Horoscope Today: ಹೆಚ್ಚಿನ ಆದಾಯದ ಮೂಲ ದೊರೆಯಲಿದೆ, ವಹಿಸಿಕೊಂಡ ಜವಾಬ್ದಾರಿ ಪೂರ್ಣಗೊಳಿಸುವಿರಿ; ಮೇಷದಿಂದ ಕಟಕ ರಾಶಿಯವರೆಗಿನ ದಿನಭವಿಷ್ಯ
ಮಾರ್ಚ್ 17, ಭಾನುವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (17 March 2024 Daily Horoscope).

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (17 March 2024 Daily Horoscope).
ಇಂದಿನ ಪಂಚಾಂಗ
ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲಪಕ್ಷ, ಭಾನುವಾರ
ತಿಥಿ : ಅಷ್ಠಮಿ ರಾ.02.08 ರವರೆಗು ಇರುತ್ತದೆ. ಆನಂತರ ನವಮಿ ಆರಂಭವಾಗುತ್ತದೆ.
ನಕ್ಷತ್ರ : ಮೃಗಶಿರ ನಕ್ಷತ್ರವು ರಾ.09.01 ರವರೆಗೆ ಇರುತ್ತದೆ. ಆನಂತರ ಆರ್ದ್ರೆ ನಕ್ಷತ್ರವು ಆರಂಭವಾಗುತ್ತದೆ.
ಸೂರ್ಯೋದಯ: ಬೆ.06.26
ಸೂರ್ಯಾಸ್ತ: ಸ.06.29
ರಾಹುಕಾಲ : ಸ.04.30 ರಿಂದ ಸ.06.00
ರಾಶಿ ಫಲಗಳು
ಮೇಷ
ಸೋಲನ್ನು ಸುಲಭವಾಗಿ ಒಪ್ಪಿಕೊಳ್ಳುವುದಿಲ್ಲ. ಪ್ರತಿಯೊಂದು ವಿಚಾರದಲ್ಲಿಯೂ ಯಶಸ್ಸನ್ನು ಗಳಿಸಲು ಶತಾಯುಗತಾಯ ಪ್ರಯತ್ನಿಸುವಿರಿ. ಸಹಜವಾಗಿ ಆತ್ಮವಿಶ್ವಾಸವು ಹೆಚ್ಚುತ್ತದೆ. ಎಲ್ಲರನ್ನೂ ಪ್ರೀತಿ ವಿಶ್ವಾಸದಿಂದ ಕಾಣುವಿರಿ. ಮನದ ಧನಾತ್ಮಕ ಚಿಂತನೆಗಳು ಕುಟುಂಬದಲ್ಲಿ ಹೊಸ ನಿರೀಕ್ಷೆಗಳನ್ನು ಸೃಷ್ಟಿಸುತ್ತದೆ. ಆದಾಯವನ್ನು ಹೆಚ್ಚಿಸಿಕೊಳ್ಳಲು ಹೊಸ ಹಣಕಾಸಿನ ಯೋಜನೆಗಳನ್ನು ರೂಪಿಸುವಿರಿ. ಕುಟುಂಬದ ಸದಸ್ಯರ ಜೊತೆಯಲ್ಲಿ ಸಭೆ ಸಮಾರಂಭಗಳಿಗೆ ಭೇಟಿ ನೀಡುವಿರಿ. ಮಕ್ಕಳ ಮೇಲಿನ ನಿಮ್ಮ ನಿರೀಕ್ಷೆಗಳು ಸುಳ್ಳಾಗುವುದಿಲ್ಲ. ಆದರೆ ದಂಪತಿಗಳ ನಡುವೆ ಅನಾವಶ್ಯಕ ವಾದ ವಿವಾದಗಳು ಎದುರಾಗಲಿವೆ. ಬಿಡುವಿನ ಸಮಯದಲ್ಲಿ ಹಾಡು ನೃತ್ಯದಂತಹ ಮನರಂಜನಾ ಚಟುವಟಿಕೆಗಳಲ್ಲಿ ತೊಡಗುವಿರಿ. ದೈಹಿಕ ಮತ್ತು ಮಾನಸಿಕ ಒತ್ತಡದಿಂದ ಹೊರಬರಲು ವಿಶ್ರಾಂತಿ ಪಡೆಯುವಿರಿ. ಉದ್ಯೋಗದಲ್ಲಿ ಹೆಚ್ಚಿನ ಬದಲಾವಣೆಗಳು ಕಾಣುವುದಿಲ್ಲ.
ಪರಿಹಾರ : ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಎಲೆ ಹಸಿರು ಬಣ್ಣ
ವೃಷಭ
ಪ್ರಯತ್ನಪಡದೆ ಯಾವುದೇ ಕೆಲಸ ಸಿದ್ಧಿಸುವುದಿಲ್ಲ ಎಂಬುದನ್ನು ಮನಗಾಣುವಿರಿ. ಆರೋಗ್ಯದಲ್ಲಿ ಏರಿಳಿತ ಕಂಡುಬರುತ್ತದೆ. ಆದರೆ ಕೆಲಸ ಕಾರ್ಯವನ್ನು ಮಾಡಲು ಮನಸ್ಸು ಒಪ್ಪುವುದಿಲ್ಲ. ಕಷ್ಟಪಡದೆ ದಿನವನ್ನು ಕಳೆಯಬೇಕೆಂಬ ನಿರ್ಧಾರ ಮಾಡುವಿರಿ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ಚಿಂತೆ ಇರುತ್ತದೆ. ಅನಾವಶ್ಯಕ ಖರ್ಚು ವೆಚ್ಚಗಳು ಕಂಡು ಬರಲಿವೆ. ಕೆಲಸ ಕಾರ್ಯಗಳು ನಿಧಾನಗತಿಯಲ್ಲಿ ಸಾಗುತ್ತವೆ. ಕುಟುಂಬದ ಖರ್ಚು ವೆಚ್ಚಗಳನ್ನು ಸರಿದೂಗಿಸಲು ಉಪವೃತ್ತಿಯನ್ನು ಅವಲಂಭಿಸುವಿರಿ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗುತ್ತದೆ. ಸಂಗಾತಿಯನ್ನು ಜಾಗರೂಕತೆಯಿಂದ ನೋಡಿಕೊಳ್ಳುವಿರಿ. ಹಿಂದಿನ ನೆನಪುಗಳು ಕಾಡುತ್ತವೆ. ಈ ಕಾರಣದಿಂದಾಗಿ ಎಲ್ಲರೊಂದಿಗೆ ಹುಟ್ಟೂರಿಗೆ ಪ್ರಯಾಣ ಬೆಳೆಸುವಿರಿ.
ಪರಿಹಾರ : ತಾಮ್ರದ ನಾಣ್ಯವನ್ನು ಖಾಕಿದಾರದಲ್ಲಿ ಕಟ್ಟಿ ಕತ್ತಿನಲ್ಲಿ ಧರಿಸಿ.
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ : ಕೇಸರಿ ಬಣ್ಣ
ಮಿಥುನ
ದಿನಪೂರ್ತಿ ಮನರಂಜನೆಗಾಗಿ ಮೀಸಲಿಡುವಿರಿ. ಎಲ್ಲರೊಂದಿಗೆ ಸಂತಸದ ಕ್ಷಣಗಳನ್ನು ಹಂಚಿಕೊಳ್ಳುವಿರಿ. ಯಾವುದೇ ವಿಚಾರವನ್ನು ಗಂಭೀರವಾಗಿ ಸ್ವೀಕರಿಸಿದ ಕಾರಣ ಮನಸ್ಸು ಹಗುರವಾಗಿರುತ್ತದೆ. ಆದರೆ ಅನಾವಶ್ಯಕ ಖರ್ಚು ವೆಚ್ಚಗಳು ಎದುರಾಗುತ್ತವೆ. ಹಣಕ್ಕಿಂತ ಸ್ನೇಹ ಸಂಬಂಧಗಳಿಗೆ ಹೆಚ್ಚಿನ ಗೌರವ ನೀಡುವಿರಿ. ಬೇರೆಯವರ ತಪ್ಪನ್ನು ಮರೆತು ಸಂತೋಷದಿಂದ ಕಾಲ ಕಳೆಯುವಿರಿ. ಸಾಮಾಜಿಕ ಹೋರಾಟದ ನಾಯಕತ್ವವನ್ನು ವಹಿಸುವಿರಿ. ಸಹಾಯವನ್ನು ಅರಸಿ ಬಂದವರಿಗೆ ನಿರಾಸೆ ಮಾಡುವುದಿಲ್ಲ. ಸಂಗಾತಿಯಿಂದ ಹಣಕಾಸಿನ ಸಹಾಯ ದೊರೆಯಲಿದೆ. ಒಂದಕ್ಕಿಂತಲೂ ಹೆಚ್ಚಿನ ಆದಾಯದ ಮೂಲ ದೊರೆಯಲಿದೆ. ಕಷ್ಟಪಟ್ಟಷ್ಟು ದುಡಿದಲ್ಲಿ ಸುಖವಿದೆ ಎಂಬ ಮಾತಿನಲ್ಲಿ ನಂಬಿಕೆ ಇರುತ್ತದೆ. ಎಲ್ಲರನ್ನೂ ಒಂದೇ ಭಾವನೆಯಿಂದ ನೋಡುವಿರಿ.
ಪರಿಹಾರ : ಕೆಂಪು ಬೆಲ್ಲದಿಂದ ಮಾಡಿದ ದ್ರವಾಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ
ಕಟಕ
ನಿಮ್ಮಲ್ಲಿನ ಶಕ್ತಿಯ ಅರಿವು ನಿಮಗೆ ಇರುವುದಿಲ್ಲ. ಸದಾ ಕ್ರಿಯಾಶೀಲರಾದಕಾರಣ ಯಾವುದೇ ಕೆಲಸವನ್ನು ಸುಲಭವಾಗಿ ಮಾಡಬಲ್ಲಿರಿ. ಭೂಸಂಬಂಧಿತ ವ್ಯಾಪಾರಗಳಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಯಾವುದೇ ಅಡುಕಿಲ್ಲದೆ ವಹಿಸಿಕೊಂಡ ಜವಾಬ್ದಾರಿಗಳನ್ನು ಪೂರ್ಣಗೊಳಿಸುವಿರಿ. ಎದುರಾಗುವ ಸೋಲನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಗೆಲ್ಲಲೇ ಬೇಕೆಂಬ ತೀರ್ಮಾನದಿಂದ ಕೆಲಸ ಕಾರ್ಯಗಳನ್ನು ಆರಂಭಿಸುವಿರಿ. ತಂದೆ ತಾಯಿಯರ ಬಗ್ಗೆ ವಿಶೇಷ ಪ್ರೀತಿ ಗೌರವ ಇರುತ್ತದೆ. ಸಂಗಾತಿಯ ಸಹಾಯದಿಂದ ಕೆಲಸ ಕಾರ್ಯಗಳನ್ನು ಯಶಸ್ವಿಯಾಗಿ ಮುಗಿಸುವಿರಿ. ಉತ್ತಮ ಯೋಜನೆ ಇರದೆ ಕೆಲಸ ನಿರ್ವಹಿಸಿದರೆ ತೊಂದರೆಯನ್ನು ಎದುರಿಸಬೇಕಾಗುತ್ತದೆ. ಕಳೆದು ಹೋದ ವಿಚಾರಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವುದಿಲ್ಲ. ಯಾವುದೇ ಕೆಲಸ ಕಾರ್ಯಗಳನ್ನು ಮುಂದೂಡದೆ ಪೂರ್ಣಗೊಳಿಸುವುದು ನಿಮ್ಮಲ್ಲಿರುವ ವಿಶೇಷ ಗುಣ.
ಪರಿಹಾರ : ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಕೆಂಪು ಬಣ್ಣ
------------
ಜ್ಯೋತಿಷಿ: ಎಚ್. ಸತೀಶ್, ಬೆಂಗಳೂರು
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ವಿಭಾಗ