Horoscope Today: ಕಷ್ಟ ನಷ್ಟಗಳು ಕಡಿಮೆಯಾಗುತ್ತವೆ, ದೂರದ ಊರಿಗೆ ಪ್ರಯಾಣ; ಮೇಷದಿಂದ ಕಟಕ ರಾಶಿಯವರೆಗಿನ ದಿನಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಕಷ್ಟ ನಷ್ಟಗಳು ಕಡಿಮೆಯಾಗುತ್ತವೆ, ದೂರದ ಊರಿಗೆ ಪ್ರಯಾಣ; ಮೇಷದಿಂದ ಕಟಕ ರಾಶಿಯವರೆಗಿನ ದಿನಭವಿಷ್ಯ

Horoscope Today: ಕಷ್ಟ ನಷ್ಟಗಳು ಕಡಿಮೆಯಾಗುತ್ತವೆ, ದೂರದ ಊರಿಗೆ ಪ್ರಯಾಣ; ಮೇಷದಿಂದ ಕಟಕ ರಾಶಿಯವರೆಗಿನ ದಿನಭವಿಷ್ಯ

ಮಾರ್ಚ್​ 18, ಸೋಮವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (18 March 2024 Daily Horoscope).

ಮಾರ್ಚ್​ 18ರ ದಿನಭವಿಷ್ಯ
ಮಾರ್ಚ್​ 18ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (18 March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲಪಕ್ಷ, ಸೋಮವಾರ

ತಿಥಿ : ನವಮಿ ರಾ.02.11 ರವರೆಗು ಇರುತ್ತದೆ. ಆನಂತರ ದಶಮಿ ಆರಂಭವಾಗುತ್ತದೆ.

ನಕ್ಷತ್ರ : ಆರ್ದ್ರೆ ನಕ್ಷತ್ರವು ರಾ.09.36 ರವರೆಗೆ ಇರುತ್ತದೆ. ಆನಂತರ ಪುನರ್ವಸು ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.24

ಸೂರ್ಯಾಸ್ತ: ಸ.06.29

ರಾಹುಕಾಲ : ಬೆ.07.30 ರಿಂದ ಬೆ.09.00

ರಾಶಿ ಫಲಗಳು

ಮೇಷ

ಕುಟುಂಬದಲ್ಲಿ ಸಂಬಂಧಿಕರ ವಿಚಾರದಿಂದ ಮಾನಸಿಕ ಉಂಟಾಗಲಿದೆ. ಉದ್ಯೋಗದಲ್ಲಿ ಬೇಸರವಿದ್ದರೂ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ನಿಧಾನಗತಿಯ ಪ್ರಗತಿ ಕಂಡು ಬರಲಿದೆ. ವಿದ್ಯಾರ್ಥಿಗಳು ಹೊಸ ನಿರೀಕ್ಷೆಯಿಂದ ಕಲಿಕೆಯನ್ನು ಮುಂದುವರೆಸುತ್ತಾರೆ. ಆರೋಗ್ಯವನ್ನು ಕಾಪಾಡಿಕೊಳ್ಳಲು ಆಹಾರಕ್ರಮದಲ್ಲಿ ಬದಲಾವಣೆ ಮಾಡಬೇಕಾಗುತ್ತದೆ. ಅನಾವಶ್ಯಕವಾಗಿ ಬರುವ ಕೋಪವನ್ನು ನಿಯಂತ್ರಿಸುವಿರಿ. ಎದುರಾಗುವ ದೊಡ್ಡ ವಿವಾದವನ್ನು ಪ್ರೀತಿಯ ಮಾತಿನಿಂದ ಸರಿಪಡಿಸುವಿರಿ. ಬೇರೆಯವರಿಂದ ಹಣದ ಸಹಾಯ ಪಡೆಯುವುದಿಲ್ಲ. ದಾಂಪತ್ಯದಲ್ಲಿ ಉತ್ತಮ ಹೊಂದಾಣಿಕೆ ಕಂಡು ಬರುತ್ತದೆ. ದೈನಂದಿನ ಕೆಲಸವನ್ನು ಆರಂಭಿಸುವ ಮುನ್ನ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಿ.

ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕಂದು ಬಣ್ಣ

ವೃಷಭ

ಕುಟುಂಬದ ಜವಾಬ್ದಾರಿಗಳನ್ನು ಕಡಿಮೆ ಮಾಡಿಕೊಳ್ಳುವಿರಿ. ಆದರೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ದುಡುಕುತನ ಬೇಡ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿಗಳ ನಿರ್ವಹಣೆ ಬೇರೆಯವರ ಪಾಲಾಗುತ್ತದೆ. ವಿದ್ಯಾರ್ಥಿಗಳು ನಿರೀಕ್ಷೆಯಂತೆ ಅಗ್ರಸ್ಥಾನ ಪಡೆಯುತ್ತಾರೆ. ಅನಿರೀಕ್ಷಿತ ಖರ್ಚು ವೆಚ್ಚಗಳನ್ನು ಕಡಿತಗೊಳಿಸುವ ಚಿಂತೆ ಮಾಡುವಿರಿ. ಕುಟುಂಬದ ಹಿರಿಯರ ಸಲಹೆಯನ್ನು ಪಾಲಿಸುವಿರಿ. ಎಲ್ಲರ ಸಹಕಾರ ದೊರೆವ ಕಾರಣ ಕಷ್ಟ ನಷ್ಟಗಳು ಕಡಿಮೆಯಾಗುತ್ತವೆ. ಸಾಲದ ವ್ಯವಹಾರವನ್ನು ಇಷ್ಟಪಡುವುದಿಲ್ಲ. ಅತಿ ಮುಖ್ಯ ಕೆಲಸವನ್ನು ಮಾಡಲಾಗದು. ತಾಯಿಯವರ ಆರೋಗ್ಯದ ಬಗ್ಗೆ ಕಾಳಜಿ ಇರಲಿ.

ಪರಿಹಾರ : ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ಕಪ್ಪು ಬಣ್ಣ

ಮಿಥುನ

ಕುಟುಂಬದ ವಿಚಾರಗಳಲ್ಲಿ ಒಮ್ಮತದ ನಿರ್ಧಾರ ತೆಗೆದುಕೊಳ್ಳುವಿರಿ. ಶಾಂತಿ ನೆಮ್ಮದಿಯಿಂದ ದಿನ ಕಳೆಯುವಿರಿ. ಉದ್ಯೋಗದಲ್ಲಿನ ಅನಿರೀಕ್ಷಿತ ಬದಲಾವಣೆಗಳು ನಿಮ್ಮ ಪರವಾಗಿರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿನ ಆದಾಯ ಮತ್ತು ಖರ್ಚು ವೆಚ್ಚಗಳು ಸರಿಹೊಂದುತ್ತವೆ. ವಿದ್ಯಾರ್ಥಿಗಳು ಎದುರಾಗುವ ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುವರು. ಪ್ರತಿಯೊಂದು ವಿಚಾರಗಳನ್ನೂ ಒತ್ತಡದಿಂದಲೇ ನಿಭಾಯಿಸುವಿರಿ. ಅವಿವಾಹಿತರಿಗೆ ವಿವಾಹ ಯೋಗವಿದೆ. ಅಧಿಕಾರಿಗಳು ಆತಂಕದ ಪರಿಸ್ಥಿತಿಯಲ್ಲಿ ಸಿಲುಕಲಿದ್ದಾರೆ. ಸಹೋದ್ಯೋಗಿಗಳ ಜೊತೆ ನಯವಾಗಿ ವರ್ತಿಸಿ. ಒಮ್ಮೆ ತೆಗೆದುಕೊಂಡ ತೀರ್ಮಾನವನ್ನು ಬದಲಿಸದಿರಿ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆಯಿಂದ ವರ್ತಿಸಿ.

ಪರಿಹಾರ : ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹೊಸ ಉಡುಗೆ ತೊಡುಗೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ತಿಳಿಹಸಿರು ಬಣ್ಣ

ಕಟಕ

ಕುಟುಂಬದ ಕೆಲಸ ಕಾರ್ಯಗಳ ಜವಾಬ್ದಾರಿ ನಿಮ್ಮದಾಗುತ್ತದೆ. ಉದ್ಯೋಗದಲ್ಲಿ ದೊರೆವ ಹೆಚ್ಚಿನ ಜವಾಬ್ದಾರಿಯನ್ನು ತಿರಸ್ಕರಿಸುವಿರಿ. ಸಹೋದ್ಯೋಗಿಗಳ ಸಹಕಾರ ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಎಚ್ಚರಿಕೆಯಿಂದ ನಿರ್ಧಾರವನ್ನು ತೆಗೆದುಕೊಳ್ಳಿರಿ. ವಿದ್ಯಾರ್ಥಿಗಳು ಒತ್ತಡದಿಂದ ಹೊರಬಂದು ಮನರಂಜನೆಯಲ್ಲಿ ದಿನ ಕಳೆಯುತ್ತಾರೆ. ಸೋಲು ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವಿರಿ. ಕುಟುಂಬದ ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ತೋರುವಿರಿ. ವಿದೇಶಿ ವಿನಿಮಯದಿಂದ ಹೆಚ್ಚಿನ ಲಾಭ ದೊರೆಯುತ್ತದೆ. ಕುಟುಂಬದ ಸದಸ್ಯರ ಜೊತೆಗೆ ದೂರದ ಊರಿಗೆ ಪ್ರಯಾಣ ಬೆಳೆಸುವಿರಿ. ಉದ್ಯೋಗವನ್ನು ಬದಲಾಯಿಸುವ ಸಾಧ್ಯತೆಗಳಿವೆ.

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ

-----------------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.