ಕನ್ನಡ ಸುದ್ದಿ  /  Astrology  /  Horoscope Today Astrology Prediction In Kannada 26 February 2024 Aries Taurus Gemini Cancer Daily Horoscope Sts

Horoscope Today: ಕೆಲವರಿಗೆ ಹಣದ ಸಹಾಯ ಮಾಡುವಿರಿ, ವಿವಾಹ ಯೋಗವಿದೆ; ಮೇಷದಿಂದ ಕಟಕ ರಾಶಿಯವರೆಗಿನ ದಿನಭವಿಷ್ಯ

ಫೆಬ್ರವರಿ 26, ಸೋಮವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (26 February 2024 Daily Horoscope).

ಫೆಬ್ರವರಿ 26ರ ದಿನಭವಿಷ್ಯ
ಫೆಬ್ರವರಿ 26ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. ( February 25 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಾಘ ಮಾಸ, ಕೃಷ್ಣಪಕ್ಷ, ಸೋಮವಾರ

ತಿಥಿ : ಬಿದಿಗೆ ತಿಥಿಯು ರಾ.09.05 ರವರೆಗು ಇದ್ದು ಆನಂತರ ತದಿಗೆ ಆರಂಭವಾಗುತ್ತದೆ.

ನಕ್ಷತ್ರ : ಉತ್ತರ ನಕ್ಷತ್ರವು ರಾ.02.38 ವರೆಗು ಇರುತ್ತದೆ. ಆನಂತರ ಹಸ್ತ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.35

ಸೂರ್ಯಾಸ್ತ: ಸ.06.26

ರಾಹುಕಾಲ : ಬೆ.07.30 ರಿಂದ ಬೆ.09.00

ರಾಶಿ ಫಲಗಳು

ಮೇಷ

ಕುಟುಂಬದಲ್ಲಿನ ಕೆಲಸ ಕಾರ್ಯಗಳು ಸರಾಗವಾಗಿ ನಡೆಯಲಿವೆ. ಸ್ತ್ರೀಯರು ಆರೋಗ್ಯದ ಕಡೆ ಗಮನ ನೀಡಬೇಕು. ಕೈಕಾಲುಗಳಿಗೆ ಸಂಬಂಧಿಸಿದ ತೊಂದರೆ ಕಂಡುಬರುತ್ತದೆ. ಗರ್ಭಿಣಿಯರಿಗೆ ಉತ್ತಮ ದಿನವಲ್ಲ. ಉದ್ಯೋಗದಲ್ಲಿ ನೆಚ್ಚಿನ ವ್ಯಕ್ತಿಯೊಬ್ಬರ ಆಗಮನ ಹೊಸ ಹುರುಪು ನೀಡುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಹೊಸ ಯೋಜನೆಗಳಲ್ಲಿ ಹಣವನ್ನು ಹೂಡಿಕೆ ಮಾಡುವಿರಿ. ಹಣದ ಕೊರತೆ ಇರುವುದಿಲ್ಲ. ಕುಟುಂಬದ ಹಿರಿಯರ ಹೆತ್ತವರ ಆರೋಗ್ಯದ ಬಗ್ಗೆ ಚಿಂತೆ ಇರುತ್ತದೆ. ದಾಂಪತ್ಯದಲ್ಲಿ ಪರಸ್ಪರ ಹೊಂದಾಣಿಕೆ ಇರುತ್ತದೆ. ವಿದ್ಯಾರ್ಥಿಗಳು ಸಹಪಾಠಿಗಳ ಸಹಕಾರ ದೊರೆಯುತ್ತದೆ. ಸಂತೋಷ ಮತ್ತು ಅಚ್ಚರಿಯ ದಿನವಾಗಲಿದೆ. ಕೆಲಸ ಕಾರ್ಯಗಳನ್ನು ಆರಂಭಿಸುವ ಮುನ್ನ ಆತ್ಮೀಯರೊಂದಿಗೆ ಚರ್ಚಿಸುವುದು ಒಳ್ಳೆಯದು. ಸ್ವಂತ ಕೆಲಸಕಾರ್ಯಗಳು ಅಪೂರ್ಣಗೊಳ್ಳಲಿವೆ. ಅನಿರೀಕ್ಷಿತ ಧನಲಾಭವಿದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೆಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ನೀಲಿಮಿಶ್ರಿತ ಬಿಳಿ ಬಣ್ಣ

ವೃಷಭ

ಮನಸ್ಸಿಗೆ ಹಿತವೆನಿಸುವ ಕೆಲಸವನ್ನಷ್ಟೇ ಮಾಡಲಿಚ್ಚಿಸುವಿರಿ. ಕುಟುಂಬದಲ್ಲಿ ಒಮ್ಮತ ನೆಲೆಸಿರುತ್ತದೆ. ದುಡುಕದೇ ಶಾಂತರೀತಿಯಲ್ಲಿ ಕೆಲಸ ಕಾರ್ಯಗಳನ್ನು ನಿರ್ವಹಿಸುವಿರಿ. ಕೆಲವರಿಗೆ ಹಣದ ಸಹಾಯ ಮಾಡಬೇಕಾಗುತ್ತದೆ. ಉದ್ಯೋಗದಲ್ಲಿ ಯಾವುದೇ ನಿರೀಕ್ಷೆಗಳಿಲ್ಲದೆ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಕೊಂಚ ತಡವಾಗಿ ಪಲಿತಾಂಶಗಳು ಲಭ್ಯವಾಗುತ್ತವೆ. ವ್ಯಾಪಾರ ವ್ಯವಹಾರದಲ್ಲಿ ಮಧ್ಯಮಗತಿಯ ಆದಾಯ ಇರುತ್ತದೆ. ಅನ್ಯರು ನೀಡುವ ಭರವಸೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡದಿರಿ. ವಿದ್ಯಾರ್ಥಿಗಳು ವಿನಮ್ರತೆಯಿಂದ ಅಭ್ಯಾಸದಲ್ಲಿ ನಿರತರಾಗಲಿದ್ದಾರೆ. ದಂಪತಿಗಳ ನಡುವೆ ಅನಾವಶ್ಯಕ ವಾದ ವಿವಾದಗಳು ಎದುರಾಗಲಿವೆ. ಆರೋಗ್ಯದ ಬಗ್ಗೆ ಗಮನವಿಡಿ. ಸಂಗಾತಿಯ ಸಹಾಯ ಸಹಕಾರದಿಂದಾಗಿ ನಿಮ್ಮ ಕೆಲಸ ಕಾರ್ಯಗಳು ಸುಗಮವಾಗಿ ನಡೆಯಲಿವೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ಹಾಲಿನ ಬಣ್ಣ

ಮಿಥುನ

ಕುಟುಂಬದಲ್ಲಿ ಅನಾವಶ್ಯಕ ವಾದ ವಿವಾದಗಳು ಉಂಟಾಗಲಿವೆ. ಮನಸ್ಸಿನಲ್ಲಿ ವೈರಾಗ್ಯದ ಭಾವನೆ ಮೂಡುತ್ತದೆ. ನೆಮ್ಮದಿಯ ಕೊರತೆಯೂ ಇರಲಿದೆ. ಯೋಗ ಪ್ರಾಣಾಯಾಮಗಳ ಸಹಾಯದಿಂದ ಆರೋಗ್ಯವನ್ನು ಕಾಪಾಡಿಕೊಳ್ಳುವಿರಿ. ಉದ್ಯೋಗದಲ್ಲಿನ ತಪ್ಪು ನಿರ್ಧಾರವನ್ನು ಬದಲಿಸಲು ನಿಮ್ಮ ಅಗತ್ಯತೆ ಬಹಳಷ್ಟು ಇರುತ್ತದೆ. ಉನ್ನತ ಅಧಿಕಾರಿಗಳಿಗೆ ಸರಿ ಸಮಾನವಾದ ಸ್ಥಾನಮಾನ ದೊರೆಯುತ್ತದೆ. ಬುದ್ಧಿವಂತಿಕೆಯಿಂದ ವ್ಯಾಪಾರ ವ್ಯವಹಾರಗಳಲ್ಲಿ ಉಂಟಾಗುವ ಹಾನಿಯನ್ನು ಲಾಭವಾಗಿ ಪರಿವರ್ತಿಸುವಿರಿ. ವಿದ್ಯಾರ್ಥಿಗಳು ಸ್ನೇಹಿತರೊಂದಿಗೆ ಮನರಂಜನೆಯಲ್ಲಿ ವೇಳೆ ಕಳೆಯುತ್ತಾರೆ. ಆದರೆ ಸಂಗಾತಿಯಿಂದ ಸಹಾಯ ಸಹಕಾರ ಕಂಡುಬರುತ್ತವೆ. ಹೆಚ್ಚಿನ ಹಣವನ್ನು ಸಂಪಾದಿಸುವ ಸಲುವಾಗಿ ಪಾರುಗಾರಿಕೆಯ ವ್ಯಾಪಾರವನ್ನು ಆರಂಭಿಸುವಿರಿ.

ಪರಿಹಾರ : ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ಕಟಕ

ಕೆಲಸ ಕಾರ್ಯಗಳಲ್ಲಿ ಹೆಚ್ಚಿನ ಆಸಕ್ತಿ ಇರುವುದಿಲ್ಲ. ಅನಿವಾರ್ಯವಾಗಿ ಎದುರಾಗುವ ಸಮಸ್ಯೆಗಳಿಗೆ ಬಗೆಹರಿಸುವಿರಿ. ಕುಟುಂಬದ ಸ್ಥಿತಿಗತಿಗಳ ಸುಧಾರಣೆಗೆ ಪರಿಶ್ರಮಿಸುವಿರಿ. ಸ್ವಂತ ಕೆಲಸ ಕಾರ್ಯಗಳಿಗೆ ಮೊದಲ ಆದ್ಯತೆ ತೋರುವಿರಿ. ಉದ್ಯೋಗದಲ್ಲಿ ಯಾವುದೇ ಬದಲಾವಣೆಗಳು ಕಾಣುವುದಿಲ್ಲ. ಮನಸ್ಸಿಗೆ ಮುದ ನೀಡುವ ಮನರಂಜನ ಕಾರ್ಯಕ್ರಮಗಳಿಗೆ ತೆರಳುವಿರಿ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಅಭ್ಯಾಸದಲ್ಲಿ ಮುಂದುವರೆಯುವರು. ಹಣದ ಕೊರತೆ ಇದ್ದರೂ ಆದಾಯಕ್ಕೆ ತೊಂದರೆ ಇರದು. ಸಂಗೀತ ಸಾಹಿತ್ಯದಲ್ಲಿ ಆಸಕ್ತಿ ಮೂಡುತ್ತದೆ. ಸಾಮರ್ಥ್ಯಕ್ಕೆ ಸವಾಲೆನಿಸುವ ವಿವಾದಗಳು ಎದುರಾಗುತ್ತವೆ. ಅವಿವಾಹಿತರಿಗೆ ವಿವಾಹ ಯೋಗವಿದೆ. ಅನಾವಶ್ಯಕ ಖರ್ಚು ವೆಚ್ಚಗಳನ್ನು ಕಡಿಮೆ ಮಾಡಲು ಪ್ರಯತ್ನಿಸುವಿರಿ.

ಪರಿಹಾರ : ಮನೆಯ ದೇವರ ಗುಡಿಯಲ್ಲಿ ತುಪ್ಪದ ದೀಪವನ್ನು ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಆಕಾಶ ನೀಲಿ ಬಣ್ಣ

------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).