ಜನವರಿ 2025 ಮಾಸ ಭವಿಷ್ಯ: ನೆಮ್ಮದಿ ಇರಲಿದೆ, ಶಿಸ್ತಿನ ಜೀವನ ಎಲ್ಲರಿಗೂ ಇಷ್ಟವಾಗುತ್ತೆ; ತುಲಾ, ವೃಶ್ಚಿಕ, ಧನು ರಾಶಿಯವರ ತಿಂಗಳ ಭವಿಷ್ಯ
ಜನವರಿ 2025 ಮಾಸ ಭವಿಷ್ಯ: ಎಲ್ಲಾ ರಾಶಿಚಕ್ರ ಚಿಹ್ನೆಗಳಿಗೆ 2025 ರ ಜನವರಿ ತಿಂಗಳ ಭವಿಷ್ಯದಲ್ಲಿ ಉತ್ತಮ ಫಲಗಳಿವೆ. ಆದರೆ ಕೆಲವೇ ಕೆಲವು ರಾಶಿಯವರಿಗೆ ಸವಾಲುಗಳು ಎದುರಾಗುತ್ತವೆ. ತುಲಾ, ವೃಶ್ಚಿಕ ಹಾಗೂ ಧನು ರಾಶಿಯವರಿಗೆ ಜನವರಿ ತಿಂಗಳ ಭವಿಷ್ಯ ಹೇಗಿದೆ ಎಂಬುದನ್ನು ಇಲ್ಲಿ ನೀಡಲಾಗಿದೆ.
ಜನವರಿ 2025 ಮಾಸ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಅವರು ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. 2025ರ ಜನವರಿಯಲ್ಲಿ ತುಲಾ, ವೃಶ್ಚಿಕ ಹಾಗೂ ಧನು ರಾಶಿಯವರ ಮಾಸ ಭವಿಷ್ಯ ಇಲ್ಲಿದೆ.
ತುಲಾ ರಾಶಿ
ಆತುರದಿಂದ ಯಾವುದೇ ಕೆಲಸ ಕಾರ್ಯಗಳನ್ನು ಮಾಡುವುದಿಲ್ಲ. ಯಶಸ್ಸಿನ ಹಾದಿಯಲ್ಲಿ ಸಾಗುವ ಕಾರಣ ಮನಸ್ಸಿಗೆ ನೆಮ್ಮದಿ ಇರುತ್ತದೆ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನವಿರಲಿ. ಹಣಕಾಸಿನ ತೊಂದರೆ ಎದುರಾಗುವುದಿಲ್ಲ. ಅತಿಯಾದ ಆಸೆ ಇರದ ಕಾರಣ ಜೀವನದಲ್ಲಿ ಸಂತೋಷವಿರುತ್ತದೆ. ದಾಂಪತ್ಯ ಜೀವನದಲ್ಲಿ ಪರಸ್ಪರ ಹೊಂದಾಣಿಕೆ ಕಂಡುಬರುತ್ತದೆ. ಮಕ್ಕಳ ಜೀವನದಲ್ಲಿ ನಿರೀಕ್ಷಿತ ಬದಲಾವಣೆಗಳು ಉಂಟಾಗಲು ಕಾರಣರಾಗುವಿರಿ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆಯಿಂದ ವ್ಯವಹರಿಸುವಿರಿ. ಗುಟ್ಟಾಗಿ ಹಣವನ್ನು ಉಳಿಸುವ ಯೋಜನೆ ರೂಪಿಸುವಿರಿ. ಸ್ವಂತ ಬಳಕೆಗಾಗಿ ಹೊಸ ವಾಹನ ಕೊಳ್ಳುವಿರಿ. ನಿಮ್ಮ ಕೆಲಸದಲ್ಲಿ ಸ್ನೇಹಿತದ ಯೋಜನೆಗಳು ಸಹಕಾರಿಯಾಗುತ್ತವೆ. ವ್ಯಾಪಾರಿಗಳು ತಮ್ಮ ವ್ಯವಹಾರವನ್ನು ವಿಸ್ತರಿಸಿಕೊಳ್ಳುತ್ತಾರೆ. ಕೋರ್ಟ್ ಪ್ರಕರಣದಲ್ಲಿ ಜಯ ಗಳಿಸುತ್ತೀರಿ.
ವೃಶ್ಚಿಕ ರಾಶಿ
ಅತಿ ಬೇಗನೆ ಕೋಪಗೊಳ್ಳುವಿರಿ. ಆರಂಭಿಸುವ ಕೆಲಸ ಕಾರ್ಯಗಳನ್ನು ಕಷ್ಟವೆನಿಸಿದರು ಪೂರ್ಣಗೊಳಿಸುವಿರಿ. ನಿಮ್ಮಲ್ಲಿನ ಸಮರ್ಪಣಾ ಮನೋಭಾವನೆಗೆ ಎಲ್ಲರೂ ಮೆಚ್ಚಿಗೆ ವ್ಯಕ್ತಪಡಿಸುತ್ತಾರೆ. ಉದ್ಯೋಗದಲ್ಲಿ ಉನ್ನತ ಅಧಿಕಾರ ಗಳಿಸುವಿರಿ. ದೂರವಾದ ಆತ್ಮೀಯರು ಮತ್ತೊಮ್ಮೆ ನಿಮ್ಮ ಸ್ನೇಹ ಬಯಸುತ್ತಾರೆ. ಉತ್ತಮ ಸ್ನೇಹಿತರು ನಿಮ್ಮ ಯಶಸ್ಸಿಗೆ ಕಾರಣರಾಗುತ್ತಾರೆ. ಅವಿವಾಹಿತರಿಗೆ ಪರಿಚಿತರ ಜೊತೆಯಲ್ಲಿ ವಿವಾಹ ನಿಶ್ಚಯವಾಗುತ್ತದೆ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ. ಶಾಂತಿ ಸಂಯಮದಿಂದ ವರ್ತಿಸಿದರೆ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸುತ್ತೀರಿ. ಕುಟುಂಬ ಅಥವಾ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಹೋಗಲು ಪ್ಲಾನ್ ಮಾಡುತ್ತೀರಿ.
ಧನು ರಾಶಿ
ಎದುರಾಗುವ ಸಮಸ್ಯೆಗಳನ್ನು ಸಂಧಾನದಿಂದ ಬಗೆಹರಿಸುವಿರಿ. ಲಾಭವಿಲ್ಲದ ಕೆಲಸ ಕಾರ್ಯಗಳಲ್ಲಿ ಆಸಕ್ತಿ ತೋರುವುದಿಲ್ಲ. ಸಂಬಂಧಗಳಿಗೆ ಪ್ರಾಮುಖ್ಯತೆ ನೀಡುವಿರಿ. ಮನದಲ್ಲಿರುವ ಆಸೆ ಆಕಾಂಕ್ಷೆಗಳಿಗೆ ಮಿತಿ ಹೇರುವಿರಿ. ಇದರಿಂದಾಗಿ ಮನಸ್ಸಿಗೆ ಶಾಂತಿ ನೆಮ್ಮದಿ ಇರುತ್ತದೆ. ಆತ್ಮೀಯರಿಗೆ ಹಣದ ಸಹಾಯ ಮಾಡುವಿರಿ. ಆರೋಗ್ಯದಲ್ಲಿ ಯಾವುದೇ ತೊಂದರೆ ಕಂಡುಬರುವುದಿಲ್ಲ. ಸೋಲಿನ ವೇಳೆ ಉದ್ವೇಗದಿಂದ ವರ್ತಿಸುವಿರಿ. ಮನೆತನದ ಆಸ್ತಿಯಲ್ಲಿ ನಿಮಗೆ ಸಿಂಹ ಪಾಲು ದೊರೆಯುತ್ತದೆ. ತಪ್ಪು ಮಾಡಿದವರನ್ನು ಕ್ಷಮಿಸುವುದಿಲ್ಲ. ನಿಮ್ಮ ಶಿಸ್ತು ಬದ್ಧ ಜೀವನವನ್ನು ಎಲ್ಲರೂ ಗೌರವಿಸುತ್ತಾರೆ. ಆಸ್ತಿಯ ವಿವಾದಗಳು ಬಗೆ ಹರಿಯುತ್ತವೆ. ಹಳೆಯ ಹೂಡಿಕೆಗಳಿಂದ ಈ ಮಾಸದಲ್ಲಿ ಲಾಭವನ್ನ ಪಡೆಯುತ್ತೀರಿ. ಏಕಾಏಕಿ ಉದ್ಯೋಗ ಬದಲಾಯಿಸುವ ಸಾಧ್ಯತೆಗಳು ಇರುತ್ತವೆ.
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
ವಿಭಾಗ