Sun Transit: ಹೊಸ ವರ್ಷದಲ್ಲಿ ಮಕರ ರಾಶಿಗೆ ಸೂರ್ಯನ ಪ್ರವೇಶ, ಈ 5 ರಾಶಿಯವರಿಗೆ ಅದೃಷ್ಟದ ದಿನಗಳು ಆರಂಭ
2025ರ ಹೊಸ ವರ್ಷಕ್ಕೆ ಕ್ಷಣಗಣನೆ ಆರಂಭವಾಗಿದೆ. ಹೊಸ ವರ್ಷದ ಆರಂಭದ ದಿನಗಳಲ್ಲಿ ಸೂರ್ಯನು ಮಕರ ರಾಶಿಯನ್ನು ಪ್ರವೇಶ ಮಾಡಲಿದ್ದಾನೆ. ಇದನ್ನು ಮಕರ ಸಂಕ್ರಾಂತಿ ಎಂದೂ ಕೂಡ ಕರೆಯಲಾಗುತ್ತದೆ. ಸೂರ್ಯನ ಸ್ಥಾನಪಲ್ಲಟವು 5 ರಾಶಿಯವರಿಗೆ ಅದೃಷ್ಟವನ್ನು ತರಲಿದೆ. ಆ ರಾಶಿಯವರು ಯಾರು ನೋಡಿ.
ಜ್ಯೋತಿಷ್ಯದಲ್ಲಿ ಸೂರ್ಯನನ್ನು ಗ್ರಹಗಳ ಅಧಿಪತಿ ಎಂದು ಕರೆಯಲಾಗುತ್ತದೆ. 2025ರ ಹೊಸ ವರ್ಷದ ಆರಂಭದಲ್ಲಿ ಸೂರ್ಯನು ಮಕರ ರಾಶಿಯನ್ನು ಪ್ರವೇಶ ಮಾಡಲಿದ್ದಾನೆ. ಸೂರ್ಯ ಸ್ಥಾನಪಲ್ಲಟವು ಮೇಷದಿಂದ ಮೀನರಾಶಿವರೆಗೆ ಪರಿಣಾಮ ಬೀರಲಿದೆ. ಸೂರ್ಯನು ಜನವರಿ 14ರಂದು ಮಕರ ರಾಶಿಗೆ ಪ್ರವೇಶಿಸುತ್ತಾನೆ, ಅಂದಿನಿಂದ ಮುಂದಿನ ಒಂದು ತಿಂಗಳು ಇದೇ ರಾಶಿಯಲ್ಲಿ ಇರುತ್ತಾನೆ. ಫೆಬ್ರವರಿ 12ರಂದು ರಾತ್ರಿ 10.03ಕ್ಕೆ ಸೂರ್ಯನು ಕುಂಭ ರಾಶಿಯನ್ನು ಪ್ರವೇಶ ಮಾಡುತ್ತಾನೆ.
ಸೂರ್ಯನು ಮಕರ ರಾಶಿಗೆ ಪ್ರವೇಶ ಮಾಡುವುದರಿಂದ ಕೆಲವು ರಾಶಿಯವರಿಗೆ ಅದೃಷ್ಟದ ದಿನಗಳು ಆರಂಭವಾಗಲಿದೆ. ಇದರಿಂದ ಆರ್ಥಿಕ ಪ್ರಗತಿಯ ಜೊತೆಗೆ ವ್ಯಾಪಾರ–ವ್ಯವಹಾರದಲ್ಲಿ ಸಾಕಷ್ಟು ಲಾಭವಾಗಲಿದೆ. ಹಾಗಾದರೆ ಸೂರ್ಯನ ಸಂಚಾರದಿಂದ ಯಾವೆಲ್ಲಾ ರಾಶಿಗೆ ಲಾಭವಾಗಲಿದೆ ನೋಡಿ.
ಮೇಷ ರಾಶಿ
ಮೇಷ ರಾಶಿಯವರಿಗೆ ಸೂರ್ಯ ಸಂಕ್ರಮಣ ಮಂಗಳಕರ. ಈ ಅವಧಿಯಲ್ಲಿ ಆರ್ಥಿಕ ಪ್ರಗತಿ ಮತ್ತು ವ್ಯಾಪಾರದ ಯಶಸ್ಸಿನ ಸಾಧ್ಯತೆಗಳಿವೆ. ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಿಲಿದ್ದೀರಿ. ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳ ಚಿಹ್ನೆಗಳು ಇವೆ.
ವೃಷಭ ರಾಶಿ
ವೃಷಭ ರಾಶಿಯವರಿಗೆ ಸೂರ್ಯನ ಸಂಚಾರದಿಂದ ಒಳಿತಾಗಲಿದೆ. ಈ ಅವಧಿಯಲ್ಲಿ ನಿಮ್ಮ ಆದಾಯ ಹೆಚ್ಚಲಿದೆ. ಉದ್ಯೋಗದಲ್ಲಿ ಬಡ್ತಿಗಾಗಿ ಕಾಯುತ್ತಿರುವವರಿಗೆ ಸಮಯ ಅನುಕೂಲವಾಗಿದೆ. ಕುಟುಂಬ ಸದಸ್ಯರೊಂದಿಗೆ ಸಂತೋಷದಿಂದ ಕಳೆಯುವಿರಿ. ಹೂಡಿಕೆಯ ಮೇಲೆ ಉತ್ತಮ ಲಾಭವನ್ನು ಪಡೆಯಬಹುದು.
ಮಕರ ರಾಶಿ
ಮಕರ ರಾಶಿಯವರಿಗೆ ಇದು ಬಹಳ ಒಳ್ಳೆಯ ಸಮಯ. ಹೊಸ ವರ್ಷದಲ್ಲಿ ಆರ್ಥಿಕ ಪ್ರಗತಿ ಸಾಧಿಸಬಹುದು. ಆರೋಗ್ಯ ಸಂಬಂಧಿ ಸಮಸ್ಯೆಗಳು ದೂರವಾಗುತ್ತವೆ. ಸಂಗಾತಿಯ ಬೆಂಬಲ ದೊರೆಯುತ್ತದೆ. ವ್ಯಾಪಾರದಲ್ಲಿ ವಿಸ್ತರಣೆ ಸಾಧ್ಯ.
ಇದನ್ನೂ ಓದಿ: 2025ರಲ್ಲಿ ಮೇಷ ರಾಶಿಯವರಿಗೆ ಯಾವ ತಿಂಗಳು ಮಂಗಳಕರ
ಸಿಂಹ ರಾಶಿ
ಸೂರ್ಯನ ಸ್ಥಾನ ಬದಲಾವಣೆಯು ಸಿಂಹ ರಾಶಿಯವರಿಗೆ ಒಳ್ಳೆಯ ದಿನಗಳನ್ನು ಸೃಷ್ಟಿಸುತ್ತದೆ. ಈ ರಾಶಿಯವರು ಆತ್ಮಸ್ಥೈರ್ಯದಿಂದ ತಮ್ಮ ಕೆಲಸದಲ್ಲಿ ಮುನ್ನಡೆಯುತ್ತಾರೆ. ಹಣಕಾಸಿನ ಪರಿಸ್ಥಿತಿಗಳು ಸುಧಾರಿಸುತ್ತದೆ. ವ್ಯಾಪಾರದಲ್ಲಿ ಲಾಭ ಪಡೆಯಬಹುದು. ಉದ್ಯೋಗಿಗಳಿಗೆ ಬಡ್ತಿ ದೊರೆಯುತ್ತದೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರು ಅದೃಷ್ಟವಂತರು. ಅದೃಷ್ಟದಿಂದ ಯಾವುದೇ ಪ್ರಯತ್ನದಲ್ಲಿ ಯಶಸ್ಸು ಸಾಧ್ಯ. ಗೌರವ ಹೆಚ್ಚುತ್ತದೆ. ನಿಮ್ಮ ಮಾತಿನ ಮೂಲಕ ಜನರನ್ನು ಮೆಚ್ಚಿಸಬಹುದು. ಬರಬೇಕಿದ್ದ ಬಾಕಿ ಹಣ ಮರಳಿ ನಿಮ್ಮ ಕೈಸೇರಬಹುದು.
(ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ ಹಿಂದೂಸ್ತಾನ್ ಟೈಮ್ಸ್ ಕನ್ನಡ ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ)