ಚಿತ್ರಾ ನಕ್ಷತ್ರ ವರ್ಷ ಭವಿಷ್ಯ 2025; ಹಣಕಾಸಿನ ಸಮಸ್ಯೆಗಳು ಬಗೆಹರಿಯುತ್ತವೆ, ಉದ್ಯೋಗದಲ್ಲಿ ಬದಲಾವಣೆಗಳು ಇರುವುದಿಲ್ಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಚಿತ್ರಾ ನಕ್ಷತ್ರ ವರ್ಷ ಭವಿಷ್ಯ 2025; ಹಣಕಾಸಿನ ಸಮಸ್ಯೆಗಳು ಬಗೆಹರಿಯುತ್ತವೆ, ಉದ್ಯೋಗದಲ್ಲಿ ಬದಲಾವಣೆಗಳು ಇರುವುದಿಲ್ಲ

ಚಿತ್ರಾ ನಕ್ಷತ್ರ ವರ್ಷ ಭವಿಷ್ಯ 2025; ಹಣಕಾಸಿನ ಸಮಸ್ಯೆಗಳು ಬಗೆಹರಿಯುತ್ತವೆ, ಉದ್ಯೋಗದಲ್ಲಿ ಬದಲಾವಣೆಗಳು ಇರುವುದಿಲ್ಲ

Chitra Nakshatra Bhavishya: ಚಿತ್ರಾ ನಕ್ಷತ್ರದವರ ವರ್ಷ ಭವಿಷ್ಯ 2025. ಹಣಕಾಸಿನ ಸಮಸ್ಯೆಗಳು ಬಗೆಹರಿಯುತ್ತವೆ, ಉದ್ಯೋಗದಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ. (ಬರಹ: ಎಚ್‌.ಸತೀಶ್, ಜ್ಯೋತಿಷಿ)

ಶ್ರೀ ವಿಶ್ವಾವಸು ಸಂವತ್ಸರ ಚಿತ್ರಾ ನಕ್ಷತ್ರ ಭವಿಷ್ಯ
ಶ್ರೀ ವಿಶ್ವಾವಸು ಸಂವತ್ಸರ ಚಿತ್ರಾ ನಕ್ಷತ್ರ ಭವಿಷ್ಯ

ಚಿತ್ರಾ ನಕ್ಷತ್ರದ ಯುಗಾದಿ ವರ್ಷ ಭವಿಷ್ಯ: ಪಂಚಾಂಗದ ಪ್ರಕಾರ ಕೆಲವೇ ದಿನಗಳಲ್ಲಿ ಹಳೆಯ ವರ್ಷ ಮುಗಿದು ಹೊಸ ವರ್ಷಕ್ಕೆ ಕಾಲಿಡುತ್ತೇವೆ. ಯುಗಾದಿ ಹಬ್ಬವು ಹೊಸ ವರ್ಷದ ಮೊದಲ ದಿನ. ಈ ಹೊಸ ವರ್ಷದಲ್ಲಿ ಸಂಕಷ್ಟಗಳು ಕಳೆದು ಸುಖ, ಶಾಂತಿ, ನೆಮ್ಮದಿ, ಉತ್ತಮ ಆರೋಗ್ಯ, ಹೊಸ ಅವಕಾಶ, ಸಂಪತ್ತು ಸಮೃದ್ಧಿಯನ್ನು ನಿರೀಕ್ಷಿಸುತ್ತ ಆಶಾವಾದಿಗಳಾಗಿ ಬದುಕುವುದು ಸಾಮಾನ್ಯ. ಬಹುತೇಕ ಸಂದರ್ಭದಲ್ಲಿ ಜನರು ತಮ್ಮ ರಾಶಿಗೆ ಅನುಗುಣವಾಗಿ ವರ್ಷ ಭವಿಷ್ಯವನ್ನು ಕಾತರದಿಂದ ವೀಕ್ಷಿಸುತ್ತಾರೆ. ಇನ್ನೂ ನಿಖರವಾಗಿ ಬೇಕು ಎಂದುಕೊಳ್ಳುವವರು ನಕ್ಷತ್ರವಾರು ವರ್ಷ ಭವಿಷ್ಯ ನೋಡಿ ಕೊಂಚ ಸಮಾಧಾನ ಮಾಡಿಕೊಳ್ಳುತ್ತಾರೆ. ಅಂತಹ ಓದುಗರಿಗಾಗಿ 27 ನಕ್ಷತ್ರಗಳ ವರ್ಷ ಭವಿಷ್ಯವನ್ನು ಸರಣಿ ಪ್ರಕಾರ ‘ಎಚ್‌ಟಿ ಕನ್ನಡ’ ಒದುಗಿಸುತ್ತಿದೆ. ನಕ್ಷತ್ರಗಳ ಪೈಕಿ 14ನೇಯದಾದ ಚಿತ್ರಾ ನಕ್ಷತ್ರದಲ್ಲಿ ಜನಿಸಿದವರ ಶ್ರೀ ವಿಶ್ವಾವಸು ಸಂವತ್ಸರದ ವರ್ಷ ಭವಿಷ್ಯ ಇಲ್ಲಿದೆ.

ಚಿತ್ರಾ ನಕ್ಷತ್ರದವರ ಜೀವನ ಮತ್ತು ಹೆಸರು ಯಾವ ಅಕ್ಷರಗಳಿಂದ ಆರಂಭವಾಗುತ್ತೆ

ಪ್ರತಿಯೊಂದು ನಕ್ಷತ್ರವೂ ನಾಲ್ಕು ಪಾದಗಳನ್ನು ಹೊಂದಿರುತ್ತವೆ. ಚಿತ್ರ 1 ಮತ್ತು 2ನೇ ಪಾದಗಳು ಕನ್ಯಾ ರಾಶಿಯಲ್ಲಿಯೂ, ಉಳಿದ 3 ಮತ್ತು 4 ನೇ ಪಾದಗಳು ತುಲಾರಾಶಿಯಲ್ಲಿ ರಾಶಿಯಲ್ಲಿ ಬರುತ್ತವೆ. ಇದಲ್ಲದೆ ನಿಮ್ಮ ಹೆಸರು ಪೆ, ಪೊ, ರ ಮತ್ತು ರಿ ಅಕ್ಷರದಿಂದ ಆರಂಭವಾಗಿದ್ದಲ್ಲಿ ನಿಮ್ಮದು ಚಿತ್ತ ಅಥವಾ ಚಿತ್ರಾ ನಕ್ಷತ್ರವಾಗುತ್ತದೆ.

ಶ್ರೀ ವಿಶ್ವಾವಸು ಸಂವತ್ಸರದಲ್ಲಿ ಚಿತ್ತಾ ಅಥವಾ ಚಿತ್ರಾ ನಕ್ಷತ್ರದವರ ಭವಿಷ್ಯ

ಆತುರದಿಂದ ಅತಿ ಮುಖ್ಯ ಕೆಲಸ ಕಾರ್ಯಗಳನ್ನು ಆರಂಭಿಸುವಿರಿ. ಆದರೆ ತೆಗೆದುಕೊಂಡ ತೀರ್ಮಾನಗಳನ್ನು ಅನಾವಶ್ಯಕವಾಗಿ ಬದಲಾಯಿಸುವಿರಿ. ಯಾವುದೇ ಸಂದರ್ಭ ಎದುರಾದರೂ ತಪ್ಪಾದ ನಿರ್ಧಾರಗಳನ್ನು ತೆಗೆದುಕೊಳ್ಳುವುದಿಲ್ಲ. ಸೋಲಿನ ವೇಳೆ ಎದೆಗುಂದದೆ ಯಶಸ್ಸನ್ನು ಗಳಿಸುವಿರಿ. ಹಣಕಾಸಿನ ತೊಂದರೆ ಎದುರಾಗುವುದಿಲ್ಲ. ತಂದೆಯವರ ಹೆಸರಿನಲ್ಲಿರುವ ಹಣ ಅಥವಾ ಭೂಮಿಗೆ ಸಂಬಂಧಪಟ್ಟ ವಿವಾದವು ದೂರವಾಗುತ್ತದೆ. ನ್ಯಾಯ ನೀತಿಗೆ ಗೌರವ ನೀಡಿ ಬಾಳುವಿರಿ. ಆತ್ಮೀಯರಿಗೆ ಕಷ್ಟ ಒದಗಿದಾಗ ಸಹಾಯ ಮಾಡುವ ಔದಾರ್ಯ ತೋರುವಿರಿ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಮಧ್ಯಮ ಗತಿಯ ಲಾಭ ಇರುತ್ತದೆ. ಹಣಕಾಸಿನ ವ್ಯವಹಾರದಲ್ಲಿ ಬೇರೆಯವರನ್ನು ನಂಬುವುದಿಲ್ಲ. ಅತಿಯಾದ ಆಸೆ ಇಲ್ಲದೆ ದೊರೆಯುವ ಫಲಿತಾಂಶಗಳಿಗೆ ತೃಪ್ತಿಯ ಜೀವನ ನಡೆಸುವಿರಿ.

ಚಿತ್ತಾ ನಕ್ಷತ್ರದ 1ನೇ ಪಾದ ಅಥವಾ ಹೆಸರು ಪೆ ಅಕ್ಷರದಿಂದ ಆರಂಭವಾಗುವವರ ಭವಿಷ್ಯ

ಸಾಹಸದ ಗುಣ ಇರುತ್ತದೆ. ಸಮಯ ಸಂದರ್ಭವನ್ನು ಅರಿತು ಎಲ್ಲರ ಜೊತೆ ಹೊಂದಿಕೊಂಡು ಬಾಳುವಿರಿ. ಆತ್ಮೀಯರ ಸಹಾಯದಿಂದ ಉದ್ಯೋಗದಲ್ಲಿ ಉನ್ನತ ಸ್ಥಾನ ದೊರೆಯುತ್ತದೆ. ಬಾಳ ಸಂಗಾತಿಯ ಸಹಾಯದಿಂದ ಪಾಲುಗಾರಿಕೆಯ ವ್ಯಾಪಾರವನ್ನು ಆರಂಭಿಸುವಿರಿ. ಆದಾಯಕ್ಕೆ ತಕ್ಕಂತಹ ಖರ್ಚು ವೆಚ್ಚಗಳು ಇರುತ್ತವೆ. ಉತ್ತಮ ಆದಾಯವಿದ್ದರೂ, ಹಣದ ಅನುಕೂಲತೆ ಇದ್ದರು ಸರಳ ಜೀವನವನ್ನು ನಡೆಸುವಿರಿ. ಎಲ್ಲರನ್ನೂ ಸಮಾನ ಭಾವನೆಯಿಂದ ಕಾಣುವಿರಿ. ನಿಮ್ಮಲ್ಲಿರುವ ಒಳ್ಳೆಯ ಗುಣದಿಂದ ಬಂಧು ಬಳಗದವರ ಮನ ಗೆಲ್ಲುವಿರಿ. ಉತ್ತಮ ಅವಕಾಶ ದೊರೆಯುವ ಕಾರಣ ಉದ್ಯೋಗವನ್ನು ಬದಲಿಸುವಿರಿ. ಬೇಗನೆ ಕೋಪಗೊಂಡರು ಅದರಿಂದ ಬೇರೆಯವರಿಗೆ ತೊಂದರೆ ಆಗದು. ವಿದ್ಯಾರ್ಥಿಗಳು ವಿಶೇಷ ಸಾಧನೆ ಮಾಡಲಿದ್ದಾರೆ.

ಚಿತ್ತಾ ನಕ್ಷತ್ರದ 2ನೇ ಪಾದ ಅಥವಾ ಹೆಸರು ಪೊ ಅಕ್ಷರದಿಂದ ಆರಂಭವಾಗುವವರ ಭವಿಷ್ಯ

ವಾದ ವಿವಾದಗಳಲ್ಲಿ ಸದಾ ಜಯಗಳಿಸುವಿರಿ. ಸಭೆ ಸಮಾರಂಭಗಳಲ್ಲಿ ಮುಖ್ಯ ಸ್ಥಾನವನ್ನು ಅಲಂಕರಿಸುವಿರಿ. ಸಾಮಾಜಿಕ ರಂಗದಲ್ಲಿ ನಿಮ್ಮದೇ ಆದ ಛಾಪು ಮೂಡಿಸುವಿರಿ. ರಾಜಕೀಯ ಪ್ರವೇಶಿಸುವ ಆಸಕ್ತಿ ಇದ್ದಲ್ಲಿ ಆತ್ಮೀಯರ ಸಹಾಯದಿಂದ ಸಾಧ್ಯವಾಗುತ್ತದೆ. ಅನಿರೀಕ್ಷಿತ ಧನ ಲಾಭವಿರುತ್ತದೆ. ಬಹುದಿನದಿಂದ ಕಾಡುತ್ತಿದ್ದ ಆರೋಗ್ಯದಲ್ಲಿನ ಸಮಸ್ಯೆ ದೂರವಾಗುತ್ತದೆ. ದೈಹಿಕ ವ್ಯಾಯಾಮದಲ್ಲಿ ತೊಡಗುವಿರಿ. ಆತ್ಮೀಯರಿಂದ ಹಣದ ಸಹಾಯವಿರುತ್ತದೆ. ನಿಮ್ಮ ಮನಸ್ಸಿಗೆ ಸರಿ ಎನಿಸುವ ಕೆಲಸಗಳನ್ನು ಮಾಡುವಿರಿ. ಬೇರೆಯವರ ಮೇಲೆ ನಿಮ್ಮ ಪ್ರಭಾವ ಬೀರುವುದಿಲ್ಲ. ಮಾನಸಿ ಒತ್ತಡಕ್ಕೆ ಒಳಗಾದಲ್ಲಿ ಕೋಪದಿಂದ ವರ್ತಿಸುವಿರಿ. ಹತ್ತು ಹಲವಾರು ವಿಚಾರಗಳನ್ನು ಆಳವಾಗಿ ಅರಿತುಕೊಳ್ಳುವಿರಿ. ಉದ್ಯೋಗದಲ್ಲಿ ನಿರೀಕ್ಷಸಿದ ಯಶಸ್ಸು ದೊರೆಯುತ್ತದೆ. ಬಂಧು ಬಳಗದವರಿಗೆ ಹಣಕಾಸಿನ ಸಹಾಯ ಮಾಡುವಿರಿ.

ಚಿತ್ತಾ ನಕ್ಷತ್ರದ 3ನೇ ಪಾದ ಅಥವಾ ಹೆಸರು ರ ಅಕ್ಷರದಿಂದ ಆರಂಭವಾಗುವವರ ಭವಿಷ್ಯ

ಆತುರದಿಂದ ಕೆಲಸ ಕಾರ್ಯಗಳನ್ನು ಆರಂಭಿಸುವಿರಿ. ನಿಮ್ಮಲ್ಲಿ ಉತ್ತಮ ಸಂಘಟನಾ ಚಾತುರ್ಯ ಇರುತ್ತದೆ. ಸಾರ್ವಜನಿಕ ಸಂಘ ಸಂಸ್ಥೆಗಳನ್ನು ಬೆಳೆಸುವಿರಿ. ಬರವಣಿಗೆಯಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಬುದ್ಧಿವಂತಿಕೆಯ ಮಾತುಕತೆಗೆ ಎಲ್ಲರೂ ಮೆಚ್ಚುಗೆ ಸಲ್ಲಿಸುತ್ತಾರೆ. ಉದ್ಯೋಗದಲ್ಲಿ ಯಾವುದೇ ತೊಂದರೆ ಕಂಡು ಬರುವುದಿಲ್ಲ. ನಿತ್ಯ ಜೀವನದಲ್ಲಿನ ಬದಲಾವಣೆಗಳನ್ನು ಸವಾಲಾಗಿ ಸ್ವೀಕರಿಸುವಿರಿ. ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ಮನದಾಳದ ಆಸೆಗಳು ಸಿದ್ದಿಸುತ್ತವೆ. ಕುಟುಂಬದಲ್ಲಿ ಮಂಗಳಕಾರ್ಯಗಳು ನೆರವೇರುತ್ತದೆ. ಅನಿವಾರ್ಯವಾಗಿ ಒಂಟಿಯಾಗಿ ಬಾಳಬೇಕಾಗುತ್ತದೆ. ತಂದೆಯ ಸಂಬಂಧಿಕರ ಜೊತೆಯಲ್ಲಿ ವಿವಾಹ ನಿಶ್ಚಯವಾಗುತ್ತದೆ. ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಯಶಸ್ಸು ದೊರೆಯುತ್ತದೆ. ಹೆಚ್ಚಿನ ಪ್ರಯತ್ನದಿಂದ ಹಣವನ್ನು ಉಳಿಸಲು ಪ್ರಯತ್ನಿಸುವಿರಿ.

ಚಿತ್ತ ನಕ್ಷತ್ರದ 4ನೇ ಪಾದ ಅಥವ ಹೆಸರು ರಿ ಅಕ್ಷರದಿಂದ ಆರಂಭವಾಗುವವರ ಭವಿಷ್ಯ

ಮನಸ್ಸನ್ನು ಬದಲಿಸಲು ಸಾಧ್ಯವಾಗುವುದಿಲ್ಲ. ಕಷ್ಟವೆನಿಸಿದರು ಒಮ್ಮೆ ತೆಗೆದುಕೊಂಡ ತೀರ್ಮಾನಗಳಿಗೆ ಬದ್ಧರಾಗುವಿರಿ. ಆರಂಭದಲ್ಲಿ ಆತುರದ ಮನಸ್ಸಿದ್ದರೂ ಆನಂತರ ನಿಧಾನ ಗತಿಯಲ್ಲಿ ಕೆಲಸ ಸಾಧಿಸುವಿರಿ. ಆರೋಗ್ಯದಲ್ಲಿ ವಾಯು ಸಂಬಂಧಿತ ದೋಷಗಳು ಕಂಡುಬರುತ್ತವೆ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆಯಿಂದ ಇರಬೇಕು. ಮಕ್ಕಳು ನಿಮ್ಮ ಮನದ ಆಸೆಯನ್ನು ಪೂರೈಸಲಿದ್ದಾರೆ. ಉದ್ಯೋಗದಲ್ಲಿ ಯಾವುದೇ ಬದಲಾವಣೆಗಳು ಕಂಡುಬರುವುದಿಲ್ಲ. ವ್ಯಾಪಾರ ವಹಿವಾಟುಗಳು ನಿಧಾನಗತಿಯಲ್ಲಿ ಪ್ರಗತಿಯತ್ತ ಸಾಗುತ್ತವೆ. ಹಣಕಾಸಿನ ವಿಚಾರದಲ್ಲಿ ಬೇರೆಯವರನ್ನು ನಂಬುವುದಿಲ್ಲ. ಆತ್ಮೀಯರಿಗೆ ಸಹಾಯ ಮಾಡುವಲ್ಲಿ ಸಂತಸ ಕಾಣುವಿರಿ. ಹಣ ಉಳಿಸುವ ಯೋಜನೆ ಸಫಲವಾಗಲಿದೆ. ಮನಸ್ಸಿನ ಮೇಲೆ ಹಿಡಿತ ಸಾಧಿಸುವಿರಿ. ಮನೆತನದ ಗೌರವವನ್ನು ಕಾಪಾಡಲು ಶ್ರಮಿಸುವಿರಿ.

ಬರಹ: ಎಚ್‌. ಸತೀಶ್, ಜ್ಯೋತಿಷಿ.

ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ "ಹಿಂದೂಸ್ತಾನ್ ಟೈಮ್ಸ್ ಕನ್ನಡ" ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ.

Raghavendra M Y

TwittereMail
ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.