ಇಂದು ತೊಬಗೆರೆ ಪ್ರಸನ್ನ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವ; ಸೂರ್ಯಮಂಡೋತ್ಸವ ಸೇರಿ ಕಾರ್ಯಕ್ರಮಗಳ ಪಟ್ಟಿ ಹೀಗಿದೆ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಇಂದು ತೊಬಗೆರೆ ಪ್ರಸನ್ನ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವ; ಸೂರ್ಯಮಂಡೋತ್ಸವ ಸೇರಿ ಕಾರ್ಯಕ್ರಮಗಳ ಪಟ್ಟಿ ಹೀಗಿದೆ

ಇಂದು ತೊಬಗೆರೆ ಪ್ರಸನ್ನ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವ; ಸೂರ್ಯಮಂಡೋತ್ಸವ ಸೇರಿ ಕಾರ್ಯಕ್ರಮಗಳ ಪಟ್ಟಿ ಹೀಗಿದೆ

ಬೆಂ. ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೊಬಗೆರೆಯಲ್ಲಿ ಇಂದು (ಮಾರ್ಚ್ 14, ಶುಕ್ರವಾರ) ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ನಡೆಯಲಿದೆ. ಈ ದಿನ ಏನೆಲ್ಲಾ ಇರುತ್ತವೆ ನೋಡಿ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡ ಬಳ್ಳಾಪುರ ತಾಲೂಕಿನ ತೊಬಗೆರೆಯಲ್ಲಿರುವ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡ ಬಳ್ಳಾಪುರ ತಾಲೂಕಿನ ತೊಬಗೆರೆಯಲ್ಲಿರುವ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡ ಬಳ್ಳಾಪುರ ತಾಲೂಕಿನ ತೊಬಗೆರೆಯಲ್ಲಿರುವ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿಂದು (ಮಾರ್ಚ್ 14, ಶುಕ್ರವಾರ) ಬ್ರಹ್ಮ ರಥೋತ್ಸವ ಅದ್ಧೂರಿಯಾಗಿ ನಡೆಯಲಿದ್ದು, ಇದಕ್ಕಾಗಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈಗಾಗಲೇ ಭಕ್ತರು ದೇವಾಲಯದತ್ತ ಆಗಮಿಸುತ್ತಿದ್ದು, ಬ್ರಹ್ಮ ರಥೋತ್ಸವವನ್ನು ಕಣ್ತುಂಬಿಕೊಳ್ಳಲು ಕಾತುರರಾಗಿದ್ದಾರೆ.

ಶ್ರೀ ಕ್ರೋಧಿನಾಮ ಸಂವತ್ಸರ ಫಾಲ್ಗುಣ ಶುದ್ಧ ಪೌರ್ಣಮಿ ದಿನವಾದ ಇಂದು (ಮಾರ್ಚ್ 14, ಶುಕ್ರವಾರ) ಮಧ್ಯಾಹ್ನ 12.12 ರಿಂದ 1 ಗಂಟೆಯೊಳಗೆ ಸಲ್ಲುವ ಶುಭ ಅಭಿಜನ್ ಲಗ್ನದಲ್ಲಿ ಬ್ರಹ್ಮ ರಥೋತ್ಸವ ನಡೆಯಲಿದೆ. ಬೆಳಿಗ್ಗೆ ದೇವರಿಗೆ ಅಭಿಷೇಕ ಮುಗಿದಿವೆ. ಮಧ್ಯಾಹ್ನ 12 ಗಂಟೆಗೆ ಮಂಟಪ ಪೂಜೆ ಜೊತೆಗೆ ಹೂವಿನ ಅಲಂಕಾರ ನಡೆಯುತ್ತದೆ. ರಥೋತ್ಸವದ ಬಳಿಕ ಅಂದರೆ ಸಂಜೆ 6 ಗಂಟೆಗೆ ಊರಿನ ಪ್ರಮುಖ ಬೀದಿಗಳಲ್ಲಿ ಸೂರ್ಯಮಂಡೋತ್ಸವ ನಡೆಯಲಿದೆ. ನವಿಲುವಾಹನ ಸಿಡಿಮದ್ದು, ಕೀಲು ಕುದುರೆ ಸೇರಿದಂತೆ ವಿವಿಧ ಕಾರ್ಯಕ್ರಮ ನಡೆಯುತ್ತವೆ.

ಮಾರ್ಚ್ 15ರ ಶನಿವಾರ ಬೆಳಗ್ಗೆ 8 ಗಂಟೆಗೆ ದೇವರಿಗೆ ಅಬಿಷೇಖ ಪ್ರಾಕಾರೋತ್ಸವ ಹಾಗೂ ಪ್ರಸಾದ ವಿನಿಯೋಗ ಇರುತ್ತದೆ. ಸಂಜೆ 6 ಗಂಟೆಗೆ ಯಾತ್ರೋತ್ಸವ ದೋಷ ತಿರುನಾಲು ಪಲ್ಲಕ್ಕಿ ಉತ್ಸವ ನಡೆಯಲಿದೆ. ಮಾರ್ಚ್ 16ರ ಬೆಳಗ್ಗೆ 9 ಗಂಟೆಗೆ ವಸಂತೋತ್ಸವ ಧ್ವಜಾ ಅವರೋಹಣ ನಡೆಯಲಿದೆ. ಸಂಜೆ 6 ಗಂಟೆಗೆ ಊರಿನ ಪ್ರಮುಕ ಬೀದಿಗಳಲ್ಲಿ ವಿದ್ಯುತ್ ಪಲ್ಲಕ್ಕಿ ಉತ್ಸವ ಜರುಗಲಿದೆ. ಮಾರ್ಚ್ 17ರ ಸೋಮವಾರ ಸಂಜೆ 6 ಗಂಟೆಗೆ ಶ್ರೀ ಕೃಷ್ಣ ಉತ್ಸವ ನಡೆಯಲಿದೆ. ಮಾರ್ಚ್ 18ರ ಮಂಗಳವಾರ ಪ್ರಮುಖ ಬೀದಿಗಳಲ್ಲಿ ಮುತ್ತಿನ ಪಲ್ಲಕ್ಕಿ ಉತ್ಸವ ನಡೆಯಲಿದೆ. ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಮುಖ ಬ್ರಹ್ಮ ರಥೋತ್ಸವಗಳಲ್ಲಿ ತೊಬಗೆರೆಯಲ್ಲಿರುವ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದ ರಥೋತ್ಸವ ಕೂಡ ಪ್ರಮುಖವಾಗಿ ಹೆಚ್ಚಿನ ಭಕ್ತರು ಸೇರುತ್ತಾರೆ. ಊರಿನಲ್ಲಿ ಹಬ್ಬದ ವಾತಾವರಣ ಇರುತ್ತದೆ.

Raghavendra M Y

TwittereMail
ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.