ಜುಲೈ ಮಾಸ ಭವಿಷ್ಯ: ಗೃಹಿಣಿಯರಿಗೆ ತವರಿನ ಉಡುಗೊರೆ, ವಿದೇಶ ಪ್ರಯಾಣ ಯೋಗ, ಕಲಾವಿದರಿಗೆ ಉನ್ನತ ಗೌರವ
ಜುಲೈ ತಿಂಗಳ ಮಾಸ ಭವಿಷ್ಯ: ಎಲ್ಲಾ ರಾಶಿಚಕ್ರ ಚಿಹ್ನೆಗಳಿಗೆ 2025ರ ಜುಲೈ ತಿಂಗಳ ಭವಿಷ್ಯದಲ್ಲಿ ಉತ್ತಮ ಫಲಗಳಿವೆ. ಕೆಲವು ರಾಶಿಯವರಿಗೆ ಸವಾಲುಗಳಿವೆ. ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ತಿಂಗಳ ಭವಿಷ್ಯ ಇಲ್ಲಿದೆ.

'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಅವರು ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ ಇದು. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. ಎಲ್ಲಾ ರಾಶಿಚಕ್ರ ಚಿಹ್ನೆಗಳಿಗೆ 2025ರ ಜುಲೈ ತಿಂಗಳ ಭವಿಷ್ಯದಲ್ಲಿ ಉತ್ತಮ ಫಲಗಳಿವೆ. ಆದರೆ ಕೆಲವೇ ಕೆಲವು ರಾಶಿಯವರಿಗೆ ಸವಾಲುಗಳು ಎದುರಾಗುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಜುಲೈ ತಿಂಗಳ ಭವಿಷ್ಯ ಹೇಗಿದೆ ಎಂಬುದನ್ನು ಇಲ್ಲಿ ನೀಡಲಾಗಿದೆ.
ಸಿಂಹ ರಾಶಿ
ಆತ್ಮವಿಶ್ವಾಸದಿಂದ ಉದ್ಯೋಗದಲ್ಲಿನ ಸಮಸ್ಯೆಗೆ ಪರಿಹಾರ ಕಂಡುಹಿಡಿಯುವಿರಿ. ಸುಲಭವಾಗಿ ಹಣ ಸಂಪಾದಿಸುವ ಕಲೆ ಸಿದ್ದಿಸಿರುತ್ತದೆ. ನಿಮ್ಮ ಕೆಲಸ ಕಾರ್ಯದಲ್ಲಿ ಸುಲಭ ಯಶಸ್ಸು ದೊರಕದು. ಸಣ್ಣ ಪುಟ್ಟ ಕೆಲಸಗಳನ್ನು ಸಹ ಹೆಚ್ಚಿನ ಪ್ರಯತ್ನದಿಂದ ಪೂರ್ಣಗೊಳಿಸುವಿರಿ. ನಿಮಗೆ ಅಸಾಧ್ಯವಾಗದ ಕೆಲಸ ಯಾವುದೂ ಇರುವುದಿಲ್ಲ. ಸುಲಭವಾಗಿ ಬೇರೊಬ್ಬರ ಪ್ರಭಾವಕ್ಕೆ ಒಳಗಾಗುವುದಿಲ್ಲ. ಸ್ತ್ರೀಯರು ಉದ್ಯೋಗವನ್ನು ಬದಲಾಯಿಸುತ್ತಾರೆ. ಕುಟುಂಬದ ಜವಾಬ್ದಾರಿಯನ್ನು ಒಪ್ಪಿಕೊಳ್ಳುವುದಿಲ್ಲ. ಗೃಹಿಣಿಯರಿಗೆ ತವರು ಮನೆಯಿಂದ ಉಡುಗೊರೆಯೊಂದು ದೊರೆಯಲಿದೆ. ವೃತ್ತಿಕ್ಷೇತ್ರದಲ್ಲಿನ ಬದಲಾವಣೆಯನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಸ್ವಂತ ವ್ಯಾಪಾರದಲ್ಲಿ ಆಸಕ್ತಿ ಕಡಿಮೆ ಆಗುತ್ತದೆ. ಕೆಲಸದ ಒತ್ತಡದಲ್ಲಿ ನಿಮ್ಮ ಆರೋಗ್ಯವನ್ನು ನಿರ್ಲಕ್ಷಿಸುವಿರಿ. ಬಂಧು ಬಳಗದವರಿಂದ ದೂರ ಉಳಿಯುವಿರಿ. ಬೇರೆಯವರ ಸಲಹೆ ಸರಿ ಎಂದೆನಿಸಿದರೂ ಒಪ್ಪುವುದಿಲ್ಲ. ಗೌರವ ಪ್ರತಿಷ್ಠೆಯನ್ನು ಉಳಿಸಿಕೊಳ್ಳಲು ಶ್ರಮ ಪಡಬೇಕಾಗುತ್ತದೆ.
- ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
- ಅದೃಷ್ಟದ ಸಂಖ್ಯೆ : 11
- ಅದೃಷ್ಟದ ದಿಕ್ಕು : ಉತ್ತರ
- ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ
ಕನ್ಯಾ ರಾಶಿ
ಒಮ್ಮೆ ತೆಗೆದುಕೊಂಡ ತೀರ್ಮಾನಗಳಿಗೆ ಬದ್ದರಾಗುವುದಿಲ್ಲ. ಕುಟುಂಬದ ಹಿರಿಯರು ದೊಡ್ಡ ಸಮಸ್ಯೆಗೆ ಒಳಗಾಗುತ್ತಾರೆ. ವಿದೇಶದ ಅನುಯೋಗದಲ್ಲಿ ಸ್ವಂತ ಉದ್ದಿಮೆ ಆರಂಭಿಸುವ ಸಾಧ್ಯತೆಗಳಿವೆ. ಸಾಮಾಜಿಕ ಸಂಘ ಸಂಸ್ಥೆಯನ್ನು ನಡೆಸುವ ಹೊಣೆ ಒಪ್ಪಿಕೊಳ್ಲುವಿರಿ. ಅನಿಯಮಿತ ಖರ್ಚುಗಳು ಇದ್ದರೂ ಹಣದ ತೊಂದರೆ ಬಾರದು. ಅಜೀರ್ಣದ ತೊಂದರೆ ಪದೇಪದೇ ಬಾಧಿಸುತ್ತದೆ. ದಿನ ನಿತ್ಯದ ಕೆಲಸದಲ್ಲಿ ನಿಮ್ಮ ನಿರೀಕ್ಷೆಗೆ ವಿರುದ್ಧವಾದ ಫಲಿತಾಂಶಗಳು ಬರಲಿವೆ. ಸಮಯ ಸಂದರ್ಭಕ್ಕೆ ಅನುಗುಣವಾಗಿ ವರ್ತಿಸುವಿರಿ. ಹಣಕಾಸಿನ ವ್ಯವಹಾರದಲ್ಲಿ ಸ್ವಂತ ನಿರ್ಧಾರಕ್ಕೆ ಬದ್ದರಾಗುವಿರಿ. ಬೇರೆಯವರ ಹಣದ ವ್ಯವಹಾರದಲ್ಲಿ ಮಧ್ಯವರ್ತಿಯಾದಲ್ಲಿ ತೊಂದರೆ ಇರಲಿದೆ. ಅನಿವಾರ್ಯವಾಗಿ ಉದ್ಯೋಗವನ್ನು ಬದಲಿಸುವಿರಿ. ದೀರ್ಘಕಾಲದ ಪ್ರವಾಸಕ್ಕೆ ತೆರಳುವಿರಿ. ಮಕ್ಕಳ ಉದ್ಯೋಗದಲ್ಲಿ ಉತ್ತಮ ವೇತನ ದೊರೆಯುತ್ತದೆ. ನಿಮ್ಮ ತಪ್ಪಿಗೆ ಬೇರೆಯವರನ್ನು ಹೊಣೆ ಮಾಡುವಿರಿ.
- ಪರಿಹಾರ: ಸಾಧು ಸಂತರ ಆಶೀರ್ವಾದವನ್ನು ಪಡೆದು ನಿಮ್ಮ ಕೆಲಸವನ್ನು ಆರಂಭಿಸಿರಿ.
- ಅದೃಷ್ಟದ ಸಂಖ್ಯೆ : 4
- ಅದೃಷ್ಟದ ದಿಕ್ಕು : ದಕ್ಷಿಣ
- ಅದೃಷ್ಟದ ಬಣ್ಣ: ಕೆಂಪು ಬಣ್ಣ
ತುಲಾ ರಾಶಿ
ಸ್ವಂತ ವ್ಯಾಪಾರದಲ್ಲಿ ಉತ್ತಮ ಆದಾಯವಿರುತ್ತದೆ. ಉದ್ಯೋಗದಲ್ಲಿ ಆತುರದ ನಿರ್ಧಾರದಿಂದ ಆಪತ್ತನ್ನು ಎದುರಿಸುವಿರಿ. ಕೇವಲ ಸಾಂಧಾನದ ಫಲವಾಗಿ ಉದ್ಯೋಗದಲ್ಲಿನ ಬದಲಾವಣೆ ನಿಮಗೆ ಅನುಕೂಲವಾಗಿರುತ್ತದೆ. ವಿದ್ಯಾರ್ಥಿಗಳು ಜವಾಬ್ದಾರಿಯಿಂದ ತಮ್ಮ ಕರ್ತವ್ಯ ಪಾಲನೆ ಮಾಡುತ್ತಾರೆ. ಕುಟುಂಬದ ಮುಖ್ಯವಾದ ಜವಾಬ್ದಾರಿ ನಿಮ್ಮದಾಗಲಿದೆ. ಜನಸಾಮಾನ್ಯರಿಗಾಗಿ ಮಾಡುವ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ ದೊರೆಯುತ್ತದೆ. ರಾಜಕಾರಣಿಗಳು ನಿರೀಕ್ಷಿತ ಸ್ಥಾನಮಾನ ಗಳಿಸುತ್ತಾರೆ. ಸ್ತ್ರೀಯರಿಗೆ ವಿಶೇಷವಾದ ಸೌಕರ್ಯಗಳು ಲಭಿಸುತ್ತದೆ. ಸಾಲದ ವ್ಯವಹಾರದಲ್ಲಿ ಮನಸ್ತಾಪವನ್ನು ಎದುರಿಸುವಿರಿ. ಮಕ್ಕಳ ಜವಾಬ್ದಾರಿ ಹೆಚ್ಚುತ್ತದೆ. ಕುಟುಂಬದಲ್ಲಿ ಹೊಂದಾಣಿಕೆಯ ವಾತಾವರಣ ಇರುತ್ತದೆ. ಉಸಿರಿಗೆ ಸಂಬಂಧಿಸಿದ ತೊಂದರೆ ನಿಮ್ಮನ್ನು ಕಾಡುತ್ತದೆ. ದಾಂಪತ್ಯ ಜೀವನದಲ್ಲಿನ ವಾದ ವಿವಾದವು ಬಹುಕಾಲ ನಿಲ್ಲದು. ವಿದೇಶ ಪ್ರಯಾಣ ಯೋಗವಿದೆ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ.
- ಪರಿಹಾರ: ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸುವುದು.
- ಅದೃಷ್ಟದ ಸಂಖ್ಯೆ : 8
- ಅದೃಷ್ಟದ ದಿಕ್ಕು : ಪಶ್ಚಿಮ
- ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ
ವೃಶ್ಚಿಕ ರಾಶಿ
ದೀರ್ಘಕಾಲದಿಂದ ಆರೋಗ್ಯದ ತೊಂದರೆ ಇರುವವರು ಎಚ್ಚರಿಕೆ ವಹಿಸಬೇಕು. ಕುಟುಂಬದ ಸದಸ್ಯರ ವಿಶ್ವಾಸ ಗಳಿಸುವಿರಿ. ನಿಮ್ಮ ಕೆಲಸ ಕಾರ್ಯಗಳಲ್ಲಿ ಉನ್ನತ ಯಶಸ್ಸು ಲಭಿಸುತ್ತದೆ. ಯೋಗ, ಪ್ರಾಣಾಯಾಮದಿಂದ ಆರೋಗ್ಯದಲ್ಲಿ ಚೇತರಿಕೆ ಉಂಟಾಗುತ್ತದೆ. ಸಂಗೀತ ನಾಟ್ಯ ಬಲ್ಲ ಕಲಾವಿದರಿಗೆ ಉನ್ನತ ಗೌರವ ದೊರೆಯುತ್ತದೆ. ಒಮ್ಮೆ ತೆಗೆದುಕೊಂಡ ತೀರ್ಮಾನವನ್ನು ಬದಲಾಯಿಸುವುದಿಲ್ಲ. ನಿಮ್ಮ ಹಠದ ಗುಣದಿಂದ ಆಪತ್ತನ್ನು ಎದುರಿಸುವಿರಿ. ಸ್ತ್ರೀಯರಿಗೆ ಉದ್ಯೋಗದಲ್ಲಿ ವಿಶೇಷ ಅವಕಾಶ ದೊರೆಯುತ್ತದೆ. ಪಾಲುಗಾರಿಕೆಯ ವ್ಯಾಪಾರದಲ್ಲಿ ಉತ್ತಮ ಲಾಭಾಂಶ ದೊರೆಯುತ್ತದೆ. ಅನಾವಶ್ಯಕ ಖರ್ಚು ವೆಚ್ಚಗಳನ್ನು ನಿಯಂತ್ರಿಸುವಲ್ಲಿ ವಿಫಲರಾಗುವಿರಿ. ಜನಸೇವೆಯಲ್ಲಿ ಆಸಕ್ತಿ ಮೂಡುತ್ತದೆ. ಪ್ರೀತಿ ವಿಶ್ವಾಸದಿಂದ ಜನರ ಮನಸ್ಸನ್ನು ಗೆಲ್ಲುವಿರಿ. ವಿದ್ಯಾರ್ಥಿಗಳ ಜೀವನದಲ್ಲಿ ಅನಿರೀಕ್ಷಿತ ಬೆಳವಣಿಗೆಗಳು ಕಂಡುಬರಲಿವೆ. ಕುಟುಂಬದಲ್ಲಿ ನಿಮ್ಮ ತಾಯಿಯವರ ತೀರ್ಮಾನವೆ ಅಂತಿಮವಾಗಲಿದೆ.
- ಪರಿಹಾರ: ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
- ಅದೃಷ್ಟದ ಸಂಖ್ಯೆ : 12
- ಅದೃಷ್ಟದ ದಿಕ್ಕು : ಉತ್ತರ
- ಅದೃಷ್ಟದ ಬಣ್ಣ: ಹಳದಿ ಬಣ್ಣ
ಬರಹ: ಎಚ್. ಸತೀಶ್, ಜ್ಯೋತಿಷಿ
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
ವಿಭಾಗ