ಕನ್ನಡ ಸುದ್ದಿ  /  Astrology  /  Horoscope Today Astrology Prediction In Kannada 21 February 2024 Aries Taurus Gemini Cancer Daily Horoscope Sts

Horoscope Today: ದುಡುಕುತನದಿಂದ ಒದಗಿ ಬರುವ ಅವಕಾಶ ಕಳೆದುಕೊಳ್ಳದಿರಿ, ಭೂವಿವಾದ ಕೊನೆ; ಮೇಷದಿಂದ ಕಟಕ ರಾಶಿಯವರೆಗಿನ ದಿನಭವಿಷ್ಯ

ಫೆಬ್ರವರಿ 21, ಬುಧವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (21 February 2024 Daily Horoscope).

 ಫೆಬ್ರವರಿ 21ರ ದಿನಭವಿಷ್ಯ
ಫೆಬ್ರವರಿ 21ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. ( February 21 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಾಘ ಮಾಸ, ಶುಕ್ಲಪಕ್ಷ, ಬುಧವಾರ

ತಿಥಿ : ದ್ವಾದಶಿ ತಿಥಿಯು ಹಗಲು.12.23 ರವರೆಗು ಇದ್ದು ಆನಂತರ ತ್ರಯೋದಶಿ ಆರಂಭವಾಗುತ್ತದೆ.

ನಕ್ಷತ್ರ : ಪುನರ್ವಸು ನಕ್ಷತ್ರವು ಹ.03.19 ವರೆಗು ಇರುತ್ತದೆ. ಆನಂತರ ಪುಷ್ಯ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.43

ಸೂರ್ಯಾಸ್ತ: ಸ.06.23

ರಾಹುಕಾಲ : ಮ. 12.00 ರಿಂದ ಮ. 01.30

ರಾಶಿ ಫಲಗಳು

ಮೇಷ

ನಿಮ್ಮ ಪ್ರಯತ್ನದಿಂದಾಗಿ ಕುಟುಂಬದ ಕಷ್ಟವೊಂದು ದೂರವಾಗಲಿದೆ. ಸುಲಭವಾಗಿ ಯಾರನ್ನೂ ನಂಬುವುದಿಲ್ಲ. ಉದ್ಯೋಗದಲ್ಲಿ ಒತ್ತಡದ ಪರಿಸ್ಠಿತಿ ಎದುರಾದರು ತೊಂದರೆ ಕಾಣದು. ಸಂಗಾತಿಯೊಡನೆ ವಿರಸವಿರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಸೋದರಿಯು ಸಹಾಯ ಮಾಡುವರು. ತಂದೆ ಮಾಡುವ ವ್ಯಾಪಾರದಲ್ಲಿ ಲಾಭವಿದೆ. ವಿದ್ಯಾರ್ಥಿಗಳಿಗೆ ಸಿಹಿ ಸುದ್ಧಿ ಬರಲಿದೆ. ಕುಟುಂಬದಲ್ಲಿ ಶುಭಕಾರ್ಯವೊಂದು ನಡೆಯಲಿದೆ. ಸ್ತ್ರೀಯರಿಗೆ ವಿವಾದವೊಂದು ಎದುರಾಗಲಿದೆ. ಬಿಡುವಿಲ್ಲದ ದುಡಿಮೆಯ ಕಾರಣ ಬೇಸರ ಮೂಡುತ್ತದೆ. ಸಂಚಾರದಿಂದ ಲಾಭವಿದೆ. ರಾಜಕೀಯ ಸೇರುವ ಆಸೆ ಈಡೇರಲಿದೆ. ನೆರೆಹೊರೆಯರ ಜೊತೆಯಲ್ಲಿ ಉತ್ತಮ ಬಾಂಧವ್ಯ ಇರುತ್ತದೆ.

ಪರಿಹಾರ : ಕೈ ಅಥವಾ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವದರಿಂದ ಶುಭವಿರುತ್ತದೆ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಎಲೆ ಹಸಿರು ಬಣ್ಣ

ವೃಷಭ

ಆದಾಯ ಮತ್ತು ಖರ್ಚು ವೆಚ್ಚಗಳ ನಡುವೆ ಸಮತೋಲನ ಇರುವುದಿಲ್ಲ. ಕುಟುಂಬದಲ್ಲಿ ಹಣಕಾಸಿನ ನಿರ್ವಹಣೆಯ ಬಗ್ಗೆ ವಿವಾದ ಇರುತ್ತದೆ. ಮಾಡದ ತಪ್ಪಿಗೆ ವೃತ್ತಿಜೀವನದಲ್ಲಿ ವಿವಾದವನ್ನು ಎದುರಿಸಬೇಕಾಗುತ್ತದೆ. ಯಾವುದೇ ಕೆಲಸವನ್ನು ಮಾಡಲು ಆಸಕ್ತಿ ಇರುವುದಿಲ್ಲ. ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ. ಅವಶ್ಯವಿದ್ದಲ್ಲಿ ಆತ್ಮೀಯರ ಸಲಹೆ ಸೂಚನೆಗಳನ್ನು ಪಾಲಿಸಲು ಪ್ರಯತ್ನಿಸಿ. ಮಾನಸಿಕ ಒತ್ತಡದಿಂದ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಮನದಲ್ಲಿ ವೈರಾಗ್ಯ ಭಾವನೆ ಮೂಡುತ್ತದೆ. ವಿದ್ಯಾರ್ಥಿಗಳಿಗೆ ಸಂತೃಪ್ತಿ ಇರುವುದಿಲ್ಲ. ಭೂವಿವಾದವೊಂದು ಮಾತುಕತೆಯಿಂದ ಕೊನೆಗೊಳ್ಳಲ್ಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ವರಮಾನ ಇರುತ್ತದೆ.

ಪರಿಹಾರ : ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ..

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ಕೇಸರಿ ಬಣ್ಣ

ಮಿಥುನ

ಒಳ್ಳೆಯತನದ ಪಾಠವನ್ನು ಸುತ್ತಮುತ್ತಲಿನ ಜನರಿಗೆ ಕಲಿಸುವಿರಿ. ರಕ್ತದ ಒತ್ತಡದ ತೊಂದರೆ ಇರುತ್ತದೆ. ಉದ್ಯೋಗದಲ್ಲಿನ ಆಗುಹೋಗುಗಳ ಬಗ್ಗೆಎಚ್ಚರಿಕೆ ವಹಿಸಬೇಕು. ಹಠದ ಗುಣದಿಂದ ವಿರೋಧಿಗಳು ಹೆಚ್ಚುತ್ತಾರೆ. ಹಣಕಾಸಿನ ವಿವಾದದಿಂದ ಮಾನಸಿಕ ಒತ್ತಡ ಉಂಟಾಗುತ್ತದೆ. ವಿದ್ಯಾಭ್ಯಾಸದಲ್ಲಿನ ಅಡ್ಡಿ ಆತಂಕ ನಿವಾರಣೆ ಆಗಲಿದೆ. ದಂಪತಿಯರ ನಡುವೆ ಸಂಧಾನ ನಡೆಸಲು ಸೇವಾ ಕೇಂದ್ರವನ್ನು ನಡೆಸುವವರಿಗೆ ಉನ್ನತ ಕೀರ್ತಿ ಪ್ರತಿಷ್ಠೆ ದೊರೆಯುತ್ತದೆ. ಸರ್ಕಾರದ ಅನುದಾನದಿಂದ ಸ್ವಂತ ಉದ್ಧಿಮೆಯನ್ನು ಆರಂಭಿಸಬಹು. ಕಷ್ಟದಲ್ಲಿರುವವರಿಗೆ ಸಹಾಯ ಮಾಡುವಿರಿ. ಮನಬಿಚ್ಚಿ ಮಾತನಾಡಿದಲ್ಲಿ ವಿವಾದಗಳು ಮರೆಯಾಗಲಿವೆ. ಪರಿಸ್ಥಿತಿಯನ್ನು ನಿಮ್ಮ ಕೆಲಸಕಾರ್ಯಗಳಿಗೆ ಹೊಂದಿಸಿಕೊಳ್ಳುವಿರಿ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ಕಟಕ

ದೇವರು ಅಥವಾ ಅದೃಷ್ಟವನ್ನು ನಂಬಿ ಕೆಲಸ ಮಾಡುವುದಿಲ್ಲ. ಕುಟುಂಬದಲ್ಲಿ ನೆಮ್ಮದಿ ನೆಲೆಸಿರುತ್ತದೆ. ಸ್ವಂತ ಪ್ರತಿಭೆಯ ಬಲದಿಂದ ಯಶಸ್ವಿ ಜೀವನ ನಡೆಸುವಿರಿ. ಕ್ರಿಯಾಶೀಲತೆಯಿಂದ ಸಣ್ಣ ಪುಟ್ಟ ವಿಚಾರಗಳಿಗೂ ಹೆಚ್ಚಿನ ಪ್ರಾಮುಖ್ಯತೆ ನೀಡುವಿರಿ. ವ್ಯಾಪಾರ ವ್ಯವಹಾರದಲ್ಲಿ ಒತ್ತಡ ಉಂಟಾದರೂ ಆದಾಯದಲ್ಲಿ ತೊಂದರೆ ಇರುವುದಿಲ್ಲ. ಸಮಯ ದೊರೆತಾಗಲೆಲ್ಲ ವಿದ್ಯಾರ್ಥಿಗಳು ತಮ್ಮಲ್ಲಿನ ಬುದ್ಧಿಶಕ್ತಿಯನ್ನು ಪ್ರಚುರ ಪಡಿಸುತ್ತಾರೆ. ದುಡುಕುತನದಿಂದ ಒದಗಿ ಬರುವ ಅವಕಾಶವನ್ನು ಕಳೆದುಕೊಳ್ಳದಿರಿ. ಸರ್ಕಾರಕ್ಕೆ ಸಂಬಂಧಿಸಿದ ಕೆಲಸ ಕಾರ್ಯದಲ್ಲಿ ಹೆಚ್ಚಿನ ಲಾಭಾಂಶ ದೊರೆಯುತ್ತದೆ. ದಂಪತಿಗಳ ನಡುವೆ ಹಣಕಾಸಿನ ವಿಚಾರದಲ್ಲಿ ಭಿನ್ನಾಭಿಪ್ರಾಯ ಇರುತ್ತದೆ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕೆಂಪು ಬಣ್ಣ

------------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).