Horoscope Today: ಸ್ನೇಹಿತರಿಂದ ಹಣಕಾಸಿನ ಸಹಾಯ ಸಿಗತ್ತೆ, ಸಂಗಾತಿಯ ಆರೋಗ್ಯದ ಬಗ್ಗೆ ಗಮನವಿರಲಿ; ಮೇಷದಿಂದ ಕಟಕ ರಾಶಿಯವರೆಗಿನ ದಿನಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಸ್ನೇಹಿತರಿಂದ ಹಣಕಾಸಿನ ಸಹಾಯ ಸಿಗತ್ತೆ, ಸಂಗಾತಿಯ ಆರೋಗ್ಯದ ಬಗ್ಗೆ ಗಮನವಿರಲಿ; ಮೇಷದಿಂದ ಕಟಕ ರಾಶಿಯವರೆಗಿನ ದಿನಭವಿಷ್ಯ

Horoscope Today: ಸ್ನೇಹಿತರಿಂದ ಹಣಕಾಸಿನ ಸಹಾಯ ಸಿಗತ್ತೆ, ಸಂಗಾತಿಯ ಆರೋಗ್ಯದ ಬಗ್ಗೆ ಗಮನವಿರಲಿ; ಮೇಷದಿಂದ ಕಟಕ ರಾಶಿಯವರೆಗಿನ ದಿನಭವಿಷ್ಯ

ಮಾರ್ಚ್​ 3, ಭಾನುವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (3 March 2024 Daily Horoscope).

ಮಾರ್ಚ್​ 3ರ ದಿನಭವಿಷ್ಯ
ಮಾರ್ಚ್​ 3ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (3 March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಾಘ ಮಾಸ, ಕೃಷ್ಣಪಕ್ಷ, ಭಾನುವಾರ

ತಿಥಿ : ಅಷ್ಟಮಿ ರಾ.03.10 ರವರೆಗು ಇದ್ದು ಆನಂತರ ನವಮಿ ಆರಂಭವಾಗುತ್ತದೆ.

ನಕ್ಷತ್ರ : ಅನೂರಾಧ ನಕ್ಷತ್ರವು ಬೆ.11.05 ರವರೆಗೆ ಇರುತ್ತದೆ. ಆನಂತರ ಜ್ಯೇಷ್ಠ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.34

ಸೂರ್ಯಾಸ್ತ: ಸ.06.27

ರಾಹುಕಾಲ : ಬೆ.04.30 ರಿಂದ ಸ.06.00

ರಾಶಿ ಫಲಗಳು

ಮೇಷ

ಕುಟುಂಬದ ಜವಾಬ್ದಾರಿಯು ಕಡಿಮೆಯಾಗುತ್ತದೆ. ಆದರೆ ಮಾನಸಿಕ ಒತ್ತಡ ಸದಾ ಇರುತ್ತದೆ. ಸಮಯಕ್ಕೆ ತಕ್ಕಂತೆ ಹಣದ ಅನುಕೂಲತೆ ದೊರೆಯುತ್ತದೆ. ಉದ್ಯೋಗದಲ್ಲಿ ಎಲ್ಲರೊಂದಿಗೆ ಸ್ನೇಹ ಪ್ರೀತಿಯಿಂದ ನಡೆದುಕೊಳ್ಳುವಿರಿ. ಕೆಲವೊಂದು ಬದಲಾವಣೆಗಳು ಮನದ ಸಂತೋಷವನ್ನು ಹೆಚ್ಚಿಸುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಆತ್ಮೀಯರ ಸಹಕಾರ ಇರಲಿದೆ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗಬಹುದು. ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಆಶ್ರಯವೆನಿಸುವ ಘಟನೆ ಒಂದು ಆತ್ಮವಿಶ್ವಾಸ ತುಂಬಲಿದೆ. ಅನಾವಶ್ಯಕವಾದ ಖರ್ಚು ವೆಚ್ಚಗಳನ್ನು ಧೃಡವಾದ ಮನಸ್ಸಿನಿಂದ ಕಡಿಮೆ ಮಾಡುವಿರಿ.

ಪರಿಹಾರ : ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ವೃಷಭ

ಕ್ರೀಡಾ ಸ್ಪೂರ್ತಿಯನ್ನು ಬೆಳೆಸಿಕೊಂಡರೆ ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸುತ್ತದೆ. ಕೈಹಾಕುವ ಕೆಲಸ ಕಾರ್ಯಗಳು ಕಠಿಣ ಪರಿಶ್ರಮದಿಂದ ಯಶಸ್ವಿಯಾಗುತ್ತದೆ. ಉದ್ಯೋಗದಲ್ಲಿ ಉನ್ನತ ಮಟ್ಟವನ್ನು ಗಳಿಸುವಿರಿ. ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳುವ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯವಿರುತ್ತದೆ. ಆದರೆ ಖರ್ಚುವೆಚ್ಚಗಳನ್ನು ಕಡಿತಗೊಳಿಸಬೇಕು. ವಿದ್ಯಾರ್ಥಿಗಳು ಹಠದ ಬುದ್ಧಿಯಿಂದ ವಿದ್ಯಾಭ್ಯಾಸದಲ್ಲಿ ಪ್ರಥಮಸ್ಥಾನ ಗಳಿಸುತ್ತಾರೆ. ಮನರಂಜನೆಯ ಸಲುವಾಗಿ ಹಣವನ್ನು ಖರ್ಚು ಮಾಡುವಿರಿ. ಸಂಗಾತಿಯ ಆರೋಗ್ಯದ ಬಗ್ಗೆ ಗಮನವಹಿಸಿ. ಮಕ್ಕಳಿಗೆ ಸಂಬಂಧಪಟ್ಟಂತೆ ಶುಭ ವರ್ತಮಾನವೊಂದು ಬರಲಿದೆ.

ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಹಳದಿ ಬಣ್ಣ

ಮಿಥುನ

ಕುಟುಂಬದವರೊಂದಿಗೆ ಸಂತೋಷದಿಂದ ಬಾಳುವಿರಿ. ಸತತ ದುಡಿಮೆಯಿಂದ ಬೇಸತ್ತು ಕಿರು ಪ್ರವಾಸಕ್ಕೆ ತೆರಳುವಿರಿ. ಅನಿವಾರ್ಯವಾದ ಕೆಲಸ ಕಾರ್ಯಗಳು ಉತ್ತಮ ಫಲಗಳನ್ನು ನೀಡಲಿವೆ. ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿಯನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹೆಚ್ಚಿನ ಹಣದ ಅವಶ್ಯಕತೆ ಇರುತ್ತದೆ. ದಂಪತಿಗಳ ನಡುವೆ ಇದ್ದ ಮನಸ್ತಾಪವು ಕೊನೆಗೊಳ್ಳಲಿದೆ. ಜೀವನದಲ್ಲಿ ನಡೆವ ಮುಖ್ಯವಾದ ಘಟನೆಯೊಂದು ಸಂತಸ ಮೂಡಿಸುತ್ತದೆ. ಬೇರೆಯವರ ಮಾತನ್ನು ತಪ್ಪಾಗಿ ಭಾವಿಸುವಿರಿ. ಸ್ನೇಹಿತರಿಂದ ಹಣಕಾಸಿನ ಸಹಾಯ ದೊರೆಯುತ್ತದೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಮುಳುಗುತ್ತಾರೆ. ತಪ್ಪು ಅಭಿಪ್ರಾಯದಿಂದ ದೂರವಾಗಿದ್ದ ಕುಟುಂಬದ ಸದಸ್ಯರು ಮರಳಿ ಬರುವರು.

ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಹಸಿರು ಬಣ್ಣ

ಕಟಕ

ಕ್ರಿಯಾಶೀಲತೆಯ ಬುದ್ಧಿ ಇರುವ ಕಾರಣ ಕುಟುಂಬಕ್ಕೆ ಬೆಂಗಾವರಾಗುವಿರಿ. ಒಳ್ಳೆಯ ವಿಚಾರಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳುವಿರಿ. ಭೂ ಸಂಬಂಧಿತ ವ್ಯವಹಾರಗಳಲ್ಲಿ ಬಂಡವಾಳ ಹೂಡುವಿರಿ. ಉದ್ಯೋಗದಲ್ಲಿನ ಸಮಸ್ಯೆಗಳನ್ನು ಬಗೆಹರಿಸಿ ಮೆಚ್ಚುಗೆ ಗಳಿಸುವಿರಿ. ಬಡ್ತಿ ದೊರೆಯುವ ಸಾಧ್ಯತೆಗಳಿವೆ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಆಸಕ್ತಿ ತೋರುವುದಿಲ್ಲ. ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳ ಜೊತೆಯಲ್ಲಿ ಕಲಿಕೆಗೆ ಪ್ರಮುಖ ಸ್ಥಾನ ನೀಡಲಿದ್ದಾರೆ. ಒಳ್ಳೆಯ ಮಾತುಗಳಿಗೆ ಸುಲಭವಾಗಿ ಸೋತು ಹೋಗುವಿರಿ. ನಿಮ್ಮ ಮನಸ್ಸಿಗೆ ಒಪ್ಪುವ ಕೆಲಸಗಳನ್ನು ಗಮನವಿಟ್ಟು ಪೂರೈಸುವಿರಿ. ಚಿಕ್ಕ ಮಕ್ಕಳ ಆರೋಗ್ಯದ ಬಗ್ಗೆ ಗಮನ ವಹಿಸಿ. ಸಂಗಾತಿಯೊಂದಿಗೆ ಉತ್ತಮ ಬಾಂಧವ್ಯ ರೂಪುಗೊಳ್ಳಲಿದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ನೀಲಿ ಬಣ್ಣ

---------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.