ಭಗವದ್ಗೀತೆ: ಸಂಪತ್ತನ್ನು ಹಣದಿಂದ ಮಾತ್ರ ಅಳೆಯಲಾಗುವುದಿಲ್ಲ; ಶ್ರೀಕೃಷ್ಣನ ಮಾತಿನ ಹತ್ತಾರು ಅರ್ಥ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಭಗವದ್ಗೀತೆ: ಸಂಪತ್ತನ್ನು ಹಣದಿಂದ ಮಾತ್ರ ಅಳೆಯಲಾಗುವುದಿಲ್ಲ; ಶ್ರೀಕೃಷ್ಣನ ಮಾತಿನ ಹತ್ತಾರು ಅರ್ಥ

ಭಗವದ್ಗೀತೆ: ಸಂಪತ್ತನ್ನು ಹಣದಿಂದ ಮಾತ್ರ ಅಳೆಯಲಾಗುವುದಿಲ್ಲ; ಶ್ರೀಕೃಷ್ಣನ ಮಾತಿನ ಹತ್ತಾರು ಅರ್ಥ

ಕುರುಕ್ಷೇತ್ರದ ಯುದ್ಧದಲ್ಲಿ ಕೃಷ್ಣನು ಅರ್ಜುನನಿಗೆ ನೀಡಿದ ಧರ್ಮೋಪದೇಶದ ಸಾರವೇ ಭಗವದ್ಗೀತೆಯಾಗಿದೆ. ದೇವರ ಗೀತೆ ಎಂಬ ಅರ್ಥ ಬರುವ ಭಗವದ್ಗೀತೆ ವಿಶ್ವದಲ್ಲಿ ಲಭ್ಯ ಇರುವ ಧರ್ಮಗ್ರಂಥಗಳಲ್ಲಿ ಒಂದಾಗಿದೆ. ಸತ್ಯದ ಮಾರ್ಗವನ್ನು ಅನುಸುರಿಸುವುದು ಗೀತೆಯ ಅರ್ಥವಾಗಿದೆ. ಸಂಪತ್ತನ್ನು ಹಣದಿಂದ ಮಾತ್ರ ಅಳೆಯಲಾಗುವುದಿಲ್ಲ ಎಂಬ ಶ್ರೀಕೃಷ್ಣನ ಮಾತಿನ ಅರ್ಥವನ್ನು ತಿಳಿಯೋಣ.

ಕುರುಕ್ಷೇತ್ರ ಯುದ್ಧದಲ್ಲಿ ಕೃಷ್ಣನು ಅರ್ಜುನನಿಗೆ ನೀಡಿದ ಧರ್ಮೋಪದೇಶದ ಸಾರವೇ ಭಗವದ್ಗೀತೆಯಾಗಿದೆ. ಎದುರಾಳಿ ಬಣದಿಂದ ತನ್ನ ಬಂಧುಗಳೊಂದಿಗೆ ಹೋರಾಡಲು ಅರ್ಜುನ ನಿರಾಕರಿಸಿದಾಗ ಶ್ರೀಕೃಷ್ಣ ಪಾಂಡವರಲ್ಲಿ ಒಬ್ಬನಾದ ಅರ್ಜನನಿಗೆ ಈ ರೀತಿಯ ಉಪದೇಶ ನೀಡುತ್ತಾನೆ.
ಕುರುಕ್ಷೇತ್ರ ಯುದ್ಧದಲ್ಲಿ ಕೃಷ್ಣನು ಅರ್ಜುನನಿಗೆ ನೀಡಿದ ಧರ್ಮೋಪದೇಶದ ಸಾರವೇ ಭಗವದ್ಗೀತೆಯಾಗಿದೆ. ಎದುರಾಳಿ ಬಣದಿಂದ ತನ್ನ ಬಂಧುಗಳೊಂದಿಗೆ ಹೋರಾಡಲು ಅರ್ಜುನ ನಿರಾಕರಿಸಿದಾಗ ಶ್ರೀಕೃಷ್ಣ ಪಾಂಡವರಲ್ಲಿ ಒಬ್ಬನಾದ ಅರ್ಜನನಿಗೆ ಈ ರೀತಿಯ ಉಪದೇಶ ನೀಡುತ್ತಾನೆ.

ಸಮಯ ಯಾರಿಗೆ ಯಾವಾಗ ಹೇಗೆ ಬದಲಾಗುತ್ತದೆ ಎಂಬುದನ್ನು ಅರ್ಥ ಮಾಡಿಕೊಳ್ಳಲು ಯಾರಿಂದಲೂ ಸಾಧ್ಯವಾಗುವುದಿಲ್ಲ ಎಂದು ಶ್ರೀಕೃಷ್ಣ (Lord Krishna) ಭಗವದ್ಗೀತೆಯಲ್ಲಿ (Bhagavad Gita) ಹೇಳುತ್ತಾನೆ.

ಶ್ರೀರಾಮ ಪಟ್ಟಾಭಿಷೇಕದ ಬಗ್ಗೆ ರಾತ್ರಿಯೇ ನಿರ್ಧರಿಸಲಾಗಿತ್ತು. ಆದರೆ ಬೆಳಗ್ಗೆ ರಾಮ ವನವಾಸಕ್ಕೆ ಹೋಗಬೇಕಾಯಿತು. ಅದಕ್ಕಾಗಿ ನಾವು ನಮ್ಮ ಕೆಲಸವನ್ನು ಮಾಡುತ್ತಲೇ ಇರಬೇಕೆಂದು ಗೀತೆಯಲ್ಲಿ ಹೇಳಲಾಗಿದೆ.

ಸಂಪತ್ತನ್ನು ಹಣದಿಂದ ಮಾತ್ರ ಅಳೆಯಲಾಗುವುದಿಲ್ಲ. ಆದರೆ ಒಳ್ಳೆಯ ನಡತೆ ಮತ್ತು ಒಳ್ಳೆಯ ಕಾರ್ಯಗಳನ್ನು ಹೊಂದಿರುವ ವ್ಯಕ್ತಿ ನಿಜವಾಗಿಯೂ ಶ್ರೀಮಂತ. ಈ ಗುಣಗಳನ್ನು ಹೊಂದಿರದ ವ್ಯಕ್ತಿಯು ಶಾಶ್ವತವಾಗಿ ಬಡವನಾಗಿರುತ್ತಾನೆ.

ಶ್ರೀಕೃಷ್ಣ ಹೇಳುತ್ತಾನೆ, ನಿನ್ನನ್ನು ನೀನು ನಂಬಿದರೆ ನೀನು ಬಲಶಾಲಿಯಾಗುವಿ. ನೀನು ಇತರರ ಮೇಲೆ ಅವಲಂಬಿತವಾಗಿದ್ದರೆ ಅದು ನಿನ್ನನ್ನು ಶಕ್ತಿಯುತವಾಗಿ ಮಾಡುವುದಿಲ್ಲ. ಜೀವನದಲ್ಲಿ ಏನಾದರೂ ಸಾಧಿಸಬೇಕಾದರೆ ಮೊದಲು ನಿನಗೆ ಆತ್ಮ ವಿಶ್ವಾಸ ಇರಬೇಕು. ನಿನ್ನನ್ನು ನೀನು ಮೊದಲು ನಂಬಬೇಕು ಎಂದು ಹೇಳಿದ್ದಾನೆ.

ಭೂತಕಾಲವು ನಮಗೆ ಜೀವನವನ್ನು ಅರ್ಥಮಾಡಿಕೊಳ್ಳಲು ಉತ್ತಮ ಅವಕಾಶವನ್ನು ನೀಡುತ್ತದೆ. ನಮ್ಮ ಹೊಸ ದಿನವು ನಮಗೆ ಜೀವನವನ್ನು ನಡೆಸಲು ಎರಡನೇ ಅವಕಾಶವನ್ನು ನೀಡುತ್ತದೆ ಎಂದು ಶ್ರೀಕೃಷ್ಣ ಹೇಳುತ್ತಾನೆ. ಅದಕ್ಕಾಗಿಯೇ ನಾವು ಪ್ರತಿ ದಿನ ಯಾವುದರ ಬಗ್ಗೆಯೂ ಯೋಚಿಸದೆ ಪೂರ್ಣ ಹೃದಯದಿಂದ ಇರಬೇಕು.

ಮನುಷ್ಯನು ಒಬ್ಬನೇ ಹುಟ್ಟುತ್ತಾನೆ ಮತ್ತು ಸಾವನ್ನು ಏಕಾಂಗಿಯಾಗಿಯೇ ಎದುರಿಸುತ್ತಾನೆ ಎಂದು ಗೀತೆ ಹೇಳುತ್ತದೆ. ಪ್ರತಿಯೊಬ್ಬ ವ್ಯಕ್ತಿಯು ತನ್ನ ಒಳ್ಳೆಯ ಮತ್ತು ಕೆಟ್ಟ ಕರ್ಮಗಳ ಫಲವನ್ನು ಪಡೆಯುತ್ತಾನೆ. ಆದ್ದರಿಂದ ಜನಸಂದಣಿಯಲ್ಲಿ ನಡೆಯುವ ಬದಲು ಕರ್ಮದ ಕಡೆ ಗಮನ ಹರಿಸಬೇಕು. ಒಬ್ಬನೇ ದಾರಿಯಲ್ಲಿ ನಡೆಯಲು ಭಯಪಡಬಾರದು.

ಅತಿಯಾದ ಆರಾಮ ಮತ್ತು ಅತಿಯಾದ ಪ್ರೀತಿ ಮನುಷ್ಯನನ್ನು ಊನಗೊಳಿಸುತ್ತದೆ ಎಂದು ಶ್ರೀಕೃಷ್ಣ ಗೀತೆಯಲ್ಲಿ ಹೇಳುತ್ತಾನೆ. ಆದ್ದರಿಂದ ಒಬ್ಬರು ಅತಿಯಾದ ಆರಾಮ ಮತ್ತು ಪ್ರೀತಿಯನ್ನು ತಪ್ಪಿಸಬೇಕು. ಇಲ್ಲದಿದ್ದರೆ ಒಬ್ಬರು ಮತ್ತೊಬ್ಬರ ಜೀವನವನ್ನು ಹಾಳು ಮಾಡುತ್ತಾರೆ.

ಮಹಾಭಾರತದ ಯುದ್ಧ ಆರಂಭಕ್ಕೂ ಮುನ್ನವೇ ಎದುರಾಳಿ ಬಣದಲ್ಲಿ ಇದ್ದ ತನ್ನ ಬಂಧುಗಳೊಂದಿಗೆ ಹೋರಾಡಲು ಅರ್ಜುನ ನಿರಾಕರಿಸುತ್ತಾನೆ. ಆಗ ಶ್ರೀಕೃಷ್ಣನು ಪಾಂಡವರಲ್ಲಿ ಒಬ್ಬರಾದ ಅರ್ಜುನನಿಗೆ ಉಪದೇಶ ನೀಡುತ್ತಾನೆ.

ಅರ್ಜುನನ ಮುಂದೆ ಬೃಹತ್ ಸೈನ್ಯ ನಿಂತಿರುತ್ತದೆ. ಆ ಸೈನ್ಯದಲ್ಲಿರುವ ಸಾರಥಿಗಳಲ್ಲಿ ಈತನ ಚಿಕ್ಕಪ್ಪ, ತಾಯಿಯ ಅಣ್ಣ, ತಾತ ಹಾಗೂ ಸಹೋದರರು ಇರುತ್ತಾರೆ. ಈ ವೇಳೆ ಅರ್ಜುನ, ನಾನು ನನ್ನ ಸ್ವಂತ ಜನರನ್ನು ಹೇಗೆ ಕೊಲ್ಲುವುದು ಎಂದು ಮನಸ್ಸಿನಲ್ಲೇ ಯೋಚನೆ ಮಾಡಿ ಯುದ್ಧಭೂಮಿಯಲ್ಲಿ ತನ್ನ ಬಿಲ್ಲನ್ನು ಕೆಳಗೆ ಇಳಿಸುತ್ತಾನೆ. ಆಗ ಅರ್ಜುನನಿಗೆ ಶ್ರೀಕೃಷ್ಣ ಈ ಮೇಲಿನಂತೆ ಉಪದೇಶ ನೀಡುತ್ತಾನೆ. ಇತರರನ್ನು ಮೋಸ ಮಾಡುವವನು ತಾನೂ ಸ್ವತಃ ಮೋಸ ಹೋಗುತ್ತಾನೆ ಎನ್ನುವುದು ಶ್ರೀಕೃಷ್ಣ ಮಾತು.

ಭಗವದ್ಗೀತೆಯಲ್ಲಿ 18 ಅಧ್ಯಾಯಗಳು, 720 ಶ್ಲೋಕಗಳನ್ನು ಹೇಳಾಗಿದೆ. ಇದರಲ್ಲಿನ ಧರ್ಮೋಪದೇಶಗಳು ಮನುಷ್ಯರನ್ನು ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸಲು ಸಹಕಾರಿಯಾಗಿದೆ. ಇದರಲ್ಲಿನ ಅಂಶಗಳನ್ನು ಜೀವನದಲ್ಲಿ ಅವಳಡಿಸಿಕೊಂಡಾಗ ಶಾಂತಿ, ನೆಮ್ಮದಿ ಹಾಗೂ ಅನ್ಯೋನ್ಯವಾಗಿ ಬಾಳಿ ಬದುಕಬಹುದಾಗಿದೆ.

-----------------------------------------------------------------------------------

ಸಂಬಂಧಿತ ಲೇಖನ

Whats_app_banner

ವಿಭಾಗ

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.