Horoscope Today: ಅನಿವಾರ್ಯವಾಗಿ ಆತ್ಮೀಯರಿಂದ ಹಣ ಪಡೆಯುವಿರಿ, ವಿವಾಹ ನಿಶ್ಚಯ; ಮೇಷದಿಂದ ಕಟಕ ರಾಶಿಯವರೆಗಿನ ದಿನಭವಿಷ್ಯ
ಮಾರ್ಚ್ 8, ಶುಕ್ರವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (8 March 2024 Daily Horoscope).

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (8 March 2024 Daily Horoscope).
ಇಂದಿನ ಪಂಚಾಂಗ
ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಾಘ ಮಾಸ, ಕೃಷ್ಣಪಕ್ಷ, ಶುಕ್ರವಾರ
ತಿಥಿ : ತ್ರಯೋದಶಿ ರಾ.08.00 ರವರೆಗು ಇದ್ದು ಆನಂತರ ಚತುರ್ದಶಿ ಆರಂಭವಾಗುತ್ತದೆ.
ನಕ್ಷತ್ರ: ಶ್ರವಣ ನಕ್ಷತ್ರವು ಬೆ.08.23 ರವರೆಗೆ ಇರುತ್ತದೆ. ಆನಂತರ ಧನಿಷ್ಠ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆ.06.29
ಸೂರ್ಯಾಸ್ತ: ಸ.06.28
ರಾಹುಕಾಲ : ಬೆ.10.30 ರಿಂದ ಮ.12.00
ರಾಶಿ ಫಲಗಳು
ಮೇಷ
ಆತುರದ ಮಾತಿನಿಂದ ಕುಟುಂಬದಲ್ಲಿ ಭಿನ್ನಾಭಿಪ್ರಾಯ ಉಂಟಾಗಬಹುದು. ಉದ್ಯೋಗದಲ್ಲಿ ಅನುಕೂಲಕರ ಸನ್ನಿವೇಶವು ಎದುರಾಗುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಸಮಯವನ್ನು ಅರಿತು ತೀರ್ಮಾನ ತೆಗೆದುಕೊಳ್ಳಿ. ಕ್ರೀಯಾಶೀಲ ಗುಣದಿಂದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಸಂಗಾತಿಯೊಂದಿಗೆ ಧಾರ್ಮಿಕ ಸ್ಥಳವೊಂದಕ್ಕೆ ತೆರಳುವಿರಿ. ಹಣದ ಕೊರತೆ ಕಂಡು ಬರುತ್ತದೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಮನೆಯ ಸೊಬಗು ಹೆಚ್ಚಿಸಲು ಆಕರ್ಷಕ ವಸ್ತುಗಳನ್ನು ಖರೀದಿಸುವಿರಿ. ಆತ್ಮೀಯರ ಆಗಮನದಿಂದ ಕೆಲಸವೊಂದು ಅಪೂರ್ಣಗೊಳ್ಳುತ್ತದೆ. ಮನೆಯಲ್ಲಿರುವ ಹೆಣ್ಣು ಮಕ್ಕಳಿಗೆ ಉತ್ತಮ ಉದ್ಯೋಗ ದೊರೆಯುತ್ತದೆ.
ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಕಂದು ಬಣ್ಣ
ವೃಷಭ
ಯಾವುದೇ ವಿಶೇಷ ಬದಲಾವಣೆಗಳು ಕಂಡುಬರುವುದಿಲ್ಲ. ಕುಟುಂಬ ನಿರ್ವಹಣೆಗಾಗಿ ಹಣದ ಅಗತ್ಯತೆ ಇರುತ್ತದೆ. ಉದ್ಯೋಗವನ್ನು ಬದಲಾಯಿಸುವ ವಿಚಾರ ಮಾಡುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ನಿಧಾನ ಗತಿಯ ಪ್ರಗತಿ ಕಂಡು ಬರುತ್ತದೆ. ವಿದ್ಯಾರ್ಥಿಗಳು ದೃಢ ಮನಸ್ಸಿನಿಂದ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಅನಿವಾರ್ಯವಾಗಿ ಆತ್ಮೀಯರಿಂದ ಹಣವನ್ನು ಪಡೆಯುವಿರಿ. ಪ್ರತಿಯೊಂದು ವಿಚಾರವನ್ನು ಗಮನವಹಿಸಿ ನೋಡುವಿರಿ. ಕುಟುಂಬದ ಸದಸ್ಯರ ಜೊತೆ ಸಂತೋಷದ ಕ್ಷಣಗಳು ಎದುರಾಗಲಿವೆ. ಹೊಸ ನಿರೀಕ್ಷೆಯಿಂದ ದಿನ ಕಳೆಯುವಿರಿ. ಮನದಲ್ಲಿ ವೈರಾಗ್ಯ ಭಾವನೆ ಮೂಡುತ್ತದೆ. ಎದುರಾಗುವ ಕಷ್ಟ ನಷ್ಟಗಳನ್ನು ಎದುರಿಸಿ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ : ಕಪ್ಪು ಬಣ್ಣ
ಮಿಥುನ
ಉತ್ತಮ ಆದಾಯವಿದ್ದರೂ ಕುಟುಂಬದಲ್ಲಿ ಹಣಕಾಸಿನ ಕೊರತೆ ಇರುತ್ತದೆ. ಉದ್ಯೋಗದಲ್ಲಿ ಅನಿರೀಕ್ಷಿತವಾದ ಬೆಳವಣಿಗೆಗಳು ಜವಾಬ್ದಾರಿಯನ್ನು ಹೆಚ್ಚಿಸುತ್ತದೆ. ವ್ಯಾಪಾರ ವ್ಯವಹಾರದಲ್ಲಿನ ಬದಲಾವಣೆ ಆದಾಯವನ್ನು ಹೆಚ್ಚಿಸುತ್ತದೆ. ವಿದ್ಯಾರ್ಥಿಗಳು ಮಾನಸಿಕ ಒತ್ತಡದಿಂದ ಹೊರ ಬಂದಲ್ಲಿ ಸುಲಭವಾಗಿ ಗುರಿ ತಲುಪಬಹುದು. ಸಂಗಾತಿ ಮತ್ತು ಮಕ್ಕಳ ಜೊತೆಯಲ್ಲಿ ಕಿರು ಪ್ರವಾಸ ಕೈಗೊಳ್ಳುವಿರಿ. ಸ್ನೇಹಿತರಿಂದ ಹಣದ ಸಹಾಯ ಸಹಕಾರ ದೊರೆಯುತ್ತದೆ. ಭವಿಷ್ಯದ ಜೀವನಕ್ಕಾಗಿ ಸ್ಟಾಕ್ ಮತ್ತು ಷೇರುಗಳಲ್ಲಿ ಹಣವನ್ನು ವಿನಿಯೋಗಿಸುವಿರಿ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗುತ್ತದೆ. ಪಾಲುಗಾರಿಕೆಯ ವ್ಯಾಪಾರದಲ್ಲಿ ಉತ್ತಮ ಲಾಭವಿದೆ. ಆಹಾರ ಸೇವನೆಯಲ್ಲಿ ಮಿತಿ ಇರಲಿ.
ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ತಿಳಿ ಹಸಿರು ಬಣ್ಣ
ಕಟಕ
ಅತಿಯಾದ ಶಿಸ್ತಿನ ವಾತಾವರಣ ಕುಟುಂಬದಲ್ಲಿ ಬೇಸರ ಉಂಟುಮಾಡುತ್ತದೆ. ಉದ್ಯೋಗದಲ್ಲಿ ಎದುರಾದ ಆತಂಕವನ್ನು ಸಹನೆಯಿಂದ ಗೆಲ್ಲುವಿರಿ. ಹಣದ ಕೊರತೆ ಉಂಟಾದಲ್ಲಿ ಸಿಡುಕಿನಿಂದ ವರ್ತಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಆತುರದ ನಿರ್ಧಾರ ತೆಗೆದುಕೊಂಡು ನಂತರ ಪಶ್ಚಾತಾಪ ಪಡುವಿರಿ. ಪಾಲುಗಾರಿಕೆಯ ವ್ಯಾಪಾರದಲ್ಲಿ ತೊಂದರೆ ಇರುತ್ತದೆ. ವಿದ್ಯಾರ್ಥಿಗಳು ಹಠದ ಬುದ್ಧಿಯಿಂದ ನಿರೀಕ್ಷಿತ ಯಶಸ್ಸು ಗಳಿಸುತ್ತಾರೆ. ಅವಶ್ಯಕತೆ ಇದ್ದಾಗ ಹಣದ ಸಹಾಯ ದೊರೆಯುತ್ತದೆ. ಸಮಾಜದ ಗಣ್ಯ ವ್ಯಕ್ತಿ ಒಬ್ಬರನ್ನು ಭೇಟಿ ಮಾಡುವಿರಿ. ಕೆಲಸದ ನಡುವೆ ವಿಶ್ರಾಂತಿ ಪಡೆಯಲು ಪ್ರಯತ್ನಿಸಿ. ಮಕ್ಕಳಿಗಾಗಿ ಹೆಚ್ಚಿನ ಹಣವನ್ನು ಹೊಂದಿಸಬೇಕಾಗುತ್ತದೆ.
ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈ ಖಡ್ಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ
------------
ಜ್ಯೋತಿಷಿ: ಎಚ್. ಸತೀಶ್, ಬೆಂಗಳೂರು
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
ವಿಭಾಗ