ವೃಷಭ ರಾಶಿ ಭವಿಷ್ಯ ಆಗಸ್ಟ್ 29: ಆರೋಗ್ಯ ಚೆನ್ನಾಗಿರಬೇಕೆಂದರೆ ಸಕ್ಕರೆ ಸೇವನೆ ಕಡಿಮೆ ಮಾಡಿ, ಕಚೇರಿಯಲ್ಲಿ ಹೆಚ್ಚು ಸಮಯ ಕೆಲಸ ಮಾಡಬೇಕಾಗಬಹುದು
Taurus Daily Horoscope 29 August 2024: ರಾಶಿಚಕ್ರಗಳ ಪೈಕಿ ಎರಡನೆಯದ್ದು ವೃಷಭ. ಜನನದ ಸಮಯದಲ್ಲಿ ಚಂದ್ರನು ವೃಷಭ ಸಾಗುತ್ತಿರುವ ಜನರ ರಾಶಿಚಕ್ರ ಚಿಹ್ನೆ ವೃಷಭ ರಾಶಿ. ಇಂದು ಈ ರಾಶಿಯವರ ದಿನ ಭವಿಷ್ಯ ಹೇಗಿದೆ ನೋಡೋಣ.
ವೃಷಭ ರಾಶಿ ಭವಿಷ್ಯ ಆಗಸ್ಟ್ 29: ಇಂದು ನಿಮ್ಮ ಸಂಗಾತಿಯನ್ನು ಉತ್ತಮ ಮನಸ್ಥಿತಿಯಲ್ಲಿಡಲು ಪ್ರಯತ್ನಿಸಿ. ಕಚೇರಿಯಲ್ಲಿ ನಿಮ್ಮ ವರ್ತನೆ ಇಂದು ನಿಮ್ಮ ಪರವಾಗಿ ಕೆಲಸ ಮಾಡುತ್ತದೆ. ನೀವು ಹಣದ ವಿಷಯದಲ್ಲಿ ಎಲ್ಲವೂ ಉತ್ತಮವಾಗಿರಲಿದೆ. ಯಾವುದೇ ಆರೋಗ್ಯ ಸಂಬಂಧಿತ ಸಮಸ್ಯೆ ಕಾಡುವುದಿಲ್ಲ. ವೃಷಭ ರಾಶಿಯವರ ಇಂದಿನ ವಿವರವಾದ ಜಾತಕ ತಿಳಿಯೋಣ. ಅಂದ ಹಾಗೆ, ಎಲ್ಲ ರಾಶಿಗಳ ದಿನ ಭವಿಷ್ಯ ಹಿಂದೂಸ್ತಾನ್ ಟೈಮ್ಸ್ ಕನ್ನಡ ಜಾಲತಾಣದಲ್ಲಿದೆ. ನೀವು ಅದನ್ನೂ ಓದಬಹುದು.
ವೃಷಭ ರಾಶಿ ಪ್ರೇಮ ಭವಿಷ್ಯ (Taurus Love Horoscope)
ಇಂದು ನಿಮ್ಮ ಸಂಗಾತಿಯೊಂದಿಗೆ ಜಗಳವಾಡುವುದನ್ನು ತಪ್ಪಿಸಿ. ಸಂಬಂಧಗಳಿಗೆ ಪ್ರಾಮುಖ್ಯತೆ ನೀಡಿ. ಸಣ್ಣಪುಟ್ಟ ಸಮಸ್ಯೆಗಳು ಬರಬಹುದು ಆದರೆ ಇಂದು ಅವುಗಳನ್ನು ಪರಿಹರಿಸಲು ಕ್ರಮಗಳನ್ನು ಕೈಗೊಳ್ಳಿ. ಇಂದು ನಿಮ್ಮ ಪ್ರೇಮಿ ಕೆಲವು ವಿಷಯಗಳಿಗೆ ನಿಮಗೆ ಬೇಡಿಕೆ ಇಡಬಹುದು. ಈ ಪರಿಸ್ಥಿತಿಯನ್ನು ನೀವು ಬುದ್ಧಿವಂತಿಕೆಯಿಂದ ಸುಲಭವಾಗಿ ನಿಭಾಯಿಸಬಹುದು. ಪ್ರೀತಿಯನ್ನು ವ್ಯಕ್ತಪಡಿಸಲು ಮಧ್ಯಾಹ್ನ ಉತ್ತಮ ಸಮಯ. ಕೆಲವು ವಿವಾಹಿತ ಮಹಿಳೆಯರು ಇಂದು ಒಳ್ಳೆಯ ಸುದ್ದಿ ಪಡೆಯಬಹುದು. ಕೆಲವು ಮಹಿಳೆಯರು ತಮ್ಮ ಮಾಜಿ ಪ್ರೇಮಿಯನ್ನು ಭೇಟಿ ಆಗಬಹುದು.
ವೃಷಭ ರಾಶಿ ವೃತ್ತಿ ಭವಿಷ್ಯ (Taurus Professional Horoscope)
ಇಂದು ನೀವು ಕಚೇರಿಯಲ್ಲಿ ಹೊಸ ಜವಾಬ್ದಾರಿಗಳನ್ನು ತೆಗೆದುಕೊಳ್ಳುವಿರಿ. ಸಂದರ್ಶನಕ್ಕಾಗಿ ಎದುರು ನೋಡುತ್ತಿರುವವರು ಚೆನ್ನಾಗಿ ತಯಾರಿ ಮಾಡಿಕೊಳ್ಳಬೇಕು. ಹೆಲ್ತ್ಕೇರ್ ಮತ್ತು ಐಟಿ ವೃತ್ತಿಪರರು ಇಂದು ಕಚೇರಿಯಲ್ಲಿ ಹೆಚ್ಚು ಸಮಯ ಕೆಲಸ ಮಾಡಬೇಕಾಗಬಹುದು. ಕೆಲವು ಐಟಿ ವೃತ್ತಿಪರರು ಇಂದು ತಮ್ಮ ಗ್ರಾಹಕರ ಕಚೇರಿಗಳಿಗೆ ಭೇಟಿ ನೀಡಬೇಕಾಗಬಹುದು. ಮಾರಾಟ ಕ್ಷೇತ್ರದಲ್ಲಿರುವ ಜನರು ಇಂದು ತಮ್ಮ ಗುರಿಗಳನ್ನು ಪೂರೈಸಲು ಹೆಣಗಾಡಬೇಕಾಗಬಹುದು. ವ್ಯಾಪಾರಸ್ಥರು ಇಂದು ಹೊಸ ಆಲೋಚನೆಯಲ್ಲಿ ಕೆಲಸ ಮಾಡಬಹುದು ಅಥವಾ ಪೂರ್ಣ ವಿಶ್ವಾಸದಿಂದ ಹೊಸ ಯೋಜನೆಯನ್ನು ಪ್ರಾರಂಭಿಸಬಹುದು.
ವೃಷಭ ರಾಶಿಯ ಹಣಕಾಸು ಭವಿಷ್ಯ (Taurus Money Horoscope)
ವಿವಿಧ ಮೂಲಗಳಿಂದ ಹಣವು ಬರುತ್ತದೆ, ಅದರ ಸಹಾಯದಿಂದ ನೀವು ಇಷ್ಟಪಟ್ಟ ವಸ್ತುಗಳನ್ನು ಖರೀದಿಸಬಹುದು. ಮನೆಯನ್ನು ನವೀಕರಿಸಲು ಅಥವಾ ಹೊಸ ಕಾರು ಖರೀದಿಸಲು ಮಧ್ಯಾಹ್ನದ ಸಮಯವು ಮಂಗಳಕರವಾಗಿರುತ್ತದೆ. ನೀವು ಷೇರು ಮಾರುಕಟ್ಟೆ ಮತ್ತು ವ್ಯವಹಾರದಲ್ಲಿ ಹೂಡಿಕೆ ಮಾಡುವ ಬಗ್ಗೆ ಯೋಚಿಸಬಹುದು. ತಜ್ಞರ ಸಲಹೆಯು ಇಂದು ನಿಮಗೆ ಅನುಕೂಲವಾಗಿರಬಹುದು. ಕೆಲವರು ಇಂದು ಬಾಕಿ ಹಣವನ್ನು ಮರು ಪಾವತಿಸಬಹುದು. ವ್ಯಾಪಾರಸ್ಥರಿಗೆ ಹೊಸ ಪಾಲುದಾರಿಕೆ ಒಪ್ಪಂದಗಳನ್ನು ಮಾಡಲು ಮಧ್ಯಾಹ್ನ ಉತ್ತಮ ಸಮಯ.
ವೃಷಭ ರಾಶಿಯ ಆರೋಗ್ಯ ಭವಿಷ್ಯ (Taurus Health Horoscope)
ನಿಮ್ಮ ಆರೋಗ್ಯದ ಕಡೆ ಗಮನ ಕೊಡಿ. ವೈರಲ್ ಜ್ವರ, ಬಾಯಿಯ ಆರೋಗ್ಯ ಮತ್ತು ಗಂಟಲು ನೋವಿನ ಸಮಸ್ಯೆ ಕಾಡಬಹುದು. ಆದರೆ ದೈನಂದಿನ ಜೀವನದಲ್ಲಿ ಯಾವುದೇ ಗಂಭೀರ ಪರಿಣಾಮ ಬೀರುವುದಿಲ್ಲ. ಕೆಲವು ಮಕ್ಕಳು ಆಟವಾಡುವಾಗ ಗಾಯಗೊಳ್ಳಬಹುದು. ಮಹಿಳೆಯರು ಅಡುಗೆ ಮನೆಯಲ್ಲಿ ತರಕಾರಿ ಕತ್ತರಿಸುವಾಗ ಎಚ್ಚರಿಕೆ ವಹಿಸಬೇಕು. ನಿಮ್ಮ ಆಹಾರದಲ್ಲಿ ಸಾಧ್ಯವಾದಷ್ಟು ತರಕಾರಿಗಳನ್ನು ಸೇರಿಸಿ. ಸಕ್ಕರೆ ಸೇವನೆ ಕಡಿಮೆ ಮಾಡಿ. ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದಾಗಿ, ನೀವು ಇಂದು ವೈದ್ಯರನ್ನು ಸಂಪರ್ಕಿಸಬೇಕಾಗಬಹುದು.
ವೃಷಭ ರಾಶಿಯವರಿಗೆ ತಿಳಿದಿರಲೇಬೇಕಾದ ಮಾಹಿತಿಯಿದು
ವೃಷಭ ರಾಶಿಗೆ ಅಧಿಪತಿ: ಶುಕ್ರ, ವೃಷಭ ರಾಶಿಯವರಿಗೆ ಶುಭ ದಿನಾಂಕಗಳು: 5, 6, 15, 18, 19, 20, 25, 29. ವೃಷಭ ರಾಶಿಯವರಿಗೆ ಶುಭ ದಿನಗಳು: ಸೋಮವಾರ, ಬುಧವಾರ, ಗುರುವಾರ, ಶುಕ್ರವಾರ ಮತ್ತು ಶನಿವಾರ. ವೃಷಭ ರಾಶಿಯವರಿಗೆ ಶುಭ ಸಂಖ್ಯೆಗಳು: 5, 6, 8. ವೃಷಭ ರಾಶಿಯವರಿಗೆ ಶುಭ ವರ್ಣ: ಪಿಂಕ್, ಹಸಿರು ಮತ್ತು ಬಿಳಿ. ವೃಷಭ ರಾಶಿಯವರಿಗೆ ಅಶುಭ ವರ್ಣ: ಕೆಂಪು ಮತ್ತು ಹಳದಿ. ವೃಷಭ ರಾಶಿಯವರಿಗೆ ಶುಭ ದಿಕ್ಕು: ದಕ್ಷಿಣ ಮತ್ತು ನೈರುತ್ಯ. ವೃಷಭ ರಾಶಿಯವರಿಗೆ ಶುಭ ತಿಂಗಳು: ಜನವರಿ 15 ರಿಂದ ಏಪ್ರಿಲ್15. ವೃಷಭ ರಾಶಿಯವರಿಗೆ ಶುಭ ಹರಳು: ಹಸಿರು ಪಚ್ಚೆ ಮತ್ತು ನೀಲಮಣಿ. ವೃಷಭ ರಾಶಿಯವರಿಗೆ ಶುಭ ರಾಶಿ: ಮಿಥುನ, ಕನ್ಯಾ ಮತ್ತು ಮಕರ. ವೃಷಭ ರಾಶಿಯವರಿಗೆ ಅಶುಭ ರಾಶಿ: ಕಟಕ, ಧನುಸ್ಸು ಮತ್ತು ಮೇಷ.
ವೃಷಭ ರಾಶಿಯವರಿಗೆ ಶುಭಫಲಕ್ಕಾಗಿ ಸರಳ ಪರಿಹಾರಗಳು
1) ಇಂದ್ರಾಕ್ಷಿ ಸ್ತೋತ್ರ: ಪ್ರತಿದಿನ ಶ್ರೀ ಇಂದ್ರಾಕ್ಷಿ ಸ್ತೋತ್ರ ಪಠಿಸುವುದರಿಂದ ಅಥವಾ ಕೇಳಿಸಿಕೊಳ್ಳುವುದರಿಂದ ಆತ್ಮಶಕ್ತಿಯು ಹೆಚ್ಚುತ್ತದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತದೆ.
2) ಈ ದಾನಗಳಿಂದ ಶುಭ ಫಲ: ಬಿಳಿಬಣ್ಣದ ಬಟ್ಟೆ ಮತ್ತು ಗೋಧಿ ಅಥವಾ ರವೆಯನ್ನು ದಾನ ನೀಡುವುದರಿಂದ ಖರ್ಚುವೆಚ್ಚಗಳು ಕಡಿಮೆ ಆಗಲಿವೆ.
3) ದೇವಸ್ಥಾನ ಮತ್ತು ದೇವರ ಪೂಜೆ: ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿಗೆ ಪಂಚಾಮೃತ ಅಭಿಷೇಕ ಮಾಡಿಸುವುದು ಕ್ಷೇಮಕರ. ಮನೆಯಲ್ಲಿಯೂ ಶ್ರೀ ಸತ್ಯನಾರಾಯಣ ಪೂಜೆ ಮಾಡಬಹುದು. ಹೂ ಬಿಡುವ ಗಿಡಗಳನ್ನು ಪೋಷಿಸಿದಲ್ಲಿ ಎಲ್ಲಾರೀತಿಯ ಸಮಸ್ಯೆಗಳು ದೂರವಾಗುತ್ತವೆ.
4) ಈ ಬಣ್ಣದ ಕರವಸ್ತ್ರ ಉಪಯೋಗಿಸಿ: ನೀಲಿ ಮತ್ತು ಹಸಿರು ಬಣ್ಣದ ಕರವಸ್ತ್ರ ಬಳಸಿದರೆ ನಿರೀಕ್ಷಿತ ಫಲಗಳು ದೊರೆಯಲಿವೆ.
ಗಮನಿಸಿ: ಇದು ವೈದಿಕ ಜ್ಯೋತಿಷ್ಯದ ಪದ್ಧತಿಯಲ್ಲಿ ಗೋಚಾರ ಆಧರಿಸಿದ ಬರಹ. ನಿಖರ ವಿವರ ಮತ್ತು ಸಮರ್ಪಕ ಪರಿಹಾರಗಳಿಗಾಗಿ ಓದುಗರು ತಮ್ಮ ಜನ್ಮಜಾತಕವನ್ನು ಸಹ ಪರಿಗಣಿಸಬೇಕು. ನಿಮ್ಮ ಕುಲಗುರುಗಳು ಅಥವಾ ಜ್ಯೋತಿಷಿಗಳ ಸಲಹೆ ಪಡೆಯಬೇಕು. ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ "ಹಿಂದೂಸ್ತಾನ್ ಟೈಮ್ಸ್ ಕನ್ನಡ" ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ.