ಕನ್ನಡ ಸುದ್ದಿ  /  Astrology  /  Horoscope Today Astrology Prediction In Kannada 23 February 2024 Aries Taurus Gemini Cancer Daily Horoscope Sts

Horoscope Today: ಅನಾವಶ್ಯಕ ಸುತ್ತಾಟ, ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ; ಮೇಷದಿಂದ ಕಟಕ ರಾಶಿಯವರೆಗಿನ ದಿನಭವಿಷ್ಯ

ಫೆಬ್ರವರಿ 23, ಶುಕ್ರವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (23 February 2024 Daily Horoscope).

ಫೆಬ್ರವರಿ 23ರ ದಿನಭವಿಷ್ಯ
ಫೆಬ್ರವರಿ 23ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. ( February 23 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಾಘ ಮಾಸ, ಶುಕ್ಲಪಕ್ಷ, ಶುಕ್ರವಾರ

ತಿಥಿ : ಚತುರ್ದಶಿ ತಿಥಿಯು ಹಗಲು 03.01 ರವರೆಗು ಇದ್ದು ಆನಂತರ ಹುಣ್ಣಿಮೆ ಆರಂಭವಾಗುತ್ತದೆ.

ನಕ್ಷತ್ರ : ಆಶೇಷ ನಕ್ಷತ್ರವು ರಾ.07.06 ವರೆಗು ಇರುತ್ತದೆ. ಆನಂತರ ಮಖ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.39

ಸೂರ್ಯಾಸ್ತ: ಸ.06.26

ರಾಹುಕಾಲ : ಬೆ.10.30 ರಿಂದ ಮ. 12.00

ರಾಶಿ ಫಲಗಳು

ಮೇಷ

ಎಲ್ಲರ ಪರಿಶ್ರಮದಿಂದ ಕುಟುಂಬದ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿವೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಮೊದಲ ಆದ್ಯತೆ ನೀಡುವಿರಿ. ರುಚಿಕರವಾದ ಆಹಾರವನ್ನು ಇಷ್ಟಪಡುವಿರಿ. ಆರೋಗ್ಯದಲ್ಲಿ ಏರಿಳಿತವಿರುತ್ತದೆ. ಮನದಲ್ಲಿ ಧನಾತ್ಮಕ ಚಿಂತನೆಗಳು ಇರುತ್ತವೆ. ಮಾಡುವ ಕಾರ್ಯದಲ್ಲಿ ಶ್ರದ್ಧೆ ತೋರುವಿರಿ. ಸಮಾಜದಲ್ಲಿ ಗೌರವದ ಸ್ಥಾನ ಲಭ್ಯವಾಗುತ್ತದೆ. ವಾದ ವಿವಾದಗಳಿಂದ ದೂರ ಉಳಿಯುವಿರಿ. ಶಾಂತಿಯಿಂದ ಕೆಲಸ ಸಾಧಿಸುವಿರಿ. ಬಂದಷ್ಠೇ ಬೇಗ ಕೋಪ ಶಮನವಾಗುತ್ತದೆ. ಕುಟುಂಬದ ಉನ್ನತಿಗಾಗಿ ಶ್ರಮಿಸುವಿರಿ. ಆಮದು ರಫ್ತಿನ ವ್ಯವಹಾರದಲ್ಲಿ ಉತ್ತಮ ಆದಾಯವನ್ನು ನಿರೀಕ್ಷಿಸಬಹುದು. ಸುಲಭವಾಗಿ ಹಣವನ್ನು ಖರ್ಚು ಮಾಡುವುದಿಲ್ಲ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ತಯಾರಿಸಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ವೃಷಭ

ಯಾವುದೇ ಬದಲಾವಣೆ ಇಲ್ಲದ ಕಾರಣ ಕುಟುಂಬದಲ್ಲಿ ಬೇಸರ ನೆಲೆಸಿರುತ್ತದೆ. ಆಕಸ್ಮಿಕವಾಗಿ ವಾದ ವಿವಾದದಲ್ಲಿ ಸಿಲುಕುವಿರಿ. ಸೋದರನ ಜೊತೆ ಹಣಕಾಸಿನ ವಿಚಾರದಲ್ಲಿ ಭಿನ್ನಾಭಿಪ್ರಾಯ ಇರುತ್ತದೆ. ದುಡುಕಿ ತೆಗೆದುಕೊಳ್ಳುವ ತೀರ್ಮಾನದಿಂದ ತೊಂದರೆ ಇರುತ್ತದೆ. ಉದ್ಯೋಗದಲ್ಲಿನ ಕೆಲಸ ಕಾರ್ಯಗಳು ಅಪೂರ್ಣಗೊಳ್ಳಲಿದೆ. ಅನಾವಶ್ಯಕ ಸುತ್ತಾಟದಿಂದ ದೈಹಿಕವಾಗಿ ಬಳಲುವಿರಿ. ಹಿರಿಯರ ವ್ಯಾಪಾರದಲ್ಲಿ ಸಹಾಯ ಮಾಡುವಿರಿ. ಏಕಾಂಗಿತನ ಬಹುವಾಗಿ ಕಾಡುತ್ತದೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಹೆಚ್ಚಿನ ಗಮನ ನೀಡಲಿದ್ದಾರೆ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಲಾಭವಿದೆ. ಸ್ವಂತ ಮನೆಯನ್ನು ಕಟ್ಟುವ ವಿಚಾರಕ್ಕೆ ಚಾಲನೆ ನೀಡುವಿರಿ. ಅವಶ್ಯವಿದ್ದಲ್ಲಿ ಹಿರಿಯರ ಸಲಹೆಯನ್ನು ಪಾಲಿಸಿ.

ಪರಿಹಾರ : ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ಕೆಂಪು ಬಣ್ಣ

ಮಿಥುನ

ಕುಟುಂಬದಲ್ಲಿನ ಬದಲಾವಣೆಗಳು ಗಲಿಬಿಲಿಗೆ ಕಾರಣವಾಗಲಿವೆ. ಯಾವುದೇ ವಿಚಾರದಲ್ಲಿಯೂ ದಿಟ್ಟ ನಿಲುವು ತೆಗೆದುಕೊಳ್ಳಲು ವಿಫಲರಾಗುವಿರಿ. ಅತಿಯಾದ ನಿರೀಕ್ಷೆಗಳು ಮಾನಸಿಕ ಒತ್ತಡ ಉಂಟುಮಾಡಲಿವೆ. ಉದ್ಯೋಗದಲ್ಲಿನ ಆಶೋತ್ತರಗಳು ನೆಮ್ಮದಿಯನ್ನು ಕದಡುತ್ತದೆ. ಉತ್ತಮ ಆದಾಯವಿರುತ್ತದೆ. ಹಣವನ್ನು ಉಳಿಸಲು ಪ್ರಯತ್ನಿಸುವಿರಿ. ಪಾಲುಗಾರಿಕೆಯಲ್ಲಿ ಹಣಕಾಸಿನ ವ್ಯವಹಾರವನ್ನುಅರಂಭಿಸುವಿರಿ. ಏಕಾಗ್ರತೆಯನ್ನು ಬೆಳೆಸಿಕೊಂಡಲ್ಲಿ ವಿದ್ಯಾರ್ಥಿಗಳು ಸಫಲತೆ ಕಾಣಬಹುದು. ಆಕಸ್ಮಿಕವಾಗಿ ಸ್ಥಿರಾಸ್ಥಿಯೊಂದು ನಿಮ್ಮ ಕೈ ಸೇರುತ್ತದೆ. ನೂತನ ವಾಹನ ಲಾಭವಿದೆ. ಆತ್ಮೀಯರೊಬ್ಬರ ಹಣದ ವ್ಯವಹಾರದಲ್ಲಿ ಸಂಧಿಗ್ದತೆಗೆ ಒಳಗಾಗುವಿರಿ.

ಪರಿಹಾರ : ತಾಯಿಯವರಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ಕಟಕ

ಆತುರದ ನಿರ್ಧಾರವೊಂದು ಕುಟುಂಬದ ನೆಮ್ಮದಿ ಕೆಡಿಸುತ್ತದೆ. ಉದ್ಯೋಗದಲ್ಲಿನ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿವೆ. ವಿದ್ಯಾರ್ಥಿಗಳು ವಿಶ್ರಾಂತಿ ಇಲ್ಲದೆ ಅಭ್ಯಾಸದಲ್ಲಿ ನಿರತರಾಗುತ್ತಾರೆ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ತೊಂದರೆ ಉಂಟಾಗಬಹುದು. ಮನೆಯ ನವೀಕರಣಕ್ಕಾಗಿ ಹಣವನ್ನು ಖರ್ಚುಮಾಡುವಿರಿ. ಬೇರೆಯವರಿಂದ ಹಣವನ್ನು ಎರವಲು ಪಡೆಯಬೇಕಾಗುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ಇರುತ್ತದೆ. ನಿಮಗೆ ವಿವಾಹದ ಯೋಗವಿದೆ. ಸರಕಾರದ ಅನುದಾನದಲ್ಲಿ ವ್ಯಾಪಾರವನ್ನು ಅಭಿವೃದ್ಧಿಪಡಿಸುವಿರಿ. ನೀರಿರುವ ಪ್ರದೇಶಕ್ಕೆ ಕಿರುಪ್ರವಾಸ ಕೈಗೊಳ್ಳುವಿರಿ. ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ. ಸಮಾನ ಮನಸ್ಕರ ಕೂಟದ ನಾಯಕತ್ವ ವಹಿಸುವಿರಿ.

ಪರಿಹಾರ : ಪಕ್ಷಿಗಳಿಗೆ ಆಹಾರವನ್ನು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಹಳದಿ ಬಣ್ಣ

------------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).