Horoscope Today: ಕೋಪ ಬದಿಗಿಟ್ರೆ ಕೆಲಸ-ಕಾರ್ಯಗಳಲ್ಲಿ ಯಶಸ್ಸು, ದಂಪತಿಗಳ ನಡುವಿನ ಬೇಸರ ದೂರ; ಮೇಷದಿಂದ ಕಟಕ ರಾಶಿಯವರೆಗಿನ ದಿನಭವಿಷ್ಯ
ಮಾರ್ಚ್ 11, ಸೋಮವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (11 March 2024 Daily Horoscope).

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (11 March 2024 Daily Horoscope).
ಇಂದಿನ ಪಂಚಾಂಗ
ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲಪಕ್ಷ, ಸೋಮವಾರ
ತಿಥಿ : ಪಾಡ್ಯ ಬೆ.12.58 ರವರೆಗು ಇದ್ದು ಆನಂತರ ಬಿದಿಗೆ ಆರಂಭವಾಗುತ್ತದೆ.
ನಕ್ಷತ್ರ : ಉತ್ತರಾಭಾದ್ರ ನಕ್ಷತ್ರವು ರಾ.01.58 ರವರೆಗೆ ಇರುತ್ತದೆ. ಆನಂತರ ರೇವತಿ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆ.06.29
ಸೂರ್ಯಾಸ್ತ: ಸ.06.29
ರಾಹುಕಾಲ : ಬೆ. 07.30 ರಿಂದ ಬೆ.09.00
ರಾಶಿ ಫಲಗಳು
ಮೇಷ
ನಿರೀಕ್ಷಿಸಿದ ಸಹಾಯ ಸಹಕಾರ ದೊರಕುವ ಕಾರಣ ಕುಟುಂಬದಲ್ಲಿ ನೆಮ್ಮದಿ ಇರುತ್ತದೆ. ನಿಮಗೆ ಇಷ್ಟವೆನಿಸುವ ವಸ್ತು ಒಂದನ್ನು ಕಳೆದುಕೊಳ್ಳಬಹುದು ಎಚ್ಚರಿಕೆ ಇರಲಿ. ಸಂಗಾತಿಯ ಸ್ವಂತ ವಿಚಾರಗಳಿಂದ ದೂರವಿರುವುದು ಕ್ಷೇಮಕರ. ಯಾರ ಮೇಲೆ ಆದರು ಕೋಪಿಸಿಕೊಳ್ಳುವ ಮೊದಲು ವಿಚಾರ ವಿನಿಮಯದಲ್ಲಿ ತೊಡಗಿರಿ. ಒಬ್ಬರನ್ನೊಬ್ಬರು ಅರ್ಥ ಮಾಡಿಕೊಂಡು ಮುಂದುವರೆಯಲು ಪ್ರಯತ್ನಿಸಿ. ಕುಟುಂಬದ ಸಮಸ್ಯೆಯೊಂದನ್ನು ಸುಲಭವಾಗಿ ಬಗೆಹರಿಸುವಿರಿ. ಹಗಲುಗನಸು ಕಾಣುವಿರಿ. ಕುಟುಂಬದ ಕಿರಿಯ ಸದಸ್ಯರ ಜೊತೆ ಅನಪೇಕ್ಷಿತ ಮಾತುಕತೆ ನಡೆಯಲಿದೆ. ಬಿಡುವಿನ ವೇಳೆ ಕುಟುಂಬದವರ ಜೊತೆ ಪ್ರೀತಿ ಮಮತೆಯನ್ನು ಹಂಚಿಕೊಳ್ಳಲು ಪ್ರಯತ್ನಿಸಬೇಕು. ನೂತನ ವಿವಾಹಿತರು ಸಂತಸದಿಂದ ಬಾಳ್ವೆ ಮಾಡುತ್ತಾರೆ. ಸಂಜೆಯ ವೇಳೆ ಎಲ್ಲರ ಜೊತೆಯಲ್ಲಿ ವಾಯುವಿಹಾರಕ್ಕೆ ತೆರಳುವಿರಿ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 6
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಹೊಗೆಯ ಬಣ್ಣ
ವೃಷಭ
ಕುಟುಂಬದ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಹಿಡಿಯುವಿರಿ. ಸದಾಕಾಲ ನಗುನಗುತ್ತಾ ಬಾಳುವಿರಿ. ಪಾಲುಗಾರಿಕೆಯ ವ್ಯಾಪಾರದಲ್ಲಿ ವರಮಾನ ಇರಲಿದೆ. ಯಾವುದೇ ವಿಚಾರದಲ್ಲಿ ಆತುರದ ನಿರ್ಧಾರವನ್ನು ತೆಗೆದುಕೊಳ್ಳದಿರಿ. ಹಣಕಾಸಿನ ಕೊರತೆ ಕಾಡಬಹುದು. ಉದ್ಯೋಗದಲ್ಲಿ ಯಾವುದೇ ರೀತಿಯ ಬೆಳವಣಿಗೆ ಕಾಣುವುದಿಲ್ಲ ದಂಪತಿಗಳ ನಡುವೆ ಉತ್ತಮ ಹೊಂದಾಣಿಕೆ ಕಂಡು ಬರುತ್ತದೆ. ಅಶಕ್ತರ ಪರವಾಗಿ ಕೆಲಸ ಮಾಡುವಿರಿ. ಹೊಸಜನರ ಸಹವಾಸ ಗೆಲುವಿಗೆ ನಾಂದಿಯಾಗುತ್ತದೆ. ಎಲ್ಲರ ದೃಷ್ಟಿಯಲ್ಲಿ ಆಪದ್ಬಾಂಧವನಂತೆ ಕಾಣುವಿರಿ. ಹೊಸ ವಾಹನವನ್ನು ಕೊಳ್ಳುವ ಯೋಜನೆ ರೂಪಿಸುವಿರಿ ವಿದ್ಯಾರ್ಥಿಗಳು ಸಮಯಾನುಸಾರವಾಗಿ ನಡೆದುಕೊಂಡು ಎಲ್ಲರ ಮನ ಗೆಲ್ಲುತ್ತಾರೆ. ಗರಿಗರಿ ತಿಂಡಿ ಪದಾರ್ಥಗಳಿಂದ ದೂರವಿರಿ
ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 9
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ : ನೀಲಿ ಬಣ್ಣ
ಮಿಥುನ
ಸವಾಲೆನಿಸುವ ಕೆಲಸಕಾರ್ಯಗಳಿಗೆ ಪ್ರಥಮ ಆದ್ಯತೆ ನೀಡುವಿರಿ. ಇದರಿಂದ ಕುಟುಂಬದ ಒಗ್ಗಟ್ಟಿಗೆ ಧಕ್ಕೆ ಬರಲಿದೆ. ಹಣಕಾಸಿನ ತೊಂದರೆ ಕಾಣುವುದಿಲ್ಲ. ಗಡಿಬಿಡಿಯಿಂದ ತೆಗೆದುಕೊಳ್ಳುವ ತೀರ್ಮಾನ ವಿವಾದಕ್ಕೆ ಕಾರಣವಾಗಲಿದೆ. ಅತಿ ಸಣ್ಣ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ. ಮರೆಯಲಾಗದಂತಹ ಕೆಲಸವನ್ನು ಹಮ್ಮಿಕೊಳ್ಳುವಿರಿ. ನಿಮ್ಮಲ್ಲಿ ಹುದುಗಿರುವ ಪ್ರತಿಭೆಯನ್ನು ತೋರಿಸಲು ಅವಕಾಶವೊಂದು ದೊರೆಯಲಿದೆ. ಕೈ ಜಾರಿದ ಅವಕಾಶವೊಂದು ಮತ್ತೊಮ್ಮೆ ದೊರೆಯಲಿದೆ. ಕೋಪವನ್ನು ಬದಿಗಿಟ್ಟು ಪ್ರೀತಿ ವಿಶ್ವಾಸದಿಂದ ನಡೆದುಕೊಂಡರೆ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯುತ್ತದೆ. ಉದ್ಯೋಗದಲ್ಲಿ ಉಂಟಾಗುವ ಬದಲಾವಣೆಗಳು ಅನುಕೂಲಕರವಾಗಿರುತ್ತದೆ. ವಿದ್ಯಾರ್ಥಿಗಳು ವಿಶೇಷ ವಿಚಾರಗಳ ಅಧ್ಯಯನದಿಂದ ಜ್ಞಾನವನ್ನು ಬೆಳೆಸಿಕೊಳ್ಳುತ್ತಾರೆ. ನಿಖರವಾದ ಪ್ರಯೋಜನ ದೊರೆಯುವ ಹೊಸ ವ್ಯಾಪಾರದ ಒಡಂಬಡಿಕೆಯನ್ನು ಮಾಡಿಕೊಳ್ಳುವೆವಿರಿ.
ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಖಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 12
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ನೇರಳೆ ಬಣ್ಣ
ಕಟಕ
ಅತಿಯಾದ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸುವಿರಿ. ಹಿರಿಯರ ಮಾರ್ಗದರ್ಶನದಲ್ಲಿ ಸುಖ ಜೀವನವನ್ನು ನಡೆಸುವಿರಿ. ಸಾಲದ ವ್ಯವಹಾರದಿಂದ ತೊಂದರೆ ಉಂಟಾಗಬಹುದು. ಒಮ್ಮೆ ತೆಗೆದುಕೊಂಡ ನಿರ್ಧಾರವನ್ನು ಬದಲಾಯಿಸುವುದಿಲ್ಲ. ಸ್ನೇಹಿತರ ಜೊತೆಯಲ್ಲಿ ಉತ್ತಮ ಬಾಂಧವ್ಯ ಉಳಿಸಿಕೊಳ್ಳುವಿರಿ. ದುಡುಕಿನಿಂದ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಯಾವ ಮನಸ್ಸಿಗೂ ನೋವುಂಟು ಮಾಡದೆ ಕೆಲಸದಲ್ಲಿ ತೊಡಗುವಿರಿ. ದಂಪತಿಗಳ ನಡುವಿನ ಬೇಸರವು ದೂರವಾಗಲಿದೆ. ನಿಮ್ಮ ಉದ್ಯೋಗವನ್ನು ಬದಲಿಸುವ ನಿರ್ಧಾರವನ್ನು ಕೈ ಬಿಡುವಿರಿ. ಉತ್ತಮ ಆದಾಯ ನೀಡುವ ವ್ಯಾಪಾರೋದ್ಯಮಕ್ಕೆ ಹೆಚ್ಚಿನ ಒತ್ತು ನೀಡುವಿರಿ. ಆರೋಗ್ಯದಲ್ಲಿ ಏರಿಳಿತ ಇರಲಿದೆ.
ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಎಲೆಹಸಿರು ಬಣ್ಣ
-------------
ಜ್ಯೋತಿಷಿ: ಎಚ್. ಸತೀಶ್, ಬೆಂಗಳೂರು
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
