Horoscope Today: ಮಂಗಳ ಕಾರ್ಯಕ್ಕಾಗಿ ಹೆಚ್ಚಿನ ಹಣ ಬೇಕು, ಗೃಹಿಣಿಯರ ಆರೋಗ್ಯದಲ್ಲಿ ಕೊಂಚ ತೊಂದರೆ; ಮೇಷದಿಂದ ಕಟಕ ರಾಶಿಯವರೆಗಿನ ದಿನಭವಿಷ್ಯ
ಮಾರ್ಚ್ 7, ಗುರುವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (7 March 2024 Daily Horoscope).

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (7 March 2024 Daily Horoscope).
ಇಂದಿನ ಪಂಚಾಂಗ
ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಾಘ ಮಾಸ, ಕೃಷ್ಣಪಕ್ಷ, ಗುರುವಾರ
ತಿಥಿ : ದ್ವಾದಶಿ ರಾ.10.04 ರವರೆಗು ಇದ್ದು ಆನಂತರ ತ್ರಯೋದಶಿ ಆರಂಭವಾಗುತ್ತದೆ.
ನಕ್ಷತ್ರ ಉತ್ತರಾಷಾಡ ನಕ್ಷತ್ರವು ಬೆ.09.38 ರವರೆಗೆ ಇರುತ್ತದೆ. ಆನಂತರ ಶ್ರವಣ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆ.06.32
ಸೂರ್ಯಾಸ್ತ: ಸ.06.27
ರಾಹುಕಾಲ : ಬೆ.01.30 ರಿಂದ ಬೆ.03.00
ರಾಶಿ ಫಲಗಳು
ಮೇಷ
ಅನಿರೀಕ್ಷಿತ ಘಟನೆಗಳಿಂದ ಕುಟುಂಬವು ಗೊಂದಲದ ಗೂಡಾಗುತ್ತದೆ. ಉದ್ಯೋಗದಲ್ಲಿ ಗಡಿಬಿಡಿಯ ವಾತಾವರಣ ಬೇಸರ ಮೂಡಿಸುತ್ತದೆ. ಬಹುದಿನದಿಂದ ನಿರೀಕ್ಷಿಸಿದ ಹಣಕಾಸಿನ ವಿಚಾರದಲ್ಲಿ ಅಡಚಣೆ ಉಂಟಾಗಬಹುದು. ವ್ಯಾಪಾರ ವ್ಯವಹಾರಗಳಲ್ಲಿ ಒತ್ತಡದಿಂದ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಆರ್ಥಿಕ ಪರಿಸ್ಥಿತಿ ಕ್ರಮೇಣ ಸಹಜ ಸ್ಥಿತಿಗೆ ಮರಳುತ್ತದೆ. ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆಯಿಂದ ಕಲಿಕೆಯಲ್ಲಿ ಸಾಗುತ್ತಾರೆ. ಬೇರೆಯವರ ಸಲಹೆ ಸೂಚನೆಯನ್ನು ಆಲಿಸುವುದು ಒಳಿತು. ಹಿರಿಯರ ಆದೇಶವನ್ನು ಪಾಲಿಸಿದರೆ ಹಣದ ಕೊರತೆ ಕಡಿಮೆ ಆಗುತ್ತದೆ. ಹೊಸ ಚಿನ್ನಅಥವಾ ಬೆಳ್ಳಿಯ ಒಡವೆಗಳ ಖರೀದಿ ಮಾಡುವಿರಿ.
ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ತಯಾರಿಸಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಹೊಗೆಯ ಬಣ್ಣ
ವೃಷಭ
ಸೋಲನ್ನು ಎದುರಿಸಿ ಕಷ್ಟ ನಷ್ಟಗಳಿಂದ ಪಾರಾಗುವಿರಿ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರುತ್ತದೆ. ಉದ್ಯೋಗದಲ್ಲಿನ ಪ್ರತಿಯೊಂದು ವಿಚಾರದಲ್ಲಿಯೂ ನಿಮ್ಮ ಪಾತ್ರವಿರುತ್ತದೆ. ವ್ಯಾಪಾರ ವ್ಯವಹಾರಗಳ ಬಗ್ಗೆ ತೆಗೆದುಕೊಳ್ಳುವ ನಿರ್ಧಾರಗಳು ಲಾಭಕರವಾಗಲಿದೆ. ವಿದ್ಯಾರ್ಥಿಗಳು ಕ್ರೀಡಾ ಸ್ಪರ್ಧೆಗಳಲ್ಲಿ ಮುಂಚೂಣಿಯಲ್ಲಿ ಇರುತ್ತಾರೆ. ಆದಾಯದಲ್ಲಿ ಸುಧಾರಣೆ ಕಂಡು ಬರುತ್ತದೆ. ಹಿರಿಯರ ಆರೋಗ್ಯದ ಬಗ್ಗೆ ಎಚ್ಚರಿಕೆ ಇರಬೇಕು. ವಿದೇಶದಲ್ಲಿ ನೆಲೆಸುವ ಅವಕಾಶಗಳಿವೆ. ಕೃಷಿ ಕಾರ್ಯದಲ್ಲಿ ಆಸಕ್ತಿ ಮೂಡುತ್ತದೆ. ಮಂಗಳ ಕಾರ್ಯಗಳಿಗಾಗಿ ಹೆಚ್ಚಿನ ಹಣದ ಅವಶ್ಯಕತೆ ಇರುತ್ತದೆ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರಲಿದೆ.
ಪರಿಹಾರ : ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ : ಆಕಾಶ ನೀಲಿ ಬಣ್ಣ
ಮಿಥುನ
ಅನಾವಶ್ಯಕ ಮಾತುಕತೆ ಕುಟುಂಬದಲ್ಲಿ ಬೇಸರ ಮೂಡಿಸುತ್ತದೆ. ಖರ್ಚು ವೆಚ್ಚಗಳನ್ನು ನಿಯಂತ್ರಿಸಲು ಪ್ರಯತ್ನಿಸಿ. ನಿಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿ ಕಡಿಮೆಯಾಗುತ್ತದೆ. ಉದ್ಯೋಗದಲ್ಲಿ ನಿರೀಕ್ಷಿತ ಮಟ್ಟದ ಅನುಕೂಲತೆಗಳು ದೊರೆಯಲಿವೆ. ವ್ಯಾಪಾರ ವ್ಯವಹಾರಗಳು ಲಾಭದಾಯಕವಾಗಿರುತ್ತದೆ. ವಿದ್ಯಾರ್ಥಿಗಳು ದೃಢವಾದ ಗುಣವನ್ನು ಬೆಳೆಸಿಕೊಳ್ಳಬೇಕು. ಮಕ್ಕಳ ಜೊತೆ ಉತ್ತಮ ಬಾಂಧವ್ಯ ಕಂಡು ಬರುತ್ತದೆ. ಉದ್ಯೋಗ ಸಂಬಂಧಿತ ವಿವಾದವು ಸುಖಾಂತ್ಯಗೊಳ್ಳುತ್ತದೆ. ಸಂಗಾತಿಯೊಂದಿಗೆ ವಿದೇಶಕ್ಕೆ ತೆರಳಬಹುದು. ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗಬಹುದು. ವಿವಾದಿತ ಭೂಮಿಯನ್ನುಕೊಳ್ಳುವ ಬಗ್ಗೆ ಎಚ್ಚರ ಇರಲಿ. ಆರೋಗ್ಯದಲ್ಲಿ ಯಾವುದೇ ತೊಂದರೆ ಕಂಡು ಬಾರದು. ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡುವಿರಿ.
ಪರಿಹಾರ : ತಾಯಿಯವರಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ರಕ್ತದ ಬಣ್ಣ
ಕಟಕ
ಆತುರದ ನಿರ್ಧಾರಗಳು ಕುಟುಂಬದ ಅಸಂತೃಪ್ತಿಗೆ ಕಾರಣವಾಗುತ್ತದೆ. ಉದ್ಯೋಗದಲ್ಲಿ ನೀರಸ ವಾತಾವರಣ ಉಂಟಾಗಲಿದೆ. ಪ್ರಯತ್ನ ಪಟ್ಟರೆ ಉದ್ಯೋಗ ಬದಲಾಯಿಸಬಹುದು. ವ್ಯಾಪಾರ ವ್ಯವಹಾರದಲ್ಲಿ ಸಕಾರಾತ್ಮಕ ಬದಲಾವಣೆಗಳು ಉಂಟಾಗಲಿವೆ. ವಿದ್ಯಾರ್ಥಿಗಳು ಹೆಚ್ಚಿನ ಆಕಾಂಕ್ಷೆಯಿಂದ ಕಲಿಕೆಯಲ್ಲಿ ಮುಂದುವರೆಯುವರು. ಕುಟುಂಬದ ಸದಸ್ಯರ ಜೊತೆಯಲ್ಲಿ ಬದಲಾವಣೆಗಾಗಿ ಕಿರು ಪ್ರವಾಸ ಕೈಗೊಳ್ಳುವಿರಿ. ಬಿಡುವಿಲ್ಲದ ಕೆಲಸಗಳಿಂದ ದೈಹಿಕವಾಗಿ ಬಳಲುವಿರಿ. ಆತ್ಮೀಯ ವ್ಯಕ್ತಿ ಒಬ್ಬರ ಭೇಟಿ ಮಾಡುವಿರಿ. ದುಡುಕಿನಿಂದ ಮಾತನಾಡಿ ವಿವಾದಕ್ಕೆಒಳಗಾಗುವಿರಿ. ಪ್ರಕೃತಿಯನ್ನು ಕಾಪಾಡುವ ಸಲುವಾಗಿ ಯೋಜನೆ ರೂಪಿಸುವಿರಿ. ಗೃಹಿಣಿಯರ ಆರೋಗ್ಯದಲ್ಲಿ ಕೊಂಚ ತೊಂದರೆ ಉಂಟಾಗಬಹುದು.
ಪರಿಹಾರ : ಪಕ್ಷಿಗಳಿಗೆ ಆಹಾರವನ್ನು ನೀಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ : 3
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ಕೆಂಪು ಬಣ್ಣ
-------------------
ಜ್ಯೋತಿಷಿ: ಎಚ್. ಸತೀಶ್, ಬೆಂಗಳೂರು
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
