ತುಲಾ ರಾಶಿ ಭವಿಷ್ಯ 2025: ಬಹುರಾಷ್ಟ್ರೀಯ ಕಂಪನಿಯಲ್ಲಿ ಉದ್ಯೋಗ ದೊರೆಯಲಿದೆ, ಕೋರ್ಟ್‌ ವ್ಯಾಜ್ಯಗಳಲ್ಲಿ ಜಯ ಗಳಿಸುವಿರಿ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ತುಲಾ ರಾಶಿ ಭವಿಷ್ಯ 2025: ಬಹುರಾಷ್ಟ್ರೀಯ ಕಂಪನಿಯಲ್ಲಿ ಉದ್ಯೋಗ ದೊರೆಯಲಿದೆ, ಕೋರ್ಟ್‌ ವ್ಯಾಜ್ಯಗಳಲ್ಲಿ ಜಯ ಗಳಿಸುವಿರಿ

ತುಲಾ ರಾಶಿ ಭವಿಷ್ಯ 2025: ಬಹುರಾಷ್ಟ್ರೀಯ ಕಂಪನಿಯಲ್ಲಿ ಉದ್ಯೋಗ ದೊರೆಯಲಿದೆ, ಕೋರ್ಟ್‌ ವ್ಯಾಜ್ಯಗಳಲ್ಲಿ ಜಯ ಗಳಿಸುವಿರಿ

Libra Horoscope 2025: ಗ್ರಹಗಳು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಪ್ರವೇಶಿಸುತ್ತಿದ್ದಂತೆ ದ್ವಾದಶ ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ. ಹೊಸ ವರ್ಷ ಬರುತ್ತಿದ್ದಂತೆ ತಮ್ಮ ಭವಿಷ್ಯ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಎಲ್ಲರಿಗೂ ಇರುತ್ತದೆ. 2025 ರಲ್ಲಿ ತುಲಾ ರಾಶಿಯವರ ಭವಿಷ್ಯ ಹೇಗಿದೆ ನೋಡೋಣ. (ಬರಹ: ಎಚ್. ಸತೀಶ್, ಜ್ಯೋತಿಷಿ)

ತುಲಾ ರಾಶಿ ಭವಿಷ್ಯ 2025
ತುಲಾ ರಾಶಿ ಭವಿಷ್ಯ 2025

ತುಲಾ ರಾಶಿ ಭವಿಷ್ಯ 2025: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. 2024ರ ಹಳೆಯ ವರ್ಷ ಮುಗಿದು ಹೊಸ ವರ್ಷಕ್ಕೆ ಪ್ರವೇಶಿಸುವ ಮುನ್ನ 2025ರ ಭವಿಷ್ಯ ಹೇಗಿರಲಿದೆ ಎಂಬುದನ್ನು ತಿಳಿದುಕೊಳ್ಳುವ ಕಾತುರ ಎಲ್ಲರಿಗೂ ಇರುತ್ತದೆ. ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು '2025ರ ಭವಿಷ್ಯ' ಹೇಗಿದೆ ಎಂದು ನೋಡುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಅವರು ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. ತುಲಾ ರಾಶಿಯವರಿಗೆ 2025 ವರ್ಷ ಹೇಗಿರಲಿದೆ ಎಂಬುದನ್ನು ತಿಳಿಯೋಣ.

ಮಾನಸಿಕ ನೆಮ್ಮದಿ ಕೊರತೆ

ಆರೋಗ್ಯದಲ್ಲಿ ತೊಂದರೆ ಕಂಡು ಬರುತ್ತದೆ. ದೈಹಿಕವಾಗಿ ಸದೃಢವಾದರೂ ಮಾನಸಿಕವಾದ ನೆಮ್ಮದಿ ಇರುವುದಿಲ್ಲ. ಕೆಲಸದ ಒತ್ತಡದಿಂದ ಬಳಲುವಿರಿ. ಆತ್ಮವಿಶ್ವಾಸದಿಂದ ಇದ್ದಲ್ಲಿ ಯಾವುದೇ ತೊಂದರೆ ಇರುವುದಿಲ್ಲ. ಬೇರೆಯವರ ಟೀಕೆಗಳು ಮತ್ತು ಕಟುವಾದ ಮಾತನ್ನು ಗಂಭೀರವಾಗಿ ಪರಿಗಣಿಸದಿರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಕೆಲಸಕಾರ್ಯಗಳಲ್ಲಿ ನಿರಂತರವಾಗಿ ಪಾಲ್ಗೊಳ್ಳುವಿರಿ. ಕ್ರಮೇಣವಾಗಿ ನಿಮ್ಮ ಕಷ್ಟಗಳು ದೂರವಾಗುತ್ತವೆ. ಕುಟುಂಬದಲ್ಲಿ ಎದುರಾಗುವ ಸಣ್ಣಪುಟ್ಟ ವಿವಾದಗಳು ದೊಡ್ಡದಾಗಲಿವೆ. ಆದರೆ ನಿಮ್ಮ ಮಧ್ಯಸ್ಥಿಕೆಯಿಂದ ಶಾಂತಿ ನೆಮ್ಮದಿ ಇರುತ್ತದೆ. ಯಾವುದೇ ಕರ್ತವ್ಯ ನಿರ್ವಹಿಸಲು ಆಸಕ್ತಿ ತೋರುವುದಿಲ್ಲ. ಮನಸಿನಲ್ಲಿ ಯಾವುದಾದರೂ ಒಂದು ಚಿಂತೆ ಮನೆ ಮಾಡುತ್ತದೆ. ಮಕ್ಕಳ ಸಹಾಯದಿಂದ ನಿಮಗೆ ಎದುರಾಗುವ ಎಲ್ಲಾ ಸಮಸ್ಯೆಗಳು ದೂರವಾಗುತ್ತವೆ.

ಆತ್ಮವಿಶ್ವಾಸ ಬೆಳೆಸಿಕೊಂಡು ಜೀವನದಲ್ಲಿ ಮುಂದುವರೆಯುವಿರಿ. ನಿಮ್ಮ ಪ್ರಯತ್ನವಿಲ್ಲದೆ ಯಾವುದೇ ಕೆಲಸ ಕಾರ್ಯಗಳು ನೆರವೇರುವುದಿಲ್ಲ. ಬೇರೆಯವರನ್ನು ಆಶ್ರಯಿಸದೆ ಸ್ವತಂತ್ರವಾಗಿ ಕೆಲಸ ನಿರ್ವಹಿಸಬಲ್ಲಿರಿ. ಎಲ್ಲರೂ ನಿಮ್ಮ ರೀತಿ ನೀತಿಯನ್ನು ಮೆಚ್ಚಬೇಕೆಂಬ ಆಸೆ ನಿಮಗಿರುತ್ತದೆ. ಮಾನಸಿಕ ಒತ್ತಡ ಕಡಿಮೆಯಾದಲ್ಲಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ಮಕ್ಕಳು ತಂದೆ ತಾಯಿಗಳಿಗೆ ಗೌರವ ತರುವಂತ ಕೆಲಸ ಕಾರ್ಯಗಳಲ್ಲಿ ನಿರತರಾಗುತ್ತಾರೆ. ಚಿಕ್ಕ ವಯಸ್ಸಿನಲ್ಲಿ ಶಿಸ್ತು ಬದ್ಧ ಜೀವನವನ್ನು ನಡೆಸುವಲ್ಲಿ ಯಶಸ್ವಿಯಾಗುತ್ತಾರೆ, ಪರರ ಪಾಲಾಗಿದ್ದ ಭೂಮಿಯನ್ನು ಕಾನೂನಿನ ಸಹಾಯದಿಂದ ಮರಳಿ ಪಡೆಯುವಿರಿ. ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ಕಲಿಕೆಯಲ್ಲಿ ಮೊದಲಿಗರಾಗುತ್ತಾರೆ. ಕಿರಿಯ ವಯಸ್ಸಿನಿಂದಲೇ ಸಂಪಾದಿಸಲು ಆರಂಭಿಸುವಿರಿ. ಉನ್ನತ ವಿದ್ಯಾಭ್ಯಾಸದಲ್ಲಿ ಅಲ್ಪಮಟ್ಟದ ಹಿನ್ನಡೆ ಉಂಟಾಗುತ್ತದೆ. ಸಹಪಾಠಿಗಳೊಡನೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವಿರಿ. ಸಹಪಾಠಿಗಳ ಜೊತೆ ಅಭ್ಯಾಸ ಮಾಡುವುದರಿಂದ ಅನುಕೂಲ ಉಂಟಾಗುತ್ತದೆ.

ಅವಿವಾಹಿತರಿಗೆ ದೂರದ ಸಂಬಂಧದಲ್ಲಿ ಮದುವೆ ನಿಶ್ಚಯ

ಮರೆವಿನಿಂದ ಹೊರಬರಲು ಧ್ಯಾನದ ಮಾರ್ಗವನ್ನು ಅನುಸರಿಸುವಿರಿ. ಸಮಾಜದಲ್ಲಿನ ಲೋಪ ದೋಷಗಳನ್ನು ಸರಿ ಪಡಿಸಲು ಸಂಘ ಸಂಸ್ಥೆಯನ್ನು ಆರಂಭಿಸುವಿರಿ. ಮನೆಯಲ್ಲಿ ಮಂಗಳ ಕಾರ್ಯವೊಂದು ನಡೆಯಲಿದೆ. ನಿರುದ್ಯೋಗಿಗಳಿಗೆ ಬಹು ರಾಷ್ಟ್ರೀಯ ಕಂಪನಿಗಳಲ್ಲಿ ಉದ್ಯೋಗ ದೊರೆಯುವ ಸಾಧ್ಯತೆಗಳಿವೆ. ಅವಿವಾಹಿತರಿಗೆ ಮೇ ತಿಂಗಳ ನಂತರ ದೂರದ ಸಂಬಂಧದಲ್ಲಿ ವಿವಾಹ ನಿಶ್ಚಯವಾಗಲಿದೆ. ಆತ್ಮವಿಶ್ವಾಸದಿಂದ ಎಲ್ಲರ ಮನ ಗೆಲ್ಲುವಿರಿ. ಶಾಂತಿ ನೆಮ್ಮದಿಯ ಜೀವನ ನಿಮ್ಮದಾಗುತ್ತದೆ. ಗೃಹಿಣಿಯರ ಆರೋಗ್ಯದ ಬಗ್ಗೆ ಕಾಳಜಿ ತೋರುವುದು ಒಳ್ಳೆಯದು. ದಾಂಪತ್ಯದಲ್ಲಿ ಸಂತೋಷದ ವಾತಾವರಣ ಉಂಟಾಗಲಿದೆ. ವಯೋವೃದ್ಧರ ಆರೋಗ್ಯದಲ್ಲಿ ಯಾವುದೇ ತೊಂದರೆ ಎದುರಾಗುವುದಿಲ್ಲ. ಅವರ ಆತ್ಮವಿಶ್ವಾಸ ಮತ್ತು ಆತ್ಮ ಶಕ್ತಿ ಎಲ್ಲರಿಗೂ ಮಾದರಿಯಾಗುತ್ತದೆ. ದಾನ ಧರ್ಮದಲ್ಲಿ ತೃಪ್ತಿ ಹೊಂದುವಿರಿ.

ನಿಮಗೆ ಕಷ್ಟಗಳಿದ್ದರೂ ಕಷ್ಟ ಎಂದು ನಿಮ್ಮ ಬಳಿ ಬಂದವರಿಗೆ ಸಹಾಯ ಮಾಡುವಿರಿ. ಯಂತ್ರೋಪಕರಣಗಳ ಸರಬರಾಜಿನಲ್ಲಿ ಹೇರಳ ಲಾಭ ದೊರೆಯುತ್ತದೆ. ನಿಮ್ಮ ಸಂಪಾದನೆಯ ಒಂದು ಪಾಲನ್ನು ಬೇರೆಯವರಿಗೆ ಮೀಸಲಿಡುವಿರಿ. ನೀರಿಗೆ ಸಂಬಂಧಿಸಿದಂತೆ ನಿಮ್ಮ ಆರೋಗ್ಯದಲ್ಲಿ ಏರಿಳಿತ ಕಂಡುಬರುತ್ತದೆ. ಗುರು ಹಿರಿಯರ ಸೇವೆಯ ಅವಕಾಶವೂ ನಿಮಗೆ ದೊರೆಯಲಿದೆ. ಕಾಲುಗಳಲ್ಲಿ ಸ್ನಾಯುಗಳ ಸೆಳೆತ ಉಂಟಾಗಬಹುದು. ಚರ್ಮದೋಷವು ಮರೆಯಾಗುತ್ತದೆ. ಹಣದ ವಿಚಾರದಲ್ಲಿ ಕುಟುಂಬದಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲು ಸಾಧ್ಯವಾಗುವುದಿಲ್ಲ. ದೈಹಿಕವಾಗಿ ಬಲಿಷ್ಠರಾಗಿರುವ ಜನರೊಂದಿಗೆ ಬೆಳೆಯುವ ಬದಲು ದೂರ ಉಳಿಯುವಿರಿ.

ಪಾಲುದಾರಿಕೆ ವ್ಯಾಪಾರದಲ್ಲಿ ವರಮಾನ ಇರುವುದಿಲ್ಲ

ಮಕ್ಕಳ ಜೊತೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವಿರಿ. ನಿಮ್ಮೊಂದಿಗೆ ಹೊಂದಿಕೊಂಡು ಬಾಳುವವರಿಗೆ ಆಶ್ರಯ ಕಲ್ಪಿಸುವಿರಿ. ಬಂಧು ಬಳಗದವರ ಬಗ್ಗೆ ಉತ್ತಮ ಅಭಿಪ್ರಾಯ ಇರುವುದಿಲ್ಲ. ಪಾಲುದಾರಿಕೆ ವ್ಯಾಪಾರದಲ್ಲಿ ನಿರೀಕ್ಷಿತ ಮಟ್ಟದ ವರಮಾನ ದೊರೆಯುವುದಿಲ್ಲ. ಮಾರಾಟ ಪ್ರತಿನಿಧಿಗಳಿಗೆ ಉನ್ನತ ಮಟ್ಟದ ಅವಕಾಶಗಳು ದೊರೆಯಲಿವೆ. ಅಧಿಕಾರಿ ವಲಯದ ಉದ್ಯೋಗಸ್ಥರಿಗೆ ವೃತ್ತಿ ಬದಲಾವಣೆ ಉಂಟಾಗಲಿದೆ. ಪ್ರಯಾಣ ಮಾಡುವ ವೇಳೆಯಲ್ಲಿ ಬೇಸರದ ಘಟನೆಗಳು ನಡೆಯಬಹುದು. ಮನೆಯ ಸುತ್ತಮುತ್ತಲಿನ ಪ್ರಕೃತಿಯನ್ನು ಕಾಪಾಡಲು ಪ್ರಯತ್ನಿಸುವಿರಿ. ಸಾಲದ ವ್ಯವಹಾರವನ್ನು ಮಾಡುವುದಿಲ್ಲ. ಹೊಸ ವಾಹನ ಕೊಳ್ಳುವ ಅವಕಾಶ ಕೈ ತಪ್ಪಲಿದೆ.

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.