ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಜುಲೈ 16ರಿಂದ ಶುರುವಾಗಲಿದೆ ಬುಧಾದಿತ್ಯ ರಾಜಯೋಗ; ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ

ಜುಲೈ 16ರಿಂದ ಶುರುವಾಗಲಿದೆ ಬುಧಾದಿತ್ಯ ರಾಜಯೋಗ; ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ

ಜುಲೈ ತಿಂಗಳಲ್ಲಿ ಕರ್ಕಾಟಕ ರಾಶಿಯಲ್ಲಿ ಸೂರ್ಯ ಮತ್ತು ಬುಧ ಗ್ರಹಗಳ ಸಂಯೋಗವಾಗಲಿದೆ. ಇದರಿಂದ ಬುಧಾದಿತ್ಯ ರಾಜಯೋಗ ಸಂಭವಿಸಲಿದೆ. ಈ ಯೋಗದಿಂದ ಕೆಲವು ರಾಶಿಚಕ್ರ ಚಿಹ್ನೆಗಳಿಗೆ ಅತ್ಯಂತ ಪ್ರಯೋಜನಕಾರಿಯಾಗಲಿದೆ. ಆ ರಾಶಿಗಳು ಯಾವುವು ಎಂಬುದನ್ನು ನೋಡೋಣ.

ಜುಲೈ 16ರಿಂದ ಶುರುವಾಗಲಿದೆ ಬುಧಾದಿತ್ಯ ರಾಜಯೋಗ
ಜುಲೈ 16ರಿಂದ ಶುರುವಾಗಲಿದೆ ಬುಧಾದಿತ್ಯ ರಾಜಯೋಗ

ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಗಳ ಪ್ರಕಾರ, ಗ್ರಹಗಳ ರಾಜ ಸೂರ್ಯನು 30-31 ದಿನಗಳಲ್ಲಿ ತನ್ನ ರಾಶಿಚಕ್ರ ಚಿಹ್ನೆಯನ್ನು ಬದಲಾಯಿಸುತ್ತಲೇ ಇರುತ್ತಾನೆ. ಸೂರ್ಯನು ಶೀಘ್ರದಲ್ಲೇ ರಾಶಿಚಕ್ರ ಚಿಹ್ನೆಯನ್ನು ಬದಲಾಯಿಸಲಿದ್ದಾನೆ. ಹಿಂದೂ ಪಂಚಾಂಗದ ಪ್ರಕಾರ, ಜುಲೈ 16, 2024ರ ಮಂಗಳವಾರ ಬೆಳಗ್ಗೆ 11:29ಕ್ಕೆ, ಮಿಥುನ ರಾಶಿಯಿಂದ ಕರ್ಕಾಟಕ ರಾಶಿಗೆ ಸಂಚರಿಸುತ್ತಾನೆ. ಆಗಸ್ಟ್ 16ರವರೆಗೆ ಈ ರಾಶಿಚಕ್ರದಲ್ಲಿಯೇ ಉಳಿಯುತ್ತಾನೆ. ಈಗಾಗಲೇ ಕರ್ಕಾಟಕ ರಾಶಿಯಲ್ಲಿ ಬುಧ ಗ್ರಹ ಬಂದು ಕುಳಿತಿದೆ. ಕರ್ಕಾಟಕ ರಾಶಿಯಲ್ಲಿ ಬುಧ ಹಾಗೂ ಸೂರ್ಯನ ಸಂಯೋಗದಿಂದ ಬುಧಾದಿತ್ಯ ರಾಜಯೋಗ ರೂಪುಗೊಳ್ಳುತ್ತದೆ.

ಜ್ಯೋತಿಷ್ಯದಲ್ಲಿ, ಬುಧಾದಿತ್ಯ ರಾಜಯೋಗವನ್ನು ಬಹಳ ಮಂಗಳಕರ ಎಂದು ಪರಿಗಣಿಸಲಾಗಿದೆ. ಏಕೆಂದರೆ ಇದು ಸಂತೋಷ ಮತ್ತು ಅದೃಷ್ಟ ಹೆಚ್ಚಿಸುವ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂಬ ನಂಬಿಕೆ ಇದೆ. ಈ ರಾಜಯೋಗದಿಂದ ವ್ಯಕ್ತಿಯು ಪ್ರತಿಯೊಂದು ಕ್ಷೇತ್ರದಲ್ಲೂ ಭಾರಿ ಯಶಸ್ಸನ್ನು ಪಡೆಯುತ್ತಾನೆ. ಜುಲೈ 16ರಂದು ಬುಧಾದಿತ್ಯ ರಾಜ ಯೋಗದಿಂದ ಯಾವ ರಾಶಿಚಕ್ರ ಚಿಹ್ನೆಗಳಿಗೆ ಅದೃಷ್ಟ ಸಿಗುತ್ತದೆ ಎಂದು ತಿಳಿಯೋಣ.

ಕನ್ಯಾ ರಾಶಿ

ಬುಧಾದಿತ್ಯ ರಾಜ ಯೋಗದಿಂದ ಕನ್ಯಾ ರಾಶಿಯ ಜನರ ಅದೃಷ್ಟ ಹೆಚ್ಚಲಿದೆ. ವೃತ್ತಿಜೀವನದಲ್ಲಿ ದೊಡ್ಡ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಆತ್ಮವಿಶ್ವಾಸ ಹೆಚ್ಚಾಗಿ ವೃತ್ತಿಜೀವನದ ಸವಾಲುಗಳನ್ನು ಎದುರಿಸಲು ಸಾಧ್ಯವಾಗುತ್ತದೆ. ಉದ್ಯೋಗ ಮತ್ತು ವ್ಯವಹಾರದಲ್ಲಿ ಕೆಲಸವು ಅಪೇಕ್ಷಿತ ಫಲಿತಾಂಶಗಳು ಬರುತ್ತವೆ. ಆದಾಯದ ಹೊಸ ಮೂಲಗಳು ಸೃಷ್ಟಿಯಾಗಲಿವೆ. ಹಣದ ಒಳಹರಿವು ಹೆಚ್ಚಾಗಲಿದೆ. ವೈವಾಹಿಕ ಜೀವನದಲ್ಲಿ ಸಂತೋಷ ವೃದ್ಧಿಯಾಗುತ್ತದೆ. ಸಮಾಜದಲ್ಲಿ ಪ್ರಶಂಸೆಗೆ ಪಾತ್ರರಾಗುವಿರಿ.

ತುಲಾ ರಾಶಿ

ಬುಧಾದಿತ್ಯ ರಾಜಯೋಗದಿಂದಾಗಿ ತುಲಾ ರಾಶಿಯ ಜನರಿಗೆ ಪ್ರಯೋಜನಕಾರಿಯಾಗಲಿದೆ. ಈ ಸಮಯದಲ್ಲಿ ಉದ್ಯೋಗ ಹಾಗೂ ವ್ಯವಹಾರದಲ್ಲಿ ಸಾಕಷ್ಟು ಪ್ರಗತಿ ಸಾಧಿಸುವಿರಿ. ವ್ಯವಹಾರದಲ್ಲಿ ಲಾಭವಾಗಲಿದೆ. ಉದ್ಯೋಗ ಹುಡುಕಾಟ ಪೂರ್ಣಗೊಳ್ಳಲಿದೆ. ನಿಮ್ಮ ಕನಸುಗಳು ನನಸಾಗುತ್ತವೆ. ಕಾಲಿಟ್ಟ ಪ್ರತಿಯೊಂದು ಕ್ಷೇತ್ರದಲ್ಲೂ ಯಶಸ್ಸನ್ನು ಸಾಧಿಸುವಿರಿ. ಸಾಮಾಜಿಕ ಪ್ರತಿಷ್ಠೆ ಹೆಚ್ಚಾಗಲಿದೆ. ಕುಟುಂಬ ಸದಸ್ಯರಿಂದ ಪ್ರೀತಿ ಮತ್ತು ಬೆಂಬಲ ಪಡೆಯುತ್ತೀರಿ. ಒಡಹುಟ್ಟಿದವರೊಂದಿಗಿನ ಹಣದ ವಿವಾದಗಳನ್ನು ನೀವು ತೊಡೆದುಹಾಕುವಿರಿ. ಇರುವ ಮಾನಸಿಕ ಒತ್ತಡದಿಂದ ಪರಿಹಾರ ಪಡೆದು ಸಂತಸದ ಜೀವನ ನಿಮ್ಮದಾಗುತ್ತದೆ.

ಧನು ರಾಶಿ

ಸೂರ್ಯ - ಬುಧ ಸಂಯೋಗದಿಂದ ಧನು ರಾಶಿಯ ಜನರಿಗೆ ಹೆಚ್ಚಿನ ಪ್ರಯೋಜನವಾಗಲಿದೆ. ಶೈಕ್ಷಣಿಕ ಕೆಲಸದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಉದ್ಯೋಗಸ್ಥರು ಬಡ್ತಿ ನಿರೀಕ್ಷಿಸಬಹುದು. ಕಚೇರಿಯಲ್ಲಿ ಹಿರಿಯರಿಂದ ಶ್ಲಾಘನೆ ಸಿಗುತ್ತದೆ. ವೃತ್ತಿಜೀವನದ ಪ್ರಗತಿಗೆ ಅನೇಕ ಅವಕಾಶಗಳು ಇರುತ್ತವೆ. ಹಣದ ಒಳಹರಿವಿನ ಹೊಸ ಮಾರ್ಗಗಳನ್ನು ಕಂಡುಕೊಳ್ಳುವಿರಿ. ಆರ್ಥಿಕ ಸಮಸ್ಯೆಗಳಿಂದ ಮುಕ್ತಿ ಸಿಗಲಿದೆ. ವೈವಾಹಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಶುಭ ಕಾರ್ಯಗಳಲ್ಲಿನ ಅಡೆತಡೆಗಳು ನಿವಾರಣೆಯಾಗಲಿವೆ.

ಮೀನ ರಾಶಿ

ಬುಧಾದಿತ್ಯ ರಾಜಯೋಗದಿಂದ ಮೀನ ರಾಶಿಯವರು ಜುಲೈ ಅಂತ್ಯದವರೆಗೆ ಖುಷಿಯ ದಿನ ಕಳೆಯುತ್ತಾರೆ. ಪ್ರತಿಯೊಂದು ಕಾರ್ಯದಲ್ಲೂ ಉತ್ತಮ ಯಶಸ್ಸನ್ನು ಸಾಧಿಸುವಿರಿ. ಕಾನೂನು ವಿಷಯಗಳಲ್ಲಿ ಗೆಲ್ಲುತ್ತೀರಿ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿ ಬರುವ ಸಾಧ್ಯತೆ ಇದೆ. ಸಹೋದರ ಹಾಗೂ ಸಹೋದರಿಯೊಂದಿಗಿನ ಸಂಬಂಧ ಸೌಹಾರ್ದಯುತವಾಗಿರುತ್ತದೆ. ಆತ್ಮವಿಶ್ವಾಸ ಹೆಚ್ಚುವುದಲ್ಲದೆ ನಿಮ್ಮ ಮನಸ್ಸು ಸಂತೋಷದಿಂದ ಕೂಡಿರುತ್ತದೆ. ಕುಟುಂಬದಲ್ಲಿ ಸಂತೋಷದ ವಾತಾವರಣವಿರುತ್ತದೆ. ಕುಟುಂಬ ಸದಸ್ಯರೊಂದಿಗೆ ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸುವಿರಿ. ಆಧ್ಯಾತ್ಮಿಕ ವಿಚಾರಗಳಲ್ಲಿ ಆಸಕ್ತಿ ಹೊಂದುವಿರಿ.

ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ "ಹಿಂದೂಸ್ತಾನ್ ಟೈಮ್ಸ್ ಕನ್ನಡ" ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ.

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.