ಸಿಂಹ ರಾಶಿ ಭವಿಷ್ಯ ಆಗಸ್ಟ್ 8: ಸಂಗಾತಿಯ ಭಾವನೆಗಳನ್ನ ನೋಯಿಸದಿರಿ, ಹೂಡಿಕೆ ಮಾಡುವ ಮುನ್ನ ಎಚ್ಚರ ಅಗತ್ಯ
Leo Daily Horoscope August 8, 2024: ರಾಶಿಚಕ್ರದ ಐದನೇ ಚಿಹ್ನೆ ಇದು. ಜನನದ ಸಮಯದಲ್ಲಿ ಚಂದ್ರನು ಸಿಂಹರಾಶಿಯಲ್ಲಿ ಸಾಗುತ್ತಿರುವ ಜನರ ರಾಶಿಚಕ್ರದ ಚಿಹ್ನೆ ಸಿಂಹ. ಆಗಸ್ಟ್ 8ರ ಸಿಂಹ ರಾಶಿ ಭವಿಷ್ಯದ ಪ್ರಕಾರ, ನಿಮ್ಮ ಮಾತುಗಳಿಂದ ಸಂಗಾತಿಯ ಭಾವನೆಗಳಿಗೆ ನೋವಾಗದಂತೆ ನೋಡಿಕೊಳ್ಳಿ. ಹೂಡಿಕೆ ಮಾಡುವ ಮುನ್ನ ಎಚ್ಚರ.
ಸಿಂಹ ರಾಶಿಯವರ ಇಂದಿನ (ಆಗಸ್ಟ್ 8 ಗುರುವಾರ) ದಿನಭವಿಷ್ಯದಲ್ಲಿ ಇಂದು ಪ್ರೇಮಿಯೊಂದಿಗೆ ಹೆಚ್ಚು ಸಮಯ ಕಳೆಯಲಿದ್ದೀರಿ. ಇದು ನಿಮ್ಮ ಸಂಬಂಧ ಇನ್ನಷ್ಟು ಗಟ್ಟಿಯಾಗಲು ಕಾರಣವಾಗಲಿದೆ. ಕಚೇರಿಯ ಒತ್ತಡವನ್ನು ಆತ್ಮವಿಶ್ವಾಸದಿಂದ ನಿಭಾಯಿಸಿ. ಹಣಕಾಸಿನ ವಿಚಾರಗಳಲ್ಲಿ ನಿರ್ಣಾಯಕ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ. ಆರೋಗ್ಯ ಕಾಪಾಡುಕೊಳ್ಳುವತ್ತ ಹೆಚ್ಚಿನ ಗಮನ ನೀಡಿ. ಅಂದ ಹಾಗೆ, ಎಲ್ಲ ರಾಶಿಗಳ ದಿನ ಭವಿಷ್ಯ ಹಿಂದೂಸ್ತಾನ್ ಟೈಮ್ಸ್ ಕನ್ನಡ ಜಾಲತಾಣದಲ್ಲಿದೆ. ನೀವು ಅದನ್ನೂ ಓದಬಹುದು.
ಸಿಂಹ ರಾಶಿಯ ಪ್ರೇಮ ಜಾತಕ (Leo Love Horoscope)
ಪ್ರೇಮಿಯ ಮಾತುಗಳಿಗೆ ಬೆಲೆ ಕೊಡಿ, ಇದರಿಂದ ನಿಮ್ಮ ಸಂಬಂಧ ಇನ್ನಷ್ಟು ಗಟ್ಟಿಯಾಗುತ್ತದೆ. ಭವಿಷ್ಯದ ಬಗ್ಗೆ ನಿರ್ಣಾಯಕ ನಿರ್ಧಾರಗಳನ್ನು ತೆಗೆದುಕೊಳ್ಳಲು ಇಂದು ಉತ್ತಮ ದಿನ. ನೀವು ಪ್ರೀತಿಗಾಗಿ ಹೆಚ್ಚು ಸಮಯವನ್ನು ವಿನಿಯೋಗಿಸಬೇಕು ಮತ್ತು ಸಂವಹನದಲ್ಲಿ ಮುಕ್ತವಾಗಿರಬೇಕು. ಪ್ರೇಮಿಯ ಭಾವನೆಗಳನ್ನು ನೋಯಿಸುವ ಅಹಿತಕರ ಸಂಭಾಷಣೆಗಳನ್ನು ತಪ್ಪಿಸಿ. ದೂರಾಗಲು ಬಯಸುವ ಪ್ರೇಮಿಗಳು ಈ ಬಗ್ಗೆ ಎರಡನೇ ಆಲೋಚನೆ ಮಾಡುತ್ತಾರೆ. ಕೋಪ ಮತ್ತು ವಾದಗಳ ಮೇಲೆ ನಿಯಂತ್ರಣ ಇಟ್ಟುಕೊಳ್ಳಿ ಏಕೆಂದರೆ ಇದು ಸಂಬಂಧಕ್ಕೆ ಕೆಡುಕು ಮಾಡಬಹುದು.
ಸಿಂಹ ರಾಶಿ ವೃತ್ತಿ ಭವಿಷ್ಯ (Leo Professional Horoscope)
ಕಚೇರಿಯಲ್ಲಿ ವೃತ್ತಿಪರರಾಗಿರಿ. ಪ್ರತಿ ಹೊಸ ಕೆಲಸ ತೆಗೆದುಕೊಳ್ಳಲು ಒಲವು ತೋರಿ. ಗಾಸಿಪ್ ಅನ್ನು ಬಿಟ್ಟುಬಿಡಿ. ತಂಡದ ಸದಸ್ಯರು ಮತ್ತು ಗ್ರಾಹಕರೊಂದಿಗೆ ಉತ್ತಮ ಬಾಂಧವ್ಯವನ್ನು ಕಾಪಾಡಿಕೊಳ್ಳುವ ಪ್ರಯತ್ನ ಮಾಡಿ, ಇದು ಅಗತ್ಯ ಕೂಡ. ಉದ್ಯೋಗ ಬದಲಿಸುವ ಬಗ್ಗೆ ಯೋಚಿಸುತ್ತಿದ್ದರೆ, ಹೊಸ ಅವಕಾಶಗಳಿಗೆ ನಿಮ್ಮ ರೆಸ್ಯೂಮ್ ಅಪ್ಡೇಟ್ ಮಾಡಿ. ವ್ಯಾಪಾರಿಗಳು ತಮ್ಮ ವ್ಯಾಪಾರವನ್ನು ಹೊಸ ಪ್ರದೇಶಗಳಿಗೆ ವಿಸ್ತರಿಸುತ್ತಾರೆ. ಕೆಲವು ಉದ್ಯಮಿಗಳು ನೀತಿಗಳು ಮತ್ತು ಪರವಾನಗಿಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಂದಿರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಇಂದು ಹೆಚ್ಚಿನ ಪ್ರಯತ್ನವನ್ನು ಮಾಡಬೇಕಾಗುತ್ತದೆ.
ಸಿಂಹ ರಾಶಿ ಆರ್ಥಿಕ ಜಾತಕ (Leo Money Horoscope)
ಇಂದು ಯಾವುದೇ ಹಣಕಾಸಿನ ಸಮಸ್ಯೆಗಳು ಎದುರಾಗುವುದಿಲ್ಲ. ಸ್ನೇಹಿತರು ಅಥವಾ ಒಡಹುಟ್ಟಿದವರೊಂದಿಗಿನ ಹಣಕಾಸಿನ ಸಮಸ್ಯೆ ನಿವಾರಿಸಿಕೊಳ್ಳಿ. ಸಂಬಂಧಿಯೊಬ್ಬರು ನಿಮ್ಮಿಂದ ಹಣಕಾಸಿನ ಸಹಾಯ ನಿರೀಕ್ಷಿಸಬಹುದು. ಹೂಡಿಕೆ ಮಾಡುವ ಮುನ್ನ ಮಾರುಕಟ್ಟೆ ಅಧ್ಯಯನ ಅಗತ್ಯ, ಇಲ್ಲದಿದ್ದರೆ ಹಣ ಕಳೆದುಕೊಳ್ಳುವ ಸಾಧ್ಯತೆ ಇದೆ. ಭವಿಷ್ಯದ ವಿಸ್ತರಣೆಗಾಗಿ ಉದ್ಯಮಿಗಾಗಿ ಹಣ ಕೂಡಿಡುತ್ತಾರೆ.
ಸಿಂಹ ರಾಶಿ ಆರೋಗ್ಯ ಜಾತಕ (Leo Health Horoscope)
ಸೋಂಕಿಗೆ ಸಂಬಂಧಿಸಿದ ಸಣ್ಣಪುಟ್ಟ ಸಮಸ್ಯೆಗಳು ಎದುರಾಗಬಹುದು. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಮಕ್ಕಳಿಗೆ ಬಾಯಿಯ ಆರೋಗ್ಯ ಸಮಸ್ಯೆಗಳು ಮತ್ತು ಕೆಮ್ಮಿನಂತಹ ಸಮಸ್ಯೆಗಳು ಕಾಡಬಹುದು. ವೈಯಕ್ತಿಕ ಹಾಗೂ ಕಚೇರಿ ಜೀವನದ ನಡುವೆ ಸಮತೋಲನ ಕಾಪಾಡಿಕೊಳ್ಳಿ. ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯಿರಿ ಇದು ಮಾನಸಿಕ ಒತ್ತಡವನ್ನು ನಿವಾರಿಸಲು ಸಹಾಯ ಮಾಡುತ್ತದೆ.
ಸಿಂಹ ರಾಶಿಯವರಿಗೆ ತಿಳಿದಿರಲೇಬೇಕಾದ ಮಾಹಿತಿಯಿದು
ಅಧಿಪತಿ: ಸೂರ್ಯ, ಶುಭ ದಿನಾಂಕಗಳು: 1, 4, 5, 6, 9, 15, 24. ಶುಭ ವಾರಗಳು: ಭಾನುವಾರ, ಮಂಗಳವಾರ, ಬುಧವಾರ, ಗುರುವಾರ ಮತ್ತು ಶುಕ್ರವಾರ. ಶುಭ ವರ್ಣ: ಕಿತ್ತಳೆ, ಕೆಂಪು ಮತ್ತು ಹಸಿರು. ಅಶುಭ ವರ್ಣ: ನೀಲಿ ಮತ್ತು ಬಿಳಿ. ಶುಭ ದಿಕ್ಕು: ಪೂರ್ವ ಮತ್ತು ದಕ್ಷಿಣ. ಶುಭ ತಿಂಗಳು: ಡಿಸೆಂಬರ್ 15ರಿಂದ ಜುಲೈ 14. ಶುಭ ಹರಳು: ಹವಳ, ಕನಕ, ಪುಷ್ಯರಾಗ ಮತ್ತು ಮಾಣಿಕ್ಯ. ಶುಭ ರಾಶಿ: ವೃಶ್ಚಿಕ, ಧನಸ್ಸು ಮತ್ತು ಮೇಷ. ಅಶುಭ ರಾಶಿ: ತುಲಾ, ಮಕರ, ಕುಂಭ ಮತ್ತು ವೃಷಭ.
ಸಿಂಹ ರಾಶಿಯವರು ಶುಭ ಫಲ ಪಡೆಯಲು ಸರಳ ಪರಿಹಾರಗಳು
1) ಆದಿತ್ಯ ಹೃದಯ: ಪ್ರತಿದಿನ ಶ್ರೀ ಆದಿತ್ಯಹೃದಯ ಪಠಿಸುವುದರಿಂದ ಅಥವಾ ಕೇಳುವುದರಿಂದ ಉತ್ತಮ ಆರೋಗ್ಯ ದೊರೆಯುತ್ತದೆ.
2) ಈ ದಾನಗಳಿಂದ ಶುಭ ಫಲ: ಹಸಿರು ಬಣ್ಣದ ಬಟ್ಟೆ ಮತ್ತು ಹೆಸರುಬೇಳೆಯನ್ನು ದಾನ ನೀಡುವುದರಿಂದ ಖರ್ಚುವೆಚ್ಚಗಳು ಕಡಿಮೆ ಆಗಲಿವೆ.
3) ದೇವಾಲಯ, ದೇವರ ಪೂಜೆ: ಶ್ರೀ ಗಣಪತಿ ದೇಗುಲಕ್ಕೆ ಕಪ್ಪು ಮತ್ತು ಬಿಳಿ ಮಿಶ್ರಿತ ನೆಲಹಾಸು ದಾನ ಮಾಡುವುದರಿಂದ ಹಣಕಾಸಿನ ಸಮಸ್ಯೆ ಪರಿಹಾರ ಆಗುತ್ತದೆ. ಬಾಯಿಗೆ ಸಂಬಂಧಿಸಿದ ರೋಗಗಳು ಕಡಿಮೆಯಾಗುತ್ತವೆ. ಶ್ರೀ ಆಂಜನೇಯ ಸ್ವಾಮಿಗೆ ಅಭಿಷೇಕ ಮಾಡಿಸುವುದರಿಂದ ವಾದ-ವಿವಾದಗಳು ಕಡಿಮೆಯಾಗಲಿವೆ.
4) ಈ ಬಣ್ಣದ ಕರವಸ್ತ್ರ ಉಪಯೋಗಿಸಿ: ನಿಮ್ಮ ಬಳಿ ಸದಾ ಬಿಳಿ, ಕೆಂಪು ಮತ್ತು ಹಳದಿ ಬಣ್ಣದ ಕರವಸ್ತ್ರ ಇರಿಸಿಕೊಳ್ಳಿ. ನಿರೀಕ್ಷಿತ ಫಲಗಳು ದೊರೆಯಲು ಇದು ಸಹಕಾರಿ.
ಗಮನಿಸಿ: ಇದು ವೈದಿಕ ಜ್ಯೋತಿಷ್ಯದ ಪದ್ಧತಿಯಲ್ಲಿ ಗೋಚಾರ ಆಧರಿಸಿದ ಬರಹ. ನಿಖರ ವಿವರ ಮತ್ತು ಸಮರ್ಪಕ ಪರಿಹಾರಗಳಿಗಾಗಿ ಓದುಗರು ತಮ್ಮ ಜನ್ಮಜಾತಕವನ್ನು ಸಹ ಪರಿಗಣಿಸಬೇಕು. ನಿಮ್ಮ ಕುಲಗುರುಗಳು ಅಥವಾ ಜ್ಯೋತಿಷಿಗಳ ಸಲಹೆ ಪಡೆಯಬೇಕು. ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ ʼಹಿಂದೂಸ್ತಾನ್ ಟೈಮ್ಸ್ ಕನ್ನಡʼ ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ.