ಕನ್ನಡ ಸುದ್ದಿ  /  Astrology  /  Horoscope Today Astrology Prediction For 20th March 2024 Sagittarius Capricorn Aquarius Pisces Sts

Horoscope Today: ಸಾಲದ ವ್ಯವಹಾರದಿಂದ ಸಮಸ್ಯೆ, ಕುಟುಂಬದ ಹಿರಿಯರ ಆರೋಗ್ಯದಲ್ಲಿ ಏರಿಳಿತ; ಮಾರ್ಚ್‌ 20ರ ದಿನ ಭವಿಷ್ಯ

20 ಮಾರ್ಚ್‌ 2024, ಬುಧವಾರ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (20th March 2024 Daily Horoscope).

ಧನು, ಮಕರ, ಕುಂಭ, ಮೀನ ರಾಶಿಫಲ
ಧನು, ಮಕರ, ಕುಂಭ, ಮೀನ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(20th March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯಣ-ಶಿಶಿರ ಋತು-ಫಾಲ್ಗುಣ ಮಾಸ-ಶುಕ್ಲಪಕ್ಷ-ಬುಧವಾರ

ತಿಥಿ : ಏಕಾದಶಿ ರಾತ್ರಿ 03.49 ರವರೆಗೂ ಇರುತ್ತದೆ ನಂತರ ದ್ವಾದಶಿ ಆರಂಭವಾಗುತ್ತದೆ

ನಕ್ಷತ್ರ : ಪುಷ್ಯ ನಕ್ಷತ್ರವು ರಾತ್ರಿ 12.14 ರವರೆಗೆ ಇರುತ್ತದೆ ನಂತರ ಆಶ್ಲೇಷ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 06.24

ಸೂರ್ಯಾಸ್ತ: ಸಂಜೆ 06.29

ರಾಹುಕಾಲ: ಮಧ್ಯಾಹ್ನ 12.00 ರಿಂದ 01.30

ದಿನದ ವಿಶೇಷ: ಇಂದು ಸರ್ವೇಷಾಮೇಕಾದಶಿ

ರಾಶಿಫಲ

ಧನಸ್ಸು

ಕುಟುಂಬದ ವಿಚಾರದಲ್ಲಿ ಸೂಕ್ತ ನಿರ್ಣಯ ತೆಗೆದುಕೊಳ್ಳಲಾರಿರಿ. ಅಂತಾರಾಷ್ಟ್ರೀಯ ಸಂಸ್ಥೆಯಲ್ಲಿ ಅಧಿಕಾರಯುತ ಸ್ಥಾನಮಾನ ದೊರೆಯುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಲಾಭದಾಯಕ ಬೆಳವಣಿಗೆ ಕಂಡುಬರುತ್ತದೆ. ವಿದ್ಯಾರ್ಥಿಗಳಿಗೆ ಕಲಿಕಾ ಅವಧಿಯಲ್ಲೇ ಉದ್ಯೋಗ ದೊರೆಯುತ್ತದೆ. ಕಷ್ಟದ ಸಮಯದಲ್ಲಿ ಸೋದರಿಯ ಆಸರೆ ದೊರೆಯುತ್ತದೆ. ಸಂತಾನ ಲಾಭವಿದೆ. ರಕ್ತ ದೋಷದ ತೊಂದರೆ ಇರುತ್ತದೆ. ಕೋಪ ಬಂದಷ್ಟೇ ಬೇಗ ಮರೆಯಾಗುತ್ತದೆ. ಪಾಲುದಾರಿಕೆಯ ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭವಿದೆ. ಧಾರ್ಮಿಕ ಕೇಂದ್ರಕ್ಕೆ ಹಣದ ಸಹಾಯ ಮಾಡುವಿರಿ. ಹೊಸ ನಿರೀಕ್ಷೆಯೊಂದಿಗೆ ದೈನಂದಿನ ಕೆಲಸ ಆರಂಭಿಸಿ. ತೆಗೆದುಕೊಂಡ ತೀರ್ಮಾನಗಳನ್ನು ಅನಾವಶ್ಯಕವಾಗಿ ಬದಲಿಸದಿರಿ.

ಪರಿಹಾರ : ಹಣೆಯಲ್ಲಿ ತಿಲಕ ಧರಿಸಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ

ಮಕರ

ಕುಟುಂಬದಲ್ಲಿ ಹೊಸ ನಿರೀಕ್ಷೆಗಳು ಮನೆ ಮಾಡಿರುತ್ತದೆ. ಆತ್ಮೀಯರ ಆಗಮನದಿಂದ ಸಂತಸ ಉಂಟುಮಾಡಲಿದೆ. ಉದ್ಯೋಗದಲ್ಲಿ ದಿನದಿಂದ ದಿನಕ್ಕೆ ಅಭಿವೃದ್ಧಿ ಕಂಡುಬರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಆದಾಯಕ್ಕೆ ತಕ್ಕಂತಹ ಖರ್ಚು ಎದುರಾಗುತ್ತದೆ. ವಿದ್ಯಾರ್ಥಿಗಳು ನೆಮ್ಮದಿಯಿಂದ ಕಾಲ ಕಳೆಯಲಿದ್ದಾರೆ. ಕೇವಲ ಪ್ರಯೋಜನಕಾರಿ ಕೆಲಸಗಳನ್ನು ಮಾತ್ರ ಆಯ್ದುಕೊಳ್ಳುವಿರಿ. ಉದ್ಯೋಗ ಬದಲಿಸುವ ವಿಚಾರವನ್ನು ಮತ್ತೊಮ್ಮೆ ಪರಿಶೀಲಿಸಿ. ವಂಶದ ಆಸ್ತಿಯ ವಿಚಾರದಲ್ಲಿ ದಿಟ್ಟ ನಿರ್ಧಾರ ಕೈಗೊಳ್ಳುವಿರಿ. ಬೇರೆಯವರ ಹಣಕಾಸಿನ ವ್ಯವಹಾರದಲ್ಲಿ ಮಧ್ಯಸ್ಥಿಕೆ ವಹಿಸದಿರಿ. ನಿಮ್ಮ ಅಧೀನದ ಉದ್ಯೋಗಿಗಳಿಗೆ ಸಹಾಯ ಮಾಡಿ. ಮನೆಯಲ್ಲಿರುವ ಪುಟ್ಟ ಮಕ್ಕಳಿಗೆ ಉಡುಗೊರೆಯೊಂದನ್ನು ನೀಡುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಹಾಲಿನ ಬಣ್ಣ

ಕುಂಭ

ಆತುರ ಪಡದೆ ಕುಟುಂಬದ ಎಲ್ಲರೊಂದಿಗೆ ಹೊಂದಿಕೊಂಡು ಹೋಗುವಿರಿ. ಆದರೆ ಅಸಂದರ್ಭ ಮಾತುಕತೆ ವಿವಾದವನ್ನು ಉಂಟುಮಾಡುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಎಲ್ಲರನ್ನೂ ಅನುಮಾನಿಸುವಿರಿ. ವಿದ್ಯಾರ್ಥಿಗಳು ಮಾತು ಕಡಿಮೆ ಮಾಡಿ ಕೆಲಸವನ್ನು ಹೆಚ್ಚು ಮಾಡುವರು. ಹಣಕಾಸಿನ ವಿಚಾರದಲ್ಲಿ ಸ್ವಂತ ನಿರ್ಧಾರದ ಮೇಲೆ ನಂಬಿಕೆ ಇರುತ್ತದೆ. ವಂಶದಲ್ಲೇ ವಿಶೇಷ ಸ್ಥಾನ ಮಾನ ದೊರೆಯುತ್ತದೆ. ಪಾಲುದಾರಿಕೆ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಸಾಲದ ವ್ಯವಹಾರ ಒಳ್ಳೆಯದಲ್ಲ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ಏರಿಳಿತ ಇರಲಿವೆ. ಮಕ್ಕಳ ಜೊತೆ ದೂರದ ಊರಿಗೆ ಪ್ರಯಾಣ ಬೆಳೆಸುವಿರಿ.

ಪರಿಹಾರ : ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಬೂದು ಬಣ್ಣ

ಮೀನ

ಕುಟುಂಬದಲ್ಲಿನ ಕೆಲಸ ಕಾರ್ಯಗಳು ನಿಧಾನಗತಿಯಲ್ಲಿ ನಡೆಯಲಿದೆ. ನೌಕರಿಗೆ ಸಂಬಂಧಿಸಿದ ಕೆಲಸವೊಂದು ಮುಂದೂಡಲ್ಪಡುತ್ತದೆ. ಉದ್ಯೋಗದಲ್ಲಿನ ಲೋಪ ದೋಷಗಳನ್ನು ಸರಿಪಡಿಸುವಿರಿ. ವಿದ್ಯಾರ್ಥಿಗಳು ಉನ್ನತ ಸ್ಥಾನಮಾನ ಗಳಿಸುತ್ತಾರೆ. ಸಂಗಾತಿಯು ಹಳೆಯ ಕೌಟುಂಬಿಕ ವಿವಾದಕ್ಕೆ ಪರಿಹಾರ ಸೂಚಿಸುತ್ತಾರೆ. ವಿದ್ಯಾರ್ಥಿಗಳು ಅಧ್ಕಯನದಲ್ಲಿ ಉನ್ನತ ಮಟ್ಟಕ್ಕೆ ತಲುಪುತ್ತಾರೆ. ದಂಪತಿಗಳ ನಡುವೆ ವಿರಸವಿರುತ್ತದೆ. ಧಾರ್ಮಿಕ ಕೇಂದ್ರ ಅಥವಾ ಬೋಧನಾ ಕೇಂದ್ರಗಳ ಒಡೆತನ ಲಭಿಸುತ್ತದೆ. ಇಷ್ಟ ಪಡುವ ಒಡವೆ ಮತ್ತು ವಸ್ತ್ರಗಳಿಗಾಗಿ ಹೆಚ್ಚಿನ ಹಣ ಖರ್ಚುಮಾಡುವಿರಿ. ಎಲ್ಲರ ಸಹಕಾರದಿಂದ ದಿನದ ಕೆಲಸವನ್ನು ಆರಂಭಿಸುವಿರಿ. ತಲೆನೋವಿನ ತೂಂದರೆ ಕಾಡಲಿದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಎಳನೀರು ಮತ್ತು ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ಆಕಾಶನೀಲಿ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).