ಕನ್ನಡ ಸುದ್ದಿ  /  Astrology  /  Horoscope Today Astrology Prediction In Kannada 24 March 2024 Aries Taurus Gemini Cancer Daily Horoscope Sts

Horoscope Today: ಉದ್ಯೋಗ ಬದಲಿಸುವ ಸಾಧ್ಯತೆ, ಮಕ್ಕಳ ಸಾಧನೆ ಮನಸ್ಸಿಗೆ ನೆಮ್ಮದಿ ನೀಡತ್ತೆ; ಮೇಷದಿಂದ ಕಟಕ ರಾಶಿಯವರೆಗಿನ ದಿನಭವಿಷ್ಯ

ಮಾರ್ಚ್​ 24, ಭಾನುವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (24 March 2024 Daily Horoscope).

ಮಾರ್ಚ್​ 24ರ ದಿನಭವಿಷ್ಯ
ಮಾರ್ಚ್​ 24ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (24 March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲಪಕ್ಷ, ಭಾನುವಾರ

ತಿಥಿ : ಚತುರ್ದಶಿ ಬೆ. 09.12 ರವರೆಗು ಇರುತ್ತದೆ. ಆನಂತರ ಹುಣ್ಣಿಮೆ ಆರಂಭವಾಗಲಿದೆ.

ನಕ್ಷತ್ರ : ಪುಬ್ಬ ನಕ್ಷತ್ರವು ಬೆ. 07.05 ರವರೆಗು ಇರುತ್ತದೆ. ಆನಂತರ ಉತ್ತರ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆ.06.22

ಸೂರ್ಯಾಸ್ತ: ಸ.06.30

ರಾಹುಕಾಲ : ಬೆ. 04.30 ರಿಂದ ಸ.06.00

ರಾಶಿ ಫಲಗಳು

ಮೇಷ

ವಿಶ್ರಾಂತಿ ಇಲ್ಲದ ದುಡಿಮೆ ಕೋಪ ತಾಪಗಳಿಗೆ ಕಾರಣವಾಗುತ್ತದೆ. ಹಣಕಾಸಿನ ಕೊರತೆ ಕಡಿಮೆ ಆಗಲಿದೆ. ಜವಾಬ್ದಾರಿಗಳ ನಡುವೆ ಅರೋಗ್ಯದ ಬಗ್ಗೆ ಗಮನ ವಹಿಸಬೇಕು. ಉದ್ಯೋಗದಲ್ಲಿ ಬೇಸರದ ಸನ್ನಿವೇಶವೊಂದು ಎದುರಾಗುತ್ತದೆ. ಆದರೆ ಆತ್ಮೀಯರೊಬ್ಬರ ಕಾರಣ ಸಹಜ ಸ್ಥಿತಿ ಮರಳುತ್ತದೆ. ಯಾರೊಂದಿಗೂ ವಾದ ವಿವಾದ ಮಾಡದೆ ಬುದ್ಧಿವಂತಿಕೆಯ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಕಾರ್ಮಿಕ ವಲಯದವರು ವಿಶೇಷವಾದ ಸವಲತ್ತನ್ನು ಪಡೆಯುತ್ತಾರೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ್ಳಲ್ಲಿ ಯಶಸ್ಸನ್ನು ಗಳಿಸುತ್ತಾರೆ. ಉದ್ಯೋಗ ಬದಲಿಸುವ ಸಾಧ್ಯತೆಗಳು ಕಾಣುತ್ತದೆ. ಹಣಕಾಸಿನ ವಿಚಾರದಲ್ಲಿ ಆತುರದ ನಿರ್ಧಾರ ತೆಗೆದುಕೊಳ್ಳದಿರಿ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕಪ್ಪು ಬಣ್ಣ

ವೃಷಭ

ಮಾಡುವ ಕೆಲಸವನ್ನು ಸ್ವಂತ ಬುದ್ದಿಬಲದಿಂದ ಪೂರ್ಣಗೊಳಿಸುವಿರಿ. ಹಠದ ಸ್ವಾಭಾವವಿರುತ್ತದೆ. ನನ್ನ ಹಾದಿಯೇ ಸರಿ ಎಂಬ ಭಾವನೆ ಇರುತ್ತದೆ. ಸ್ಟಾಕ್ ಮತ್ತು ಷೇರಿನ ವ್ಯವಹಾರದ ಲಾಭಾಂಶ ದೊರೆಯುತ್ತದೆ. ಉದ್ಯೋಗಸ್ಥರಿಗಿಂತ ವ್ಯಾಪಾರಸ್ಥರಿಗೆ ನಲ್ಮೆಯ ದಿನ. ಭೂವ್ಯವಹಾರದಲ್ಲಿ ಲಾಭವಿರುತ್ತದೆ. ಕುಟುಂಬದಲ್ಲಿಒಮ್ಮತದ ಕೊರತೆ ಇರುತ್ತದೆ. ಅವಿವಾಹಿತರಿಗೆ ವಿವಾಹಯೋಗವಿದೆ. ವಿದ್ಯಾರ್ಥಿಗಳು ನಿರೀಕ್ಷಿತ ಯಶಸ್ಸು ಗಳಿಸುತ್ತಾರೆ. ವಾಸಸ್ಥಳವನ್ನು ಬದಲಾಯಿಸುವ ಬಗ್ಗೆ ಯೋಚಿಸುವಿರಿ. ಹಣಕಾಸಿನ ವ್ಯವಹಾರದಲ್ಲಿ ತೊಂದರೆ ಉಂಟಾಗಬಹುದು ಎಚ್ಚರಿಕೆಯಿಂದಿರಿ. ಹಿರಿಯ ಅಧಿಕಾರಿಗಳ ಅವಕೃಪೆಗೆ ಒಳಗಾಗುವಿರಿ. ಕುಟುಂಬದಲ್ಲಿ ಹಣದ ಕೊರತೆ ಕಂಡುಬರುತ್ತದೆ.

ಪರಿಹಾರ : ಸಾಧು ಸಂತರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ತಿಳಿಹಸಿರು ಬಣ್ಣ

ಮಿಥುನ

ಅಸ್ಥಿರದ ಮನಸ್ಸಿನ ಯಾವುದೇ ಕೆಲಸ ಕಾರ್ಯವನ್ನು ಆರಂಭಿಸಲು ಸಾಧ್ಯವಾಗದು. ಜೀವನದಲ್ಲಿನ ಅಡೆತಡೆಗಳು ಸಂಗಾತಿಯ ಸಹಾಯದಿಂದ ದೂರಾಗುತ್ತದೆ. ಉದ್ಯೋಗ ದೊರೆತು ವಿದೇಶಕ್ಕೆ ತೆರಳುವಿರಿ. ಹಣದ ವಿವಾದವೊಂದು ಬಗೆಹರಿಯಲಿದೆ. ಸಂಗಾತಿಯ ಸಹಯೋಗದಲ್ಲಿ ಹೊಸ ವ್ಯಾಪಾರವನ್ನು ಆರಂಭಿಸುವಿರಿ. ರಾಜಕೀಯ ವಲಯದಲ್ಲಿ ಇರುವವರು ಉತ್ತಮ ಆದಾಯ ಮತ್ತು ಜನಪ್ರಿಯತೆಯನ್ನು ಗಳಿಸಲಿದ್ದಾರೆ. ಕೃಷಿಭೂಮಿಯನ್ನು ಕೊಳ್ಳುವ ಮಾತುಕತೆ ನಡೆಯುತ್ತದೆ. ಅಧಿಕಾರಿಗಳಿಗೆ ಸವಾಲೆನಿಸುವ ಸಮಸ್ಯೆಯೊಂದು ಎದುರಾಗಲಿದೆ. ಅನಿರೀಕ್ಷಿತ ಧನಾಗಮವಿದೆ. ಸ್ತ್ರೀಯರು ಬಂಗಾರದ ಒಡವೆಗಳಿಗೆ ಹೆಚ್ಚಿನ ಹಣ ಖರ್ಚು ಮಾಡಲಿದ್ದಾರೆ. ಅನಿವಾರ್ಯವಾಗಿ ಆತ್ಮೀಯರಿಂದ ಹಣವನ್ನು ಪಡೆಯುವಿರಿ.

ಪರಿಹಾರ : ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸುವುದು.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ

ಕಟಕ

ಕುಟುಂಬದ ಒಟ್ಟು ಆದಾಯ ಹೆಚ್ಚಲಿದೆ. ಮನದಲ್ಲಿ ಹೊಸ ಯೋಜನೆಯು ಮೂಡಲಿದೆ. ಹಣವನ್ನು ಉಳಿಸುವ ಹಾದಿಯಲ್ಲಿ ಸಾಗುವಿರಿ. ಮಕ್ಕಳ ಸಾಧನೆ ಮನಸ್ಸಿಗೆ ನೆಮ್ಮದಿ ನೀಡುತ್ತದೆ. ಸಂಗಾತಿಯ ಸಹಕಾರ ಮನದ ಚಿಂತೆ ದೂರ ಮಾಡಲಿದೆ. ಸಹೋದ್ಯೋಗಿಗಳ ಆಂತರ್ಯವನ್ನು ಅರ್ಥಮಾಡಿಕೊಳ್ಳುವಿರಿ. ಅಳುಕಿನ ಮನಸ್ಸಿನಿಂದ ಆರಂಭಿಸಿದ್ದ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭ ದೊರೆಯುತ್ತದೆ. ವಿದ್ಯಾರ್ಥಿಗಳ ಮನಸ್ಸಿಗೆ ಸಂತಸ ದೊರೆವ ಸುದ್ದಿ ಬರಲಿದೆ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ. ಪಾಲುಗಾರಿಕೆಯ ವ್ಯಾಪಾರದಲ್ಲಿ ಲಾಭವಿದೆ. ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗ ಪ್ರಾಣಾಯಾಮವನ್ನು ಅವಲಂಭಿಸುವುವಿರಿ. ಖರ್ಚು ವೆಚ್ಚದ ವಿಚಾರದಲ್ಲಿ ಯೋಚಿಸದೆ ಅವಸರದ ನಿರ್ಧಾರ ತೆಗೆದುಕೊಳ್ಳದಿರಿ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿಬಣ್ಣ

---------------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).