ಜನವರಿ 2025 ಮಾಸ ಭವಿಷ್ಯ: ಹಣಕಾಸಿನ ತೊಂದರೆ ಎದುರಾಗುವುದಿಲ್ಲ, ಹೊಸ ಯೋಜನೆಗಳನ್ನು ರೂಪಿಸುತ್ತೀರಿ
ಜನವರಿ 2025 ಮಾಸ ಭವಿಷ್ಯ: ಎಲ್ಲಾ ರಾಶಿಚಕ್ರ ಚಿಹ್ನೆಗಳಿಗೆ 2025ರ ಜನವರಿ ತಿಂಗಳ ಭವಿಷ್ಯದಲ್ಲಿ ಉತ್ತಮ ಫಲಗಳಿವೆ. ಆದರೆ ಕೆಲವೇ ಕೆಲವು ರಾಶಿಯವರಿಗೆ ಸವಾಲುಗಳು ಎದುರಾಗುತ್ತವೆ. ಮೇಷದಿಂದ ಮೀನ ರಾಶಿಯವರಿಗೆ ಜನವರಿ ತಿಂಗಳ ಭವಿಷ್ಯ ಹೇಗಿದೆ ಎಂಬುದನ್ನು ಇಲ್ಲಿ ನೀಡಲಾಗಿದೆ.
ಜನವರಿ 2025 ಮಾಸ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಅವರು ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. 2025ರ ಜನವರಿಯಲ್ಲಿ ದ್ವಾದಶ ರಾಶಿಗಳ ಮಾಸ ಭವಿಷ್ಯ ಇಲ್ಲಿದೆ.
ಮೇಷ ರಾಶಿ
ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಬುದ್ದಿವಂತಿಕೆಯಿಂದ ಗೆಲ್ಲುವಿರಿ. ಆದರೆ ಎಚ್ಚರ ತಪ್ಪಿದಲ್ಲಿ ವಿವಾದಕ್ಕೆ ಗುರಿಯಾಗುವಿರಿ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ಕ್ರಮೇಣವಾಗಿ ಪ್ರಗತಿಯತ್ತ ಸಾಗುವಿರಿ. ಆತ್ಮಗೌರವಕ್ಕೆ ಧಕ್ಕೆ ಬರುವಂತಹ ಕೆಲಸ ಕಾರ್ಯಗಳಿಂದ ದೂರ ಉಳಿಯುವಿರಿ. ಹೊಸ ಯೋಜನೆಗಳಿಂದ ಆರ್ಥಿಕ ಪ್ರಗತಿ ಸಾಧಿಸುವಿರಿ. ಉತ್ತಮ ಆದಾಯವಿದ್ದರೂ ಖರ್ಚು ವೆಚ್ಚಗಳನ್ನು ನಿಯಂತ್ರಿಸಲು ಸಾಧ್ಯವಾಗುವುದಿಲ್ಲ. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ಬಾಳುವ ಕಾರಣ ಮನಸ್ಸಿಗೆ ನೆಮ್ಮದಿ ಇರುತ್ತದೆ. ವಿದ್ಯಾರ್ಥಿಗಳು ದೊರೆಯುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುತ್ತಾರೆ. ಹೊಸ ಉತ್ಸಾಹದಿಂದ ಕೆಲಸಗಳನ್ನು ಮಾಡಲು ನಿರ್ಧಾರ ಮಾಡುತ್ತೀರಿ. ಸಮಸ್ಯೆಗಳನ್ನು ಕಡಿಮೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಯೋಚಿಸುತ್ತೀರಿ.
ವೃಷಭ ರಾಶಿ
ಆಶ್ಚರ್ಯಕರ ಬದಲಾವಣೆಗಳು ಅನುಕೂಲಕರವಾಗಿದ್ದು, ಮಾನಸಿಕ ನೆಮ್ಮದಿ ಇರುತ್ತದೆ. ಉದ್ಯೋಗದಲ್ಲಿ ಉನ್ನತ ಮಟ್ಟವನ್ನು ತಲುಪುವಿರಿ. ನಿಮ್ಮ ಪ್ರಯತ್ನಗಳಿಗೆ ಎಲ್ಲರ ಮೆಚ್ಚುಗೆ ದೊರೆಯುತ್ತದೆ. ಹಣಕಾಸಿನ ಹೂಡಿಕೆಯಿಂದ ಉತ್ತಮ ಲಾಭ ಗಳಿಸುವಿರಿ. ಬಿಡುವಿನ ವೇಳೆ ಸಣ್ಣ ಬಂಡವಾಳದ ವ್ಯಾಪಾರವನ್ನು ಆರಂಭಿಸುವಿರಿ. ಖರ್ಚು ವೆಚ್ಚಗಳು ಮಿತಿಮೀರುತ್ತದೆ. ಕುಟುಂಬದಲ್ಲಿ ಅನಾವಶ್ಯಕ ವಾದ ವಿವಾದಗಳು ಇರುತ್ತದೆ. ವಿದ್ಯಾರ್ಥಿಗಳು ತಮ್ಮ ಜವಾಬ್ದಾರಿಯನ್ನು ಸುಲಭವಾಗಿ ನಿರ್ವಹಿಸುತ್ತಾರೆ. ಸಾಲದ ವ್ಯವಹಾರದಿಂದ ಕಷ್ಟಕ್ಕೆ ಸಿಲುಕುವ ಸಾಧ್ಯತೆಗಳಿವೆ. ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ. ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸುತ್ತೀರಿ. ಉತ್ಸಾಹದಿಂದ ಕೆಲಸ ಆರಂಭಿಸುತ್ತೀರಿ. ಸ್ನೇಹಿತರ ಭೇಟಿ ಸಂತೋಷವನ್ನು ಹೆಚ್ಚಿಸುತ್ತದೆ. ವ್ಯಾಪಾರಿಗಳಿಗೆ ಲಾಭದ ಸಾಧ್ಯತೆ ಇದೆ.
ಮಿಥುನ ರಾಶಿ
ನಷ್ಟದಲ್ಲಿ ಇದ್ದ ಉದ್ದಿಮೆಯನ್ನು ಕೊಂಡು ಉತ್ತಮ ಲಾಭ ಗಳಿಸುವಿರಿ. ಹಣಕಾಸಿನ ವಿಚಾರದಲ್ಲಿ ಸ್ಥಿರತೆ ಕಂಡು ಬರುತ್ತದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಜೊತೆಯಲ್ಲಿ ಉತ್ತಮ ಬಾಂಧವ್ಯ ಇರುತ್ತದೆ. ಸಮಾಜದಲ್ಲಿನ ಉನ್ನತ ಸ್ಥಾನವು ನಿಮಗೆ ದೊರೆಯುತ್ತದೆ. ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ಸ್ತ್ರೀಯರು ಕುಟುಂಬದಲ್ಲಿನ ಮಂಗಳ ಕಾರ್ಯವು ನೆರವೇರಲು ಮೂಲ ಕಾರಣರಾಗುತ್ತಾರೆ. ಆರೋಗ್ಯದ ಸಮಸ್ಯೆ ಎದುರಾಗುತ್ತದೆ. ಪಾಲುಗಾರಿಕೆಯ ವ್ಯಾಪಾರದಲ್ಲಿ ಹೆಚ್ಚಿನ ಲಾಭಾಂಶ ದೊರೆಯುತ್ತದೆ. ಹಣಕಾಸಿನ ವ್ಯವಹಾರದಲ್ಲಿ ತೊಂದರೆ ಇರುವುದಿಲ್ಲ. ಒತ್ತಡದ ಜೀವನದಿಂದ ಮುಕ್ತಿ ಪಡೆಯಲು ಯೋಚಿಸುತ್ತೀರಿ. ಹೆಚ್ಚಿನ ಹಣ ಬರಲಿದೆ. ಖರ್ಚಿನ ಮೇಲೆ ಗಮನ ಹರಿಸುತ್ತೀರಿ. ಕುಟುಂಬದಿಂದ ಅನಾವಶ್ಯಕ ಖರೀದಿಗಳನ್ನು ತಪ್ಪಿಸಲು ಪ್ರಯತ್ನಿಸುತ್ತೀರಿ.
ಕಟಕ ರಾಶಿ
ತಮ್ಮ ಆಲೋಚನೆಯಿಂದ ಜೀವನದಲ್ಲಿ ಆಶಾದಾಯಕ ಬದಲಾವಣೆಗಳು ಉಂಟಾಗಲಿವೆ. ಕುಟುಂಬದ ಹಿರಿಯರ ಜೊತೆಯಲ್ಲಿ ಹಣಕಾಸಿನ ವಿಚಾರದಲ್ಲಿ ಮನಸ್ತಾಪವಿರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ನಿಮ್ಮ ಕಾರ್ಯವ್ಯಾಪ್ತಿಯನ್ನು ವಿಸ್ತರಿಸುವಿರಿ. ವಿದ್ಯಾರ್ಥಿಗಳ ನಿರೀಕ್ಷೆಗಳು ಗುರುಹಿರಿಯರ ಮಾರ್ಗದರ್ಶನದಲ್ಲಿ ಕಾರ್ಯಗತಗೊಳ್ಳಲಿದೆ. ಉದ್ಯೋಗದಲ್ಲಿ ನಿರೀಕ್ಷಿತ ಯಶಸ್ಸು ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಕಾಣುವುದಿಲ್ಲ. ಆದರೆ ಖರ್ಚು ವೆಚ್ಚಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಕಷ್ಟವೆನಿಸಿದರು ಹಣಉಳಿಸಲು ಯಶಸ್ವಿಯಾಗುವಿರಿ. ಸ್ವಂತ ಮನೆಯ ಕನಸು ಕುಟುಂಬದವರ ಸಹಕಾರದೊಂದಿಗೆ ಕೈಗೂಡಲಿದೆ. ಆರೋಗ್ಯದಲ್ಲಿ ಏರಿಳಿತವಿರುತ್ತದೆ. ಸವಾಲುಗಳನ್ನು ಎದುರಿಸಲು ಧೈರ್ಯ ಮಾಡುತ್ತೀರಿ. ಆರ್ಥಿಕ ನಷ್ಟವನ್ನು ತಪ್ಪಿಸಲು ಪ್ರಯತ್ನಿಸುತ್ತೀರಿ. ಸಂಬಂಧಿಕರಿಂದ ದೂರ ಉಳಿಯುವುದು ಒಳ್ಳೆಯದು.
ಸಿಂಹ ರಾಶಿ
ಅಪೂರ್ಣಗೊಂಡ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಉದ್ಯೋಗದಲ್ಲಿ ಕೆಲಸದ ಒತ್ತಡವು ಅಧಿಕವಾಗಿರುತ್ತದೆ. ಹಿರಿಯ ಅಧಿಕಾರಿಗಳ ಜೊತೆಯಲ್ಲಿ ವಿಶ್ವಾಸದಿಂದ ಇರಲು ಪ್ರಯತ್ನಿಸಿ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರುತ್ತದೆ. ನಿಮ್ಮ ಜವಾಬ್ದಾರಿಯನ್ನು ಮಕ್ಕಳ ಸಹಕಾರದಿಂದ ನಿರ್ವಹಿಸುವಿರಿ. ಸಮಯಕ್ಕೆ ಅನುಸಾರವಾಗಿ ವರ್ತಿಸುವಿರಿ. ವಾದ ವಿವಾದಗಳಿಂದ ದೂರವಿದ್ದು ಎಲ್ಲರ ಮೆಚ್ಚುಗೆ ಗಳಿಸುವಿರಿ. ಹಣಕಾಸಿನ ವಿಚಾರದಲ್ಲಿ ಬೇರೆಯವರ ಒತ್ತಡಕ್ಕೆ ಮಣಿದು ತಪ್ಪು ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ಪ್ರವಾಸದಿಂದ ಲಾಭವಿದೆ. ಉದ್ಯೋಗ ಬದಲಿಸುವ ಸಾಧ್ಯತೆಗಳಿವೆ. ವ್ಯಾಪಾರಿಗಳಿಗೆ ಲಾಭದ ಅವಕಾಶ ಇರುತ್ತದೆ. ಮನೆಯವರಿಂದ ಒತ್ತಡ ಹೆಚ್ಚಾಗುವ ಕಾರಣ ಅವಿವಾಹಿತರು ಮದುವೆಯ ಬಗ್ಗೆ ಯೋಚಿಸುತ್ತಾರೆ.
ಕನ್ಯಾ ರಾಶಿ
ಹೆಚ್ಚಿನ ಜವಾಬ್ದಾರಿಗಳಿಂದ ನೆಮ್ಮದಿ ಮತ್ತು ವಿಶ್ರಾಂತಿ ದೂರವಾಗುತ್ತವೆ. ಕಲಾವಿದರಿಗೆ ವಿಶೇಷ ಅವಕಾಶಗಳು ದೊರೆಯುತ್ತವೆ. ಉದ್ಯೋಗದಲ್ಲಿ ಹೊಸ ರೀತಿಯ ಅವಕಾಶಗಳು ದೊರೆಯಲಿವೆ. ಆತ್ಮೀಯರ ಸಹಾಯದಿಂದ ಉದ್ಯೋಗ ಲಭಿಸುತ್ತದೆ. ಪಾಲುಗಾರಿಕೆಯ ವ್ಯಾಪಾರದಲ್ಲಿ ಹೆಚ್ಚಿನ ಲಾಭವಿರುತ್ತದೆ. ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ವಿದೇಶಕ್ಕೆ ತೆರಳುವ ಸಾಧ್ಯತೆ ಇರುತ್ತದೆ. ಷೇರಿನಲ್ಲಿ ಲಾಭಗಳಿಸುವಿರಿ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗುತ್ತದೆ. ದಂಪತಿ ನಡುವಿನ ಮನಸ್ತಾಪವು ದೂರವಾಗಲಿದೆ. ಆತ್ಮವಿಶ್ವಾಸವನ್ನು ಬೆಳೆಸಿಕೊಂಡಲ್ಲಿ ಉತ್ತಮ ಜೀವನ ನಡೆಸಬಹುದು. ಆರ್ಥಿಕವಾಗಿ ಸವಾಲುಗಳು ಇರುತ್ತವೆ. ಹೊಸ ಉತ್ಸಾಹದಿಂದ ಕೆಲಸ ಮಾಡಲು ಮುಂದಾಗುತ್ತೀರಿ. ಹೊಸ ಯೋಜನೆಗಳನ್ನು ರೂಪಿಸುತ್ತೀರಿ. ನಿವೇಶನ ಖರೀದಿಸುವ ಬಗ್ಗೆ ಯೋಚಿಸುತ್ತೀರಿ. ನಿಮ್ಮ ಕೆಲಸಗಳಿಗೆ ಸ್ನೇಹಿತರಿಂದ ನಿರೀಕ್ಷೆಗೂ ಮೀರಿದ ಬೆಂಬಲ ಸಿಗುತ್ತದೆ.
ತುಲಾ ರಾಶಿ
ಆತುರದಿಂದ ಯಾವುದೇ ಕೆಲಸ ಕಾರ್ಯಗಳನ್ನು ಮಾಡುವುದಿಲ್ಲ. ಯಶಸ್ಸಿನ ಹಾದಿಯಲ್ಲಿ ಸಾಗುವ ಕಾರಣ ಮನಸ್ಸಿಗೆ ನೆಮ್ಮದಿ ಇರುತ್ತದೆ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನವಿರಲಿ. ಹಣಕಾಸಿನ ತೊಂದರೆ ಎದುರಾಗುವುದಿಲ್ಲ. ಅತಿಯಾದ ಆಸೆ ಇರದ ಕಾರಣ ಜೀವನದಲ್ಲಿ ಸಂತೋಷವಿರುತ್ತದೆ. ದಾಂಪತ್ಯ ಜೀವನದಲ್ಲಿ ಪರಸ್ಪರ ಹೊಂದಾಣಿಕೆ ಕಂಡುಬರುತ್ತದೆ. ಮಕ್ಕಳ ಜೀವನದಲ್ಲಿ ನಿರೀಕ್ಷಿತ ಬದಲಾವಣೆಗಳು ಉಂಟಾಗಲು ಕಾರಣರಾಗುವಿರಿ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆಯಿಂದ ವ್ಯವಹರಿಸುವಿರಿ. ಗುಟ್ಟಾಗಿ ಹಣವನ್ನು ಉಳಿಸುವ ಯೋಜನೆ ರೂಪಿಸುವಿರಿ. ಸ್ವಂತ ಬಳಕೆಗಾಗಿ ಹೊಸ ವಾಹನ ಕೊಳ್ಳುವಿರಿ. ನಿಮ್ಮ ಕೆಲಸದಲ್ಲಿ ಸ್ನೇಹಿತದ ಯೋಜನೆಗಳು ಸಹಕಾರಿಯಾಗುತ್ತವೆ. ವ್ಯಾಪಾರಿಗಳು ತಮ್ಮ ವ್ಯವಹಾರವನ್ನು ವಿಸ್ತರಿಸಿಕೊಳ್ಳುತ್ತಾರೆ. ಕೋರ್ಟ್ ಪ್ರಕರಣದಲ್ಲಿ ಜಯ ಗಳಿಸುತ್ತೀರಿ.
ವೃಶ್ಚಿಕ ರಾಶಿ
ಅತಿ ಬೇಗನೆ ಕೋಪಗೊಳ್ಳುವಿರಿ. ಆರಂಭಿಸುವ ಕೆಲಸ ಕಾರ್ಯಗಳನ್ನು ಕಷ್ಟವೆನಿಸಿದರು ಪೂರ್ಣಗೊಳಿಸುವಿರಿ. ನಿಮ್ಮಲ್ಲಿನ ಸಮರ್ಪಣಾ ಮನೋಭಾವನೆಗೆ ಎಲ್ಲರೂ ಮೆಚ್ಚಿಗೆ ವ್ಯಕ್ತಪಡಿಸುತ್ತಾರೆ. ಉದ್ಯೋಗದಲ್ಲಿ ಉನ್ನತ ಅಧಿಕಾರ ಗಳಿಸುವಿರಿ. ದೂರವಾದ ಆತ್ಮೀಯರು ಮತ್ತೊಮ್ಮೆ ನಿಮ್ಮ ಸ್ನೇಹ ಬಯಸುತ್ತಾರೆ. ಉತ್ತಮ ಸ್ನೇಹಿತರು ನಿಮ್ಮ ಯಶಸ್ಸಿಗೆ ಕಾರಣರಾಗುತ್ತಾರೆ. ಅವಿವಾಹಿತರಿಗೆ ಪರಿಚಿತರ ಜೊತೆಯಲ್ಲಿ ವಿವಾಹ ನಿಶ್ಚಯವಾಗುತ್ತದೆ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ. ಶಾಂತಿ ಸಂಯಮದಿಂದ ವರ್ತಿಸಿದರೆ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸುತ್ತೀರಿ. ಕುಟುಂಬ ಅಥವಾ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಹೋಗಲು ಪ್ಲಾನ್ ಮಾಡುತ್ತೀರಿ.
ಧನು ರಾಶಿ
ಎದುರಾಗುವ ಸಮಸ್ಯೆಗಳನ್ನು ಸಂಧಾನದಿಂದ ಬಗೆಹರಿಸುವಿರಿ. ಲಾಭವಿಲ್ಲದ ಕೆಲಸ ಕಾರ್ಯಗಳಲ್ಲಿ ಆಸಕ್ತಿ ತೋರುವುದಿಲ್ಲ. ಸಂಬಂಧಗಳಿಗೆ ಪ್ರಾಮುಖ್ಯತೆ ನೀಡುವಿರಿ. ಮನದಲ್ಲಿರುವ ಆಸೆ ಆಕಾಂಕ್ಷೆಗಳಿಗೆ ಮಿತಿ ಹೇರುವಿರಿ. ಇದರಿಂದಾಗಿ ಮನಸ್ಸಿಗೆ ಶಾಂತಿ ನೆಮ್ಮದಿ ಇರುತ್ತದೆ. ಆತ್ಮೀಯರಿಗೆ ಹಣದ ಸಹಾಯ ಮಾಡುವಿರಿ. ಆರೋಗ್ಯದಲ್ಲಿ ಯಾವುದೇ ತೊಂದರೆ ಕಂಡುಬರುವುದಿಲ್ಲ. ಸೋಲಿನ ವೇಳೆ ಉದ್ವೇಗದಿಂದ ವರ್ತಿಸುವಿರಿ. ಮನೆತನದ ಆಸ್ತಿಯಲ್ಲಿ ನಿಮಗೆ ಸಿಂಹ ಪಾಲು ದೊರೆಯುತ್ತದೆ. ತಪ್ಪು ಮಾಡಿದವರನ್ನು ಕ್ಷಮಿಸುವುದಿಲ್ಲ. ನಿಮ್ಮ ಶಿಸ್ತು ಬದ್ಧ ಜೀವನವನ್ನು ಎಲ್ಲರೂ ಗೌರವಿಸುತ್ತಾರೆ. ಆಸ್ತಿಯ ವಿವಾದಗಳು ಬಗೆ ಹರಿಯುತ್ತವೆ. ಹಳೆಯ ಹೂಡಿಕೆಗಳಿಂದ ಈ ಮಾಸದಲ್ಲಿ ಲಾಭವನ್ನ ಪಡೆಯುತ್ತೀರಿ. ಏಕಾಏಕಿ ಉದ್ಯೋಗ ಬದಲಾಯಿಸುವ ಸಾಧ್ಯತೆಗಳು ಇರುತ್ತವೆ.
ಮಕರ ರಾಶಿ
ಉದ್ಯೋಗದಲ್ಲಿ ಎದುರಾಗುವ ಅಡ್ಡಿ ಆತಂಕಗಳನ್ನು ಯಶಸ್ವಿಯಾಗಿ ಎದುರಿಸುವಿರಿ. ನಿಮ್ಮ ಮನದ ಆಸೆಗಳು ಈಡೇರಲಿವೆ. ಮಕ್ಕಳಿಂದ ಸಂತೋಷವೆನಿಸುವ ವರ್ತಮಾನ ಬರಲಿದೆ. ಸವಾಲಾಗುವಂತಹ ಕೆಲಸ ಕಾರ್ಯಗಳಲ್ಲಿ ನಿರತರಾಗುವಿರಿ. ಸಹೋದ್ಯೋಗಿಗಳಿಂದ ಉತ್ತಮ ಸಹಾಯ ಸಹಕಾರ ದೊರೆಯುತ್ತದೆ. ಸ್ವಂತ ವ್ಯಾಪಾರ, ವ್ಯವಹಾರಗಳಲ್ಲಿ ಉತ್ತಮ ಲಾಭ ಗಳಿಸುವಿರಿ. ಅನಿರೀಕ್ಷಿತ ಧನ ಲಾಭವಿರುತ್ತದೆ. ಕುಟುಂಬದಲ್ಲಿ ಇದ್ದ ಭಿನ್ನಾಭಿಪ್ರಾಯಗಳು ದೂರವಾಗುತ್ತವೆ. ವಯಸ್ಸಿನ ಅಂತರವಿಲ್ಲದೆ ಎಲ್ಲರೂ ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳುತ್ತಾರೆ. ಸಮಾಜ ಸೇವೆಯಲ್ಲಿ ಸದಾಕಾಲ ನಿರತರಾಗುವಿರಿ. ಹಣ ಬರಲು ಅಡ್ಡಿಯಾಗಿರುವ ಸಮಸ್ಯೆಗಳು ಬಗೆಹರಿಲಿವೆ. ಹೊಸ ಯೋಜನೆಗಳನ್ನು ರೂಪಿಸುತ್ತೀರಿ. ಓದಿನಲ್ಲಿ ಆಸಕ್ತಿ ಹೆಚ್ಚಾಗುತ್ತದೆ.
ಕುಂಭ ರಾಶಿ
ಸುಲಭ ಸಾಧ್ಯವಾದ ಕೆಲಸ ಕಾರ್ಯಗಳನ್ನು ಮಾತ್ರ ಆಯ್ಕೆ ಮಾಡುವಿರಿ. ನಿಮ್ಮ ಮನದಾಳವನ್ನು ಅರಿಯಲು ಸಾಧ್ಯವಾಗುವುದಿಲ್ಲ. ಉದ್ಯೋಗದಲ್ಲಿ ದೊಡ್ಡ ಪ್ರಮಾಣದ ಯಶಸ್ಸು ನಿಮಗೆ ದೊರೆಯಲಿದೆ. ಮನಸ್ಸಿಲ್ಲದೆ ಹೋದರು ಉದ್ಯೋಗವನ್ನು ಬದಲಿಸಬೇಕಾಗುತ್ತದೆ. ಸ್ವಂತ ಉದ್ದಿಮೆ ಹೊಂದಿರುವವರಿಗೆ ಉತ್ತಮ ವರಮಾನ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಕಲಿಕೆಗೆ ಮುನ್ನ ಉದ್ಯೋಗ ದೊರೆಯುತ್ತದೆ. ಮಕ್ಕಳ ಜೊತೆಯಲ್ಲಿ ಅನಾವಶ್ಯಕವಾದ ವಾದ ವಿವಾದಗಳಿರುತ್ತವೆ. ಅನಿರೀಕ್ಷಿತ ಧನ ಲಾಭವಿರುತ್ತದೆ. ಸಭೆ ಸಮಾರಂಭಗಳಲ್ಲಿ ಎಲ್ಲರಿಂದ ದೂರ ಉಳಿಯುವಿರಿ. ಉತ್ತಮ ಆರೋಗ್ಯವಿರುತ್ತದೆ. ನಿಮ್ಮ ಕೆಲಸಕ್ಕೆ ಸ್ನೇಹಿತರಿಂದ ಬೆಂಬಲ ಹಾಗೂ ಐಡಿಯಾಗಳನ್ನು ಪಡೆಯುತ್ತೀರಿ. ಹೊಸ ಯೋಜನೆಗಳು ಕಾರ್ಯ ರೂಪಕ್ಕೆ ಬರುತ್ತದೆ.
ಮೀನ ರಾಶಿ
ಕುಟುಂಬದಲ್ಲಿ ಮತ್ತು ಸಮಾಜದಲ್ಲಿ ಉನ್ನತ ಗೌರವ ಸಂಪಾದಿಸುವಿರಿ. ಕುಟುಂಬದ ಹೆಚ್ಚಿನ ಜವಾಬ್ದಾರಿಯು ನಿಮ್ಮದಾಗುತ್ತದೆ. ಗುರು ಹಿರಿಯರಿಗೆ ವಿಶೇಷ ಗೌರವ ನೀಡುವಿರಿ. ಉದ್ಯೋಗದಲ್ಲಿ ಯಾವುದೇ ತೊಂದರೆ ಕಂಡುಬರುವುದಿಲ್ಲ. ಸಣ್ಣಪುಟ್ಟ ವಿಚಾರಗಳಿಗೂ ಮಾನಸಿಕ ಒತ್ತಡಕ್ಕೆ ಒಳಗಾಗುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಬೇರೆಯವರನ್ನು ಅವಲಂಬಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಸ್ವಾತಂತ್ರ್ಯವಾಗಿ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವುದಿಲ್ಲ. ಅನಪೇಕ್ಷಿತ ವಿಚಾರಗಳು ನಿಮ್ಮ ಮನಸ್ಸಿಗೆ ಬೇಸರವನ್ನು ಉಂಟು ಮಾಡಲಿವೆ. ಅಸಾಧ್ಯವಾದ ಕೋಪದ ಕಾರಣ ಬಂದು ಬಳಗದವರು ನಿಮ್ಮಿಂದ ದೂರ ಉಳಿಯುತ್ತಾರೆ. ತಾಳ್ಮೆಯಿಂದ ಇರಲು ಪ್ರಯತ್ನಿಸುತ್ತೀರಿ. ನೆರೆ ಹೊರೆಯವರು ನಿಮ್ಮ ಪ್ರಗತಿಯನ್ನು ಸಹಿಸುವುದಿಲ್ಲ. ಸವಾಲುಗಳು ಇರುತ್ತವೆ. ಹಣಕಾಸಿನ ವಿಷಯದಲ್ಲಿ ಯಾರನ್ನೂ ಸುಲಭವಾಗಿ ನಂಬದಿರಲು ಯೋಚಿಸುತ್ತೀರಿ. ಹೂಡಿಕೆಗಳಿಂದ ಲಾಭವನ್ನು ಪಡೆಯುತ್ತೀರಿ.
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
--
ಹೊಸ ವರ್ಷ ಹೇಗಿರುತ್ತೆ? ಇಲ್ಲಿದೆ 2025 ರ ರಾಶಿವಾರು ಮಾಹಿತಿ
2025 ನಿಮಗೆ ಏನೆಲ್ಲಾ ಶುಭಫಲಗಳನ್ನು ನೀಡಲಿದೆ? ಹೊಸ ವರ್ಷದಲ್ಲಿ ಬದಲಾವಣೆಗಳು, ಉದ್ಯೋಗ ಪ್ರಗತಿ, ವಿದ್ಯಾಭ್ಯಾಸ, ಪ್ರೀತಿ, ದಾಂಪತ್ಯ ಸೇರಿದಂತೆ ನೀವು ತಿಳಿಯಬಯಸುವ ಸಮಗ್ರ ಮಾಹಿತಿ ಇಲ್ಲಿದೆ. ಪ್ರತಿ ರಾಶಿಯ ಸಮಗ್ರ ವಿವರ ಇಲ್ಲಿ ಲಭ್ಯ. ನೀವು ಈವರೆಗೆ ನೋಡಿಲ್ಲ ಅಂತಾದ್ರೆ ಬೇಗ ನೋಡಿ. ಈಗಾಗಲೇ ನೋಡಿದ್ದರೆ ನಿಮ್ಮ ಆಪ್ತರಿಗೂ ಈ ಬಗ್ಗೆ ತಿಳಿಸಿ.
ವಿಭಾಗ