ರೇವತಿ ನಕ್ಷತ್ರ ವರ್ಷ ಭವಿಷ್ಯ 2025: ಸೋಲಿನ ಭಯ ಇರುವುದಿಲ್ಲ, ಸ್ವಂತ ವ್ಯಾಪಾರದಲ್ಲಿ ಉತ್ತಮ ಲಾಭ ಇರುತ್ತೆ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ರೇವತಿ ನಕ್ಷತ್ರ ವರ್ಷ ಭವಿಷ್ಯ 2025: ಸೋಲಿನ ಭಯ ಇರುವುದಿಲ್ಲ, ಸ್ವಂತ ವ್ಯಾಪಾರದಲ್ಲಿ ಉತ್ತಮ ಲಾಭ ಇರುತ್ತೆ

ರೇವತಿ ನಕ್ಷತ್ರ ವರ್ಷ ಭವಿಷ್ಯ 2025: ಸೋಲಿನ ಭಯ ಇರುವುದಿಲ್ಲ, ಸ್ವಂತ ವ್ಯಾಪಾರದಲ್ಲಿ ಉತ್ತಮ ಲಾಭ ಇರುತ್ತೆ

Revati Nakshatra Bhavishya: ಉತ್ತರಾಭಾದ್ರ ನಕ್ಷತ್ರದವರ ವರ್ಷ ಭವಿಷ್ಯ 2025. ಸೋಲಿನ ಭಯ ಇರುವುದಿಲ್ಲ, ಸ್ವಂತ ವ್ಯಾಪಾರದಲ್ಲಿ ಉತ್ತಮ ಲಾಭ ಇರುತ್ತೆ. (ಬರಹ: ಎಚ್‌.ಸತೀಶ್, ಜ್ಯೋತಿಷಿ)

ಶ್ರೀ ವಿಶ್ವಾವಸು ಸಂವತ್ಸರ ರೇವತಿ ನಕ್ಷತ್ರ ಭವಿಷ್ಯ
ಶ್ರೀ ವಿಶ್ವಾವಸು ಸಂವತ್ಸರ ರೇವತಿ ನಕ್ಷತ್ರ ಭವಿಷ್ಯ

ರೇವತಿ ನಕ್ಷತ್ರದ ಯುಗಾದಿ ವರ್ಷ ಭವಿಷ್ಯ: ಪಂಚಾಂಗದ ಪ್ರಕಾರ ಕೆಲವೇ ದಿನಗಳಲ್ಲಿ ಹಳೆಯ ವರ್ಷ ಮುಗಿದು ಹೊಸ ವರ್ಷಕ್ಕೆ ಕಾಲಿಡುತ್ತೇವೆ. ಯುಗಾದಿ ಹಬ್ಬವು ಹೊಸ ವರ್ಷದ ಮೊದಲ ದಿನ. ಈ ಹೊಸ ವರ್ಷದಲ್ಲಿ ಸಂಕಷ್ಟಗಳು ಕಳೆದು ಸುಖ, ಶಾಂತಿ, ನೆಮ್ಮದಿ, ಉತ್ತಮ ಆರೋಗ್ಯ, ಹೊಸ ಅವಕಾಶ, ಸಂಪತ್ತು ಸಮೃದ್ಧಿಯನ್ನು ನಿರೀಕ್ಷಿಸುತ್ತ ಆಶಾವಾದಿಗಳಾಗಿ ಬದುಕುವುದು ಸಾಮಾನ್ಯ. ಬಹುತೇಕ ಸಂದರ್ಭದಲ್ಲಿ ಜನರು ತಮ್ಮ ರಾಶಿಗೆ ಅನುಗುಣವಾಗಿ ವರ್ಷ ಭವಿಷ್ಯವನ್ನು ಕಾತರದಿಂದ ವೀಕ್ಷಿಸುತ್ತಾರೆ. ಇನ್ನೂ ನಿಖರವಾಗಿ ಬೇಕು ಎಂದುಕೊಳ್ಳುವವರು ನಕ್ಷತ್ರವಾರು ವರ್ಷ ಭವಿಷ್ಯ ನೋಡಿ ಕೊಂಚ ಸಮಾಧಾನ ಮಾಡಿಕೊಳ್ಳುತ್ತಾರೆ. ಅಂತಹ ಓದುಗರಿಗಾಗಿ 27 ನಕ್ಷತ್ರಗಳ ವರ್ಷ ಭವಿಷ್ಯವನ್ನು ಸರಣಿ ಪ್ರಕಾರ ‘ಎಚ್‌ಟಿ ಕನ್ನಡ’ ಒದುಗಿಸುತ್ತಿದೆ. ನಕ್ಷತ್ರಗಳ ಪೈಕಿ 27ನೇಯದಾದ ರೇವತಿ ನಕ್ಷತ್ರದಲ್ಲಿ ಜನಿಸಿದವರ ಶ್ರೀ ವಿಶ್ವಾವಸು ಸಂವತ್ಸರದ ವರ್ಷ ಭವಿಷ್ಯ ಇಲ್ಲಿದೆ.

ರೇವತಿ ನಕ್ಷತ್ರದವರ ಹೆಸರು ಯಾವ ಅಕ್ಷರಗಳಿಂದ ಆರಂಭವಾಗುತ್ತೆ

ಪ್ರತಿಯೊಂದು ನಕ್ಷತ್ರವೂ ನಾಲ್ಕು ಪಾದಗಳನ್ನು ಹೊಂದಿರುತ್ತವೆ. ರೇವತಿ ನಕ್ಷತ್ರದ ಎಲ್ಲಾ ನಾಲ್ಕೂ ಪಾದಗಳು ಮೀನ ರಾಶಿಯಲ್ಲಿ ಬರುತ್ತವೆ. ಇದಲ್ಲದೆ ನಿಮ್ಮ ಹೆಸರು ದೆ, ದೊ, ಚ ಮತ್ತು ಚಿ ಅಕ್ಷರದಿಂದ ಆರಂಭವಾಗಿದ್ದಲ್ಲಿ ನಿಮ್ಮದು ರೇವತಿ ನಕ್ಷತ್ರವಾಗುತ್ತದೆ.

ಶ್ರೀ ವಿಶ್ವಾವಸು ಸಂವತ್ಸರದಲ್ಲಿ ರೇವತಿ ನಕ್ಷತ್ರದವರ ಭವಿಷ್ಯ

ಯಾವಾಗಲೂ ಗೆಲುವಿನ ಆಸೆ ಇರುವುದಿಲ್ಲ. ಅದೇ ರೀತಿಯಲ್ಲಿ ಸೋಲಿನ ಭಯವು ಇರುವುದಿಲ್ಲ. ಪ್ರತಿಯೊಬ್ಬರನ್ನೂ ಸಮಾನ ಭಾವನೆಯಿಂದ ಕಾಣುವಿರಿ. ನಿಮ್ಮ ಪ್ರಯತ್ನದಿಂದ ಕುಟುಂಬದಲ್ಲಿ ನೆಮ್ಮದಿ ಇರುತ್ತದೆ. ಬಹುದಿನದಿಂದ ನಿರೀಕ್ಷಿಸಲ್ಪಟ್ಟಿದ್ದ ದೊಡ್ಡ ಕೆಲಸ ಕಾರ್ಯಗಳನ್ನು ನಿರ್ವಹಿಸುವಿರಿ. ಮಕ್ಕಳಿಗೆ ಬೇಕಾದ ಅವಶ್ಯಕತೆಗಳನ್ನು ಸುಲಭವಾಗಿ ಪೂರೈಸುವಿರಿ. ಉತ್ತಮ ಪ್ರಯತ್ನದ ನಡುವೆಯೂ ಉದ್ಯೋಗದಲ್ಲಿ ಒತ್ತಡ ಇರುತ್ತದೆ. ನಿಮ್ಮ ಮೇಲೆ ಯಾರ ಪ್ರಭಾವವೂ ನಡೆಯುವುದಿಲ್ಲ. ವಿದ್ಯಾರ್ಥಿಗಳು ಹಠ ಮತ್ತು ಸಿಡುಕಿನ ಸ್ವಭಾವವನ್ನು ಬೆಳೆಸಿಕೊಳ್ಳುತ್ತಾರೆ. ನಿಮ್ಮ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆಯಾಗದು. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಮಂದ ಗತಿಯ ಪ್ರಗತಿ ಕಂಡುಬರುತ್ತದೆ. ಪಾಲುಗಾರಿಕೆಯ ವ್ಯಾಪಾರದಲ್ಲಿ ಲಾಭ ಗಳಿಸಲು ಸಾಧ್ಯವಾಗುವುದಿಲ್ಲ. ಧಾರ್ಮಿಕ ಕೇಂದ್ರಕ್ಕೆ ಹಣ ಸಹಾಯ ಮಾಡುವಿರಿ.

ರೇವತಿ ನಕ್ಷತ್ರದ 1ನೇ ಪಾದ ಅಥವಾ ಹೆಸರು ದೆ ಅಕ್ಷರದಿಂದ ಆರಂಭವಾಗಿರುವವರ ಭವಿಷ್ಯ

ಆತ್ಮವಿಶ್ವಾಸದಿಂದ ಕುಟುಂಬಕ್ಕೆ ಎದುರಾಗುವ ತೊಂದರೆಗೆ ಪರಿಹಾರ ಕಂಡುಹಿಡಿಯುವಿರಿ. ಉದ್ಯೋಗದಲ್ಲಿ ಏಕಾಂಗಿಯಾಗಿ ಮುನ್ನಡೆಯುವಿರಿ. ಬಿಡುವಿಲ್ಲದ ಕೆಲಸದ ನಡುವೆಯೂ ಕುಟುಂಬದ ಕಾರ್ಯಕ್ರಮಗಳನ್ನು ನಿರ್ವಹಿಸುವಿರಿ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿರಿ. ವಿಶ್ರಾಂತಿ ಇಲ್ಲದ ದುಡಿಮೆಯಿಂದ ಬೇಸರ ಉಂಟಾಗುತ್ತದೆ. ನಿಮ್ಮ ಕರ್ತವ್ಯವನ್ನು ನಿರ್ವಹಿಸಲು ಆತ್ಮೀಯರ ಸಹಾಯ ಪಡೆಯುವಿರಿ. ಪ್ರೀತಿ ವಿಶ್ವಾಸದಿಂದ ಬಂಧು ಬಳಗದವರ ಮನಸ್ಸನ್ನು ಗೆಲ್ಲುವಿರಿ. ಅತಿಯಾಗಿ ನಂಬಿ ಹಣಕಾಸಿನ ವಿಚಾರದಲ್ಲಿ ಸಂದಿಗ್ದತೆಗೆ ಸಿಲುಕುವಿರಿ. ಉದ್ಯೋಗವನ್ನು ಬದಲಾಯಿಸುವ ಮನಸ್ಸಿರುವುದಿಲ್ಲ. ಹೊಂದಾಣಿಕೆಯ ಬಾಳಿನಲ್ಲಿ ಸಂತಸ ಕಾಣುವಿರಿ. ಸ್ವಂತ ವ್ಯಾಪಾರದಲ್ಲಿ ಉತ್ತಮ ಲಾಭ ದೊರೆಯುತ್ತದೆ. ಗುರು ಹಿರಿಯರನ್ನು ಗೌರವಿಸುವಿರಿ. ಬಾಳ ಸಂಗಾತಿ ಮತ್ತು ಮಕ್ಕಳ ಜೊತೆಯಲ್ಲಿ ಕಿರು ಪ್ರವಾಸ ಕೈಗೊಳ್ಳುವಿರಿ.

ರೇವತಿ ನಕ್ಷತ್ರದ 2ನೇ ಪಾದ ಅಥವಾ ಹೆಸರು ದೊ ಅಕ್ಷರದಿಂದ ಆರಂಭವಾಗುವವರ ಭವಿಷ್ಯ

ಹೆಣ್ಣುಮಕ್ಕಳಿಗೆ ಹಣದ ವಿಚಾರದಲ್ಲಿ ತವರು ಮನೆಯ ಆಸರೆ ದೊರೆಯುತ್ತದೆ. ಕುಟುಂಬದ ಆಸ್ತಿಯ ವಿವಾದವು ಮಾತುಕತೆಯಿಂದ ಪರಿಹಾರವಾಗುತ್ತದೆ. ನವವಿವಾಹಿತರಿಗೆ ಸಂತಾನಲಾಭವಿದೆ. ಪತಿ ಪತ್ನಿಯ ನಡುವೆ ಉತ್ತಮ ಹೊಂದಾಣಿಕೆ ಏರ್ಪಡುತ್ತದೆ. ಕುಟುಂಬದ ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳಲಿದೆ. ಕುಟುಂಬದ ಒತ್ತಡಕ್ಕೆ ಮಣಿದು ನೌಕರಿಗೆ ಸೇರುವಿರಿ. ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಹಣ ಉಳಿಸಲು ಯೋಜನೆ ರೂಪಿಸುವಿರಿ. ನಿಮಗೆ ಸಂಗೀತ ನಾಟ್ಯದಲ್ಲಿ ಆಸಕ್ತಿ ಮೂಡುತ್ತದೆ. ಸಮಾಜದಲ್ಲಿ ವಿಶೇಷ ಸ್ಥಾನ ದೊರೆಯುತ್ತದೆ. ಕುಟುಂಬದವರೊಂದಿಗೆ ಸಮಯ ಕಳೆಯಲು ಬಯಸುತ್ತೀರಿ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ವಾದ ವಿವಾದಗಳಿಂದ ಮಾನಸಿಕ ಒತ್ತದ ಹೆಚ್ಚುತ್ತದೆ. ವಿದೇಶ ಪ್ರಯಾಣಯೋಗವಿದೆ.

ರೇವತಿ ನಕ್ಷತ್ರದ 3ನೇ ಪಾದ ಅಥವಾ ಹೆಸರು ಚ ಅಕ್ಷರದಿಂದ ಆರಂಭವಾಗುವವರ ಭವಿಷ್ಯ

ಸಂಬಂಧಿಕರ ಜೊತೆಯಲ್ಲಿ ಉತ್ತಮ ಬಾಂಧವ್ಯ ಇರುತ್ತದೆ. ವಾದ ವಿವಾದಗಳನ್ನು ಮರೆತು ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ಬಾಳುವಿರಿ. ವಿವಾಹದ ಬಗ್ಗೆ ಶುಭ ವರ್ತಮಾನ ಬರಲಿದೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ವಿಶೇಷವಾದ ಆಸಕ್ತಿ ತೋರುವರು. ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗುತ್ತಾರೆ. ಅಚಲವಾದ ವಿಶ್ವಾಸದಿಂದ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ಹಣಕಾಸಿನ ವಿಚಾರದಲ್ಲಿ ವಿವಾದ ಉಂಟಾಗುತ್ತದೆ. ಒಮ್ಮೆ ಆಡುವ ಮಾತಿಗೆ ಬದ್ದರಾಗುವಿರಿ. ಆತ್ಮೀಯ ಸ್ನೇಹಿತರ ಜೊತೆ ವಿದೇಶಕ್ಕೆ ತೆರಳುವಿರಿ. ಸಾಕಿರುವ ಪ್ರಾಣಿಗಳನ್ನು ಕಾಪಾಡಲು ಹೆಚ್ಚಿನ ಹಣದ ಅವಶ್ಯಕತೆ ಇರುತ್ತದೆ. ಹಣಕಾಸಿನ ವಿಚಾರದಲ್ಲಿ ಸೋದರ ಮಾವನೊಂದಿಗೆ ವಿವಾದ ಉಂಟಾಗಲಿದೆ. ಮನದಲ್ಲಿ ಬಗೆಹರಿಯದ ಯೋಚನೆಗಳು ಇರುತ್ತವೆ.

ರೇವತಿ ನಕ್ಷತ್ರದ 4ನೇ ಪಾದ ಅಥವಾ ಹೆಸರು ಚಿ ಅಕ್ಷರದಿಂದ ಆರಂಭವಾಗುವವರ ಭವಿಷ್ಯ

ದುಡುಕದೆ ಆಡುವ ಮಾತಿನ ಮೇಲೆ ಹತೋಟಿ ಸಾಧಿಸುವಿರಿ. ಸತತ ಪ್ರಯತ್ನದ ನಡುವೆ ಉದ್ಯೋಗದಲ್ಲಿ ಉನ್ನತ ಅಧಿಕಾರ ಗಳಿಸುವಿರಿ. ಕುಟುಂಬದ ಆಸ್ತಿಯು ನಿಮಗೆ ದೊರೆಯುತ್ತದೆ. ಯೋಗ ಪ್ರಾಣಾಯಾಮದಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವಿರಿ. ಹಣಕಾಸಿನ ವ್ಯವಹಾರದಲ್ಲಿ ಆಸಕ್ತಿ ಉಂಟಾಗುತ್ತದೆ. ತಂದೆಯ ಸಹಾಯದಿಂದ ರಾಜಕೀಯ ಪ್ರವೇಶಿಸುವ ಆಸೆ ಈಡೇರಲಿದೆ. ದುಬಾರಿ ಬೆಲೆಯ ಗೃಹಾಲಂಕರದ ವಸ್ತುಗಳನ್ನು ಕೊಳ್ಳುವಿರಿ. ವಿದ್ಯಾರ್ಥಿಗಳು ಉನ್ನತ ಅಧ್ಯಯನದಲ್ಲಿ ನಿರತರಾಗುತ್ತಾರೆ. ಸುಲಭವಾಗಿ ಯಾವುದೇ ಕೆಲಸವನ್ನು ಪೂರ್ಣಗೊಳಿಸಬಲ್ಲಿರಿ. ಮಕ್ಕಳ ವಿಚಾರದಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳುವಿರಿ. ಹವ್ಯಾಸಕ್ಕೆಂದು ಆರಂಭಿಸಿದ ವ್ಯಾಪಾರ ನಿಮ್ಮ ಜೀವನಕ್ಕೆ ಆಧಾರವಾಗಲಿದೆ. ಕುಟುಂಬದಲ್ಲಿ ಅನಾವಶ್ಯಕ ವಾದ ವಿವಾದಗಳು ಎದುರಾಗುತ್ತವೆ. ಆದರೆ ಶಾಂತಿ ಸಂಧಾನದಿಂದ ಸುಖ್ಯಾಂತ್ಯಗೊಳ್ಳುತ್ತದೆ.

ಬರಹ: ಎಚ್‌. ಸತೀಶ್, ಜ್ಯೋತಿಷಿ.

ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ "ಹಿಂದೂಸ್ತಾನ್ ಟೈಮ್ಸ್ ಕನ್ನಡ" ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ.

Raghavendra M Y

TwittereMail
ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.