Horoscope Today: ಕಷ್ಟಪಟ್ಟು ಹಣ ಉಳಿಸುವಿರಿ, ಆಡುವ ಮಾತಿನ ಮೇಲೆ ಎಚ್ಚರ ವಹಿಸಿ; ಮೇಷದಿಂದ ಕಟಕ ರಾಶಿಯವರೆಗಿನ ದಿನಭವಿಷ್ಯ
ಮಾರ್ಚ್ 1, ಶುಕ್ರವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (1 March 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (1 March 2024 Daily Horoscope).
ಇಂದಿನ ಪಂಚಾಂಗ
ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಾಘ ಮಾಸ, ಕೃಷ್ಣಪಕ್ಷ, ಶುಕ್ರವಾರ
ತಿಥಿ : ಷಷ್ಠಿ ರಾ.02.59 ರವರೆಗು ಇದ್ದು ಆನಂತರ ಸಪ್ತಮಿ ಆರಂಭವಾಗುತ್ತದೆ.
ನಕ್ಷತ್ರ : ಸ್ವಾತಿ ನಕ್ಷತ್ರವು ಬೆ.09.02 ರವರೆಗೆ ಇರುತ್ತದೆ. ಆನಂತರ ವಿಶಾಖ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆ.06.36
ಸೂರ್ಯಾಸ್ತ: ಸ.06.27
ರಾಹುಕಾಲ : ಬೆ.10.30 ರಿಂದ ಮ.12.00
ರಾಶಿ ಫಲಗಳು
ಮೇಷ
ಕುಟುಂಬದಲ್ಲಿ ಸಂತಸದ ಘಳಿಗೆಯೊಂದು ಎದುರಾಗಲಿದೆ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡುವಿರಿ. ತರಾತುರಿಯಲ್ಲಿ ಯಾವುದೇ ಕೆಲಸವನ್ನು ಮಾಡುವುದಿಲ್ಲ. ಹಳೆಯ ಸ್ನೇಹಿತರ ಸಹಾಯದಿಂದ ಉದ್ಯೋಗ ದೊರೆಯಲಿದೆ. ಹಿರಿಯರ ಮಾರ್ಗದರ್ಶನದಿಂದ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ಗಳಿಸುವಿರಿ. ಹಣಕಾಸಿನ ವ್ಯವಹಾರ ಒಂದರಲ್ಲಿ ನಿರಾಸೆ ಉಂಟಾಗುತ್ತದೆ. ವಿದ್ಯಾರ್ಥಿಗಳು ನಿಧಾನಗತಿಯಲ್ಲಿ ಕಲಿಕೆಯನ್ನು ಮುಂದುವರೆಸುತ್ತಾರೆ. ಪ್ರಕೃತಿಯ ಸಂತಸದ ಕ್ಷಣಗಳನ್ನು ಅನುಭವಿಸಲು ಪ್ರವಾಸಕ್ಕೆ ತೆರಳುವಿರಿ. ನಿಮ್ಮದೇ ತಪ್ಪಿನಿಂದಾಗಿ ಅನಾರೋಗ್ಯ ಉಂಟಾಗಬಹುದು. ಅನಿರೀಕ್ಷಿತವಾಗಿ ಹಣದ ಸಹಾಯ ಒದಗಿ ಬರುತ್ತದೆ. ಹಣದ ಕೊರತೆ ಇದ್ದರೂ ಕಷ್ಟದಲ್ಲಿದ್ದವರಿಗೆ ಸಹಾಯ ಮಾಡುವಿರಿ.
ಪರಿಹಾರ : ಸಾಧು ಸಂತರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 6
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಕೇಸರಿ ಬಣ್ಣ
ವೃಷಭ
ಕ್ಷಿಪ್ರ ಗತಿಯಲ್ಲಿ ಕೆಲಸ ಕಾರ್ಯಗಳನ್ನು ಆರಂಭಿಸುವಿರಿ. ಕುಟುಂಬದಲ್ಲಿ ಎಲ್ಲರ ಮನಸ್ಸಿನ ಯೋಚನೆಯು ಒಂದೇ ಆಗಿರುತ್ತದೆ. ಚುರುಕಿನ ಬುದ್ಧಿ ಎಲ್ಲರಲ್ಲೂ ಆಶ್ಚರ್ಯ ಮೂಡಿಸುತ್ತದೆ. ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ಸ್ವಂತ ಕೆಲಸ ಕಾರ್ಯಗಳ ನಂತರ ಬೇರೆಯವರಿಗೆ ಸಹಾಯ ಮಾಡುವಿರಿ. ಉದ್ಯೋಗದಲ್ಲಿ ಯಾವುದೇ ಬದಲಾವಣೆಗಳು ಕಾಣುವುದಿಲ್ಲ. ನಿಮ್ಮ ನಿರೀಕ್ಷೆಯಂತೆ ಫಲಿತಾಂಶಗಳು ಮನಸ್ಸಿನಲ್ಲಿ ನೆಮ್ಮದಿ ಇರುತ್ತದೆ. ಕಷ್ಟಪಟ್ಟು ಹಣವನ್ನು ಉಳಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಆಸಕ್ತಿ ಇರುವುದಿಲ್ಲ. ಸಮಯ ವ್ಯರ್ಥ ಮಾಡುವ ಜನರನ್ನು ವಿರೋಧಿಸುವಿರಿ. ಮಕ್ಕಳ ಬಗ್ಗೆ ಹೆಚ್ಚಿನ ಗಮನ ನೀಡುವಿರಿ. ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸಲು ಪ್ರಯತ್ನ ಮಾಡಲಿದ್ದಾರೆ. ಕೈಕಾಲುಗಳ ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ.
ಪರಿಹಾರ : ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸುವುದು.
ಅದೃಷ್ಟದ ಸಂಖ್ಯೆ : 9
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ : ಮಣ್ಣಿನ ಬಣ್ಣ
ಮಿಥುನ
ಕುಟುಂಬದ ಕೆಲಸ ಕಾರ್ಯಗಳು ಪೂರ್ಣಗೊಳ್ಳುತ್ತವೆ. ಬೇರೆಯವರ ಸಹಾಯವಿಲ್ಲದೆ ಯಾವುದೇ ಕೆಲಸ ಆರಂಭಿಸುವುದಿಲ್ಲ. ಉದ್ಯೋಗದಲ್ಲಿ ಸಮಸ್ಯೆಯೊಂದು ಎದುರಾಗಲಿದೆ. ಆದರೂ ಕಿರಿಯ ಅಧಿಕಾರಿಗಳು ಸೂಕ್ತ ಪರಿಹಾರ ಸೂಚಿಸುತ್ತಾರೆ. ವ್ಯಾಪಾರ ವ್ಯವಹಾರಗಳಲ್ಲಿ ಲಾಭ ನಷ್ಟಗಳು ಸರಿದೂಗಲಿವೆ. ಜನೋಪಕಾರಿ ಕೆಲಸಗಳಲ್ಲಿ ಆಸಕ್ತಿ ತೋರವಿರಿ. ಸಮಾಜದ ನಾಯಕತ್ವ ವಹಿಸುವಿರಿ. ಕಷ್ಟಕ್ಕೆಂದು ಪಡೆದ ಹಣವನ್ನು ಮರಳಿ ನೀಡುವಿರಿ. ವಿದ್ಯಾರ್ಥಿಗಳು ಸಮಯವನ್ನು ಗೌರವಿಸಿ ತಮ್ಮ ಕರ್ತವ್ಯದಲ್ಲಿ ಭಾಗಿಯಾಗುತ್ತಾರೆ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗುತ್ತದೆ. ಕುಟುಂಬದ ಹಣಕಾಸಿನ ಸಮಸ್ಯೆ ಬಗೆಹರಿಯುತ್ತದೆ. ಹಣದ ಮೇಲೆ ಹೆಚ್ಚಿನ ವ್ಯಾಮೋಹ ಇರುವುದಿಲ್ಲ.
ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 12
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಕೆಂಪು ಬಣ್ಣ
ಕಟಕ
ಕಳೆದು ಹೋದ ಚೈತನ್ಯವನ್ನು ಮರಳಿ ಗಳಿಸಲು ಸ್ನೇಹಿತರ ಸಹಾಯ ದೊರೆಯುತ್ತದೆ. ಕುಟುಂಬದಲ್ಲಿ ನಿಧಾನಗತಿಯಲ್ಲಿ ನಡೆದ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿವೆ. ಕುಟುಂಬಕ್ಕೆ ನಿಮ್ಮ ಅನಿವಾರ್ಯತೆ ಹೆಚ್ಚಿನದಾಗಿರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ನಷ್ಟ ಉಂಟಾಗುವುದಿಲ್ಲ. ಹಣದ ಕೊರತೆ ಕಂಡು ಬಂದರೆ ಸಿಡುಕಿನಿಂದ ವರ್ತಿಸುವಿರಿ. ವಿದ್ಯಾರ್ಥಿಗಳು ಮನರಂಜನೆಯನ್ನು ಮರೆತು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒಲವು ನೀಡಲಿದ್ದಾರೆ. ನಿಮ್ಮ ಕಷ್ಟದ ನಡುವೆಯೂ ಬಂಧು ಬಳಗದವರಿಗೆ ಸಹಾಯ ಮಾಡುವಿರಿ. ಆಡುವ ಮಾತಿನ ಮೇಲೆ ಎಚ್ಚರಿಕೆ ವಹಿಸಿ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ವಿಶೇಷ ಅಧಿಕಾರ ದೊರೆಯಲಿದೆ. ಸಂಗಾತಿಯ ಜೊತೆ ಉತ್ತಮ ಸಂಬಂಧ ಏರ್ಪಡುತ್ತದೆ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೆಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ
----------
ಜ್ಯೋತಿಷಿ: ಎಚ್. ಸತೀಶ್, ಬೆಂಗಳೂರು
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).