ಜೂನ್ ಮಾಸ ಭವಿಷ್ಯ: ಧನು ರಾಶಿಯವರ ಜೀವನದಲ್ಲಿ ದೊಡ್ಡ ಬದಲಾವಣೆಯಾಗುತ್ತೆ, ಮಕರ ರಾಶಿಯ ಅವಿವಾಹಿತಕರಿಗೆ ವಿವಾಹ ನಿಶ್ಚಯವಾಗಲಿದೆ
ಜೂನ್ ತಿಂಗಳ ಮಾಸ ಭವಿಷ್ಯ: ಎಲ್ಲಾ ರಾಶಿಚಕ್ರ ಚಿಹ್ನೆಗಳಿಗೆ 2025ರ ಜೂನ್ ತಿಂಗಳ ಭವಿಷ್ಯದಲ್ಲಿ ಉತ್ತಮ ಫಲಗಳಿವೆ. ಕೆಲವು ರಾಶಿಯವರಿಗೆ ಸವಾಲುಗಳಿವೆ. ಧನು, ಮಕರ, ಕುಂಭ, ಮೀನ ರಾಶಿಯವರ ತಿಂಗಳ ಭವಿಷ್ಯ ಇಲ್ಲಿದೆ.

'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಅವರು ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. ಎಲ್ಲಾ ರಾಶಿಚಕ್ರ ಚಿಹ್ನೆಗಳಿಗೆ 2025ರ ಜೂನ್ ತಿಂಗಳ ಭವಿಷ್ಯದಲ್ಲಿ ಉತ್ತಮ ಫಲಗಳಿವೆ. ಆದರೆ ಕೆಲವೇ ಕೆಲವು ರಾಶಿಯವರಿಗೆ ಸವಾಲುಗಳು ಎದುರಾಗುತ್ತವೆ. ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರಿಗೆ ತಿಂಗಳ ಭವಿಷ್ಯ ಹೇಗಿದೆ ಎಂಬುದನ್ನು ಇಲ್ಲಿ ನೀಡಲಾಗಿದೆ.
ಧನು ರಾಶಿ
ಜೀವನದಲ್ಲಿ ಹತ್ತು ಹಲವು ಬದಲಾವಣೆಗಳು ಕಂಡುಬರಲಿವೆ. ಎಲ್ಲರೊಂದಿಗೆ ಹೊಂದಿಕೊಂಡು ಬಾಳಬೇಕಾದ ಅನಿವಾರ್ಯತೆ ಎದುರಾಗುತ್ತದೆ. ನೀವು ತೆಗೆದುಕೊಳ್ಳುವ ತಪ್ಪು ನಿರ್ಧಾರಗಳಿಂದ ಕುಟುಂಬದಲ್ಲಿ ಸಂದಿಗ್ಧತೆ ಉಂಟಾಗುತ್ತದೆ. ನಿಮಗೆ ಸ್ಥಿರವಾದ ಮನಸ್ಸಿರುವುದಿಲ್ಲ. ಇದರಿಂದ ಕೆಲಸ ಕಾರ್ಯಗಳಲ್ಲಿ ಹಿನ್ನೆಡೆ ಉಂಟಾಗುತ್ತದೆ. ಬಾಳ ಸಂಗಾತಿಯ ಸಹಾಯ, ಸಹಕಾರ ದೊರೆಯುವ ಕಾರಣ ಕಷ್ಟ ನಷ್ಟಗಳು ಕಡಿಮೆ ಆಗಲಿದೆ. ದಾಂಪತ್ಯ ಜೀವನ ಸುಖ ಸಂತೋಷದಿಂದ ಕೂಡಿರುತ್ತದೆ. ಮಾನಸಿಕ ನೆಮ್ಮದಿ ಇರುವುದಿಲ್ಲ. ಬಂಧು ಬಳಗದವರ ಜೊತೆಯಲ್ಲಿ ಸೌಹಾರ್ಧತೆ ಏರ್ಪಡುತ್ತದೆ. ಸಮಯವನ್ನು ಅರಿತು ಸೂಕ್ತವಾದ ರೀತಿಯಲ್ಲಿ ಎಲ್ಲರ ಜೊತೆ ಸ್ಪಂದಿಸುವಿರಿ. ವಿದೇಶ ಪ್ರಯಾಣ ಯೋಗವಿದೆ. ನಿಮ್ಮದೆ ಆದ ತಪ್ಪಿನಿಂದ ಆರೋಗ್ಯದಲ್ಲಿ ತೊಂದರೆ ಉಂಟಾಗುತ್ತದೆ. ಹಿರಿಯ ಸೋದರ ಅಥವಾ ಸೋದರಿಗೆ ವಿಶೇಷವಾದ ಹಣದ ಅನುಕೂಲತೆ ಇರುತ್ತದೆ. ಕೋಪವಿದ್ದರೂ ಬಹುಕಾಲ ಇರುವುದಿಲ್ಲ.
ಪರಿಹಾರ: ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ
ಮಕರ ರಾಶಿ
ಮನಸ್ಸು ಒಳ್ಳೆಯದಾದರೂ ನಿಮ್ಮ ನಡವಳಿಕೆ ಬೇರೆಯವರಲ್ಲಿ ಬೇಸರ ಉಂಟುಮಾಡುತ್ತದೆ. ಸದಾಕಾಲ ಯಾವುದಾದರೂ ಚಟುವಟಿಕೆಯಲ್ಲಿ ತೊಡಗುವಿರಿ. ಆರಂಭಿಸಿದ ಕೆಲಸ ಕಾರ್ಯದಲ್ಲಿ ಸುಲಭವಾಗಿ ಯಶಸ್ಸನ್ನು ಕಾಣುವಿರಿ. ಉದ್ಯೋಗದಲ್ಲಿ ಪ್ರಾಬಲ್ಯವನ್ನು ಗಳಿಸುವಿರಿ. ಮಾತಿನ ಮೇಲೆ ಹತೋಟಿ ಸಾಧಿಸಿದಲ್ಲಿ ವಿವಾದಗಳಿಂದ ದೂರ ಉಳಿಯುವಿರಿ. ಹಣಕಾಸಿನ ವಿಚಾರದಲ್ಲಿ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಕುಟುಂಬದಲ್ಲಿ ಶಾಂತಿ ಸೌಹಾದರ್ತೆಯ ಕೊರತೆ ಇರಲಿದೆ. ದಂಪತಿ ನಡುವೆ ಅನಾವಶ್ಯಕವಾದ ವಾದ ವಿವಾದಗಳು ಇರಲಿವೆ. ಅವಿವಾಹಿತರಿಗೆ ಬಂದು ಬಳಗ ಅಥವಾ ಪರಿಚಯಸ್ಥರ ಜೊತೆಯಲ್ಲಿ ವಿವಾಹ ನಿಶ್ಚಯವಾಗುತ್ತದೆ. ಎಲ್ಲರನ್ನೂ ಟೀಕಿಸುವಿರಿ. ಆತುರದಿಂದ ಹಣದ ವಿವಾದವೊಂದಕ್ಕೆ ಸಿಲುಕುವಿರಿ. ಮಕ್ಕಳ ಸಹಾಯದಿಂದ ಸ್ವಂತ ಮನೆಯನ್ನು ಕೊಳ್ಳುವ ವಿಚಾರಕ್ಕೆ ಚಾಲನೆ ದೊರೆಯಲಿದೆ. ಶೀತದ ತೊಂದರೆ ನಿಮ್ಮನ್ನು ಬಹುವಾಗಿ ಕಾಡಲಿದೆ.
ಪರಿಹಾರ: ಮನೆ ಮುಂದೆ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ
ಕುಂಭ ರಾಶಿ
ಮನದಲ್ಲಿ ಆತಂಕದ ಭಾವನೆಯು ಮನೆಮಾಡಿರುತ್ತದೆ. ನಿಮ್ಮ ಮನದ ವಿಚಾರವನ್ನು ಯಾರಿಗೂ ತಿಳಿಸುವುದಿಲ್ಲ. ಆತ್ಮೀಯರ ಸಹಾಯದಿಂದ ನಿಮ್ಮ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಗಳಿಸುವಿರಿ. ಪರಿಸ್ಥಿತಿಯ ಒತ್ತಡಕ್ಕೆ ಮಣಿದು ಹಣಕಾಸಿನ ವಿವಾದಕ್ಕೆ ಸಿಲುಕುವಿರಿ. ನಿಮ್ಮ ಜೀವನದಲ್ಲಿನ ಕಷ್ಟ ನಷ್ಟಗಳು ಮಕ್ಕಳ ನೆರವಿನಿಂದ ದೂರವಾಗುತ್ತವೆ. ನಿರಾಶೆಯನ್ನು ತಡೆದುಕೊಳ್ಳುವುದಿಲ್ಲ. ಹಣಕಾಸಿನ ವಿಚಾರದಲ್ಲಿ ಕ್ರಮೇಣವಾದ ಪ್ರಗತಿಯನ್ನು ಕಾಣುವಿರಿ. ಉದ್ಯೋಗವನ್ನು ಬದಲಿಸುವ ಸೂಚನೆ ಇದೆ. ವಿದ್ಯಾರ್ಥಿಗಳ ಕಲಿಕಾ ಮಟ್ಟವು ಸಾಧಾರಣವಾಗಿರುತ್ತದೆ. ಕೌಟುಂಬಿಕ ಜೀವನದಲ್ಲಿನ ಮನಸ್ತಾಪವು ದೂರವಾಗಲು ಕಾರಣರಾಗುವಿರಿ. ಪ್ರತಿಯೊಬ್ಬರನ್ನೂ ತಪ್ಪು ಭಾವನೆಯಿಂದ ಕಾಣುವಿರಿ. ಹಣಕಾಸಿನ ವ್ಯವಹಾರದಲ್ಲಿ ವಿವಾದವನ್ನು ಎದುರಿಸುವಿರಿ. ಅಜೀರ್ಣದ ತೊಂದರೆಯಿಂದ ಬಳಲುವಿರಿ. ಸಂಸಾರದ ವಿಚಾರಗಳನ್ನು ರಹಸ್ಯವಾಗಿ ಇರಿಸುವಿರಿ. ಕಿರಿ ಸೋದರ ಅಥವಾ ಸೋದರಿಯ ಆರೋಗ್ಯದ ಸಮಸ್ಯೆಯನ್ನು ಬಗೆಹರಿಸುವಿರಿ.
ಪರಿಹಾರ: ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಹಾಲಿನ ಬಣ್ಣ
ಮೀನ ರಾಶಿ
ಸೋಲು ಗೆಲುವಿನ ಸಮಿಶ್ರಣ ಲಭಿಸುತ್ತದೆ. ಪ್ರಯತ್ನ ಪಡದೆ ಸೋಲನ್ನು ಒಪ್ಪುವುದಿಲ್ಲ. ಬಂಧು ಬಳಗದವರನ್ನು ಪ್ರೀತಿ ವಿಶ್ವಾಸದಿಂದ ಕಾಣುವಿರಿ. ಕುಟುಂಬದಲ್ಲಿ ಉತ್ತಮ ಹೊಂದಾಣಿಕೆ ಇರುತ್ತದೆ. ಮಕ್ಕಳ ಜೀವನವನ್ನು ಯಶಸ್ಸಿನ ಪಥದಲ್ಲಿ ಸಾಗಿಸುವಿರಿ. ಉದ್ಯೋಗವನ್ನು ಬದಲಿಸುವಿರಿ. ನಿಮ್ಮ ತೀರ್ಮಾನಗಳನ್ನು ಬೇರೆಯವರು ಸುಲಭವಾಗಿ ಒಪ್ಪುವುದಿಲ್ಲ. ಭವಿಷ್ಯದ ಚಿಂತನೆಯಿಂದ ಹೊಸ ಯೋಜನೆಗಳಲ್ಲಿ ಹಣವನ್ನು ಹೂಡುವಿರಿ. ಮನೆತನದ ವೃತ್ತಿ ಅಥವಾ ವ್ಯಾಪಾರದಲ್ಲಿ ಆಸಕ್ತಿ ತೋರುವುದಿಲ್ಲ. ಕುಟುಂಬದಲ್ಲಿ ಯಾವುದೇ ಸಮಸ್ಯೆಗಳು ಎದುರಾಗದು. ದಂಪತಿ ನಡುವೆ ಉತ್ತಮ ಅನ್ಯೋನ್ಯತೆ ಕಂಡುಬರಲಿದೆ. ಉತ್ತಮ ಆದಾಯ ಇದ್ದರೂ ಸರಿಸಮನಾದ ಖರ್ಚು ವೆಚ್ಚಗಳು ಇರುತ್ತವೆ. ವಿದ್ಯಾರ್ಥಿಗಳ ಕಠಿಣ ಪರಿಶ್ರಮಕ್ಕೆ ಅನುಗುಣವಾಗಿ ನಿರೀಕ್ಷಿತ ಫಲಿತಾಂಶ ದೊರೆಯುತ್ತದೆ. ಆರೋಗ್ಯದ ಸಮಸ್ಯೆ ನಿಮ್ಮನ್ನು ಕಾಡುತ್ತದೆ. ಕಾರ್ಮಿಕ ವರ್ಗಕ್ಕೆ ವಿಶೇಷವಾದ ಅನುಕೂಲತೆಗಳು ದೊರೆಯಲಿವೆ.
ಪರಿಹಾರ: ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 1
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಹೊಗೆಯ ಬಣ್ಣ
ಬರಹ: ಎಚ್. ಸತೀಶ್, ಜ್ಯೋತಿಷಿ
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
ವಿಭಾಗ