ಜನವರಿ 2025 ಮಾಸ ಭವಿಷ್ಯ: ಉದ್ಯೋಗದಲ್ಲಿ ಪ್ರಗತಿ, ಸ್ವಂತ ವ್ಯಾಪಾರದಲ್ಲಿ ಉತ್ತಮ ಲಾಭವಿದೆ; ಮಕರ, ಕುಂಭ, ಮೀನ ರಾಶಿಯವರ ತಿಂಗಳ ಭವಿಷ್ಯ
ಜನವರಿ 2025 ಮಾಸ ಭವಿಷ್ಯ: ಎಲ್ಲಾ ರಾಶಿಚಕ್ರ ಚಿಹ್ನೆಗಳಿಗೆ 2025 ರ ಜನವರಿ ತಿಂಗಳ ಭವಿಷ್ಯದಲ್ಲಿ ಉತ್ತಮ ಫಲಗಳಿವೆ. ಆದರೆ ಕೆಲವೇ ಕೆಲವು ರಾಶಿಯವರಿಗೆ ಸವಾಲುಗಳು ಎದುರಾಗುತ್ತವೆ. ಮಕರ, ಕುಂಭ ಹಾಗೂ ಮೀನ ರಾಶಿಯವರಿಗೆ ಜನವರಿ ತಿಂಗಳ ಭವಿಷ್ಯ ಹೇಗಿದೆ ಎಂಬುದನ್ನು ಇಲ್ಲಿ ನೀಡಲಾಗಿದೆ.
ಜನವರಿ 2025 ಮಾಸ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಅವರು ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. 2025ರ ಜನವರಿಯಲ್ಲಿ ಮಕರ, ಕುಂಭ ಹಾಗೂ ಮೀನ ರಾಶಿಯವರ ಮಾಸ ಭವಿಷ್ಯ ಇಲ್ಲಿದೆ.
ಮಕರ ರಾಶಿ
ಉದ್ಯೋಗದಲ್ಲಿ ಎದುರಾಗುವ ಅಡ್ಡಿ ಆತಂಕಗಳನ್ನು ಯಶಸ್ವಿಯಾಗಿ ಎದುರಿಸುವಿರಿ. ನಿಮ್ಮ ಮನದ ಆಸೆಗಳು ಈಡೇರಲಿವೆ. ಮಕ್ಕಳಿಂದ ಸಂತೋಷವೆನಿಸುವ ವರ್ತಮಾನ ಬರಲಿದೆ. ಸವಾಲಾಗುವಂತಹ ಕೆಲಸ ಕಾರ್ಯಗಳಲ್ಲಿ ನಿರತರಾಗುವಿರಿ. ಸಹೋದ್ಯೋಗಿಗಳಿಂದ ಉತ್ತಮ ಸಹಾಯ ಸಹಕಾರ ದೊರೆಯುತ್ತದೆ. ಸ್ವಂತ ವ್ಯಾಪಾರ, ವ್ಯವಹಾರಗಳಲ್ಲಿ ಉತ್ತಮ ಲಾಭ ಗಳಿಸುವಿರಿ. ಅನಿರೀಕ್ಷಿತ ಧನ ಲಾಭವಿರುತ್ತದೆ. ಕುಟುಂಬದಲ್ಲಿ ಇದ್ದ ಭಿನ್ನಾಭಿಪ್ರಾಯಗಳು ದೂರವಾಗುತ್ತವೆ. ವಯಸ್ಸಿನ ಅಂತರವಿಲ್ಲದೆ ಎಲ್ಲರೂ ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳುತ್ತಾರೆ. ಸಮಾಜ ಸೇವೆಯಲ್ಲಿ ಸದಾಕಾಲ ನಿರತರಾಗುವಿರಿ. ಹಣ ಬರಲು ಅಡ್ಡಿಯಾಗಿರುವ ಸಮಸ್ಯೆಗಳು ಬಗೆಹರಿಲಿವೆ. ಹೊಸ ಯೋಜನೆಗಳನ್ನು ರೂಪಿಸುತ್ತೀರಿ. ಓದಿನಲ್ಲಿ ಆಸಕ್ತಿ ಹೆಚ್ಚಾಗುತ್ತದೆ.
ಕುಂಭ ರಾಶಿ
ಸುಲಭ ಸಾಧ್ಯವಾದ ಕೆಲಸ ಕಾರ್ಯಗಳನ್ನು ಮಾತ್ರ ಆಯ್ಕೆ ಮಾಡುವಿರಿ. ನಿಮ್ಮ ಮನದಾಳವನ್ನು ಅರಿಯಲು ಸಾಧ್ಯವಾಗುವುದಿಲ್ಲ. ಉದ್ಯೋಗದಲ್ಲಿ ದೊಡ್ಡ ಪ್ರಮಾಣದ ಯಶಸ್ಸು ನಿಮಗೆ ದೊರೆಯಲಿದೆ. ಮನಸ್ಸಿಲ್ಲದೆ ಹೋದರು ಉದ್ಯೋಗವನ್ನು ಬದಲಿಸಬೇಕಾಗುತ್ತದೆ. ಸ್ವಂತ ಉದ್ದಿಮೆ ಹೊಂದಿರುವವರಿಗೆ ಉತ್ತಮ ವರಮಾನ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಕಲಿಕೆಗೆ ಮುನ್ನ ಉದ್ಯೋಗ ದೊರೆಯುತ್ತದೆ. ಮಕ್ಕಳ ಜೊತೆಯಲ್ಲಿ ಅನಾವಶ್ಯಕವಾದ ವಾದ ವಿವಾದಗಳಿರುತ್ತವೆ. ಅನಿರೀಕ್ಷಿತ ಧನ ಲಾಭವಿರುತ್ತದೆ. ಸಭೆ ಸಮಾರಂಭಗಳಲ್ಲಿ ಎಲ್ಲರಿಂದ ದೂರ ಉಳಿಯುವಿರಿ. ಉತ್ತಮ ಆರೋಗ್ಯವಿರುತ್ತದೆ. ನಿಮ್ಮ ಕೆಲಸಕ್ಕೆ ಸ್ನೇಹಿತರಿಂದ ಬೆಂಬಲ ಹಾಗೂ ಐಡಿಯಾಗಳನ್ನು ಪಡೆಯುತ್ತೀರಿ. ಹೊಸ ಯೋಜನೆಗಳು ಕಾರ್ಯ ರೂಪಕ್ಕೆ ಬರುತ್ತದೆ.
ಮೀನ ರಾಶಿ
ಕುಟುಂಬದಲ್ಲಿ ಮತ್ತು ಸಮಾಜದಲ್ಲಿ ಉನ್ನತ ಗೌರವ ಸಂಪಾದಿಸುವಿರಿ. ಕುಟುಂಬದ ಹೆಚ್ಚಿನ ಜವಾಬ್ದಾರಿಯು ನಿಮ್ಮದಾಗುತ್ತದೆ. ಗುರು ಹಿರಿಯರಿಗೆ ವಿಶೇಷ ಗೌರವ ನೀಡುವಿರಿ. ಉದ್ಯೋಗದಲ್ಲಿ ಯಾವುದೇ ತೊಂದರೆ ಕಂಡುಬರುವುದಿಲ್ಲ. ಸಣ್ಣಪುಟ್ಟ ವಿಚಾರಗಳಿಗೂ ಮಾನಸಿಕ ಒತ್ತಡಕ್ಕೆ ಒಳಗಾಗುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಬೇರೆಯವರನ್ನು ಅವಲಂಬಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಸ್ವಾತಂತ್ರ್ಯವಾಗಿ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವುದಿಲ್ಲ. ಅನಪೇಕ್ಷಿತ ವಿಚಾರಗಳು ನಿಮ್ಮ ಮನಸ್ಸಿಗೆ ಬೇಸರವನ್ನು ಉಂಟು ಮಾಡಲಿವೆ. ಅಸಾಧ್ಯವಾದ ಕೋಪದ ಕಾರಣ ಬಂದು ಬಳಗದವರು ನಿಮ್ಮಿಂದ ದೂರ ಉಳಿಯುತ್ತಾರೆ. ತಾಳ್ಮೆಯಿಂದ ಇರಲು ಪ್ರಯತ್ನಿಸುತ್ತೀರಿ. ನೆರೆ ಹೊರೆಯವರು ನಿಮ್ಮ ಪ್ರಗತಿಯನ್ನು ಸಹಿಸುವುದಿಲ್ಲ. ಸವಾಲುಗಳು ಇರುತ್ತವೆ. ಹಣಕಾಸಿನ ವಿಷಯದಲ್ಲಿ ಯಾರನ್ನೂ ಸುಲಭವಾಗಿ ನಂಬದಿರಲು ಯೋಚಿಸುತ್ತೀರಿ. ಹೂಡಿಕೆಗಳಿಂದ ಲಾಭವನ್ನು ಪಡೆಯುತ್ತೀರಿ.
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
ವಿಭಾಗ