ಮೀನ ರಾಶಿ ಭವಿಷ್ಯ ಆಗಸ್ಟ್ 10: ಸಂಪತ್ತು ನಿಮ್ಮನ್ನು ಹುಡುಕಿ ಬರಲಿದೆ, ಆರೋಗ್ಯದ ಬಗ್ಗೆ ಕಾಳಜಿ ಇರಲಿ
Pisces Daily Horoscopeaugust 10, 2024: ರಾಶಿ ಚಕ್ರಗಳ ಪೈಕಿ ಕೊನೆಯದ್ದು ಮೀನ ರಾಶಿ. 12 ನೇ ರಾಶಿಚಕ್ರದಲ್ಲಿ ಚಂದ್ರ ಸಾಗುವ ಸಮಯದಲ್ಲಿ ಜನಿಸಿದವರ ರಾಶಿಚಕ್ರ ಇದು.ಅಗಸ್ಟ್10ರ ಮೀನ ರಾಶಿ ಭವಿಷ್ಯದ ಪ್ರಕಾರ, ಇಂದು ಸಣ್ಣ ಪುಟ್ಟ ಗಾಯಗಳಾಗಬಹುದು.
ಮೀನ ರಾಶಿಯವರ ಇಂದಿನ (ಆಗಸ್ಟ್ 10, ಶನಿವಾರ) ದಿನ ಭವಿಷ್ಯದಲ್ಲಿ ಹೆಚ್ಚು ಸಮಯವನ್ನು ಒಟ್ಟಿಗೆ ಕಳೆಯುವ ಮೂಲ ಪ್ರೇಮಿಯೊಂದಿಗೆ ನಿಮ್ಮ ಭಾವನೆಗಳನ್ನು ಹಂಚಿಕೊಳ್ಳಿ. ಕೆಲಸದಲ್ಲಿನ ಶಿಸ್ತು ನಿಮ್ಮ ವೃತ್ತಿ ಜೀವನದ ಯಶಸ್ಸಿಗೆ ಕಾರಣವಾಗಲಿದೆ. ಸಣ್ಣಪುಟ್ಟ ವೈದ್ಯಕೀಯ ಸಮಸ್ಯೆಗಳು ಬರಬಹುದು. ಒಟ್ಟಾರೆ ಇಂದು ನಿಮಗೆ ಉತ್ತಮ ದಿನ. ಅಂದ ಹಾಗೆ, ಎಲ್ಲ ರಾಶಿಗಳ ದಿನ ಭವಿಷ್ಯ ಹಿಂದೂಸ್ತಾನ್ ಟೈಮ್ಸ್ ಕನ್ನಡ ಜಾಲತಾಣದಲ್ಲಿದೆ. ನೀವು ಅದನ್ನೂ ಓದಬಹುದು.
ಮೀನ ರಾಶಿಯ ಪ್ರೇಮ ಜೀವನ (Pisces Love Horoscope)
ಪ್ರೀತಿಯ ವಿಷಯದಲ್ಲಿ ನೀವು ಇಂದು ಅದೃಷ್ಟವಂತರು. ಹಳೆಯ ವಿವಾದಗಳ ಇತ್ಯರ್ಥಸೇರಿದಂತೆ ಸಂಬಂಧವು ಇಂದು ಪ್ರಮುಖ ಧನಾತ್ಮಕ ತಿರುವುಗಳನ್ನು ಕಾಣಲಿದೆ. ಇದು ನಿಮ್ಮ ಸಂತೋಷವನ್ನು ಹೆಚ್ಚಿಸುತ್ತದೆ. ನೀವು ಆಫೀಸ್ನಲ್ಲಿ ಇನ್ನೊಬ್ಬರ ಜೊತೆ ಚೆನ್ನಾಗಿರುವುದನ್ನು ನಿಮ್ಮ ಸಂಗಾತಿ ಸಹಿಸಲಾರರು, ಇದೇ ಕಾರಣಕ್ಕೆ ಇಂದು ಜಗಳವಾಗಲಿದೆ. ನಿಮ್ಮ ಅಭಿಪ್ರಾಯವನ್ನು ನಿಮ್ಮ ಸಂಗಾತಿಗೆ ತಿಳಿಸಿ ಆದರೆ ಅದನ್ನೇ ಒಪ್ಪಿಕೊಳ್ಳಬೇಕು ಎಂದು ನಿಮ್ಮ ಸಂಗಾತಿಗೆ ಬಲವಂತ ಮಾಡಲು ಹೋಗಬೇಡಿ.
ಮೀನ ರಾಶಿ ಉದ್ಯೋಗ ಭವಿಷ್ಯ (Pisces Professional Horoscope)
ನಿಮ್ಮ ಶಿಸ್ತು ಮತ್ತು ಬದ್ಧತೆಯು ಕಚೇರಿಯಲ್ಲಿ ನಿಮಗೆ ಒಳ್ಳೆ ಹೆಸರನ್ನು ತಂದುಕೊಡುತ್ತದೆ. ಕ್ಲೈಂಟ್ ಚರ್ಚೆಗಳಲ್ಲಿ ಸಂವಹನ ಕೌಶಲ್ಯಗಳು ಪ್ರಮುಖ ಪಾತ್ರವಹಿಸುತ್ತವೆ. ಸಹೋದ್ಯೋಗಿಗಳೊಂದಿಗೆ ವಾಗ್ವಾದಕ್ಕೆ ಒಳಗಾಗದಂತೆ ಎಚ್ಚರಿಕೆ ವಹಿಸಿ. ಯಾರೋ ಇಂದು ನಿಮ್ಮ ವೃತ್ತಿ ಜೀವನಕ್ಕೆ ಅಡ್ಡಿಪಡಿಸಲು ಪ್ರಯತ್ನಿಸುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಧನಾತ್ಮಕ ಫಲಿತಾಂಶಗಳನ್ನು ಪಡೆಯುತ್ತಾರೆ. ಕೆಲವು ವ್ಯಾಪಾರಿಗಳು ಸುರಕ್ಷಿತ ಭವಿಷ್ಯಕ್ಕಾಗಿ ಹೊಸ ಪಾಲುದಾರಿಕೆಗಳನ್ನು ಆರಂಭಿಸುವ ಸಾಧ್ಯತೆ ಇದೆ.
ಮೀನ ರಾಶಿ ಆರ್ಥಿಕ ಭವಿಷ್ಯ (Pisces Money Horoscope)
ಸಂಪತ್ತು ಬರುತ್ತದೆ. ಶೇರ್ ಮಾರ್ಕೆಟ್ನಲ್ಲಿ ಲಾಭ ಗಳಿಸುವ ಸಾಧ್ಯತೆ ಹೆಚ್ಚಿದೆ. ಹೊಸ ಆಸ್ತಿ ಖರೀದಿಸಲುಯೋಜನೆರೂಪಿಸಿ. ನಿಮ್ಮ ಒಡಹುಟ್ಟಿದವರ ಜೊತೆ ಆಸ್ತಿ ವಿಷಯದ ಸಲುವಾಗಿ ಅಸಮಾಧಾನ ಆಗುತ್ತದೆ. ಈ ಅಡೆತಡೆಗಳನ್ನು ನಿರ್ವಹಿಸಲು ನೀವು ಸ್ವಲ್ಪ ಅನುಭವಸ್ತರ ಮಾತನ್ನು ಕೇಳಬೇಕಾಗುತ್ತದೆ. ಹೂಡಿಕೆಯ ವಿಷಯದಲ್ಲಿ ನೀವು ಅಡೆತಡೆಗಳನ್ನುಎದುರಿಸಿದರೆ ಯೋಚನೆ ಮಾಡಿ ಪರಿಹಾರ ಮಾಡಿಕೊಳ್ಳಿ. ವ್ಯಾಪಾರಿಗಳು ವ್ಯವಹಾರವನ್ನುವಿಸ್ತರಿಸಲುಹಣವನ್ನುಕಂಡುಕೊಳ್ಳುತ್ತಾರೆ, ಆದರೆ ಮಹಿಳೆಯರು ತಮ್ಮ ತವರು ಮನೆ ಆಸ್ತಿಯನ್ನು ನಿರೀಕ್ಷಿಸುತ್ತಾರೆ.
ಮೀನ ರಾಶಿ ಆರೋಗ್ಯ ಭವಿಷ್ಯ (Pisces Health Horoscope)
ಹೃದಯ ಮತ್ತು ಶ್ವಾಸಕೋಶದ ಬಗ್ಗೆ ಜಾಗರೂಕರಾಗಿರಿ. ಪೌಷ್ಟಿಕ ಆಹಾರವನ್ನು ಸೇವಿಸಿ. ದಿನದ ಎರಡನೇ ಭಾಗದಲ್ಲಿ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆ ಉಂಟಾಗುವ ಸಾಧ್ಯತೆ ಇರುವ ಕಾರಣ ಈ ಬಗ್ಗೆ ಗಮನವಿರಲಿ. ಸಣ್ಣಪುಟ್ಟ ಗಾಯಗಳು ಸಂಭವಿಸಬಹುದು. ಮಕ್ಕಳನ್ನು ಹೊರಗಡೆ ಕಳಿಸುವಾಗ ಈ ಬಗ್ಗೆ ಜಾಗರೂಕರಾಗಿರಿ. ನೀವು ಇಂದು ಸಾಕಷ್ಟುನೀರುಕುಡಿಯಬೇಕು.
ಮೀನ ರಾಶಿಯವರಿಗೆ ತಿಳಿದಿರಲೇಬೇಕಾದ ಮಾಹಿತಿಯಿದು
ಮೀನ ರಾಶಿಯ ಅಧಿಪತಿ: ಗುರು, ಮೀನ ರಾಶಿಯವರಿಗೆ ಶುಭ ದಿನಾಂಕಗಳು: 1,3,4 ಮತ್ತು9, ಮೀನ ರಾಶಿಯವರಿಗೆ ಶುಭ ದಿನಗಳು: ಭಾನುವಾರ, ಮಂಗಳವಾರ ಮತ್ತು ಗುರುವಾರ, ಮೀನ ರಾಶಿಯವರಿಗೆ ಶುಭ ವರ್ಣ: ಕೆಂಪು, ಹಳದಿ ಮತ್ತು ರೋಸ್, ಮೀನ ರಾಶಿಯವರಿಗೆ ಅಶುಭ ವರ್ಣ: ನೀಲಿ, ಮೀನ ರಾಶಿಯವರಿಗೆ ಶುಭ ದಿಕ್ಕು: ಪೂರ್ವ ಮತ್ತು ಉತ್ತರ, ಮೀನ ರಾಶಿಯವರಿಗೆ ಶುಭ ತಿಂಗಳು: ಡಿಸೆಂಬರ್ 15ರಿಂದ ಜನವರಿ 14, ಮೀನ ರಾಶಿಯವರಿಗೆ ಶುಭ ಹರಳು: ಹವಳ, ಮುತ್ತು ಮತ್ತು ಕನಕ ಪುಷ್ಯರಾಗ, ಮೀನ ರಾಶಿಯವರಿಗೆ ಶುಭ ರಾಶಿ: ಕಟಕ, ವೃಶ್ಚಿಕ ಮತ್ತು ಮೀನ, ಮೀನ ರಾಶಿಯವರಿಗೆ ಅಶುಭ ರಾಶಿ: ಕನ್ಯಾ, ಕುಂಭ, ವೃಷಭ ಮತ್ತು ತುಲಾ.
ಮೀನ ರಾಶಿಯವರಿಗೆ ಶುಭ ಫಲಕ್ಕಾಗಿ ಸರಳ ಪರಿಹಾರಗಳು
1) ಇಂದ್ರಾಕ್ಷಿ ಸ್ತೋತ್ರ: ಪ್ರತಿದಿನ ಇಂದ್ರಾಕ್ಷಿ ಸ್ತೋತ್ರ ಪಠಿಸುವುದರಿಂದ ಅಥವಾ ಕೇಳುವುದರಿಂದ ಕೆಲಸ-ಕಾರ್ಯಗಳಿಗೆ ಎದುರಾಗುವ ಅಡ್ಡಿ, ಆತಂಕಗಳು ದೂರವಾಗಲಿವೆ. ಋಣಾತ್ಮಕ ಶಕ್ತಿಯು ಮನೆ ಮತ್ತು ಮನದಿಂದ ದೂರವಾಗುವುದು.
2) ಈ ದಾನಗಳಿಂದ ಶುಭ ಫಲ: ಎಳ್ಳು ಮತ್ತು ಕಪ್ಪುಬಟ್ಟೆ ದಾನ ನೀಡುವುದರಿಂದ ಹಣದ ತೊಂದರೆ ಕಡಿಮೆ ಆಗಲಿದೆ.
3) ದೇವಾಲಯ ಮತ್ತು ದೇವರ ಪೂಜೆ: ಶ್ರೀ ವಿಷ್ಣು ದೇವಾಲಯಕ್ಕೆ ಪೂಜಾ ಸಾಮಗ್ರಿಗಳನ್ನು ನೀಡುವುದರಿಂದ ಉತ್ತಮ ಆರೋಗ್ಯ ಲಭಿಸುತ್ತದೆ. ಶ್ರೀ ಸುಬ್ರಹ್ಮಣ್ಯಸ್ವಾಮಿ ಪೂಜೆ ಮಾಡುವುದರಿಂದ ಎಲ್ಲಾ ರೀತಿಯ ಅನುಕೂಲಗಳು ದೊರೆಯಲಿವೆ.
4) ಈ ಬಣ್ಣದ ಕರವಸ್ತ್ರ ಉಪಯೋಗಿಸಿ: ಕೆಂಪು ಮತ್ತು ಕೇಸರಿ ಬಣ್ಣದ ಕರವಸ್ತ್ರ ಬಳಸಿದರೆ ನಿರೀಕ್ಷಿತ ಫಲಗಳು ದೊರೆಯಲಿವೆ.
ಗಮನಿಸಿ: ಇದು ವೈದಿಕ ಜ್ಯೋತಿಷ್ಯದ ಪದ್ಧತಿಯಲ್ಲಿ ಗೋಚಾರ ಆಧರಿಸಿದ ಬರಹ. ನಿಖರ ವಿವರ ಮತ್ತು ಸಮರ್ಪಕ ಪರಿಹಾರಗಳಿಗಾಗಿ ಓದುಗರು ತಮ್ಮ ಜನ್ಮಜಾತಕವನ್ನು ಸಹ ಪರಿಗಣಿಸಬೇಕು. ನಿಮ್ಮ ಕುಲಗುರುಗಳು ಅಥವಾ ಜ್ಯೋತಿಷಿಗಳ ಸಲಹೆ ಪಡೆಯಬೇಕು. ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ "ಹಿಂದೂಸ್ತಾನ್ ಟೈಮ್ಸ್ ಕನ್ನಡ" ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ.
ದೇವಾಲಯಗಳು,ಅಧ್ಯಾತ್ಮ,ದಿನ ಭವಿಷ್ಯ, ಗ್ರಹಗಳ ಸಂಚಾರ,ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ,ಹಬ್ಬ,ಸಂಸ್ಕೃತಿ,ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯವಿಭಾಗ ನೋಡಿ.