ಮೇ ಮಾಸ ಭವಿಷ್ಯ: ಮೇಷ ರಾಶಿಯವರಿಗೆ ಆದಾಯ ಕಡಿಮೆಯಾದರೂ ಜೀವನಕ್ಕೆ ತೊಂದರೆ ಇಲ್ಲ, ವೃಷಭದವರಿಗೆ ಕೆಲಸದಲ್ಲಿ ಯಶಸ್ಸು ಇರಲಿದೆ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಮೇ ಮಾಸ ಭವಿಷ್ಯ: ಮೇಷ ರಾಶಿಯವರಿಗೆ ಆದಾಯ ಕಡಿಮೆಯಾದರೂ ಜೀವನಕ್ಕೆ ತೊಂದರೆ ಇಲ್ಲ, ವೃಷಭದವರಿಗೆ ಕೆಲಸದಲ್ಲಿ ಯಶಸ್ಸು ಇರಲಿದೆ

ಮೇ ಮಾಸ ಭವಿಷ್ಯ: ಮೇಷ ರಾಶಿಯವರಿಗೆ ಆದಾಯ ಕಡಿಮೆಯಾದರೂ ಜೀವನಕ್ಕೆ ತೊಂದರೆ ಇಲ್ಲ, ವೃಷಭದವರಿಗೆ ಕೆಲಸದಲ್ಲಿ ಯಶಸ್ಸು ಇರಲಿದೆ

ಮೇ ತಿಂಗಳ ಮಾಸ ಭವಿಷ್ಯ: ಎಲ್ಲಾ ರಾಶಿಚಕ್ರ ಚಿಹ್ನೆಗಳಿಗೆ 2025ರ ಮೇ ತಿಂಗಳ ಭವಿಷ್ಯದಲ್ಲಿ ಉತ್ತಮ ಫಲಗಳಿವೆ. ಕೆಲವು ರಾಶಿಯವರಿಗೆ ಸವಾಲುಗಳಿವೆ. ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ತಿಂಗಳ ಭವಿಷ್ಯ ಇಲ್ಲಿದೆ.

ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ಮಾಸ ಭವಿಷ್ಯ
ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ಮಾಸ ಭವಿಷ್ಯ

'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಅವರು ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. ಎಲ್ಲಾ ರಾಶಿಚಕ್ರ ಚಿಹ್ನೆಗಳಿಗೆ 2025ರ ಮೇ ತಿಂಗಳ ಭವಿಷ್ಯದಲ್ಲಿ ಉತ್ತಮ ಫಲಗಳಿವೆ. ಆದರೆ ಕೆಲವೇ ಕೆಲವು ರಾಶಿಯವರಿಗೆ ಸವಾಲುಗಳು ಎದುರಾಗುತ್ತವೆ. ಮೇಷ, ವೃಷಭ, ಮಿಥುನ, ಕಟಕ ರಾಶಿಯವರಿಗೆ ತಿಂಗಳ ಭವಿಷ್ಯ ಹೇಗಿದೆ ಎಂಬುದನ್ನು ಇಲ್ಲಿ ನೀಡಲಾಗಿದೆ.

ಮೇಷ ರಾಶಿ

ನಿಮ್ಮ ಕೆಲಸ ಕಾರ್ಯಗಳಲ್ಲಿ ಭಾಗಶಃ ಯಶಸ್ಸನ್ನು ಗಳಿಸುವಿರಿ. ಆದರೆ ಸಮಯಕ್ಕೆ ಸರಿಯಾಗಿ ಹಣದೊರೆಯದೆ ಬೇರೆಯವರನು ಆಶ್ರಯಿಸಬೇಕಾಗುತ್ತದೆ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷಿತ ಆದಾಯ ದೊರೆಯುತ್ತದೆ. ಪಾಲುಗಾರಿಕೆಯ ವ್ಯಾಪಾರದಲ್ಲಿ ಉತ್ತಮ ಲಾಭಾಂಶ ದೊರೆಯುತ್ತದೆ. ವಿದ್ಯಾರ್ಥಿಗಳು ತಮ್ಮ ಜೀವನದ ಗುರಿಯನ್ನು ತಲುಪುತ್ತಾರೆ. ಕೌಟುಂಬಿಕ ಜೀವನದಲ್ಲಿ ಯಾವುದೇ ಬದಲಾವಣೆಗಳು ಕಂಡುಬರುವುದಿಲ್ಲ. ಆದಾಯವು ಕೊಂಚ ಕಡಿಮೆಯಾದರೂ ಜೀವನದಲ್ಲಿ ತೊಂದರೆ ಕಾಣುವುದಿಲ್ಲ. ಮುಖ್ಯವಾಗಿ ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ವರ್ತಿಸುವುದು ಅಗತ್ಯ. ಕೌಟುಂಬಿಕ ಸಂಬಂಧಗಳು ಗಟ್ಟಿಯಾಗುತ್ತದೆ. ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ಖರ್ಚು ವೆಚ್ಚಗಳನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು. ತಪ್ಪು ಮಾಡಿ ಪಶ್ಚಾತಾಪ ಪಡುವ ಬದಲು ಎಚ್ಚರಿಕೆಯಿಂದ ವರ್ತಿಸಿ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ನೀಲಿ ಬಣ್ಣ

ವೃಷಭ ರಾಶಿ

ಸುಲಭದ ಹಾದಿಯಲ್ಲಿ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಗಳಿಸುವುದು ನಿಮ್ಮ ಗುರಿಯಾಗಿರುತ್ತದೆ. ಉದ್ಯೋಗದಲ್ಲಿನ ಸಮಸ್ಯೆಗಳು ಮರೆಯಾಗುತ್ತವೆ. ಅನಿರೀಕ್ಷಿತ ಧನ ಲಾಭವಿರುತ್ತದೆ. ಆತ್ಮೀಯರ ಸಹಾಯದಿಂದ ಹಣಕಾಸಿನ ಪ್ರಗತಿ ಕಂಡುಬರುತ್ತದೆ. ಇರುವ ಅನುಕೂಲತೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಿರಿ. ಯಾವುದೇ ವಿಚಾರವಾದರೂ ಪ್ರಯತ್ನ ಪಡದೆ ಸೋಲನ್ನು ಒಪ್ಪಿಕೊಳ್ಳುವುದಿಲ್ಲ. ವಿದ್ಯಾರ್ಥಿಗಳು ಅಭ್ಯಾಸದ ಬಗ್ಗೆ ಹೆಚ್ಚಿನ ಗಮನ ನೀಡುತ್ತಾರೆ. ಕೌಟುಂಬಿಕ ಕಲಹಗಳು ಮಾತುಕತೆಯಿಂದ ನಿವಾರಣೆಯಾಗುತ್ತವೆ. ದುಡುಕಿನ ಮಾತುಗಳು ಬೇರೆಯವರಲ್ಲಿ ಬೇಸರವನ್ನು ಉಂಟು ಮಾಡುತ್ತದೆ. ದಂಪತಿಯಲ್ಲಿ ಪ್ರೀತಿ ವಿಶ್ವಾಸವು ಹೆಚ್ಚುತ್ತದೆ. ಆರೋಗ್ಯದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ತಲೆದೋರಲಿವೆ. ನೆಚ್ಚಿನ ಸ್ಥಳಕ್ಕೆ ತೆರಳುವ ಪ್ರವಾಸದ ಅವಕಾಶವನ್ನು ಕಳೆದುಕೊಳ್ಳುವಿರಿ. ಉದ್ಯೋಗದಲ್ಲಿ ಯಾವುದೇ ಬದಲಾವಣೆಗಳು ಕಾಣದು.

ಪರಿಹಾರ: ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ನೇರಳೆ ಬಣ್ಣ

ಮಿಥುನ ರಾಶಿ

ನಿತ್ಯ ಜೀವನದಲ್ಲಿ ನಿಮ್ಮ ನಿರೀಕ್ಷೆಯಂತೆ ಯಾವುದೇ ಕೆಲಸ ಕಾರ್ಯಗಳು ನಡೆಯುವುದಿಲ್ಲ. ಉದ್ಯೋಗದಲ್ಲಿ ನಿಧಾನ ಗತಿಯಲ್ಲಿ ಉತ್ತಮ ಬದಲಾವಣೆಗಳು ಕಂಡುಬರುತ್ತವೆ. ಗುರು ಹಿರಿಯರ ಸಹಕಾರ ನಿಮಗೆ ದೊರೆಯುತ್ತದೆ. ಅವಕಾಶ ದೊರೆತು ಉದ್ಯೋಗವನ್ನು ಬದಲಿಸುವಿರಿ. ಅಪಾರ ವ್ಯವಹಾರಗಳಲ್ಲಿ ಅಡಚಣೆ ಇರುವುದಿಲ್ಲ. ವಿದ್ಯಾರ್ಥಿಗಳು ಆತಂಕದಿಂದ ದೂರವಾದಲ್ಲಿ ಉತ್ತಮ ಯಶಸ್ಸು ಗಳಿಸಬಹುದು. ಕುಟುಂಬದಲ್ಲಿ ಅನಾವಶ್ಯಕವಾದ ವಾದ ವಿವಾದಗಳು ಎದುರಾಗಲಿವೆ. ದಂಪತಿ ನಡುವೆ ಉತ್ತಮ ಹೊಂದಾಣಿಕೆ ಇರುವುದಿಲ್ಲ. ಒಳ್ಳೆಯ ಕೆಲಸ ಕಾರ್ಯಗಳಿಗೆ ಹಣವನ್ನು ಖರ್ಚು ಮಾಡುವಿರಿ. ಕಷ್ಟವೆನಿಸಿದರು ಹಣವನ್ನು ಉಳಿಸಲು ಯಶಸ್ವಿಯಾಗುವಿರಿ. ಆರೋಗ್ಯದಲ್ಲಿ ಸ್ಥಿರತೆ ಕಂಡು ಬರುವುದಿಲ್ಲ. ರಕ್ತಕ್ಕೆ ಸಂಬಂಧಿಸಿದ ದೋಷದಿಂದ ಬಳಲುವಿರಿ. ಬಂದು ಬಳಗದ ಬಗ್ಗೆ ಒಳ್ಳೆಯ ಅಭಿಪ್ರಾಯ ಇರುವುದಿಲ್ಲ.

ಪರಿಹಾರ: ಬಲಗೈಯಲ್ಲಿ ಬೆಳ್ಳಿಯ ಕೈಖಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ಕಟಕ ರಾಶಿ

ವಿಶ್ರಾಂತಿ ಪಡೆಯಲು ಸಾಧ್ಯವಾಗುವುದಿಲ್ಲ. ಹೆಚ್ಚಿನ ಜವಾಬ್ದಾರಿಗಳು ನಿಮ್ಮದಾಗಲಿವೆ. ನಿಮ್ಮ ಮನಕ್ಕೆ ಒಪ್ಪುವ ಕೆಲಸ ಕಾರ್ಯಗಳಲ್ಲಿ ತೊಡಗುವಿರಿ. ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸುತ್ತದೆ. ಬಿಡುವಿಲ್ಲದ ಕೆಲಸ ಕಾರ್ಯಗಳಿದ್ದರೂ ಎಲ್ಲರೊಂದಿಗೆ ಸಹನೆಯಿಂದ ಬಾಳುವಿರಿ. ಹೆಚ್ಚಿನ ವೇತನ ದೊರೆಯುವ ಸಂಭವ ಕಾಣುತ್ತಿದೆ. ಉದ್ಯೋಗ ದೊರತು ಬೇರೆ ಕೆಲಸವನ್ನು ಮಾಡುವುದಿಲ್ಲ. ಉದ್ಯೋಗದ್ದಲ್ಲಿ ನಿರಾಸಾದಾಯಕ ಫಲಿತಾಂಶ ದೊರೆಯುತ್ತದೆ. ವಿದ್ಯಾರ್ಥಿಗಳು ಸಹಪಾಠಿಗಳ ಜೊತೆಯಲ್ಲಿ ಯಶಸ್ಸಿನ ಹಾದಿಯಲ್ಲಿ ಸಾಗುವರು. ವ್ಯಾಪಾರದಲ್ಲಿ ಹೆಚ್ಚಿನ ಲಾಭ ದೊರೆಯದೆ ಹೋದರು ನಷ್ಟ ಉಂಟಾಗದು. ಮನೆತನದಿಂದ ಬಂದ ವ್ಯಾಪಾರ ವ್ಯವಹಾರಗಳಲ್ಲಿ ವಿಶೇಷ ಲಾಭವು ದೊರೆಯುತ್ತದೆ. ವಿವಾಹ ಯೋಗವಿದೆ. ಸಾಲದ ವ್ಯವಹಾರದಲ್ಲಿ ಹಾನಿ ಇರುತ್ತದೆ.

ಪರಿಹಾರ: ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಬಿಳಿ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Raghavendra M Y

TwittereMail
ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.