ಕನ್ನಡ ಸುದ್ದಿ  /  Astrology  /  Horoscope Today Astrology Prediction In Kannada 12 March 2024 Aries Taurus Gemini Cancer Daily Horoscope Sts

Horoscope Today: ಹಿಂದೊಮ್ಮೆ ಯೋಚಿಸಿದ ಹಣದ ಲಾಭ ಈಗ ಸಿಗತ್ತೆ, ವೃತ್ತಿ ಕ್ಷೇತ್ರದಲ್ಲಿ ಪ್ರಶಂಸೆ; ಮೇಷದಿಂದ ಕಟಕ ರಾಶಿಯವರೆಗಿನ ದಿನಭವಿಷ್ಯ

ಮಾರ್ಚ್​ 12, ಮಂಗಳವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (12 March 2024 Daily Horoscope).

ಮಾರ್ಚ್​ 12ರ ದಿನಭವಿಷ್ಯ
ಮಾರ್ಚ್​ 12ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (12 March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲಪಕ್ಷ, ಮಂಗಳವಾರ

ತಿಥಿ : ಬಿದಿಗೆ ಬೆ.10.37ರವರೆಗು ಇದ್ದು ಆನಂತರ ತದಿಗೆ ಆರಂಭವಾಗುತ್ತದೆ.

ನಕ್ಷತ್ರ : ರೇವತಿ ನಕ್ಷತ್ರವು ರಾ.12.26 ರವರೆಗೆ ಇರುತ್ತದೆ. ಆನಂತರ ಅಶ್ವಿನಿ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.29

ಸೂರ್ಯಾಸ್ತ: ಸ.06.29

ರಾಹುಕಾಲ : ಬೆ. 03.00 ರಿಂದ ಮ.04.30

ರಾಶಿ ಫಲಗಳು

ಮೇಷ

ಎದುರಾಗುವ ಸಮಸ್ಯೆಗಳಿಗೆ ಹೆದರದೆ ಪಾಠ ಕಲಿತು ಹೊಸ ಜೀವನವನ್ನು ಆರಂಭಿಸುವಿರಿ. ಎಲ್ಲವನ್ನು ಮರೆತು ಕುಟುಂಬವು ಸಂತೋಷದಿಂದ ಇರುವಂತೆ ನೋಡಿಕೊಳ್ಳುವಿರಿ. ಹಿಂದೊಮ್ಮೆ ಯೋಚನೆಯಲ್ಲಿ ನೋಡಿದ ಹಣದ ಲಾಭ ಈಗ ದೊರೆಯುತ್ತದೆ. ಅನಿರೀಕ್ಷಿತ ಖರ್ಚುವೆಚ್ಚಗಳು ಎದುರಾಗುವ ಕಾರಣ ಆತಂಕವಿರುತ್ತದೆ. ವಿಶೇಷವಾದಂತಹ ಜನಾಕರ್ಷಕ ಶಕ್ತಿ ಇರುತ್ತದೆ. ಜನಸಾಮಾನ್ಯರಿಗೆ ಸಂಬಂಧಪಟ್ಟ ಕೆಲಸವನ್ನು ಆರಂಭಿಸುವಿರಿ. ಉದ್ಯೋಗದಲ್ಲಿ ಎದುರಾಗಿದ್ದ ಆತಂಕವು ನಿವಾರಣೆಯಾಗುತ್ತದೆ. ಜನಸೇವೆ ಮಾಡುವ ಇಂಗಿತವನ್ನು ವ್ಯಕ್ತಪಡಿಸುವಿರಿ. ತಪ್ಪನ್ನು ಮರೆತು ಕುಟುಂಬದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಿರಿ. ಹಿರಿಜನರ ಸಹಾಯ ಮತ್ತು ಸಹಕಾರ ದೊರೆಯುತ್ತದೆ. ಉತ್ತಮ ಆರೋಗ್ಯವಿರುತ್ತದೆ.

ಪರಿಹಾರ : ತಲೆಗೆ ಹಾಲನ್ನಿಟ್ಟು ಸ್ನಾನ ಮಾಡಿದ ನಂತರ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ನೀಲಿಮಿಶ್ರಿತ ಬಿಳಿ ಬಣ್ಣ

ವೃಷಭ

ಜಾಗರೂಕತೆ ಮತ್ತು ವೇಗವಾಗಿ ಕೆಲಸ ಕಾರ್ಯಗಳನ್ನು ಮುಕ್ತಾಯಗೊಳಿಸುವಿರಿ. ಮಕ್ಕಳೊಂದಿಗೆ ಸಂಜೆ ವೇಳೆಯಲ್ಲಿ ಮನರಂಜನೆಯಲ್ಲಿ ಕಾಲ ಕಳೆಯುವಿರಿ. ಕೆಲಸ ಕಾರ್ಯಗಳು ಸಫಲವಾಗುವವರೆಗೂ ಪ್ರಯತ್ನವನ್ನು ಮುಂದುವರಿಸುವಿರಿ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ಏರಿಳಿತ ಕಂಡು ಬರಬಹುದು. ಹಣಕಾಸಿನ ಕೊರತೆ ಕಡಿಮೆಯಾಗುತ್ತದೆ. ಒಳ್ಳೆಯ ಕೆಲಸಕಾರ್ಯಗಳಿಗೆ ಹಣ ವಿನಿಯೋಗಿಸುವಿರಿ. ಬಂಧು ಬಳಗದವರೊಂದಿಗೆ ಉತ್ತಮ ಬಾಂಧವ್ಯ ರೂಪಗೊಳ್ಳುತ್ತದೆ. ಉದ್ಯೋಗದಲ್ಲಿ ಯಾವುದೇ ತೊಂದರೆ ಕಾಣುವುದಿಲ್ಲ. ನಿಮ್ಮ ಕೆಲಸ ಕಾರ್ಯಗಳಿಗೆ ಕುಟುಂಬದ ಸದಸ್ಯರ ಸಹಕಾರ ದೊರೆಯುತ್ತದೆ. ಒಂಟಿತನ ಇಷ್ಟಪಡದೆ ಜನರೊಂದಿಗೆ ಸಂತೋಷದಿಂದ ಕಾಲ ಕಳೆಯಲು ಇಷ್ಟಪಡುವಿರಿ. ಮಕ್ಕಳ ಸಾಧನೆ ಮನಸ್ಸಿಗೆ ಆಹ್ಲಾದವನ್ನು ನೀಡುತ್ತದೆ.

ಪರಿಹಾರ : ಹಣೆಯಲ್ಲಿ ತಿಲಕವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಹಾಲಿನ ಬಣ್ಣ

ಮಿಥುನ

ಮಾನಸಿಕ ಶಕ್ತಿಯನ್ನು ಗಳಿಸಲು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಿರಿ. ಅನಾವಶ್ಯಕವಾಗಿ ತೆಗೆದುಕೊಂಡ ತೀರ್ಮಾನಗಳನ್ನು ಮುನ್ನೂಡುವಿರಿ. ಇದರಿಂದ ಕುಟುಂಬದ ಜನರ ವಿರೋಧವನ್ನು ಎದುರಿಸಬೇಕಾಗುತ್ತದೆ. ಬುದ್ದಿವಂತಿಕೆಯಿಂದ ಖರ್ಚು ವೆಚ್ಚಗಳನ್ನು ಕಡಿತಗೊಳಿಸುವಿರಿ. ವೃತ್ತಿ ಕ್ಷೇತ್ರದಲ್ಲಿ ಅಚ್ಚರಿಯ ಘಟನೆಯೊಂದು ನಡೆಯಲಿದೆ. ಹಿರಿಯ ಅಧಿಕಾರಿಗಳು ಬದಲಾಗುತ್ತಾರೆ. ವೃತ್ತಿ ಕ್ಷೇತ್ರದಲ್ಲಿ ಪ್ರಶಂಸೆ ಗಳಿಸುವಿರಿ. ಸದಾಕಾಲ ನಿಮ್ಮ ಸುತ್ತಮುತ್ತಲ ಆತ್ಮೀಯರ ಗುಂಪು ಇರುತ್ತದೆ. ಜನರ ಗುಂಪಿನಿಂದ ದೂರವಿದ್ದು ಏಕಾಂತದ ಜೀವನವನ್ನು ಇಷ್ಟಪಡುವಿರಿ. ಸಂಗಾತಿಯ ನಡುವಳಿಕೆಯು ಸಂತಸವನ್ನು ಉಂಟುಮಾಡುತ್ತದೆ. ಸದಾಕಾಲ ಒತ್ತಡದಲ್ಲಿ ಕೆಲಸ ಆರಂಭಿಸುವಿರಿ. ಹಣಕಾಸಿನ ಕೊರತೆ ಕಂಡು ಬರುವುದಿಲ್ಲ. ಸಂಪಾದಿಸಿದ ಹಣದ ಒಂದು ಭಾಗವನ್ನು ಜನಸಾಮಾನ್ಯರಿಗೆ ಮೀಸಲಿಡುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ..

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ಕಟಕ

ದೈಹಿಕ ಸದೃಢತೆ ಕೆಲಸ ಕಾರ್ಯಗಳಲ್ಲಿ ಹೊಸ ಹುಮ್ಮಸ್ಸನ್ನು ಉಂಟು ಮಾಡುತ್ತದೆ. ಮನೆಯವರ ವಿರೋಧವನ್ನು ಲೆಕ್ಕಿಸದೆ ಕೆಲವು ತೀರ್ಮಾನಗಳನ್ನು ತೆಗೆದು ಕೊಳ್ಳುವಿರಿ. ಎಲ್ಲರೊಂದಿಗೆ ವಿಶ್ವಾಸದಿಂದ ನಡೆದು ಕೊಂಡರೆ ಯಾವುದೇ ತೊಂದರೆ ಉಂಟಾಗುವುದಿಲ್ಲ. ಉದ್ಯೋಗದಲ್ಲಿ ಬೇರೆಯವರ ಅಭಿಪ್ರಾಯದಂತೆ ಕೆಲಸ ನಿರ್ವಹಿಸಬೇಕಾಗುತ್ತದೆ. ನೆಚ್ಚಿನ ವ್ಯಕ್ತಿಗಳ ಆಗಮನ ಕುಟುಂಬದ ಸಂತೋಷವನ್ನು ಹೆಚ್ಚಿಸುತ್ತದೆ. ಸಂಗಾತಿಯ ಜೊತೆಗೆ ಮನಸ್ತಾಪ ಉಂಟಾಗಬಹುದು. ಉದ್ಯೋಗ ಬದಲಿಸುವ ನಿರ್ಧಾರಕ್ಕೆ ಬರುವಿರಿ. ಆರೋಗ್ಯದ ಬಗ್ಗೆ ಗಮನ ನೀಡಿ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಹಣ ಹೊಂದಿಸುವಿರಿ. ಕುಟುಂಬದ ಸದಸ್ಯರ ಜೊತೆಯಲ್ಲಿ ಧಾರ್ಮಿಕ ಕೇಂದ್ರಕ್ಕೆ ಪ್ರವಾಸ ಕೈಗೊಳ್ಳುವಿರಿ. ಹವ್ಯಾಸಕ್ಕಾಗಿ ಆರಂಭಿಸಿದ ಸಣ್ಣ ಪ್ರಮಾಣದ ವ್ಯಾಪಾರವು ಜೀವನಕ್ಕೆ ಆಧಾರವಾಗುತ್ತದೆ.

ಪರಿಹಾರ : ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆಯನ್ನು ಮಾಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ತಿಳಿನೀಲಿ ಬಣ್ಣ

--------------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).