ಅನುರಾಧಾ ನಕ್ಷತ್ರ ವರ್ಷ ಭವಿಷ್ಯ 2025: ಉದ್ಯೋಗದಲ್ಲಿ ಉನ್ನತ ಮಟ್ಟಕ್ಕೆ ಹೋಗುತ್ತೀರಿ, ಜೀವನದಲ್ಲಿ ನಿರಾಸೆ ಇರುವುದಿಲ್ಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಅನುರಾಧಾ ನಕ್ಷತ್ರ ವರ್ಷ ಭವಿಷ್ಯ 2025: ಉದ್ಯೋಗದಲ್ಲಿ ಉನ್ನತ ಮಟ್ಟಕ್ಕೆ ಹೋಗುತ್ತೀರಿ, ಜೀವನದಲ್ಲಿ ನಿರಾಸೆ ಇರುವುದಿಲ್ಲ

ಅನುರಾಧಾ ನಕ್ಷತ್ರ ವರ್ಷ ಭವಿಷ್ಯ 2025: ಉದ್ಯೋಗದಲ್ಲಿ ಉನ್ನತ ಮಟ್ಟಕ್ಕೆ ಹೋಗುತ್ತೀರಿ, ಜೀವನದಲ್ಲಿ ನಿರಾಸೆ ಇರುವುದಿಲ್ಲ

Anuradha Nakshatra Bhavishya: ಅನುರಾಧಾ ನಕ್ಷತ್ರದವರ ವರ್ಷ ಭವಿಷ್ಯ 2025. ಉದ್ಯೋಗದಲ್ಲಿ ಉನ್ನತ ಮಟ್ಟಕ್ಕೆ ಹೋಗುತ್ತೀರಿ, ಜೀವನದಲ್ಲಿ ನಿರಾಸೆ ಇರುವುದಿಲ್ಲ. (ಬರಹ: ಎಚ್‌.ಸತೀಶ್, ಜ್ಯೋತಿಷಿ)

ಶ್ರೀ ವಿಶ್ವಾವಸು ಸಂವತ್ಸರ ಅನುರಾಧಾ ನಕ್ಷತ್ರ ಭವಿಷ್ಯ
ಶ್ರೀ ವಿಶ್ವಾವಸು ಸಂವತ್ಸರ ಅನುರಾಧಾ ನಕ್ಷತ್ರ ಭವಿಷ್ಯ

ಅನುರಾಧಾ ನಕ್ಷತ್ರದ ಯುಗಾದಿ ವರ್ಷ ಭವಿಷ್ಯ: ಪಂಚಾಂಗದ ಪ್ರಕಾರ ಕೆಲವೇ ದಿನಗಳಲ್ಲಿ ಹಳೆಯ ವರ್ಷ ಮುಗಿದು ಹೊಸ ವರ್ಷಕ್ಕೆ ಕಾಲಿಡುತ್ತೇವೆ. ಯುಗಾದಿ ಹಬ್ಬವು ಹೊಸ ವರ್ಷದ ಮೊದಲ ದಿನ. ಈ ಹೊಸ ವರ್ಷದಲ್ಲಿ ಸಂಕಷ್ಟಗಳು ಕಳೆದು ಸುಖ, ಶಾಂತಿ, ನೆಮ್ಮದಿ, ಉತ್ತಮ ಆರೋಗ್ಯ, ಹೊಸ ಅವಕಾಶ, ಸಂಪತ್ತು ಸಮೃದ್ಧಿಯನ್ನು ನಿರೀಕ್ಷಿಸುತ್ತ ಆಶಾವಾದಿಗಳಾಗಿ ಬದುಕುವುದು ಸಾಮಾನ್ಯ. ಬಹುತೇಕ ಸಂದರ್ಭದಲ್ಲಿ ಜನರು ತಮ್ಮ ರಾಶಿಗೆ ಅನುಗುಣವಾಗಿ ವರ್ಷ ಭವಿಷ್ಯವನ್ನು ಕಾತರದಿಂದ ವೀಕ್ಷಿಸುತ್ತಾರೆ. ಇನ್ನೂ ನಿಖರವಾಗಿ ಬೇಕು ಎಂದುಕೊಳ್ಳುವವರು ನಕ್ಷತ್ರವಾರು ವರ್ಷ ಭವಿಷ್ಯ ನೋಡಿ ಕೊಂಚ ಸಮಾಧಾನ ಮಾಡಿಕೊಳ್ಳುತ್ತಾರೆ. ಅಂತಹ ಓದುಗರಿಗಾಗಿ 27 ನಕ್ಷತ್ರಗಳ ವರ್ಷ ಭವಿಷ್ಯವನ್ನು ಸರಣಿ ಪ್ರಕಾರ ‘ಎಚ್‌ಟಿ ಕನ್ನಡ’ ಒದುಗಿಸುತ್ತಿದೆ. ನಕ್ಷತ್ರಗಳ ಪೈಕಿ 17ನೇಯದಾದ ಅನುರಾಧಾ ನಕ್ಷತ್ರದಲ್ಲಿ ಜನಿಸಿದವರ ಶ್ರೀ ವಿಶ್ವಾವಸು ಸಂವತ್ಸರದ ವರ್ಷ ಭವಿಷ್ಯ ಇಲ್ಲಿದೆ.

ಅನುರಾಧಾ ನಕ್ಷತ್ರದವರ ಜೀವನ ಮತ್ತು ಹೆಸರು ಯಾವ ಅಕ್ಷರಗಳಿಂದ ಆರಂಭವಾಗುತ್ತೆ

ಪ್ರತಿಯೊಂದು ನಕ್ಷತ್ರವೂ ನಾಲ್ಕು ಪಾದಗಳನ್ನು ಹೊಂದಿರುತ್ತವೆ. ಅನೂರಾದ ನಕ್ಷತ್ರದ ಎಲ್ಲಾ 4 ಪಾದಗಳು ವೃಶ್ಚಿಕ ರಾಶಿಯಲ್ಲಿ ಬರುತ್ತವೆ. ಇದಲ್ಲದೆ ನಿಮ್ಮ ಹೆಸರು ನ, ನಿ, ನು ಮತ್ತು ನೆ ಅಕ್ಷರದಿಂದ ಆರಂಭವಾಗಿದ್ದಲ್ಲಿ ನಿಮ್ಮದು ಅನೂರಾದ ನಕ್ಷತ್ರವಾಗುತ್ತದೆ.

ಶ್ರೀ ವಿಶ್ವಾವಸು ಸಂವತ್ಸರದಲ್ಲಿ ಅನುರಾಧಾ ನಕ್ಷತ್ರದವರ ಭವಿಷ್ಯ

ಎಲ್ಲರನ್ನೂ ಸುಲಭವಾಗಿ ನಂಬುತ್ತೀರಿ. ನಿರಾಸೆ ಎಂಬ ಮಾತೇ ಜೀವನದಲ್ಲಿ ಇರುವುದಿಲ್ಲ. ಹೊಂದಿಕೊಂಡು ಬಾಳುವ ಗುಣ ಇರುತ್ತದೆ. ದುಡುಕುತನದಿಂದ ಕುಟುಂಬದಲ್ಲಿ ಬೇಸರ ಮನೆ ಮಾಡುತ್ತೆ. ದಾಂಪತ್ಯ ಜೀವನದಲ್ಲಿ ಅನ್ಯೋನ್ಯತೆ ಇರುತ್ತದೆ. ಸಂಬಂಧದಲ್ಲಿ ಅಥವಾ ಪರಿಚಯ ಇರುವವರೊಂದಿಗೆ ವಿವಾಹವಾಗುತ್ತೀರಿ. ಯಾವುದೇ ರೀತಿಯ ಕೆಲಸ ಕಾರ್ಯಗಳಿಗೆ ಹೆದರುವುದಿಲ್ಲ. ಇಚ್ಛೆಯಂತೆ ವಿದ್ಯಾಭ್ಯಾಸ ಮಾಡಲು ಸಾಧ್ಯವಾಗುವುದಿಲ್ಲ. ಆದರೆ ಬುದ್ಧಿವಂತಿಕೆಯಲ್ಲಿ ಹಿಂದೆ ಉಳಿಯುವುದಿಲ್ಲ. ಹೆಣ್ಣು ಮಕ್ಕಳು ಬೇರೆಯವರ ಜೀವನಕ್ಕೆ ಆಧಾರವಾಗುತ್ತಾರೆ. ಆರೋಗ್ಯದ ಬಗ್ಗೆ ಗಮನ ವಹಿಸುವುದಿಲ್ಲ. ತಮ್ಮಲ್ಲಿ ತಪ್ಪಿದ್ದರು ಒಪ್ಪಿಕೊಳ್ಳುವುದಿಲ್ಲ. ಅಧಿಕಾರ ಚಲಾಯಿಸಲು ಸದಾ ಬಯಸುತ್ತೀರಿ. ಪ್ರವಾಸ ಮಾಡುವುದೆಂದರೆ ತುಂಬಾ ಇಷ್ಟ. ಅನಿರೀಕ್ಷಿತ ಧನ ಲಾಭವಿರುತ್ತದೆ.

ಅನುರಾಧಾ ನಕ್ಷತ್ರದ 1ನೇ ಪಾದ ಅಥವಾ ಹೆಸರು ನ ಅಕ್ಷರದಿಂದ ಆರಂಭವಾಗುವವರ ಭವಿಷ್ಯ

ಬೇರೆಯವರ ಅಧಿಕಾರದಲ್ಲಿ ಕೆಲಸ ನಿರ್ವಹಿಸಲು ಸಿದ್ಧರಿರುವುದಿಲ್ಲ. ತಮ್ಮದೇ ಆದ ರೀತಿ ನೀತಿಯಲ್ಲಿ ಜೀವಿಸುತ್ತೀರಿ. ಬೇಗನೆ ಕೋಪ ಬರುತ್ತದೆ. ಕೋಪ ಬಂದರು ಯಾರಿಗೂ ತೊಂದರೆಯಾಗದು. ಅಧಿಕಾರ ಪ್ರಿಯರು. ಉದ್ಯೋಗದಲ್ಲಿ ಉನ್ನತ ಮಟ್ಟವನ್ನು ತಲುಪುತ್ತೀರಿ. ಮುಖ್ಯವಾಗಿ ಹೆಣ್ಣು ಮಕ್ಕಳಿಗೆ ತಂದೆಯ ಮೇಲೆ ಆಪಾರವಾದ ಪ್ರೀತಿ ಮತ್ತು ಗೌರವ ಇರುತ್ತದೆ. ಕುಟುಂಬಕ್ಕೆ ನಿಮ್ಮಿಂದ ಉನ್ನತ ಗೌರವ ಲಭಿಸುತ್ತದೆ. ಆರೋಗ್ಯದಲ್ಲಿ ಯಾವುದೇ ತೊಂದರೆ ಕಂಡುಬರುವುದಿಲ್ಲ. ಕುಟುಂಬದಲ್ಲಿ ಒತ್ತಡವಿದ್ದರೂ ನಿಮ್ಮ ಮೇಲೆ ಪ್ರಭಾವ ಬೀರುವುದಿಲ್ಲ. ಆಹಾರಕ್ಕೆ ಸಂಬಂಧಪಟ್ಟಂತೆ ಆರೋಗ್ಯದಲ್ಲಿ ಏರಿಳಿತ ಕಂಡು ಬರಬಹುದು ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಧನ ಲಾಭವಿದೆ.

ಅನುರಾಧಾ ನಕ್ಷತ್ರದ 2ನೇ ಪಾದ ಅಥವಾ ಹೆಸರು ನಿ ಅಕ್ಷರದಿಂದ ಆರಂಭವಾಗುವವರ ಭವಿಷ್ಯ

ತವರಿನ ಮೇಲೆ ಹೆಣ್ಣು ಮಕ್ಕಳಿಗೆ ವಿಶೇಷವಾದಂತಹ ಪ್ರೀತಿ ಇರುತ್ತದೆ. ಸೋದರಿಯ ಮನೆಗೆ ತೆರೆಳುವುದು ಇವರಿಗೆ ಪ್ರಿಯವಾದ ವಿಚಾರ. ಪತಿಯೊಂದಿಗೆ ಮನಸ್ತಾಪ ಉಂಟಾದರೂ ಬಹುದಿನ ಇರದಂತೆ ನೋಡಿಕೊಳ್ಳುತ್ತೀರಿ. ಅತಿಯಾದ ಆಸೆ ಇರುವುದಿಲ್ಲ. ಸುಲಭವಾಗಿ ಯಾರ ಮಾತನ್ನು ಕೇಳುವುದಿಲ್ಲ. ಪ್ರವಾಸ ಮಾಡುವುದೆಂದರೆ ಅತಿ ಪ್ರೀತಿ. ಉದ್ಯೋಗದಲ್ಲಿ ಹಠದಿಂದ ಯಶಸ್ಸನ್ನು ಸಾಧಿಸುತ್ತೀರಿ. ಸಹೋದ್ಯೋಗಿಗಳ ಪ್ರೀತಿ ವಿಶ್ವಾಸ ಗಳಿಸುವಲ್ಲಿ ಸಫಲರಾಗುತ್ತೀರಿ. ಸ್ವಂತ ವ್ಯಾಪಾರ ವ್ಯವಹಾರವಿದ್ದರೂ ಹಣದ ವ್ಯಾಮೋಹ ಇರುವುದಿಲ್ಲ. ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಆಪ್ತರಿಗೆ ನೀಡುತ್ತೀರಿ. ಮಕ್ಕಳನ್ನು ಪ್ರೀತಿಯಿಂದ ಬೆಳೆಸುವುದು ಸಂತೋಷದ ವಿಚಾರ. ಸಂಗೀತ ನಾಟ್ಯದಲ್ಲಿ ಹೆಚ್ಚಿನ ಆಸಕ್ತಿ ತೋರುತ್ತೀರಿ.

ಅನುರಾಧಾ ನಕ್ಷತ್ರದ 3ನೇ ಪಾದ ಅಥವಾ ಹೆಸರು ನು ಅಕ್ಷರದಿಂದ ಆರಂಭವಾಗುವವರ ಭವಿಷ್ಯ

ಗೆಲ್ಲುವ ಕೆಲಸಗಳನ್ನು ಆಯ್ಕೆ ಮಾಡಿಕೊಳ್ಳುತ್ತೀರಿ. ಸಮಯ ವ್ಯರ್ಥ ಮಾಡುವುದಿಲ್ಲ. ಯಾವುದಾದರೂ ಒಂದು ಚಟುವಟಿಕೆಯಲ್ಲಿ ತಮ್ಮನ್ನು ತಾವು ತೊಡಗಿರಿಸಿಕೊಳ್ಳುತ್ತೀರಿ. ಉತ್ತಮ ವಿದ್ಯಾಭ್ಯಾಸವಿರುತ್ತದೆ. ವಿದ್ಯೆಗೆ ತಕ್ಕ ಉದ್ಯೋಗ ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ಸ್ವಂತ ನಿಲುವಿಗೆ ಬದ್ಧರಾಗುತ್ತೀರಿ. ಪ್ರವಾಸ ಪ್ರಿಯರು. ತಂದೆ ತಾಯಿಯಿಂದ ಹಣದ ಸಹಾಯ ದೊರೆಯುತ್ತದೆ. ಯಾವುದೇ ಸಂದರ್ಭದಲ್ಲಿ ಯೋಚನೆ ಮಾಡುವುದಿಲ್ಲ. ಒಳ್ಳೆಯ ಆತ್ಮವಿಶ್ವಾಸವಿರುತ್ತದೆ. ಉದ್ಯೋಗದಲ್ಲಿ ಸ್ವತಂತ್ರವಾಗಿ ಕೆಲಸ ಕಾರ್ಯಗಳನ್ನು ನಿರ್ವಹಿಸುವಿರಿ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಲಾಭ ದೊರೆಯುತ್ತದೆ. ನಿಮ್ಮ ಪಾಲಿಗೆ ಹಣ ಒಂದೇ ಜೀವನವಲ್ಲ. ಒಳ್ಳೆಯ ಜನರ ಸ್ನೇಹವನ್ನು ಬಯಸುತ್ತೀರಿ.

ಅನುರಾಧಾ ನಕ್ಷತ್ರದ 4ನೇ ಪಾದ ಅಥವಾ ಹೆಸರು ನೆ ಅಕ್ಷರದಿಂದ ಆರಂಭವಾಗುವವರ ಭವಿಷ್ಯ

ಹಠ ಮತ್ತು ಸ್ವಾರ್ಥದ ಗುಣವಿರುತ್ತದೆ. ಆದರೆ ಅದರಿಂದ ಯಾರಿಗೂ ತೊಂದರೆ ಉಂಟಾಗುವುದಿಲ್ಲ. ಸೋಲಿನಲ್ಲೂ ಗೆಲುವು ಕಾಣುವ ಬುದ್ಧಿ ಇವರದು. ಹಣದ ತೊಂದರೆ ಇರುವುದಿಲ್ಲ. ಉದ್ಯೋಗದಲ್ಲಿ ಸದಾಕಾಲ ಕಾರ್ಯದಕ್ಷತೆಯಲ್ಲಿ ಮುಂದಿಡುತ್ತೀರಿ. ಕೇವಲ ಸಹೋದ್ಯೋಗಿಗಳಲ್ಲದೆ ಹಿರಿಯ ಅಧಿಕಾರಿಗಳ ಸಹಾಯವು ಸಿಗುತ್ತದೆ. ಸಣ್ಣಪುಟ್ಟ ವಿಚಾರಗಳಿಗೂ ಕೋಪದಿಂದ ವರ್ತಿಸುವಿರಿ. ಮಕ್ಕಳನ್ನು ಅತಿ ಪ್ರೀತಿಯಿಂದ ನೋಡಿಕೊಳ್ಳುವಿರಿ. ಕುಟುಂಬದ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಬಲ್ಲಿರಿ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ನಷ್ಟದ ಮಾತಿರುವುದಿಲ್ಲ. ಆದರೆ ಹೆಚ್ಚಿನ ಲಾಭ ದೊರೆಯುವುದಿಲ್ಲ. ವ್ಯಾಪಾರ ವ್ಯವಹಾರಗಳಲ್ಲಿ ಆಸಕ್ತಿ ಇರುವುದಿಲ್ಲ. ಸಹನೆಯ ಕೊರತೆ ಇರುತ್ತದೆ. ಬೇಗನೆ ಕೋಪ ಬರುತ್ತದೆ. ಕೋಪದಲ್ಲಿ ತಪ್ಪಾದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ. ಕುಟುಂಬದವರ ಅಥವಾ ಸ್ನೇಹಿತರ ಪ್ರೀತಿ ವಿಶ್ವಾಸವನ್ನು ಅರ್ಥ ಮಾಡಿಕೊಳ್ಳುವುದಿಲ್ಲ.

ಬರಹ: ಎಚ್‌. ಸತೀಶ್, ಜ್ಯೋತಿಷಿ.

ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ "ಹಿಂದೂಸ್ತಾನ್ ಟೈಮ್ಸ್ ಕನ್ನಡ" ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ.

Raghavendra M Y

TwittereMail
ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.