ಭಗವದ್ಗೀತೆ: ಆತ್ಮಾವಲೋಕನ ವ್ಯಕ್ತಿಗೆ ಸರಿ ತಪ್ಪುಗಳನ್ನು ನಿರ್ಧರಿಸಲು ಸಹಾಯ ಮಾಡುತ್ತೆ; ಶ್ರೀಕೃಷ್ಣನ ಮಾತಿನ ಅರ್ಥ ತಿಳಿಯಿರಿ
ಕುರುಕ್ಷೇತ್ರದ ಯುದ್ಧದಲ್ಲಿ ಕೃಷ್ಣನು ಅರ್ಜುನನಿಗೆ ನೀಡಿದ ಧರ್ಮೋಪದೇಶದ ಸಾರವೇ ಭಗವದ್ಗೀತೆಯಾಗಿದೆ. ದೇವರ ಗೀತೆ ಎಂಬ ಅರ್ಥ ಬರುವ ಭಗವದ್ಗೀತೆ ವಿಶ್ವದಲ್ಲಿ ಲಭ್ಯ ಇರುವ ಧರ್ಮಗ್ರಂಥಗಳಲ್ಲಿ ಒಂದಾಗಿದೆ. ಸತ್ಯದ ಮಾರ್ಗವನ್ನು ಅನುಸುರಿಸುವುದು ಗೀತೆಯ ಅರ್ಥವಾಗಿದೆ. ಆತ್ಮಾವಲೋಕನ ವ್ಯಕ್ತಿಗೆ ಸರಿ ತಪ್ಪುಗಳನ್ನು ನಿರ್ಧರಿಸಲು ಸಹಾಯ ಮಾಡುತ್ತೆ. ಇದರ ಅರ್ಥ ತಿಳಿಯಿರಿ
ಭಗವದ್ಗೀತೆಯಲ್ಲಿ (Bhagavadgita) ಶ್ರೀಕೃಷ್ಣ (Lord Krishna) ಹೀಗೆ ಹೇಳುತ್ತಾನೆ. ಮನುಷ್ಯನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಆತ್ಮಜ್ಞಾನದ ಮೂಲಕವೇ ಒಬ್ಬ ವ್ಯಕ್ತಿಯು ತನ್ನ ಯೋಗ್ಯತೆ ಮತ್ತು ದೋಷಗಳನ್ನು ತಿಳಿಯುತ್ತಾನೆ.
ಆತ್ಮಾವಲೋಕನವು ವ್ಯಕ್ತಿಗೆ ಯಾವುದು ತಪ್ಪು ಮತ್ತು ಯಾವುದು ಸರಿ ಎಂಬುದನ್ನು ನಿರ್ಧರಿಸಲು ಸಹಾಯ ಮಾಡುತ್ತದೆ. ಆದ್ದರಿಂದ ಸ್ವಲ್ಪ ಸಮಯವನ್ನು ಏಕಾಂಗಿಯಾಗಿ ಕಳೆಯುವ ಮೂಲಕ ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಗೀತೆಯಲ್ಲಿ ಹೇಳಲಾಗಿದೆ.
ಒಬ್ಬ ವ್ಯಕ್ತಿ ಬೆಳೆದಂತೆ ತನ್ನ ಜೀವನದಲ್ಲಿ ಯಾವುದೇ ಕೊಡುಗೆಯನ್ನು ನೀಡಿರದ ಜನರಿಗೂ ಅನಗತ್ಯ ಪ್ರಾಮುಖ್ಯತೆಯನ್ನು ನೀಡಿರುವುದು ಅರಿವಿಗೆ ಬರುತ್ತದೆ. ಇದು ಅರಿವಾಗುತ್ತಿದ್ದಂತೆ ಮುಂದಿನ ದಿನಗಳಲ್ಲಿ ತನ್ನಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳುತ್ತಾನೆ.
ಮನುಷ್ಯನು ಕೋಪವನ್ನು ನಿಯಂತಿಸುವುದನ್ನು ಕಲಿಯಬೇಕು ಎಂದು ಶ್ರೀಕೃಷ್ಣ ಗೀತೆಯಲ್ಲಿ ಹೇಳುತ್ತಾನೆ. ಕೋಪಗೊಂಡಾಗ ಒಬ್ಬ ವ್ಯಕ್ತಿಯು ತನ್ನ ನಿಯಂತ್ರಣವನ್ನು ಕಳೆದುಕೊಳ್ಳುತ್ತಾನೆ. ಕೋಪದಲ್ಲಿ ತಪ್ಪು ಕೆಲಸಗಳನ್ನು ಮಾಡುತ್ತಾನೆ. ಕೋಪದಲ್ಲಿ ಮಾಡಿದ ನಿರ್ಧಾರಗಳು ಸಾಮಾನ್ಯವಾಗಿ ತಪ್ಪಾಗಿಯೇ ಇರುತ್ತವೆ. ನಂತರ ಆ ವ್ಯಕ್ತಿ ವಿಷಾದಿಸುತ್ತಾನೆ. ಆದ್ದರಿಂದ ನೀವು ಕೋಪಗೊಂಡಾಗ ನಿಮ್ಮನ್ನು ಶಾಂತಗೊಳಿಸಲು ಪ್ರಯತ್ನಿಸಿ.
ಶ್ರೀಕೃಷ್ಣನ ಮಾತಿನ ಪ್ರಕಾರ ಒಬ್ಬ ವ್ಯಕ್ತಿಯು ತನ್ನನ್ನು ತಾನು ಮೌಲ್ಯ ಮಾಪನ ಮಾಡಿಕೊಳ್ಳುವುದು ಬಹಳ ಮುಖ್ಯವಾಗಿರುತ್ತದೆ. ನಿಮ್ಮನ್ನು ನೀವು ಅರ್ಥ ಮಾಡಿಕೊಳ್ಳುವವರಿಗೆ, ನಿಮ್ಮ ಬಗ್ಗೆ ಯಾವುದೇ ನಿರ್ಧಾರವನ್ನು ದೃಢವಾಗಿ ತೆಗೆದುಕೊಳ್ಳಲು ನಿಮಗೆ ಸಾಧ್ಯವಾಗುವುದಿಲ್ಲ. ಒಬ್ಬ ವ್ಯಕ್ತಿಯು ತನ್ನ ಯೋಗ್ಯತೆ ಮತ್ತು ದೋಷಗಳನ್ನು ತಿಳಿದಾಗ ಮಾತ್ರ ವ್ಯಕ್ತಿ ತನ್ನ ವ್ಯಕ್ತಿತ್ವವನ್ನು ಸರಿಪಡಿಸಿಕೊಳ್ಳಲು ಸಾಧ್ಯವಾಗುತ್ತದೆ.
ಪ್ರತಿಯೊಬ್ಬ ವ್ಯಕ್ತಿಯು ತನ್ನ ಮನಸ್ಸನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಮನಸ್ಸು ತುಂಬಾ ಚಂಚಲವಾಗಿರುತ್ತದೆ. ಇದು ನಮ್ಮ ದುಃಖಕ್ಕೆ ಕಾರಣವಾಗಿದೆ. ಮನಸ್ಸನ್ನು ನಿಯಂತ್ರಿಸುವ ವ್ಯಕ್ತಿ ಯಶಸ್ಸಿನ ಹಾದಿಯಲ್ಲಿ ಸಾಗುತ್ತಾನೆ. ಅಂತಹ ವ್ಯಕ್ತಿಯು ತನ್ನ ಕೆಲಸದ ಮೇಲೆ ಮಾತ್ರ ಕೇಂದ್ರೀಕರಿಸುತ್ತಾನೆ ಮತ್ತು ಗುರಿಯನ್ನು ಸುಲಭವಾಗಿ ಸಾಧಿಸುತ್ತಾನೆ.
ಮಹಾಭಾರತದ ಯುದ್ಧ ಆರಂಭಕ್ಕೂ ಮುನ್ನವೇ ಎದುರಾಳಿ ಬಣದಲ್ಲಿ ಇದ್ದ ತನ್ನ ಬಂಧುಗಳೊಂದಿಗೆ ಹೋರಾಡಲು ಅರ್ಜುನ ನಿರಾಕರಿಸುತ್ತಾನೆ. ಆಗ ಶ್ರೀಕೃಷ್ಣನು ಪಾಂಡವರಲ್ಲಿ ಒಬ್ಬರಾದ ಅರ್ಜುನನಿಗೆ ಉಪದೇಶ ನೀಡುತ್ತಾನೆ.
ಅರ್ಜುನನ ಮುಂದೆ ಬೃಹತ್ ಸೈನ್ಯ ನಿಂತಿರುತ್ತದೆ. ಆ ಸೈನ್ಯದಲ್ಲಿರುವ ಸಾರಥಿಗಳಲ್ಲಿ ಈತನ ಚಿಕ್ಕಪ್ಪ, ತಾಯಿಯ ಅಣ್ಣ, ತಾತ ಹಾಗೂ ಸಹೋದರರು ಇರುತ್ತಾರೆ. ಈ ವೇಳೆ ಅರ್ಜುನ, ನಾನು ನನ್ನ ಸ್ವಂತ ಜನರನ್ನು ಹೇಗೆ ಕೊಲ್ಲುವುದು ಎಂದು ಮನಸ್ಸಿನಲ್ಲೇ ಯೋಚನೆ ಮಾಡಿ ಯುದ್ಧಭೂಮಿಯಲ್ಲಿ ತನ್ನ ಬಿಲ್ಲನ್ನು ಕೆಳಗೆ ಇಳಿಸುತ್ತಾನೆ. ಆಗ ಅರ್ಜುನನಿಗೆ ಶ್ರೀಕೃಷ್ಣ ಮೇಲಿನಂತೆ ಉಪದೇಶ ನೀಡುತ್ತಾನೆ. ಇತರರನ್ನು ಮೋಸ ಮಾಡುವವನು ತಾನೂ ಸ್ವತಃ ಮೋಸ ಹೋಗುತ್ತಾನೆ ಎನ್ನುವುದು ಶ್ರೀಕೃಷ್ಣ ಮಾತು.
ಭಗವದ್ಗೀತೆಯಲ್ಲಿ 18 ಅಧ್ಯಾಯಗಳು, 720 ಶ್ಲೋಕಗಳನ್ನು ಹೇಳಾಗಿದೆ. ಇದರಲ್ಲಿನ ಧರ್ಮೋಪದೇಶಗಳು ಮನುಷ್ಯರನ್ನು ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸಲು ಸಹಕಾರಿಯಾಗಿದೆ. ಇದರಲ್ಲಿನ ಅಂಶಗಳನ್ನು ಜೀವನದಲ್ಲಿ ಅವಳಡಿಸಿಕೊಂಡಾಗ ಶಾಂತಿ, ನೆಮ್ಮದಿ ಹಾಗೂ ಅನ್ಯೋನ್ಯವಾಗಿ ಬಾಳಿ ಬದುಕಬಹುದಾಗಿದೆ.