆ ಈ ದಿನ ವಿಶೇಷ ಫಲಗಳು ದೊರೆಯುತ್ತವೆ. ಕುಟುಂಬದ ಸ್ತ್ರೀಯರಿಗೆ ಸಂಬಂಧಿಸಿದ ಆಸ್ತಿಯ ವಿವಾದದಲ್ಲಿ ಯಶಸ್ಸು ದೊರೆಯುತ್ತದೆ. ಸಮಾಜದ ಗಣ್ಯ ವ್ಯಕ್ತಿಗಳ ಸಹಾಯ ಸಹಕಾರ ದೊರೆಯಲಿದೆ. ಸಂಗಾತಿಗೆ ಅನಾರೋಗ್ಯ ವಿರುತ್ತದೆ. ಸಮಾಜದಲ್ಲಿ ಉನ್ನತ ಸ್ಥಾನ ಗಳಿಸಲು ಪ್ರಯತ್ನಪಡುವಿರಿ. ದುರಾಸೆ ಇರುವುದಿಲ್ಲ. ದೊರಕಿದಷ್ಟೇ ನನ್ನ ಭಾಗ್ಯ ಎಂಬ ಭಾವನೆ ಇರುತ್ತದೆ. ಉಷ್ಣವಾಯುವಿನ ದೋಷ ನಿಮ್ಮನ್ನು ಕಾಡಲಿದೆ.

ಪರಿಹಾರ : ಬೆಳ್ಳಿ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು ನೈರುತ್ಯ

ಅದೃಷ್ಟದ ಬಣ್ಣ : ಕೇಸರಿ

ತುಲಾ

ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಹಣವನ್ನು ಹಿಡಿತವಾಗಿ ಖರ್ಚು ಮಾಡುವಿರಿ. ಆರೋಗ್ಯದಲ್ಲಿ ಏರಿಳಿತ ಇರುತ್ತದೆ. ನೀರಿರುವ ಪ್ರದೇಶದಲ್ಲಿ ಎಚ್ಚರಿಕೆ ಇರಲಿ. ಸಂಗಾತಿಯ ಕಾರಣದಿಂದ ಆತ್ಮೀಯರೊಬ್ಬರು ನಿಮ್ಮಿಂದ ದೂರವಾಗುತ್ತಾರೆ. ಅನಾವಶ್ಯಕ ವಿಚಾರಗಳಿಗೆ ಯೋಚನೆ ಮಾಡುವಿರಿ. ನಿಮ್ಮ ನೇರವಾದ ನಡೆನುಡಿಯ ಕಾರಣ ವಿರೋಧಿಗಳು ಹೆಚ್ಚುತ್ತಾರೆ. ದುಡುಕದೆ ಲಾಭದಾಯಕ ಕೆಲಸ ಕಾರ್ಯಗಳನ್ನು ಮಾಡುವಿರಿ. ಮಕ್ಕಳ ವಿಚಾರವಾಗಿ ಆತ್ಮೀಯರೊಂದಿಗೆ ಮನಸ್ತಾಪ ಉಂಟಾಗುತ್ತದೆ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಇರುತ್ತದೆ. ಪರಿಸ್ಥಿತಿಯ ಒತ್ತಡಕ್ಕೆ ಮಣಿದು ಹಣಕಾಸಿನ ವ್ಯವಹಾರವೊಂದನ್ನು ಆರಂಭಿಸುವಿರಿ. ಯಾರ ಬಗ್ಗೆಯೂ ತಪ್ಪು ಅಭಿಪ್ರಾಯ ಮೂಡುವುದಿಲ್ಲ. ಮನಸ್ಸಿಗೆ ಶಾಂತಿ ಇರುವುದಿಲ್ಲ.

ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಕಂದು

ವೃಶ್ಚಿಕ

ಪೂರ್ಣ ಜ್ಞಾನ ಗಳಿಸಿದ ನಂತರ ಕೆಲಸ ಕಾರ್ಯಗಳನ್ನು ಆರಂಭಿಸುವಿರಿ. ಯಾವುದೇ ತಾರತಮ್ಯ ಮಾಡದೆ ಎಲ್ಲರನ್ನೂ ಒಂದೇ ದೃಷ್ಟಿಯಿಂದ ನೋಡುವಿರಿ. ವಯಸ್ಸಿನ ಅಂತರವಿಲ್ಲದೆ ಎಲ್ಲರನ್ನೂ ಗೌರವಿಸುವಿರಿ. ಕೇವಲ ಕುಟುಂಬವಲ್ಲದೆ ಸಮಾಜದಲ್ಲಿಯೂ ನಿಮಗೆ ವಿಶೇಷ ಗೌರವ ದೊರೆಯುತ್ತದೆ. ನಿಮ್ಮ ತಾಯಿಗೆ ಶೀತ ಅಥವಾ ಕಫದ ದೋಷ ಉಂಟಾಗುತ್ತದೆ. ವಿದ್ಯಾರ್ಥಿಗಳು ದೊಡ್ಡಮಟ್ಟದ ಸಾಧನೆ ಮಾಡುತ್ತಾರೆ. ಮಹಿಳೆಯರಾದಲ್ಲಿ ತಪ್ಪಿಲ್ಲದಿದ್ದರೂ ವಿವಾದಕ್ಕೆ ಸಿಲುಕುವಿರಿ. ಸದಾ ಒಳ್ಳೆಯ ಕೆಲಸ ಕಾರ್ಯಗಳನ್ನು ಮಾಡುವಿರಿ. ಆರಂಭಿಸುವ ಕೆಲಸ ಕಾರ್ಯಗಳಲ್ಲಿ ಆರಂಭದಲ್ಲಿ ಅಡಚಣೆ ಎದುರಾಗುತ್ತದೆ. ವಿಶ್ರಾಂತಿ ಇಲ್ಲದೆ ದುಡಿಯಬೇಕಾಗುತ್ತದೆ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಕೆಂಪು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).