Horoscope Today: ಹಣಕಾಸಿನ ವ್ಯವಹಾರದಲ್ಲಿ ಲಾಭ, ಭೂವಿವಾದ ಬಗೆಹರಿಯಲಿದೆ; ಮೇಷದಿಂದ ಕಟಕ ರಾಶಿಯವರೆಗಿನ ದಿನಭವಿಷ್ಯ
ಮಾರ್ಚ್ 22, ಶುಕ್ರವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (22 March 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (22 March 2024 Daily Horoscope).
ಇಂದಿನ ಪಂಚಾಂಗ
ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲಪಕ್ಷ, ಶುಕ್ರವಾರ
ತಿಥಿ : ದಿನ ಪೂರ್ತಿ ತ್ರಯೋದಶಿ ಇರಲಿದೆ
ನಕ್ಷತ್ರ : ಮಖೆ ನಕ್ಷತ್ರವು ರಾ.04.34 ರವರೆಗೆ ಇರುತ್ತದೆ. ಆನಂತರ ಪುಬ್ಬ ನಕ್ಷತ್ರವು ಆರಂಭವಾಗುತ್ತದೆ.
ಸೂರ್ಯೋದಯ: ಬೆ.06.23
ಸೂರ್ಯಾಸ್ತ: ಸ.06.30
ರಾಹುಕಾಲ : ಬೆ.10.30 ರಿಂದ ಮ.12.00
ರಾಶಿ ಫಲಗಳು
ಮೇಷ
ಕುಟುಂಬದಲ್ಲಿನ ನಿರೀಕ್ಷೆಗಳಿಗೆ ಹೊಸ ಭಾವನೆ ಮೂಡುತ್ತದೆ. ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ ದೊರೆಯಲಿದೆ. ಬಿಡುವಿಲ್ಲದ ಕಾರಣ ಮಾನಸಿಕ ಒತ್ತಡ ಹೆಚ್ಚುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಬಂಡವಾಳ ಹೂಡುವಿರಿ. ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥಮಾಡದೆ ಹೊಸ ವಿಚಾರಗಳ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ಏರಿಳಿತ ಉಂಟಾಗಬಹುದು. ಭೂವಿವಾದವೊಂದು ಬಗೆಹರಿದು ನೆಮ್ಮದಿ ಉಂಟಾಗಲಿದೆ. ವಾಹನದಿಂದ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಸ್ತ್ರೀಯರಿಗೆ ವಿದ್ಯಾರ್ಥಿಗಳಿಗೆ ವಿದೇಶಿ ಸಂಸ್ಥೆಯಲ್ಲಿ ಉದ್ಯೋಗಾವಕಾಶ ದೊರೆಯುತ್ತದೆ. ಕುಟುಂಬದ ಹಿರಿಯರ ಹಣಕಾಸಿನ ತೊಂದರೆ ನಿಮ್ಮಿಂದಾಗಿ ಕಡಿಮೆ ಆಗಲಿದೆ.
ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಬಿಳಿ ಬಣ್ಣ
ವೃಷಭ
ಕುಟುಂಬದಲ್ಲಿದ್ದ ಪರಸ್ಪರ ಅಪನಂಬಿಕೆ ಕಡಿಮೆಯಾಗುತ್ತದೆ. ಉದ್ಯೋಗದಲ್ಲಿ ಎದುರಾಗುವ ಅನಿರೀಕ್ಷಿತ ತಿರುವುಗಳು ಬೇಸರ ಮೂಡಿಸುತ್ತವೆ. ಉದ್ಯೋಗ ಬದಲಾಯಿಸುವ ಯೋಚನೆ ಮೂಡಲಿದೆ. ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ತರ ಬದಲಾವಣೆಗಳು ಉಂಟಾಗಲಿವೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ವರಮಾನ ದೊರೆಯುತ್ತದೆ. ವಿದ್ಯಾರ್ಥಿಗಳು ಯಾರ ಮಾತಿಗೂ ಗೌರವ ನೀಡದೆ ಸ್ವಂತ ನಿರ್ಧಾರಕ್ಕೆ ಬದ್ದರಾಗುತ್ತಾರೆ. ಹಣಕಾಸಿನ ವ್ಯವಹಾರದಲ್ಲಿ ಲಾಭವಿರುತ್ತದೆ. ಸೋದರನ ಜೊತೆಗೂಡಿ ಮನೆಕೊಳ್ಳುವ ಯೋಚನೆ ಇರುತ್ತದೆ. ಹಣದ ಕೊರತೆಯ ಕಾರಣ ಹಳೆಯ ವಾಹನವನ್ನು ಕೊಳ್ಳುವಿರಿ. ಕುಟುಂಬದಲ್ಲಿ ಮಂಗಳಕಾರ್ಯವೊಂದು ನಿಮ್ಮ ನೇತೃತ್ವದಲ್ಲಿ ನಡೆಯಲಿದೆ.
ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ : ಬೂದು ಬಣ್ಣ
ಮಿಥುನ
ಕುಟುಂಬದಲ್ಲಿ ತೆಗೆದುಕೊಳ್ಳುವ ತೀರ್ಮಾನಗಳನ್ನು ಬದಲಿಸುವಿರಿ. ಉದ್ಯೋಗದಲ್ಲಿ ಸ್ವಾರ್ಥದ ಗುಣವನ್ನು ತೋರುವಿರಿ. ವ್ಯಾಪಾರ ವ್ಯವಹಾರದಲ್ಲಿ ಅನುಕೂಲಕ್ಕೆ ತಕ್ಕಂತೆ ಬದಲಾಗುವಿರಿ. ಕುಟುಂಬದ ಅಧಿಕಾರ ನಿಮಗೆ ದೊರೆಯುತ್ತದೆ. ಕಣ್ಣಿನ ದೋಷ ಇರುತ್ತದೆ. ಬರಹಗಾರರಿಗೆ ಸಮಾಜದ ಉನ್ನತ ಸ್ಥಾನಮಾನ ದೊರೆಯುತ್ತದೆ. ಸೋದರರ ಜೊತೆಯಲ್ಲಿ ದೂರದ ಊರಿಗೆ ಪ್ರಯಾಣ ಆರಂಭಿಸುವಿರಿ. ಆತುರದಲ್ಲಿ ಮಾಡುವ ಸಣ್ಣ ತಪ್ಪುಗಳನ್ನೂ ದೊಡ್ಡವಿವಾದವನ್ನಾಗಿ ಮಾಡುವಿರಿ. ಸಾಲದ ವ್ಯವಹಾರ ಮಾಡದಿರಿ. ಸಾರ್ವಜನಿಕರಿಗೆ ಅನುಕೂಲವಾಗುವ ಯೋಜನೆ ರೂಪಿಸುವಿರಿ. ಹಿರಿಯರ ಆದೇಶದಂತೆ ಸ್ವಂತ ವ್ಯಾಪಾರವನ್ನು ಆರಂಭಿಸುವಿರಿ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಕಂದು ಬಣ್ಣ
ಕಟಕ
ಕುಟುಂಬದ ಸದಸ್ಯರ ನಡುವೆ ಸದ್ಭಾವನೆಯ ಕೊರತೆ ಇರುತ್ತದೆ. ಉದ್ಯೋಗದಲ್ಲಿ ಸಣ್ಣ ಪುಟ್ಟ ಅಡಚಣೆಗಳು ಎದುರಾದರೂ ತೊಂದರೆ ಕಾಣದು. ಸ್ವಂತ ಕೆಲಸಗಳಿಗೆ ಹೆಚ್ಚಿನ ಮಹತ್ವ ನೀಡುವಿರಿ. ಉತ್ತಮ ಪ್ರಯತ್ನದ ಕಾರಣ ವ್ಯಾಪಾರ ವ್ಯವಹಾರದಲ್ಲಿ ಒಳ್ಳೆಯ ಆದಾಯ ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ಆತುರದ ನಿರ್ಧಾರವನ್ನು ತೆಗೆದುಕೊಂಡು ವಿವಾದದಲ್ಲಿ ಸಿಲುಕುವಿರಿ. ಉತ್ತಮ ಅವಕಾಶ ದೊರೆತು ವೃತ್ತಿ ಬದಲಾವಣೆ ಮಾಡುವಿರಿ. ವಿದ್ಯಾರ್ಥಿಗಳು ವಿವೇಚನೆ ಇಲ್ಲದೆ ತಪ್ಪು ನಿರ್ಧಾರ ತೆಗೆದುಕೊಳ್ಳುವರು. ಕುಟುಂಬಕ್ಕೆ ಆತ್ಮೀಯರೊಬ್ಬರ ಆಗಮನ ಆಗಲಿದೆ. ಮನದಲ್ಲಿ ವೈರಾಗ್ಯದ ಭಾವನೆ ಮೂಡುತ್ತದೆ. ಕುಟುಂಬಕ್ಕೆ ಸೇರಿದ ಕಾನೂನು ಪ್ರಕ್ರಿಯೆಯಲ್ಲಿ ಜಯ ದೊರೆಯುತ್ತದೆ.
ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 9
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಕಪ್ಪುಬಣ್ಣ
-----------------------
ಜ್ಯೋತಿಷಿ: ಎಚ್. ಸತೀಶ್, ಬೆಂಗಳೂರು
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
ವಿಭಾಗ