ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಕಣ್ಣಿನ ಸಮಸ್ಯೆ ಕಾಡಲಿದೆ, ಕಲುಷಿತ ಆಹಾರ ಸೇವನೆಯಿಂದ ಅನಾರೋಗ್ಯ ಉಲ್ಬಣ; ಧನಸ್ಸು, ಮಕರ, ಕುಂಭ, ಮೀನ ರಾಶಿ ಭವಿಷ್ಯ

ಕಣ್ಣಿನ ಸಮಸ್ಯೆ ಕಾಡಲಿದೆ, ಕಲುಷಿತ ಆಹಾರ ಸೇವನೆಯಿಂದ ಅನಾರೋಗ್ಯ ಉಲ್ಬಣ; ಧನಸ್ಸು, ಮಕರ, ಕುಂಭ, ಮೀನ ರಾಶಿ ಭವಿಷ್ಯ

9 ಜೂನ್‌ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (9th June 2024 Daily Horoscope).

ಧನಸ್ಸು, ಮಕರ, ಕುಂಭ, ಮೀನ ರಾಶಿ ಭವಿಷ್ಯ
ಧನಸ್ಸು, ಮಕರ, ಕುಂಭ, ಮೀನ ರಾಶಿ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(9th June 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಭಾನುವಾರ

ತಿಥಿ: ತದಿಗೆ 04.05 ರವರೆಗೂ ಇರುತ್ತದೆ ನಂತರ ಚೌತಿ ಆರಂಭವಾಗುತ್ತದೆ.

ನಕ್ಷತ್ರ : ಪುನರ್ವಸು ನಕ್ಷತ್ರ ರಾತ್ರಿ 09.11 ರವರೆಗೂ ಇದ್ದು ನಂತರ ಪುಷ್ಯ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.44

ರಾಹುಕಾಲ: ಸಂಜೆ 05.11 ರಿಂದ ಸ. 06.47

ರಾಶಿಫಲ

ಧನಸ್ಸು

ಸಾಮಾನ್ಯವಾಗಿ ಶಾಂತರಾದ ನೀವು ಕೋಪ ಬಂದಾಗ ಉದ್ವೇಗದಿಂದ ವರ್ತಿಸುವಿರಿ. ಆತುರದ ತೀರ್ಮಾನದಿಂದ ಕೆಲಸ ಕಾರ್ಯಗಳಲ್ಲಿ ಹಿನ್ನೆಡೆ ಲಭಿಸುತ್ತದೆ. ಮಾನಸಿಕ ಒತ್ತಡ ಸದಾ ಇರಲಿದೆ. ವಿರೋಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುತ್ತಾರೆ. ಮಕ್ಕಳಿಗೆ ಎಲ್ಲಾ ರೀತಿಯ ಸೌಕರ್ಯವನ್ನು ಕಲ್ಪಿಸುವಿರಿ. ವಿದ್ಯಾರ್ಥಿಗಳು ವಿಶೇಷವಾದ ಸಾಧನೆ ಮತ್ತು ಗೌರವಕ್ಕೆ ಪಾತ್ರರಾಗುತ್ತಾರೆ. ದೈಹಿಕ ದೌರ್ಬಲ್ಯ ನಿಮ್ಮನ್ನು ಕಾಡಲಿದೆ. ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗಲಿವೆ. ಆದರೆ ಆದಾಯದಲ್ಲಿಯೂ ಚೇತರಿಕೆ ಕಂಡು ಬರಲಿದೆ. ಆತ್ಮೀಯರಿಗೆ ಕಷ್ಟದ ಸಂದರ್ಭದಲ್ಲಿ ಸಹಾಯ ಹಸ್ತ ನೀಡುವಿರಿ. ಬಹುದಿನದ ಹಿಂದೆ ಯೋಚಿಸಿದ್ದ ಪ್ರವಾಸವನ್ನು ರದ್ದುಗೊಳಿಸುವಿರಿ.

ಪರಿಹಾರ : ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕಿತ್ತಳೆ

ಮಕರ

ಪೂರ್ವಯೋಜನೆ ಇಲ್ಲದೆ ಯಾವುದೇ ಕೆಲಸವನ್ನು ಆರಂಭಿಸುವುದಿಲ್ಲ. ಸಮಯ ಸಂದರ್ಭಕ್ಕೆ ಅನುಸಾರವಾಗಿ ವರ್ತಿಸುವಿರಿ. ನಿಮ್ಮ ತಾಯಿಯವರಿಂದ ಎಲ್ಲಾ ರೀತಿಯ ಸಹಾಯ ಸಹಕಾರ ದೊರೆಯುತ್ತದೆ. ನೀವು ವಾಯುದೋಷದಿಂದ ಬಳಲುವಿರಿ. ಕಲುಷಿತ ಆಹಾರ ಸೇವನೆಯಿಂದ ತೊಂದರೆ ಉಂಟಾಗಬಹುದು. ಅವಶ್ಯಕವಿಲ್ಲದ ಕೆಲಸ ಕಾರ್ಯಗಳಿಗೆ ಹಣ ಖರ್ಚು ಮಾಡುವಿರಿ. ಕೋಪದಲ್ಲಿ ತಪ್ಪು ಮಾಡಿ ನಂತರ ಪಶ್ಚಾತಾಪ ಪಡುವಿರಿ. ಮುಖ್ಯವಾಗಿ ಗೃಹಿಣಿಯರು ಆರೋಗ್ಯದ ಬಗ್ಗೆ ಗಮನವಹಿಸಬೇಕು. ಆತ್ಮೀಯ ಸ್ನೇಹಿತರೊಬ್ಬರು ನಿಮ್ಮ ತಪ್ಪನ್ನು ತಿದ್ದುತ್ತಾರೆ. ಯಾವುದೇ ವಿಚಾರದಲ್ಲೂ ದೃಢ ನಿಲುವನ್ನು ತೆಗೆದುಕೊಳ್ಳುವುದಿಲ್ಲ. ಅವಶ್ಯಕವಾದ ವಿಚಾರಗಳನ್ನು ಸಹ ಮುಂದೂಡುವಿರಿ.

ಪರಿಹಾರ : ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಹಳದಿ

ಕುಂಭ

ಚರ್ಮದ ತೊಂದರೆ ಉಂಟಾಗಬಹುದು. ದೇಹದ ತೂಕ ಕಡಿಮೆ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗುವಿರಿ. ಕೆಲವೊಮ್ಮೆ ತಪ್ಪಾದ ನಿರ್ಣಯಗಳನ್ನು ತೆಗೆದುಕೊಳ್ಳುವಿರಿ. ಸಣ್ಣ ಪುಟ್ಟ ವಿಚಾರಗಳಿಗೂ ಕೋಪದಿಂದ ವರ್ತಿಸುವಿರಿ. ಸಭೆ ಸಮಾರಂಭಗಳಲ್ಲಿ ಮೌನದಿಂದ ವರ್ತಿಸುವಿರಿ. ಹಣದ ತೊಂದರೆ ಇರುವುದಿಲ್ಲ. ರುಚಿಕರವಾದ ಭೋಜನವನ್ನು ಇಷ್ಟಪಡುವಿರಿ. ಮನಸ್ಸಿನಲ್ಲಿ ಯಾವುದೋ ಒಂದು ಚಿಂತೆ ಮನೆ ಮಾಡಿರುತ್ತದೆ. ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳು ನಿಮ್ಮ ಪರವಾಗಿರುತ್ತಾರೆ. ಕಣ್ಣಿನ ದೋಷ ಇರುತ್ತದೆ. ನಿಷ್ಠೆಯಿಂದ ನಿಮ್ಮ ಕೆಲಸ ಕಾರ್ಯಗಳನ್ನು ಪೂರೈಸುವಿರಿ. ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಗಳಿಸುವಿರಿ. ಯಂತ್ರೋಪಕರಣಗಳಿಂದ ತೊಂದರೆ ಉಂಟಾಗಬಹುದು ಎಚ್ಚರಿಕೆ ವಹಿಸಿ. ಬಳಸುತ್ತಿರುವ ವಾಹನವನ್ನು ಬದಲಿಸುವಿರಿ.

ಪರಿಹಾರ : ಪುಟ್ಟ ಮಕ್ಕಳಿಗೆ ಬೆಣ್ಣೆನೀಡಿ ಇಂದಿನ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಹಸಿರು

ಮೀನ

ಅನಾರೋಗ್ಯದ ಕಾರಣ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿಯುತ್ತಾರೆ. ದುಡುಕದೆ ತಾಳ್ಮೆಯಿಂದ ಎಲ್ಲರೊಡನೆ ವರ್ತಿಸುವಿರಿ. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹೆಚ್ಚು ಹಣ ಹೊಂದಿಸಬೇಕಾಗುತ್ತದೆ. ಅನಿರೀಕ್ಷಿತ ಶುಭ ಫಲಗಳು ದೊರೆಯುತ್ತವೆ. ಬಂಧು ಬಳಗದವರ ಜೊತೆ ಉತ್ತಮ ಬಾಂಧವ್ಯ ಇರುತ್ತದೆ. ಹಣಕಾಸಿನ ಪರಿಸ್ಥಿತಿಯಲ್ಲಿ ಪ್ರಗತಿ ಕಂಡುಬರುತ್ತದೆ. ಮನೆಗೆ ಬೇಕಾದ ಅಲಂಕಾರದ ವಸ್ತುಗಳಿಗೆ ಹೆಚ್ಚು ಹಣ ಖರ್ಚು ಮಾಡುವಿರಿ. ಅವಿವಾಹಿತರಿಗೆ ವಿವಾಹ ಯೋಗವಿದೆ. ಕುಟುಂಬದವ ಜೊತೆಯಲ್ಲಿ ದೀರ್ಘಕಾಲದ ಪ್ರವಾಸಕ್ಕೆ ತೆರಳುವಿರಿ. ಕಲಾವಿದರಿಗೆ ಉತ್ತಮ ಅವಕಾಶಗಳು ದೊರೆಯಲಿವೆ. ಹಣಕಾಸಿನ ಯೋಜನೆಯಲ್ಲಿ ಹಣವನ್ನು ತೊಡಗಿಸುವಿರಿ. ಶುಭಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಪರಸ್ಥಳಕ್ಕೆ ತೆರಳುವಿರಿ.

ಪರಿಹಾರ : ಕೈ ಅಥವಾ ಕಾಲಿನಲ್ಲಿ ಕಪ್ಪು ದಾರ ಧರಿಸುವದರಿಂದ ಶುಭವಿರುತ್ತದೆ

ಅದೃಷ್ಟದ ಸಂಖ್ಯೆ 11

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ನೀಲಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).