ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ನಿಮ್ಮ ಮನಸ್ಸಿನಲ್ಲಿರುವ ಆಸೆ ಈಡೇರುತ್ತೆ, ಹಣದ ವಿವಾದ ಎದುರಾಗುತ್ತೆ; ಮೇಷದಿಂದ ಕಟಕ ರಾಶಿಯವರೆಗಿನ ದಿನಭವಿಷ್ಯ

Horoscope Today: ನಿಮ್ಮ ಮನಸ್ಸಿನಲ್ಲಿರುವ ಆಸೆ ಈಡೇರುತ್ತೆ, ಹಣದ ವಿವಾದ ಎದುರಾಗುತ್ತೆ; ಮೇಷದಿಂದ ಕಟಕ ರಾಶಿಯವರೆಗಿನ ದಿನಭವಿಷ್ಯ

ಮಾರ್ಚ್​ 15, ಶುಕ್ರವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (15 March 2024 Daily Horoscope).

ಮಾರ್ಚ್​ 15ರ ದಿನಭವಿಷ್ಯ
ಮಾರ್ಚ್​ 15ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (15 March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲಪಕ್ಷ, ಶುಕ್ರವಾರ

ತಿಥಿ : ಷಷ್ಠಿ ರಾ.03.29 ರವರೆಗು ಇರುತ್ತದೆ. ಆನಂತರ ಸಪ್ತಮಿ ಆರಂಭವಾಗುತ್ತದೆ.

ನಕ್ಷತ್ರ : ಕೃತ್ತಿಕ ನಕ್ಷತ್ರವು ರಾ.09.16 ರವರೆಗೆ ಇರುತ್ತದೆ. ಆನಂತರ ರೋಹಿಣಿ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.29

ಸೂರ್ಯಾಸ್ತ: ಸ.06.29

ರಾಹುಕಾಲ : ಬೆ.10.30 ರಿಂದ ಮ. 12.00

ರಾಶಿ ಫಲಗಳು

ಮೇಷ

ತಾಳ್ಮೆ ಮತ್ತು ಹೊಂದಾಣಿಕೆಯ ಕಾರಣ ಕುಟುಂಬದಲ್ಲಿ ನೆಮ್ಮದಿ ಇರುತ್ತದೆ. ತಪ್ಪು ನಿರ್ಧಾರದಿಂದ ಉದ್ಯೋಗದಲ್ಲಿ ಎದುರಾಗುವ ಸಮಸ್ಯೆಯನ್ನು ಬಗೆಹರಿಸುವಿರಿ. ಹಿರಿಯ ಅಧಿಕಾರಿಗಳ ಪ್ರಶಂಸೆ ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ತೆಗೆದುಕೊಳ್ಳುವ ನಿರ್ಧಾರದಿಂದ ಎದುರಾಗುವ ತೊಂದರೆ ದೂರವಾಗಲಿದೆ. ವಿದ್ಯಾರ್ಥಿಗಳು ಎಲ್ಲರೊಂದಿಗೆ ಸ್ನೇಹ ಪ್ರೀತಿ ತೋರುತ್ತಾ ಕಲಿಕೆಯಲ್ಲಿ ಅಗ್ರಗಣ್ಯರಾಗಿರುತ್ತಾರೆ. ಅನಾವಶ್ಯಕ ಖರ್ಚು ವೆಚ್ಚಗಳ ಬಗ್ಗೆ ಎಚ್ಚರಿಕೆ ಇರಲಿ. ಹಣದ ಸಹಾಯ ದೊರೆಯದು. ದಂಪತಿಗಳ ನಡುವಿನ ಅಸಮಾಧಾನ ಮರೆಯಾಗಿ ಉತ್ತಮ ಬಾಂಧವ್ಯ ರೂಪಿತವಾಗುತ್ತದೆ. ಸಮಯವನ್ನು ಅರಿತು ತೆಗೆದುಕೊಳ್ಳುವ ನಿರ್ಧಾರದಿಂದ ಹಣದ ಅನುಕೂಲ ಉಂಟಾಗಲಿದೆ.

ಪರಿಹಾರ : ಕೈ ಅಥವಾ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವುದರಿಂದ ಶುಭವಿರುತ್ತದೆ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ರಕ್ತದ ಬಣ್ಣ

ವೃಷಭ

ನಯವಾದ ಮಾತಿನಿಂದ ಕುಟುಂಬದ ವಿಶ್ವಾಸವನ್ನು ಗೆಲ್ಲುವಿರಿ. ಉದ್ಯೋಗದಲ್ಲಿ ವಿವಾದ ಇದ್ದರೂ ತೊಂದರೆಗೆ ಈಡಾಗದೆ ಶಾಂತ ರೀತಿಯಿಂದ ಕೆಲಸ ಸಾಧಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಧನಲಾಭವಿದ್ದರೂ ಖರ್ಚು ವೆಚ್ಚಗಳನ್ನು ನಿಯಂತ್ರಿಸಲಾಗುವುದಿಲ್ಲ. ಹಣದ ವಿವಾದವೊಂದು ಎದುರಾಗುತ್ತದೆ. ವಿದ್ಯಾರ್ಥಿಗಳು ಹಠದಿಂದ ಕಲಿಕೆಯಲ್ಲಿ ಯಶಸ್ಸನ್ನು ಸಾಧಿಸುತ್ತಾರೆ. ಸಮಾಜದಲ್ಲಿ ಉತ್ತಮ ಒಡನಾಟವಿರುತ್ತದೆ. ಅನಾವಶ್ಯಕವಾದ ವಾದ ವಿವಾದಗಳನ್ನು ಕಡಿಮೆ ಮಾಡಿ. ತಪ್ಪು ಮಾಡಿ ಕ್ಷಮೆ ಕೋರುವ ದೊಡ್ಡತನ ಎಲ್ಲರ ಮನ ಸೆಳೆಯುತ್ತದೆ. ಬಾವ-ಮೈದುನನ ಜೊತೆ ಇದ್ದ ಮನಸ್ತಾಪ ಕೊನೆಯಾಗಲಿದೆ. ಬೇರೆಯವರ ನಿರ್ಧಾರಗಳನ್ನು ಬೆಂಬಲಿಸುವುದಿಲ್ಲ

ಪರಿಹಾರ : ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ಎಲೆಹಸಿರು ಬಣ್ಣ

ಮಿಥುನ

ಕುಟುಂಬದಲ್ಲಿ ಉಲ್ಲಾಸಭರಿತ ವಾತಾವರಣ ನೆಲೆಸಿರುತ್ತದೆ. ಉದ್ಯೋಗದಲ್ಲಿನ ಯೋಜನೆಗಳನ್ನುಕಾರ್ಯಗತಗೊಳಿಸಲು ಅಧಿಕಾರಿಗಳ ಸಹಕಾರ ಇರಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ನಿಮ್ಮ ಎಣಿಕೆಯಂತೆ ಲಾಭ ದೊರಯುತ್ತದೆ. ವಿದ್ಯಾರ್ಥಿಗಳಲ್ಲಿ ಆತಂಕದ ಮನೋಭಾವನೆ ಜಟಿಲತೆಗೆ ಕಾರಣವಾಗಲಿದೆ. ನಾನೆಂಬ ಭಾವನೆಯನ್ನು ಬಿಟ್ಟಲ್ಲಿ ನಿಮಗೆ ಯಾವುದೂ ಅಸಾಧ್ಯವಾಗದು. ಕುಟುಂಬದವರ ಒತ್ತಾಯಕ್ಕೆ ಮಣಿದು ವಾಸಸ್ಥಳವನ್ನು ಬದಲಿಸುವಿರಿ. ಆತ್ಮೀಯರನ್ನು ಸಂತೋಷ ಕೂಟವೊಂದಕ್ಕೆ ಆಹ್ವಾನಿಸುತ್ತೀರಿ. ಜನೋಪಯೋಗಿ ಕೆಲಸಗಳನ್ನು ಮಾಡುವಿರಿ. ದಂಪತಿಗಳಲ್ಲಿ ಉತ್ತಮ ಅನ್ಯೋನ್ಯತೆ ಇರುತ್ತದೆ. ನಿಮ್ಮ ಮನಸ್ಸಿನಲ್ಲಿರುವ ಆಸೆ ಆಕಾಂಕ್ಷೆಗಳು ಸುಲಭವಾಗಿ ಈಡೇರುತ್ತವೆ. ಅನಿವಾರ್ಯವಾದಲ್ಲಿ ಆತ್ಮೀಯರಿಂದ ಹಣದ ಸಹಾಯ ದೊರೆಯುತ್ತದೆ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕೇಸರಿ ಬಣ್ಣ

ಕಟಕ

ಆತುರದಿಂದ ತೆಗೆದುಕೊಳ್ಳುವ ತೀರ್ಮಾನಗಳಿಂದ ಕುಟುಂಬದಲ್ಲಿ ನಂಬಿಕೆ ಕಡಿಮೆಯಾಗುತ್ತದೆ. ಉದ್ಯೋಗದಲ್ಲಿನ ಕೆಲಸ ಕಾರ್ಯಗಳು ಸಂಪೂರ್ಣಗೊಳ್ಳಲಿವೆ. ವ್ಯಾಪಾರ ವ್ಯವಹಾರಗಳಿಂದ ಉತ್ತಮ ಹಣ ಗಳಿಸುವಿರಿ. ಕುಟುಂಬದ ಹಿರಿಯರ ಆತುರದಿಂದ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಕುಟುಂಬದ ಹಿರಿಯ ವ್ಯಕ್ತಿಗಳ ಜವಾಬ್ದಾರಿ ನಿಮ್ಮದಾಗುತ್ತದೆ. ಮನರಂಜನೆಯನ್ನು ಅರಸಿ ಕಿರು ಪ್ರವಾಸ ಕೈಗೊಳ್ಳುವಿರಿ. ತಂದೆಯವರ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ನಿರೀಕ್ಷೆಗೂ ಮೀರಿದ ಹಣ ಕೈ ಸೇರುತ್ತದೆ. ಆತ್ಮೀಯರಿಗೆ ಹಣದ ಸಹಾಯ ಮಾಡುವಿರಿ. ನೀರಿರುವ ಸ್ಥಳದಿಂದ ದೂರ ಇರುವುದು ಕ್ಷೇಮಕರ. ಕ್ರೀಡಾಳುಗಳಿಗೆ ಹೆಚ್ಚಿನ ಅನುಕೂಲತೆಗಳು ದೊರೆಯಲಿವೆ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

-----------------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.